ಓಣಂ ಹಬ್ಬದ ಪ್ರಯುಕ್ತ ಮೈಸೂರು–ಕಣ್ಣೂರು–ಬೆಂಗಳೂರು ದಂಡು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರದ ವ್ಯವಸ್ಥೆ

ಮೈಸೂರು: ಓಣಂ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಹಾಗೂ ಸುಗಮ ಪ್ರಯಾಣಕ್ಕೆ ಅನುಕೂಲವಾಗುವಂತೆ, ನೈಋತ್ಯ ರೈಲ್ವೆ ಮೈಸೂರು–ಕಣ್ಣೂರು–ಬೆಂಗಳೂರು ದಂಡು ನಡುವೆ ತಲಾ ಎರಡು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06227 ಮೈಸೂರು–ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್ ದಿನಾಂಕ 25.08.2026 (ಮಂಗಳವಾರ) ರಂದು 22:30 ಗಂಟೆಗೆ ಮೈಸೂರಿನಿಂದ ಹೊರಟು, ಮರುದಿನ 14:00 ಗಂಟೆಗೆ ಕಣ್ಣೂರು ತಲುಪಲಿದೆ. ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06228 ಕಣ್ಣೂರು–ಬೆಂಗಳೂರು ದಂಡು ವಿಶೇಷ ಎಕ್ಸ್‌ಪ್ರೆಸ್ ದಿನಾಂಕ 26.08.2026 (ಗುರುವಾರ) […]
ಕರ್ನಾಟಕವು ಗೂಂಡಾಗಳ ರಾಜ್ಯವಾಗಿದ್ದು, ಗೂಂಡಾ ಮುಖ್ಯಮಂತ್ರಿ ಇಲ್ಲಿದ್ದಾರೆ: ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು: ಕರ್ನಾಟಕವು ಗೂಂಡಾಗಳ ರಾಜ್ಯವಾಗಿದೆ; ಗೂಂಡಾ ಮುಖ್ಯಮಂತ್ರಿ ಇಲ್ಲಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆರೋಪಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದ್ದಾರೆ. ದೇಶದ ಯುವಜನತೆಗೆ ಮೋಸ ಮಾಡುತ್ತಿದ್ದಾರೆಂದು ಆಕ್ಷೇಪಿಸಿ ನಾವು ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಆದರೆ, ಸರಕಾರ ನಮ್ಮೆಲ್ಲರನ್ನು ಬಂಧಿಸಿದ್ದು, ನಾವೆಲ್ಲರೂ ಪೊಲೀಸ್ ಕಸ್ಟಡಿಯಲ್ಲಿದ್ದೇವೆ ಎಂದು ವಿವರಿಸಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಚ್ಚು, ಲಾಂಗು, ಮೊಟ್ಟೆಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಶಾಸಕರಾದ ರಾಮಮೂರ್ತಿ, ಅಶ್ವತ್ಥನಾರಾಯಣ್ ಅವರ […]
ಪ್ರವಾಸೋದ್ಯಮ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ಡಾ. ವಿ.ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ರಾಮ್ ಪ್ರಸಾತ್ ಮನೋಹರ್ ಅವರಿಗೆ, ರಾಜ್ಯ ಸರ್ಕಾರವು ಇತ್ತೀಚೆಗೆ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿ ಆದೇಶ ಹೊರಡಿಸಿತ್ತು. ಇದಕ್ಕೂ ಮೊದಲು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಹಾಗೂ ಕರ್ನಾಟಕ ರಾಜ್ಯ […]
ಸಂಸತ್ ಕಲಾಪ ಮುಗಿಯೋವರೆಗೂ ಲೋಕಸಭೆಯಿಂದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಮಾನತು!

ನವದೆಹಲಿ: ಸಂಸತ್ತಿನಲ್ಲಿ ಮಹಿಳಾ ಸಂಸದೆಯೊಬ್ಬರ ವಿರುದ್ಧ ಅಸಂಸದೀಯ ಹೇಳಿಕೆ ನೀಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (TMC) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಲೋಕಸಭೆಯ ಇಡೀ ಮುಂಗಾರು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ. ಸಂಸದೀಯ ಶಿಸ್ತು ಉಲ್ಲಂಘನೆ: ಅಮಾನತು ಪ್ರಸ್ತಾವನೆ ಅಂಗೀಕಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಕೆಯಾದ ದೂರಿನ ಆಧಾರದ ಮೇಲೆ, ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಕಲ್ಯಾಣ್ ಬ್ಯಾನರ್ಜಿ ಅವರ ಅಮಾನತಿಗೆ ಪ್ರಸ್ತಾವನೆ ಮಂಡಿಸಿದರು. ಬ್ಯಾನರ್ಜಿ ಅವರ ಈ […]
ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವ ಆಡ್ತಿದೆ, ಆದ್ರೆ ಸರ್ಕಾರ ಕ್ರಮ ಕೈಗೊಂಡಿಲ್ಲ: ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವ ಆಡ್ತಿದೆ. ಆದರೆ ಸರ್ಕಾರ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 2,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಬರ ಘೋಷಿಸಿದರೆ ಮಾತ್ರ ಕೇಂದ್ರದಿಂದ ನೆರವು ಸಿಗಲಿದೆ. ಆದರೆ ಸರ್ಕಾರ ಅದಕ್ಕೂ ಮುಂದಾಗುತ್ತಿಲ್ಲ. ಕೇಂದ್ರದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಮಳೆ ಕೊರತೆ ಇದ್ದರೂ ಇನ್ನೂ ಬರ ಘೋಷಣೆ ಮಾಡಿಲ್ಲ ಎಂದಿದ್ದಾರೆ. […]
ನೀಟ್ ಪರೀಕ್ಷೆ ಸುತ್ತ ವಿವಾದ – ನೀಟ್ ರದ್ದುಪಡಿಸುವಂತೆ ವಿಜಯ್ ಪಕ್ಷ ಆಗ್ರಹ

ಚೆನ್ನೈ: ನೀಟ್ ಪರೀಕ್ಷೆ ಸುತ್ತ ವಿವಾದ ತೀವ್ರವಾಗಿದ್ದು ಈ ವಿಚಾರಕ್ಕೆ ದೆಹಲಿಯಲ್ಲಿ ಯುವಕರು ಧರಣಿ ಮಾಡುತ್ತಿದ್ದಾರೆ. ಇದರ ನಡುವೆ ಪ್ರತಿಭಟನೆಯಲ್ಲಿರುವ ಯುವಕರ ಮೇಲೆ ಪೊಲೀಸ್ ಲಾಠಿ ಚಾರ್ಜ್ ಮಾಡಿದ್ದಾರೆ .ಇತ್ತ ಕಾಂಗ್ರೇಸ್ ಪಕ್ಷ ಯುವಕರಿಗೆ ಬೆಂಬಲ ನೀಡಿದ್ದು, ಇದರ ಮಧ್ಯೆ ತಮಿಳುನಾಡಿನ ಸಿಎಂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ, ಪರೀಕ್ಷೆ ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಪ್ರಕಟಿಸಿದ ಹೇಳಿಕೆಯಲ್ಲಿ, ಮಧ್ಯಂತರ ಕ್ರಮವಾಗಿ ವಿಶೇಷ ವ್ಯವಸ್ಥೆ ರೂಪಿಸಿ ರಾಜ್ಯಗಳಿಗೆ ವೈದ್ಯಕೀಯ ಶಿಕ್ಷಣ ಸೇರಿದಂತೆ […]
R Ashok: ಅಭಿಜಿತ್ ದೀಪ್ಕೆ ಪಾಕಿಸ್ತಾನ, ಬಾಂಗ್ಲಾದೇಶದ ಜತೆ ಸಂಪರ್ಕ ಇಟ್ಟುಕೊಂಡಿದ್ದಾನೆ: ಅಶೋಕ್

ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ದೇಶದ್ರೋಹಿ ಸಂಘಟನೆಯಾಗಿದೆ, ಅದರ ಮುಖ್ಯಸ್ಥ ಅಭಿಜಿತ್ ದೀಪ್ಕೆ ಪಾಕಿಸ್ತಾನ, ಬಾಂಗ್ಲಾದೇಶದ ಜೊತೆಗೆ ಸಂಪರ್ಕ ಇಟ್ಟುಕೊಂಡಿದ್ದಾನೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರುರಾಜ್ಯ ಸರ್ಕಾರವೇ ಇನ್ನು ವಿಪತ್ತು ಅಂತ ಘೋಷಣೆ ಮಾಡಿಲ್ಲ. ಕೇಂದ್ರ ಹೇಗೆ ಮಾಡುತ್ತದೆ? ರೋಮ್ ಹೊತ್ತಿ ಉರಿದರೆ ಯಾರೋ ಪಿಟೀಲು ಬಾರಿಸುತ್ತಿದ್ದನಂತೆ, ಅದೇ ರೀತಿ ಸಿಎಂ ದೆಹಲಿಯಲ್ಲಿ ಕೂತಿದ್ದಾರೆ ಎಂದರು. ರಾಜ್ಯದಲ್ಲಿ ಕೃಷಿ ಸಚಿವರು ಇಲ್ಲ, ತೋಟಗಾರಿಕೆ ಸಚಿವರು ಇಲ್ಲ. […]
Question Paper Leak: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಯುವಕರನ್ನು ತೀವ್ರ ನಿರಾಶೆಗೆ ತಳ್ಳಿವೆ- ಪ್ರಿಯಾಂಕಾ ಗಾಂಧಿ

ನವದೆಹಲಿ: ಶಾಂತಿಯುತವಾಗಿ ಧರಣಿ ಕೈಗೊಂಡಿದ್ದ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದೆ. ಜಂತರ್ ಮಂತರ್ ಪ್ರತಿಭಟನೆಯ ಮೂಲಕ ಯುವಕರು ಧರಣಿಗೆ ಕುಳಿತಾಗ ಪೊಲೀಸ್‌ರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಜಾರ್ಜ್‌ಗೆ ಬಗ್ಗದ ಯುವಜನತೆ ಖಾಕಿಯವರಿಗೆ ತಿರುಗಿ ಬಿದ್ದಿದ್ದಾರೆ. ಯುವಜನತೆಯ ಬೆಂಬಲಕ್ಕಾಗಿ ಸಾಕಷ್ಟು ನಾಯಕರು ನಟರು ಬಂದು ಹೋದರು ಆದರೆ, ಪ್ರಸ್ತುತ ಪರಿಸ್ಥಿತಿ ಕೈ ಮೀರುವ ಹಂತಕ್ಕೆ ಬಂದು ತಲುಪಿದೆ. ಇತ್ತ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಯುವಕರಿಗಾಗಿ ಮೋದಿ ಮನೆಯ ಮುಂದೆ ಧರಣಿಗೆ […]
DK Shivakumar: ಸಂಪುಟ ವಿಸ್ತರಣೆ ಮುಂದೂಡಲು ಇಷ್ಟವಿಲ್ಲ,ಅಂತಿಮ ತೀರ್ಮಾನ ಹೈಕಮಾಂಡ್ ಲೆಕ್ಕಾಚಾರ-ಸಿಎಂ ಡಿಕೆಶಿ

ಬೆಂಗಳೂರು: ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತೆ ಒಂದೆರಡು ದಿನ ಮುಂದೂಡಿಕೆಯಾಗಿದ್ದು, ಬುಧವಾರವೇ ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಇತ್ತು. ಆದರೆ ವಾರಾಂತ್ಯದಲ್ಲಿ ಮತ್ತೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆ ನಡೆಸುವ ಸಾಧ್ಯತೆ ಇದೆಹೈಕಮಾಂಡ್ ನಾಯಕರ ಲಭ್ಯತೆ ಕೊರತೆಯಿಂದ ಪ್ರಕ್ರಿಯೆ ಮುಂದಕ್ಕೆ ಹೋಗಿದೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಯಿಂದ ಇಂದು ಬೆಂಗಳೂರಿಗೆ ಮರಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯ ಕರ್ನಾಟಕ ಭವನದಲ್ಲಿ […]
ಬೆಂಗಳೂರಿನ ಶಿವಾಜಿನಗರದಲ್ಲಿಫುಟ್‌ಪಾತ್ ಜಾಗ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ವಿರುದ್ಧ FIR, ಅರೆಸ್ಟ್

ಬೆಂಗಳೂರು: ರಾಜಧಾನಿಯ ಶಿವಾಜಿನಗರ ಪ್ರದೇಶದಲ್ಲಿ ಪಾದಚಾರಿ ಮಾರ್ಗದಲ್ಲಿದ್ದ ಅಕ್ರಮ ಆಕ್ರಮಣಗಳನ್ನು ತೆರವುಗೊಳಿಸಲು ತೆರಳಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆಕೋರರ ಪಡೆ ಮಾರಣಾಂತಿಕ ದಾಳಿ ನಡೆಸಿದೆ. ಕಾರ್ಯಾಚರಣೆಗೆ ಅಡ್ಡಿಪಡಿಸಿದ ಗ್ಯಾಂಗ್, ಅಧಿಕಾರಿಗಳ ಕಣ್ಣಿಗೆ ಪೆಪ್ಪರ್ ಸ್ಪ್ರೇ ಚೆಲ್ಲಿ, ಬಳಿಕ ಹೆಲ್ಮೆಟ್‌ಗಳಿಂದ ಭೀಕರವಾಗಿ ಹಲ್ಲೆ ನಡೆಸಿ ಗಾಯಗೊಳಿಸಿದೆ. ಸರ್ಕಾರಿ ಕಾರ್ಯಕ್ಕೆ ಅಡ್ಡಿಪಡಿಸಿ ದೌರ್ಜನ್ಯ ಎಸಗಿದ ಘಟನೆಗೆ ಸಂಬಂಧಿಸಿದಂತೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ‘ಎ2 ಮತ್ತು ಇತರ ಅಪರಿಚಿತರ’ ವಿರುದ್ಧ ಕೊಲೆ ಯತ್ನ ಸೇರಿದಂತೆ […]