ರಾಜ್ಯ ಸರ್ಕಾರದಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ ಹಣದ ಕೊರತೆಯಿಲ್ಲ: ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು : ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಿದೆ. ಈಗಾಗಲೇ ₹1 ಕೋಟಿಯನ್ನು ಪ್ರತಿಯೊಬ್ಬ ಶಾಸಕರಿಗೂ ನೀಡಲು ತೀರ್ಮಾನಿಸಿದ್ದೇವೆ. ಅಲ್ಲದೇ, ಕುಡಿಯುವ ನೀರಿನ ಸಮರ್ಪಕ ಪೂರೈಕೆಗಾಗಿ ಪ್ರತಿ ಜಿಲ್ಲೆಗೆ ₹5 ಕೋಟಿ ಹಣವನ್ನು ನೀಡಿದ್ದೇವೆ. ಈಗಾಗಲೇ ಪಿಡಿ ಖಾತೆಗಳಲ್ಲಿ ₹329 ಕೋಟಿ ಲಭ್ಯವಿದೆ. ನಮ್ಮಲ್ಲಿ ಹಣದ ಕೊರತೆ ಇಲ್ಲ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಇಂದು ಸದಾಶಿವನಗರದ ಗೃಹ ಕಚೇರಿಯಲ್ಲಿ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದ […]
ಕರ್ನಾಟಕದಲ್ಲಿ ಹಲವೆಡೆ ಮತ್ತೆ ಮುಂಗಾರು ಮಳೆ ಚುರುಕು: ಶಾಲೆ, ಕಾಲೇಜುಗಳಿಗೆ ರಜೆ

ಮಂಗಳೂರು: ರಾಜ್ಯದ ಕೆಲವು ಭಾಗಗಲ್ಲಿ ಭಾರೀ ಮಳೆಯಾಗಿದ್ದು ಮಳೆಯ ಪರಿಣಾಮಕ್ಕೆ ಜನ ಹೈರಾಣಾಗಿದ್ದಾರೆ. ಇನ್ನು ದ ಹಲವೆಡೆ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ, ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ. ಭೂಕುಸಿತ ಮತ್ತು ಪ್ರವಾಹದ ಭೀತಿಯನ್ನು ಹೆಚ್ಚಿಸಿದೆ.ಹಲವು ದಿನಗಳಿಂದ ಜಿಲ್ಲೆಯ ವಿವಿಧೆಡೆ […]
ರಾಷ್ಟ್ರಧ್ವಜದ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಬೇಕು: ಕೆ ಎಸ್ ಜಯಶಂಕರ್

ಶ್ರೀರಂಗಪಟ್ಟಣ- ನಮ್ಮ ರಾಷ್ಟ್ರಧ್ವಜ ತ್ರಿರಂಗದಲ್ಲಿ ಕೇಸರಿ ಬಣ್ಣ – ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಮತ್ತು ಗಡಿಯಲ್ಲಿ ನಿಂತಿರುವ ಯೋಧರ ತ್ಯಾಗ, ಶೌರ್ಯವನ್ನು ನೆನಪಿಸುತ್ತದೆ. ಬಿಳಿ ಬಣ್ಣ- ಸತ್ಯ, ಶಾಂತಿ, ಮತ್ತು ಶುದ್ಧತೆಯ ಸಂಕೇತವಾಗಿದೆ ಹಸಿರು ಬಣ್ಣ – ನಮ್ಮ ರೈತರ ಪರಿಶ್ರಮ, ಭೂಮಿಯ ಫಲವತ್ತತೆ ಮತ್ತು ಪ್ರಗತಿಯ ಸಂಕೇತವಾಗಿದೆ ಎಂದು ಎಂದು ಸಮರ್ಪಣ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್ ತಿಳಿಸಿದ್ದಾರೆ. ಪಾಂಡವಪುರ ತಾಲೂಕು ಹುಲಿಕೆರೆ ಕೊಪ್ಪಲು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮರ್ಪಣಾ ಟ್ರಸ್ಟ್ ಆಯೋಜಿಸಿದ್ದರಾಷ್ಟ್ರಿಯ ಧ್ವಜ […]
Narendra Modi: ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ- ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನೀಟ್ ಪರೀಕ್ಷೆಯಲ್ಲಿ ಆದಂತಹ ಮೋಸಕ್ಕೆ ಯುವಕರು ಬೇಸತ್ತು ದೆಹಲಿಯಲ್ಲಿ ಜಂತರ್ ಮಂತರ್ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಧರಣಿ ಈಗ ತೀರ್ವ ವಿಕೋಪಕ್ಕ ತಲುಪಿದೆ. ಹೌದು ಪ್ರತಿಭಟನೆ ಮೇಲೆ ಪೊಲೀಸ್ ಲಾಠಿ ಚಾರ್ಜ್ ಮಾಡಿದ್ದಲ್ಲದೆ ಇದೀಗ ಕಲ್ಲು ತೂರಾಟ ನಡೆಸಿದ್ದಾರೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಇದೀಗ ಪಿಎಂ ಮೋದಿ ಎಕ್ಸ್ ಖಾತೆಯ ಮೂಲಕ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಅಪರಾಧಿಗಳಿಗೆ ತ್ವರಿತವಾಗಿ ವಿಚಾರಣೆ ನಡೆಸಿ […]
ಸರ್ಕಾರದೊಂದಿಗೆ ಇನ್ಮುಂದೆ ಯಾವುದೇ ಮಾತುಕತೆ ನಡೆದ್ರು ಅದು ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲೇ ತೀರ್ಮಾನ: ಅಭಿಜಿತ್ ದೀಪ್ಕೆ

ನವದೆಹಲಿ: ನಾವು ಮೌನದಿಂದ ಹೋರಾಟ ಮಾಡುತ್ತಿದ್ದ ವೇಳೆ ನಮ್ಮ ಮೇಲೆ ದಾಳಿ ನಡೆದಿದ್ದು, ನಮ್ಮ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಬಿಜೆಪಿ ಗುಂಡಾಗಳನ್ನು ಕಳುಹಿಸಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿಸಂಸ್ಥಾಪಕ ಅಭಿಜಿತ್ ದೀಪ್ಕೆ ತಿಳಿಸಿದ್ದಾರೆ. ಜಂತರ್ ಮಂತರ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜೆ.ಪಿ. ನಡ್ಡಾ ಅವರೊಂದಿಗಿನ ನಮ್ಮ ಕಳೆದ ಸಭೆಯ ನಂತರ ನಮ್ಮ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಸರ್ಕಾರದೊಂದಿಗೆ ಇನ್ಮುಂದೆ ಯಾವುದೇ ರೀತಿಯ ಮಾತುಕತೆ ನಡೆದರೂ ಅದು ಕೇವಲ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲೇ ನಡೆಸಲು […]
ಬೆಂಗಳೂರಿನ ಪುಟ್ ಪಾತ್ ನಲ್ಲಿ ಬೈಕ್ ಓಡಿಸಿದ್ರೇ 5000 ದಂಡ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ಪಾದಾಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ದಂಡದ ಮೊತ್ತವನ್ನು ರೂ.5000 ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಸಚಿವ ಕೃಷ್ಣ ಬೈರೇಗೌಡ ಅವರು ಸಾರಿಗೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಬುಧವಾರ ಬೆಂಗಳೂರು ನಗರ ಟ್ರಾಫಿಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಸಾರ್ವಜನಿಕರ ನಡೆಯುವ ಹಕ್ಕನ್ನು ಖಚಿತಪಡಿಸುವ ಸಲುವಾಗಿ ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ನಗರದಲ್ಲಿ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಐದೂ ಪಾಲಿಕೆಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕೆಲಸಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. […]
ಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ಕಾಯ್ದಿರಿಸದ ವಿಶೇಷ ರೈಲು ಸಂಚಾರದ ವ್ಯವಸ್ಥೆ

ಹುಬ್ಬಳ್ಳಿ: ಆಷಾಢ ಏಕಾದಶಿ ಹಬ್ಬದ ಪ್ರಯುಕ್ತ ಪಂಡರಪುರಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯು ಧಾರವಾಡ ಮತ್ತು ಪಂಡರಪುರ ನಡುವೆ ಕಾಯ್ದಿರಿಸದ ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 07357/07358 ಧಾರವಾಡ–ಪಂಡರಪುರ–ಧಾರವಾಡ ಕಾಯ್ದಿರಿಸದ ವಿಶೇಷ ಎಕ್ಸ್’ಪ್ರೆಸ್ ರೈಲುಗಳು ಜುಲೈ 23ರಿಂದ 28ರವರೆಗೆ ಒಟ್ಟು 6 ಟ್ರಿಪ್’ಗಳು ಸಂಚರಿಸಲಿವೆ. ರೈಲು ಸಂಖ್ಯೆ 07357: ಧಾರವಾಡದಿಂದ ಪ್ರತಿದಿನ ಬೆಳಿಗ್ಗೆ 6:00 ಗಂಟೆಗೆ ಹೊರಟು, ಅದೇ ದಿನ ಸಂಜೆ 4:50ಕ್ಕೆ ಪಂಡರಪುರ ತಲುಪಲಿದೆ. […]
ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್: ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ/ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಡೆಸಿದ ತನಿಖೆಯ ಶೈಲಿಯನ್ನು ಸುಪ್ರೀಂ ಕೋರ್ಟ್ ಕಠಿಣ ಪದಗಳಲ್ಲಿ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣದ ಸುದೀರ್ಘ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್, ಯಾವ ಸ್ವರೂಪದಲ್ಲಿ ತನಿಖೆ ನಡೆಯಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ಅಪೂರ್ಣ ತನಿಖೆಗೆ ಆಕ್ಷೇಪ ಪ್ರಕರಣದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಪೀಠವು, ಸಿಬಿಐ ತನಿಖಾಧಿಕಾರಿಗಳು ಘಟನಾ ಸ್ಥಳಕ್ಕೆ ಸ್ವತಃ […]
ರಾಜ್ಯದಲ್ಲಿ ಬರಗಾಲ ಘೋಷಿಸಿ, ಬೆಳೆಹಾನಿಗೆ ಎಕರೆಗೆ 50,000 ರೂ. ಪರಿಹಾರ ನೀಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಹೆಚ್ಚಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಲ್ಯಾಣ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಜನರು ಗುಳೆ ಹೋಗುತ್ತಿದ್ದಾರೆ. ಕೂಡಲೇ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಣೆ ಮಾಡಿ ರೈತರಿಗೆ ಎಕರೆಗೆ 50,000 ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ರಾಜ್ಯದಲ್ಲಿ ಬರದ ತಾಂಡವ ನಡೆಯುತ್ತಿದ್ದರೂ, ಕಾಂಗ್ರೆಸ್ ಮುಖಂಡರು, ಸಚಿವರು, ಶಾಸಕರು ಜಾಲಿ ಮಾಡಲು ದೆಹಲಿಗೆ ಹೋಗಿದ್ದಾರೆ. ಇದು ಕರ್ನಾಟಕದ ಬರ ಅಲ್ಲ, ಇದು ಜನರ,ರೈತರ ಹಣೆಬರಹ […]
ಸರ್ಕಾರಿ ಆತಿಥ್ಯ ಕ್ಷೇತ್ರಕ್ಕೆ ವೃತ್ತಿಪರ ಆತಿಥ್ಯ ನಿರ್ವಹಣೆಯ ಅತ್ಯುತ್ತಮ ಪದ್ಧತಿಗಳ ಅಳವಡಿಕೆ: ಸಚಿವ ಕೆ.ಜೆ ಜಾರ್ಜ್

ಬೆಂಗಳೂರು/ನಂದಿಗಿರಿಧಾಮ : ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ ಆತಿಥ್ಯ ಕೇಂದ್ರಗಳನ್ನು ಖಾಸಗಿ ಆತಿಥ್ಯ ಕ್ಷೇತ್ರದ ಪರಿಣತಿ ಮತ್ತು ಅತ್ಯುತ್ತಮ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಂಡು ಹಂತ ಹಂತವಾಗಿ ಉನ್ನತೀಕರಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯಿಂದ ನಿರ್ಮಿಸಲಾದ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಅತ್ಯಂತ ಸುಂದರ […]