ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ

ಬೆಂಗಳೂರು : ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಸೇವಾ ಆಯೋಗವು 2026ರ ಜುಲೈ 26ರಂದು ತುರ್ತು ಸಭೆ ನಡೆಸಿದೆ.ಸಾರ್ವಜನಿಕರ ವಿಶ್ವಾಸವನ್ನು ಕಾಪಾಡುವ ಉದ್ದೇಶದಿಂದ ಹಾಗೂ ಆರೋಪಗಳ ಗಂಭೀರತೆಯನ್ನು ಮನಗಂಡು ಆಯೋಗವು ಕೆಳಕಂಡ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಆಯೋಗದ ಕಾರ್ಯದರ್ಶಿ ಶ್ರೀಮತಿ ಕೆ. ಜ್ಯೋತಿ ಅವರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ […]

ಇನ್ಮುಂದೆ ಭಾರತದಲ್ಲಿ ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಬ್ರೇಕ್: ನಂದನ್ ನಿಲೇಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ!

ನವದೆಹಲಿ: ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಮಹತ್ವದ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಭಾರತ ಸರ್ಕಾರ ಬೃಹತ್ ಹೆಜ್ಜೆಯಿಟ್ಟಿದೆ. ‘ಇನ್ಫೋಸಿಸ್’ ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಪ್ರಸಿದ್ಧ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ‘ಹೈ-ಪವರ್ ಟಾಸ್ಕ್ ಫೋರ್ಸ್’ ರಚಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಘೋಷಿಸಿದ್ದಾರೆ. ಅಕ್ರಮ ಎಸಗಿದವರಿಗೆ ಜೈಲು ಮತ್ತು ಕಠಿಣ ಶಿಕ್ಷೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಸಂದೇಶ ಹಂಚಿಕೊಂಡ ಪ್ರಧಾನಿ ಮೋದಿ, ದೇಶದ […]

ಧುಮ್ಮಿಕ್ಕುತ್ತಿರುವ ʻಜೋಗದ ಸಿರಿʼಯನ್ನು ಕಣ್ತುಂಬಿಕೊಂಡ ಸಾವಿರಾರು ಪ್ರವಾಸಿಗರು

ಶಿವಮೊಗ್ಗ: ಶರಾವತಿ ನದಿಯ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಪ್ರಸಿದ್ಧ ಜೋಗ ಜಲಪಾತಕ್ಕೆ ಭವ್ಯ ಕಳೆ ಬಂದಿದೆ. ನದಿಯಲ್ಲಿ ನೀರಿನ ಹರಿವು ರಭಸಗೊಂಡ ಪರಿಣಾಮ ಜಲಪಾತವು ತನ್ನ ಪೂರ್ಣ ವೈಭವದೊಂದಿಗೆ ಧುಮುಕುತ್ತಿದೆ. ಮಳೆ ಹಾಗೂ ದಟ್ಟ ಮಂಜಿನ ನಡುವೆ ಮುಗಿಲೆತ್ತರದಿಂದ ಧುಮುಕುತ್ತಿರುವ ರಾಜ, ರಾಣಿ, ರೋರರ್ ಮತ್ತು ರಾಕೆಟ್ ಧಾರೆಗಳು ಹಾಲಿನ ಕೆನೆಯಂತೆ ಕಂಗೊಳಿಸುತ್ತಿದ್ದು, ಪ್ರಕೃತಿ ಪ್ರೇಮಿಗಳ ಮನಸೆಳೆಯುತ್ತಿವೆ. ಭಾನುವಾರ ರಜಾದಿನವಾದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಜನಸ್ತೋಮ ಜಲಪಾತದ ರಮಣೀಯ ದೃಶ್ಯಗಳನ್ನು ಕಣ್ತುಂಬಿಕೊಂಡು ಸಂಭ್ರಮಿಸಿತು. ಶನಿವಾರವೂ […]

PM Modi: ಗಣೇಶ ಚತುರ್ಥಿ ಹಬ್ಬಕ್ಕೆ ಮಣ್ಣಿನಿಂದ ತಯಾರಾದ ಪರಿಸರ ಸ್ನೇಹಿ ಗಣಪ ಮೂರ್ತಿಯನ್ನ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ-ಮೋದಿ

ನವದೆಹಲಿ: ಈ ಸಲ ಗಣಪ ಹಬ್ಬಕ್ಕೆ ಬದಲಾವಣೆಯನ್ನು ಮಾಡಿಕೊಳ್ಳಿ, ಗಣೇಶ ಚತುರ್ಥಿ ಹಬ್ಬದಂದು ಪ್ರತಿಯೊಬ್ಬರು ನಿಮ್ಮ ಮನೆಗಳಲ್ಲಿ ಸ್ಥಳೀಯ ಮಣ್ಣಿನಿಂದಲೇ ತಯಾರಾದ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ‘ಮನ್ ಕಿ ಬಾತ್’ನ136 ನೇ ಸಂಚಿಕೆ ಉದ್ದೇಶಿಸಿ ಮಾತನಾಡಿದ ಅವರು, ಪಿಒಪಿ ಗಣೇಶ ಮೂರ್ತಿ ಬಳಸಬೇಡಿ ಎಂದಿದ್ದು, ನನ್ನ ವಿನಂತಿಯನ್ನ ಪುನರುಚ್ಚರಿಸುತ್ತೇನೆ. ಈ ಗಣೇಶನ ಹಬ್ಬದಂದೂ ನಿಮ್ಮ ಮನೆಯಲ್ಲಿ ಸ್ಥಳೀಯ ಮಣ್ಣಿನಿಂದ ಮಾಡಿದ ಗಣೇಶನ ವಿಗ್ರಹವನ್ನ ಸ್ಥಾಪಿಸಿ […]

Rajnath Singh : ಪಾಕಿಸ್ತಾನ ದುಸ್ಸಾಹಸಕ್ಕೆ ಕೈಹಾಕಿದ್ರೆ ಅದರ ಕಲ್ಪನೆಗೂ ಮೀರಿದ ಸಾಮರ್ಥ್ಯ ನಮ್ಮ ಪಡೆ ಹೊಂದಿದೆ- ರಾಜನಾಥ್ ಸಿಂಗ್

ದೆಹಲಿ: ಪಾಕಿಸ್ತಾನ ಯಾವುದೇ ದುಸ್ಸಾಹಸಕ್ಕೆ ಕೈಹಾಕಿದರೆ ಅದರ ಕಲ್ಪನೆಗೂ ಮೀರಿದ ರೀತಿಯಲ್ಲಿ ಪ್ರತಿಕ್ರಿಯಿಸುವ ಸಾಮರ್ಥ್ಯವನ್ನು ಭಾರತೀಯ ಪಡೆಗಳು ಹೊಂದಿದೆ ಎಂದುರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. 27ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜು.25 ಲಡಾಖ್‌ನ ಡ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ, 1999ರ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಿ ಮಾತನಾಡಿದರು. ಈ ವೇಳೆ, ಸೇನಾ ಸಿಬ್ಬಂದಿ ಮತ್ತು ನಿವೃತ್ತ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ ಕೆಡಿಸಲು ಯಾವುದೇ […]

ಬಿಪಿಎಲ್ ಕುಟುಂಬಗಳಿಗೆ ಬಿಗ್ ರಿಲೀಫ್: ಆದಾಯ ಮಿತಿ ಭಾರಿ ಏರಿಕೆಗೆ ರಾಜ್ಯ ಸರ್ಕಾರದ ಚಿಂತನೆ!

ಬೆಂಗಳೂರು: ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಶೀಘ್ರದಲ್ಲೇ ಭರ್ಜರಿ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಬಿಪಿಎಲ್ (BPL) ಪಡಿತರ ಚೀಟಿ ಹೊಂದಲು ನಿಗದಿಪಡಿಸಿರುವ ಕುಟುಂಬದ ವಾರ್ಷಿಕ ಆದಾಯದ ಮಿತಿಯನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ. ಆಡಳಿತಾತ್ಮಕ ಸುಧಾರಣಾ ಆಯೋಗ ನೀಡಲಿರುವ ವರದಿ ಹಾಗೂ ಶಿಫಾರಸಿನ ಆಧಾರದ ಮೇಲೆ ಈ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲು ಆಡಳಿತ ಯಂತ್ರ ಸಜ್ಜಾಗಿದೆ. ಸದ್ಯ ಜಾರಿಯಲ್ಲಿರುವ ನಿಯಮದಂತೆ ಬಿಪಿಎಲ್ ಕಾರ್ಡ್ ಪಡೆಯಲು ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷ ಮೀರಿರಬಾರದು. ಆದರೆ, […]

B Y Vijayendra :ವಿದ್ಯಾರ್ಥಿಗಳ ಭಾವನೆಗೆ ಗೌರವ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ : ಬಿ.ವೈ. ವಿಜಯೇಂದ್ರ

ಬೆಂಗಳೂರು: ಧರ್ಮೇಂದ್ರ ಪ್ರಧಾನ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಎಬಿವಿಪಿ ದಿನಗಳಿಂದಲೇ ಅವರು ವಿದ್ಯಾರ್ಥಿಗಳ ಪರವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರಕ್ಕೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಇದನ್ನು ತಮ್ಮ ಗೆಲುವು ಎಂದು ಹೇಳಿಕೊಳ್ಳುತ್ತಿರುವುದು ರಾಜಕೀಯ ಪ್ರೇರಿತ ಎಂದು ಅವರು ಟೀಕಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದ ವಿಜಯೇಂದ್ರ, ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾಗ ಅವರು ವಿದೇಶದಲ್ಲಿದ್ದರು. […]

ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ನಿವೃತ್ತಿ ಘೋಷಣೆ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಪ್ರಕಟಿಸುವ ಮೂಲಕ ತಮ್ಮ ಸುದೀರ್ಘ ರಾಜಕೀಯ ಪಯಣಕ್ಕೆ ಪ್ರಮುಖ ತಿರುವು ನೀಡಿದ್ದಾರೆ. ಕೆ.ಆರ್.ಪೇಟೆಯಲ್ಲಿ ಆಯೋಜಿಸಲಾಗಿದ್ದ ದಿವಂಗತ ಕೆ.ಆರ್.ಪೇಟೆ ಕೃಷ್ಣ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮುಂದಿನ ಕನಿಷ್ಠ 10 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವಂತೆ ಕಾರ್ಯಕ್ರಮದಲ್ಲಿದ್ದ ಅಭಿಮಾನಿಗಳು ಒತ್ತಾಯಿಸಿದರಾದರೂ, ಸಿದ್ದರಾಮಯ್ಯ ತಮ್ಮ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ತಿಳಿಸಿದರು. […]

Siddaramaiah: ಶಿಕ್ಷಣ ಸಚಿವರ ರಾಜೀನಾಮೆಯಿಂದ ಶಿಕ್ಷಣ ಕ್ಷೇತ್ರದ ಸರ್ವ ಸಮಸ್ಯೆಗಳು ಪರಿಹಾರವಾಗಲಾರದು: ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಬೆಂಗಳೂರು: ದೆಹಲಿ ಜತಂರ್‌ ಮಂತರ್‌ ನಲ್ಲಿ ಧರಣಿ ಮಾಡುತ್ತಿದ್ದ ಯುವಜನತೆಯ ಬೇಡಿಗಳನ್ನು ಪೂರೈಸಲು ಕೇಂದ್ರ ಸರ್ಕಾರ ತಯಾರಿ ನಡೆಸಿದ್ದು ಈ ವಿಚಾರ ವಾಸ್ತವದಲ್ಲಿ ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವುದು ಕಾದು ನೋಡಬೇಕಿದೆ. ಈಗ ಅಷ್ಟೇ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಿದ್ದಾರೆ ಇದರ ಬೆನ್ನಲ್ಲೇ ಮಾಜಿ ಸಿಎಂ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಕ್ಸ್‌ ಖಾತೆಯ ಮೂಲಕ ಪೋಸ್ಟ್ ಹಂಚಿಕೊಂಡಿರುವ […]

Pralhad Joshi: ಪ್ರಧಾನಿ ಮೋದಿ ನಿರೀಕ್ಷೆಗಳನ್ನು ಪೂರೈಸಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ: ಜೋಶಿ

ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದರು ಇದರ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದರ ನಂತರ ಇದೀಗ ಸಚಿವ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಅವರು ನನ್ನ ಮೇಲೆ ನಂಬಿಕೆ ಇಟ್ಟಿದ್ದು, ನಾನು ಜವಾಬ್ದಾರಿಯುತವಾಗಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡ ನಂತರ ಮಾತನಾಡಿದ ಅವರು, ಈ […]