ಕನ್ನಡಿಗ ಪ್ರಹ್ಲಾದ್ ಜೋಶಿ ನೂತನ ಕೇಂದ್ರ ಶಿಕ್ಷಣ ಸಚಿವ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವೀಕರಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯಂತೆ ರಾಷ್ಟ್ರಪತಿಗಳು ಈ ನಿರ್ಧಾರ ಕೈಗೊಂಡಿದ್ದು, ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ಕೇಂದ್ರ ಸಂಪುಟ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ವಹಿಸಿ ನಿರ್ದೇಶನ ನೀಡಿದ್ದಾರೆ. ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಪ್ರಲ್ಹಾದ್ ಜೋಶಿ ಪ್ರಧಾನಮಂತ್ರಿಯವರ ಶಿಫಾರಸಿನ ಮೇರೆಗೆ, ಪ್ರಸ್ತುತ ಸಚಿವ ಸಂಪುಟದಲ್ಲಿರುವ ಪ್ರಲ್ಹಾದ್ ಜೋಶಿ ಅವರು ತಾವು ಈಗ ನಿರ್ವಹಿಸುತ್ತಿರುವ ಸಚಿವಾಲಯಗಳ […]

ಕೇಂದ್ರ ಸರ್ಕಾರದ ಜೊತೆಗಿನ ಸಂಧಾನ ಸಭೆ ಯಶಸ್ವಿ: ‘ಸಿಜೆಪಿ’ಯ ಎಲ್ಲಾ ಬೇಡಿಕೆಗೆ ಒಪ್ಪಿಗೆ, ಬೃಹತ್ ವಿದ್ಯಾರ್ಥಿ ಹೋರಾಟಕ್ಕೆ ಕೊನೆಗೂ ಸುಖಾಂತ್ಯ!

ನವದೆಹಲಿ: ಕಳೆದ ಹಲವು ದಿನಗಳಿಂದ ದೇಶದ ರಾಜಧಾನಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ವಿದ್ಯಾರ್ಥಿಗಳ ಬೃಹತ್ ಚಳವಳಿಗೆ ಕೊನೆಗೂ ತೆರೆಬಿದ್ದಿದೆ. ಕೇಂದ್ರ ಸರ್ಕಾರದ ಹಿರಿಯ ಸಚಿವರೊಂದಿಗೆ ನಡೆಸಿದ ನಿರ್ಣಾಯಕ ಸಂಧಾನ ಸಭೆಯಲ್ಲಿ ಪ್ರತಿಭಟನಾಕಾರರ ಎಲ್ಲಾ ಪ್ರಮುಖ ನಿಬಂಧನೆಗಳಿಗೆ ಸರ್ಕಾರ ಸಮ್ಮತಿಸಿದ್ದು, ತಮ್ಮ ಸುದೀರ್ಘ ಹೋರಾಟವನ್ನು ತಕ್ಷಣದಿಂದಲೇ ಹಿಂಪಡೆಯುತ್ತಿರುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರಕಟಿಸಿದೆ. ಸರ್ಕಾರ ನೀಡಿದ ಪ್ರಮುಖ ಭರವಸೆಗಳು: ಸಿಜೆಪಿ ನಾಯಕರೊಂದಿಗೆ ದೀರ್ಘ ಚರ್ಚೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಜೆ.ಪಿ. ನಡ್ಡಾ, […]

ಕೋಲಾರದಲ್ಲಿ ಸಾಲಬಾಧೆ ತಾಳಲಾರದೆ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹ*ತ್ಯೆ

ಕೋಲಾರ: ಸಾಲಗಾರರ ಕಿರುಕುಳ ಹಾಗೂ ಸಾಲದ ಹೊರೆ ತಾಳಲಾರದೆ ಇಬ್ಬರು ಯುವ ಮಕ್ಕಳೊಂದಿಗೆ ತಾಯಿಯೊಬ್ಬರು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಬಳಿ ಸಂಭವಿಸಿದೆ. ಮೃತರ ವಿವರ ಬೆಗ್ಲಿಬೆಣಜೇನಹಳ್ಳಿ ಗ್ರಾಮದ ನಿವಾಸಿ ಪ್ರಮೀಳ (40) ಹಾಗೂ ಅವರ ಮಗಳು ಸ್ವಪ್ನ (22) ಮತ್ತು ಮಗ ಚರಣ್ (18) ಆತ್ಮಹತ್ಯೆಗೆ ಶರಣಾದ ದುರದೃಷ್ಟಕರ ಮೃತರು. ದುರಂತಕ್ಕೆ ಕಾರಣವೇನು? ಮೃತರ ಪತಿ ಸುರೇಶ್ ಅವರು ಆಟೋ ಚಾಲಕರಾಗಿ ಜೀವನ ಸಾಗಿಸುತ್ತಿದ್ದು, ಪತ್ನಿ ಪ್ರಮೀಳ […]

ಅತ್ತCJP ಮುಖ್ಯಸ್ಥ ಅಭೀಜಿತ್ ದೀಪ್ಕೆ ಎಚ್ಚರಿಕೆ- ಇತ್ತ ಪ್ರಧಾನ್‌ ರಾಜೀನಾಮೆ: ಕಾರಣ ಇಲ್ಲಿದೆ ನೋಡಿ

ದೆಹಲಿ,: ನೀಟ್ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿದೆ. ಇದರ ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರಿಗೆ ಟೈಫಾಯ್ಡ್ ದೃಢಪಟ್ಟಿದ್ದು, ಆದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಎಕ್ಸ್​​​​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದರು. . ಪರೀಕ್ಷಾ ಅಕ್ರಮಗಳ ವಿರುದ್ಧ ಹೊಣೆಗಾರಿಕೆ ನಿಗದಿಪಡಿಸುವ ನಮ್ಮ ಬೇಡಿಕೆ ಜೀವಂತವಾಗಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಸಿಜೆಪಿ ಹೋರಾಟ ನಿಲ್ಲುವುದಿಲ್ಲ” […]

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ನೀಟ್-ಯುಜಿ (NEET-UG) ಸೇರಿದಂತೆ ಸಾಲು ಸಾಲು ಪರೀಕ್ಷಾ ಪೇಪರ್ ಲೀಕ್ ಹಗರಣ ಖಂಡಿಸಿ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಈ ಪ್ರಮುಖ ರಾಜಕೀಯ ಬೆಳವಣಿಗೆ ಸಂಭವಿಸಿದೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ‘ದೇಶವಿರೋಧಿ ಶಕ್ತಿಗಳ’ ತಡೆಗೆ ನಿರ್ಧಾರ ತಮ್ಮ ನಿರ್ಧಾರದ ಕುರಿತು ‘X’ (ಟ್ವಿಟರ್) […]

K H Muniyappa : ಕೇಂದ್ರ ಸರ್ಕಾರದ ಬಳಿಯೂ ಅಗತ್ಯ ಪ್ರಮಾಣದ ಅಕ್ಕಿ ಲಭ್ಯವಿದೆ- ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಬಿಪಿಎಲ್ ಕಾರ್ಡ್‌ಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು 3 ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಬರದ ಪರಿಸ್ಥಿತಿ ಇದ್ದರೂ ಆಹಾರ ವಿತರಣೆಗೆ ಯಾವುದೇ ತೊಂದರೆಯಾಗುವುದಿಲ್ಲ. ರಾಗಿ ಮತ್ತು ಅಕ್ಕಿ ಒಂದು ವರ್ಷಕ್ಕೆ ಸಾಕಾಗುವಷ್ಟು ಸಂಗ್ರಹವಿದೆ. ಕೇಂದ್ರ ಸರ್ಕಾರದ […]

Yaduveer Wadiyar: ಜನರು ಏನೇ ಮಾಡಬೇಕಾದರೂ ಮತದಾನದ ಮೂಲಕ ಉತ್ತರ ಕೊಡುತ್ತಾರೆ: ಯದುವೀರ್ ಒಡೆಯರ್

ಮೈಸೂರು: ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ, ಜನರು ಏನೇ ಮಾಡಬೇಕಾದರೂ ಮತದಾನದ ಮೂಲಕ ಉತ್ತರ ಕೊಡುತ್ತಾರೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಪ್ರತಿಭಟನೆ ಕುರಿತು ಮಾತನಾಡಿದ ಅವರು,ಜನರು ಏನೇ ಮಾಡಬೇಕಾದರೂ ಮತದಾನದ ಮೂಲಕ ಉತ್ತರ ಕೊಡುತ್ತಾರೆ. ಬೇರೆ ದೇಶದಲ್ಲಿ ಅರಾಜಕತೆ ಉಂಟು ಮಾಡಿದಂತೆ ನಮ್ಮ ದೇಶದಲ್ಲಿ ಮಾಡಲು ಸಾಧ್ಯವಿಲ್ಲ ಎಂದರು.ನೆರೆಯ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳದಲ್ಲಿ ಆದಂತೆ ಇಲ್ಲಿಯೂ ಮಾಡಲು ಹೊರಟಿದ್ದಾರೆ. ಆದರೆ ದೇಶದ ಜನತೆ ಇದಕ್ಕೆ ಮಣಿಯುವುದಿಲ್ಲ. ನಮ್ಮ […]

ಗುಲಾಮನಾಗುವ ಬದಲಿಗೆ ಗುಂಡಿಗೆ ಬಲಿಯಾಗುತ್ತೇನೆ” ಕ್ರಾಂತಿಕಾರಿ ಚಂದ್ರಶೇಖರ ಅಜಾದ್

ನಾನು ಸ್ವತಂತ್ರನಾಗಿ ಹುಟ್ಟಿದೆ, ಸ್ವತಂತ್ರನಾಗಿ ಬದುಕುತ್ತೇನೆ, ಸ್ವತಂತ್ರನಾಗಿ ಸಾಯುತ್ತೇನೆ” ಎಂದು ಗುಡುಗಿದ ಚಂದ್ರಶೇಖರ ಅಜಾದ್ ಅವರ 94ನೇ ಬಲಿದಾನ ದಿನ ಇದೇ ವರ್ಷ ಫೆಬ್ರವರಿ 27 ಕ್ಕೆ ಆಚರಿಸಿದ್ದೇವೆ. ಇಂದು ತಿಲಕ್ ಜನ್ಮದಿನದ ಸಂದರ್ಭದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮತ್ತೊಬ್ಬ ಮಹಾನ್ ಕ್ರಾಂತಿಕಾರಿಯನ್ನು ನೆನೆಯೋಣ. ಇತಿಹಾಸಕಾರ ಬಿಪನ್ ಚಂದ್ರ ಅವರ ಇಂಡಿಯಾಸ್ ಸ್ಟ್ರೈಗ್ಗಲ್ ಫಾರ್ ಇಂಡಿಪೆಂಡೆನ್ಸ್ ಮತ್ತು ಹಿಂದೂಸ್ತಾನ್ ಸಮಾಜವಾದಿ ಪ್ರಜಾಸಭೆ ದಾಖಲೆಗಳ ಆಧಾರದ ಮೇಲೆ ಅವರ ರೋಚಕ ಜೀವನ. ಬಾಲ್ಯ ಮತ್ತು “ಅಜಾದ್” ಎಂಬ […]

Sonam Wangchuk : 26 ದಿನ ಉಪವಾಸದ ನಂತ್ರ ನನ್ನ ಪ್ರಾಮಾಣಿಕತೆಯನ್ನ ಸಾಬೀತುಪಡಿಸಬೇಕೇ?– ಟೀಕೆಗಳಿಗೆ ತಿರುಗೇಟು ಕೊಟ್ಟ ವಾಂಗ್ಚುಕ್

ನವದೆಹಲಿ: ದೆಹಲಿಯ ಜಂತರ್‌ ಮಂತರ್‌ ಪ್ರತಿಭಟನೆ ಜಗತ್ತನ್ನು ಸೆಳೆದಿದೆ. ಈ ಧರಣಿಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು,ಯುವಕರು,ಮಧ್ಯವಯಸ್ಸಿನವರು,ಕೆಲ ಅಧಿಕಾರಿಗಳು ಭಾಗಿಯಾಗಿದ್ದಾರೆ. ದೇಶದ ಪ್ರತಿಭಾಗದಲ್ಲಿ ಸಿಜೆಪಿಗೆ ಬೆಂಬಲ ಸಿಗುತ್ತಿದೆ. ಆದರೆ ಈ ವಿಚಾರವನ್ನು ನುಂಗಲಾರದೆ ಬಿಜೆಪಿ ಕೆಲ ಕಿಡಿಗೇಡಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಧರಣಿ ಮಾಡುತ್ತಿರುವ ಯುವಕರು ದೇಶದ್ರೋಹಿಗಳು ಎಂದು ಕರೆಯುತ್ತಿದ್ದಾರೆ. ಇತ್ತ ಧರಣಿಯ ಪ್ರಮುಖ ಸ್ಥಾನ ಹೊಂದಿದ ಸೋನಂ ವಾಂಗ್ಚುಕ್ ಅವರ ಬಗ್ಗೆ ಟೀಕೆಗಳ ಸುರಿ ಮಳೆ ಸುರಿಯುತ್ತಲೇ ಇವೆ ಈ ಕಾರಣಕ್ಕೆ ಇವರು ಇದೀಗ ಪ್ರತಿಕ್ರಿಯೆ ಕೊಟ್ಟಿದ್ದಾರೆ. 26 ದಿನಗಳ […]

ಕೇಂದ್ರ ರೈಲ್ವೆ ರಾಜ್ಯ ಸಚಿವ ರವ್‌ನೀತ್ ಸಿಂಗ್ ಬಿಟ್ಟು ರಾಜೀನಾಮೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕಾರ!

ನವದೆಹಲಿ: ಕೇಂದ್ರ ರೈಲ್ವೆ ಹಾಗೂ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಸಚಿವರಾಗಿದ್ದ ರವ್‌ನೀತ್ ಸಿಂಗ್ ಬಿಟ್ಟು ಅವರು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಶುಕ್ರವಾರ ಹೊರಡಿಸಿದ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ರವ್‌ನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದ ಅಧಿಕೃತ ಪ್ರಕಟಣೆ “ಭಾರತದ […]