Prakash Raj: ಇದೇನು ನಾಟಕ? ಇದೇನು ರಾಜಕೀಯ? ನಿಮ್ಮ ಅಜೆಂಡಾ ಏನು? – ಚುನಾವಣಾ ಆಯೋಗದ ವಿರುದ್ಧ ಪ್ರಕಾಶ್‌ ರಾಜ್‌ ಗರಂ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ SIR ಪ್ರಕ್ರಿಯೆಯಲ್ಲಿ ತಮ್ಮ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲಾಗಿದೆ ಎಂದು ನಟ ಪ್ರಕಾಶ್‌ ರಾಜ್‌ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ತಾವು ಹುಟ್ಟಿ ಬೆಳೆದ ಬೆಂಗಳೂರಿನಲ್ಲೇ ಮತದಾನದ ಹಕ್ಕಿಗೆ ಕತ್ತರಿ ಹಾಕಲಾಗಿದೆ ಎಂದು ವಿಡಿಯೋ ಮೂಲಕ ಕಿಡಿಕಾರಿದ್ದಾರೆ ಇದೇನು ನಾಟಕ? ಇದೇನು ರಾಜಕೀಯ? ನಿಮ್ಮ ಅಜೆಂಡಾ ಏನು? ಎಂದು ಬಿಜೆಪಿ ವಿರುದ್ಧ ನಟ ಪ್ರಕಾಶ್‌ ರಾಜ್‌ ವಾಗ್ದಾಳಿ ನಡೆಸಿದ್ದಾರೆ. ಮತದಾರರ ಪಟ್ಟಿಯಲ್ಲಿ ತನ್ನ ಹೆಸರು […]

ವಿಶ್ವ ಆನೆ ದಿನ-ಗಜರಾಜನಿಗೇಕೆ ಈ ವಿಶೇಷ ದಿನಾಚರಣೆ ? ಇಲ್ಲಿದೆ ನೋಡಿ ಮಾಹಿತಿ

ಕರ್ನಾಟಕವು 6,000ಕ್ಕೂ ಹೆಚ್ಚು ಆನೆಗಳನ್ನು ಹೊಂದಿದ್ದು, ಭಾರತದಲ್ಲೇ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದೆ. ಆನೆಗಳನ್ನು ಉಳಿಸಿ, ಪರಿಸರವನ್ನು ಉಳಿಸಿ” ಎಂಬ ಘೋಷಣೆಯೊಂದಿಗೆ ಇಡೀ ವಿಶ್ವ ಆಚರಿಸುವ ಆಗಸ್ಟ್ 12 ರಂದು ಕರ್ನಾಟಕಕ್ಕೆ ವಿಶೇಷ ಹೆಮ್ಮೆ ಇದೆ. ಯಾಕೆಂದರೆ ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ಭಾರತದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಸಂಖ್ಯೆಯಲ್ಲಿ ಹೆಮ್ಮೆ ಕರ್ನಾಟಕದ ಗಜಬಲ, 2017ರ ರಾಷ್ಟ್ರೀಯ ಗಣತಿ ಪ್ರಕಾರ ಕರ್ನಾಟಕದಲ್ಲಿ 6,049 ಆನೆಗಳಿವೆ. ಇದು ದೇಶದ ಒಟ್ಟು ಕಾಡಾನೆಗಳ ಶೇಕಡಾ 25 ರಷ್ಟು. ಪ್ರಪಂಚದ ಒಟ್ಟು ಏಷ್ಯನ್ ಆನೆಗಳಲ್ಲಿ ಶೇಕಡಾ […]

UT Khadar: ಇನ್ನು ಮುಂದೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ– ಫುಡ್ ಟೆಸ್ಟ್‌ಗೆ ಖಾದರ್ ಸೂಚನೆ

ಬೆಂಗಳೂರು: ಆಹಾರ ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಸಂಸ್ಥೆಗಳ ವಿರುದ್ಧ ನಿಯಮಾನುಸಾರ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರಿಗೆ ಸೂಚಿನೆ ನೀಡಲಾಗಿದೆ. ರಾಜ್ಯದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಧಾಬಾಗಳು ಹಾಗೂ ಇತರೆ ಆಹಾರ ಸೇವಾ ಸಂಸ್ಥೆಗಳಲ್ಲಿ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ರಾಜ್ಯದ ವಿವಿಧೆಡೆ ನಡೆದ ತಪಾಸಣೆ […]

ಕೊನೆಗೂ ಮರು ಹಂಚಿಕೆಯೊಂದಿಗೆ ನೂತನ ಸಚಿವರಿಗೆ ಖಾತೆ ಹಂಚಿಕೆ: ಇಲ್ಲಿದೆ ಅಧಿಕೃತ ಪಟ್ಟಿ

ಬೆಂಗಳೂರು: ರಾಜ್ಯ ಆಡಳಿತ ಯಂತ್ರಕ್ಕೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಸರ್ಕಾರದಲ್ಲಿ ಸಚಿವರ ಖಾತೆಗಳನ್ನು ಭಾರಿ ಪ್ರಮಾಣದಲ್ಲಿ ಮರುಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಭಾರತೀಯ ಸಂವಿಧಾನದ ವಿಧಿ 166(3) ಹಾಗೂ ಕರ್ನಾಟಕ ಸರ್ಕಾರದ ಕಾರ್ಯಕಲಾಪಗಳ ನಿರ್ವಹಣೆ ನಿಯಮಗಳಡಿ ದೊರೆತಿರುವ ಅಧಿಕಾರವನ್ನು ಬಳಸಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಖಾತೆಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಹೊರಡಿಸಲಾಗಿರುವ ನೂತನ ಆದೇಶದ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಹಣಕಾಸು, ಸಿಬ್ಬಂದಿ […]

ಕಾವೇರಿ ಬಿಕ್ಕಟ್ಟು ನಿರ್ವಹಣೆಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲ: ಕೇಂದ್ರ ಸಚಿವ HDK ವಾಗ್ಧಾಳಿ

ನವದೆಹಲಿ: ಕಾವೇರಿ ವಿಚಾರದಲ್ಲಿ ನಿರಂತರವಾಗಿ ತಪ್ಪು ಹೆಜ್ಜೆಗಳನ್ನು ಇರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರವು ನಮ್ಮ ಕಾನೂನು ಪಂಡಿತರನ್ನು ಕತ್ತಲೆಯಲ್ಲಿಟ್ಟಿದೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ನವದೆಹಲಿಯಲ್ಲಿ ತುರ್ತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ರಾಜ್ಯದ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಪ್ರಾಧಿಕಾರ, ಸಮಿತಿಗಳ ಮುಂದೆ ರಾಜ್ಯದ ಪರವಾಗಿ ವಾದ ಮಾಡುತ್ತಿರುವ ಹಿರಿಯ ವಕೀಲರನ್ನು ಸರಕಾರ ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅತೀವ ಬೇಸರ ವ್ಯಕ್ತಪಡಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿಗಳು ಕರೆದಿದ್ದ ಸಂಸದರ ಸಭೆಯಲ್ಲಿ […]

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲ ಸಂಪೂರ್ಣ ನಿಷೇಧ: ಸರ್ಕಾರದಿಂದ ಆದೇಶ

ಬೆಂಗಳೂರು: ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲ ಉತ್ಪನ್ನಗಳ ಮಾರಾಟ ಮತ್ತು ವಿತರಣೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಆಹಾರ ಭದ್ರತೆ ಮತ್ತು ಔಷಧ ನಿಯಂತ್ರಣ ಇಲಾಖೆಯು ಈ ಕುರಿತು ಅಧಿಕೃತ ಅಧಿಸೂಚನೆ ಜಾರಿಗೊಳಿಸಿದೆ. ಸರ್ಕಾರದ ಪತ್ರಿಕಾ ಪ್ರಕಟಣೆಯ ಪ್ರಕಾರ, ನಿಷೇಧಿತ ತಂಬಾಕು ಮತ್ತು ನಿಕೋಟಿನ್‌ಯುಕ್ತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟದ […]

ಬೆಂಗಳೂರಿನ ಖಜಾನೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: 13 ಕಡೆ ಪರಿಶೀಲನೆ, ಲಕ್ಷಾಂತರ ರೂ. ಅನುಮಾನಾಸ್ಪದ ವಹಿವಾಟು ಪತ್ತೆ!

ಬೆಂಗಳೂರು: ಸರ್ಕಾರಿ ಕೆಲಸಗಳ ಬಿಲ್ ಮಂಜೂರಾತಿ ಮಾಡಲು ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಹಾಗೂ ಕಮಿಷನ್ ನೀಡದೆ ಕಡತಗಳನ್ನು ವಿಲೇವಾರಿ ಮಾಡುತ್ತಿಲ್ಲ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ, ರಾಜಧಾನಿ ಬೆಂಗಳೂರಿನ ವಿವಿಧ ಖಜಾನೆ (ಟ್ರೆಜರಿ) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಹಾಗೂ ಎಡಿಜಿಪಿ ಮನೀಶ್ ಖರ್ಭೀಕರ್ ಅವರ ನಾಯಕತ್ವದಲ್ಲಿ ಈ ಬೃಹತ್ ಕಾರ್ಯಾಚರಣೆ ನಡೆದಿದೆ. ಒಟ್ಟು 11 […]

ಬೆಂಗಳೂರಿನ ಸರ್ವಜ್ಞನಗರದಲ್ಲಿ ಥೀಮ್ ಪಾರ್ಕ್ ನಿರ್ಮಾಣ: ಸಚಿವ ಜಾರ್ಜ್, ಕೃಷ್ಣಬೈರೇಗೌಡ ಲೋಕಾರ್ಪಣೆ

ಬೆಂಗಳೂರು: : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ ‘ಕುವೆಂಪು ಥೀಮ್ ಪಾರ್ಕ್’ಅನ್ನು ಇಂಧನ ಮತ್ತು ಪ್ರಾವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಸಿ.ಬಿ.ಕೃಷ್ಣಬೈರೇಗೌಡ ಅವರು ಮಂಗಳವಾರ ಉದ್ಘಾಟಿಸಿದರು. ಕೆಪಿಟಿಸಿಎಲ್ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಹೆಚ್‌ಬಿಆರ್‌ ಬಡಾವಣೆಯಲ್ಲಿ ಈ ಥೀಮ್ ಪಾರ್ಕ್ ನಿರ್ಮಿಸಿದೆ. ಉದ್ಯಾನ ಉದ್ಘಾಟಿಸಿ ಮಾತನಾಡಿದ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್, […]

ತಮಿಳುನಾಡಿಗೆ ಕಾವೇರಿ ನೀರು: ರಾಜ್ಯದ ನೀರಿನ ಪರಿಸ್ಥಿತಿ ಪರಿಶೀಲಿಸಿದ ನಂತರ ಮುಂದಿನ ತೀರ್ಮಾನ- ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ರಾಜ್ಯದ ನೀರಿನ ಪರಿಸ್ಥಿತಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ತಮಿಳುನಾಡಿಗೆ 12,000 ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. “ನ್ಯಾಯಾಲಯದ ಆದೇಶವನ್ನು ಪಾಲಿಸುವುದರ ಜೊತೆಗೆ ರೈತರ ಹಿತಾಸಕ್ತಿಯನ್ನು ರಕ್ಷಿಸುವ ಅಗತ್ಯವನ್ನು ಅವರು ಪ್ರತಿಪಾದಿಸಿದರು. ಎರಡೂ ಅಂಶಗಳನ್ನು ಪರಿಗಣಿಸಿ, ಈ ವಿಷಯದ ಕುರಿತು ನೀರಾವರಿ ಸಚಿವರೊಂದಿಗೆ ಈಗಾಗಲೇ ಚರ್ಚಿಸಿರುವುದಾಗಿ” […]

ರೋಹಿತ್, ಅಜಯ್ ದೇವಗನ್ ಎಂಟ್ರಿ: ಸೋನಿ ಪಿಕ್ಚರ್ಸ್‌ನಿಂದ ಮೆಗಾ ಎಂಟರ್‌ಟೈನ್‌ಮೆಂಟ್ ಧಮಾಕಾ!

ಬೆಂಗಳೂರು: ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ (SPNI) ಮುಂಬರುವ ಹಬ್ಬದ ಋತುವಿಗಾಗಿ ತನ್ನ ವಿಶಾಲ ಹಾಗೂ ವೈವಿಧ್ಯಮಯ ಕಂಟೆಂಟ್ ಶ್ರೇಣಿಯನ್ನು ಪ್ರಕಟಿಸಿದೆ. ಮಾಧ್ಯಮ ವೇದಿಕೆಗಳ ಹದಿನಿಲ್ಲದೆ ಪ್ರತಿಯೊಬ್ಬ ವೀಕ್ಷಕನಿಗೂ ಆದ್ಯತೆಯ ಕಂಟೆಂಟ್ ತಲುಪಿಸುವ, ಬಹುಭಾಷಾ ಮನರಂಜನಾ ವ್ಯವಹಾರವನ್ನು ಗಟ್ಟಿಗೊಳಿಸುವ ನೂತನ ಕಾರ್ಯತಂತ್ರದ ಭಾಗವಾಗಿ ಈ ಕೊಡುಗೆಗಳನ್ನು ಅನಾವರಣಗೊಳಿಸಲಾಗಿದೆ. ದೂರದರ್ಶನ ಹಾಗೂ ಡಿಜಿಟಲ್ ವೇದಿಕೆಗಳೆರಡರಲ್ಲೂ ವೀಕ್ಷಕರನ್ನು ತಲುಪಲು ರೂಪಿಸಲಾಗಿರುವ ಈ ಶ್ರೇಣಿಯು ಪ್ರೀಮಿಯಂ ಕಾರ್ಯಕ್ರಮಗಳು, ಜಾಗತಿಕ ಮಟ್ಟದ ಜನಪ್ರಿಯ ಶೋಗಳ ಭಾರತೀಯ ರೂಪಾಂತರಗಳು, ಸ್ವದೇಶಿ ಪರಿಕಲ್ಪನೆಗಳು ಹಾಗೂ ನೇರ […]