ಮೋದಿ ನಿವಾಸದೆದುರು ಹೈಡ್ರಾಮಾ: ಪ್ರಧಾನಿ, ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದರು ಧರಣಿ

ನವದೆಹಲಿ: ಪ್ರತಿಭಟನಾನಿರತ ಯುವ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಹಾಗೂ ಸರ್ಕಾರದ ಹೊಣೆಗೇಡಿತನವನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದತ್ತ ಬೃಹತ್ ಪಾದಯಾತ್ರೆ ನಡೆಸಿದರು. ಈ ಕುರಿತು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪ್ರಧಾನಿ ಮತ್ತು ಗೃಹ ಸಚಿವರಿಂದ ಯುವಕರ ಭವಿಷ್ಯ ನಾಶ: ರಾಹುಲ್ ವಾಗ್ದಾಳಿ […]
ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವಂತ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ: ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು: ವಿಶ್ವವಿದ್ಯಾಲಯ ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿವಿದ ದಲಿತಪರ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿ, ಸುದೀರ್ಘವಾಗಿ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು. ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ನಮ್ಮ ಸರ್ಕಾರ 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇದರಲ್ಲಿ ಕಾನೂನಾತ್ಮಕವಾಗಿ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಮೀಸಲಾತಿ […]
Toxic Song: ‘ಟಾಕ್ಸಿಕ್’ ಸಿನಿ ಸಾಂಗ್‌ಗೆ ಫ್ಯಾನ್ಸ್ ಫುಲ್ ಫಿದಾ- ಇಂಟರ್ನೆಟ್‌ನಲ್ಲಿ ಸಖತ್ ಟ್ರೆಂಡ್ ಸೃಷ್ಟಿಸಿದ ಯಶ್-ತಾರಾ ಸುತಾರಿಯಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ,‘ಟಾಕ್ಸಿಕ್’ ಚಿತ್ರ ಬಿಡುಗಡೆಯಾಗುವ ಮುನ್ನ ಸಾಕಷ್ಟು ಚರ್ಚೆಗೆ ಗುರಿಯಾಗಿತ್ತು ಆದರೆ ಇದೀಗ ಚಿತ್ರದ ಸಾಂಗ್‌ಗಳು ಒಂದರಮೇಲೋಂದು ರಿಲೀಸ್ ಆಗುತ್ತಿದ್ದು ಅಭಿಮಾನಿಗಳ ಮನಸ್ಸನ್ನು ಗೆಲ್ಲುವಲ್ಲಿ ಪ್ರಮುಖ ಸ್ನಾನ ಗಿಟ್ಟಿಸಿಕೊಳ್ಳುವಲ್ಲಿದೆ. ಗೀತು ಮೋಹನ್ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ದೊರಕಿದೆ.ಈ ಮೊದಲು ಬಿಡುಗಡೆಯಾಗಿ ಕೋಟ್ಯಂತರ ವೀಕ್ಷಣೆಗಳೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ್ದ ಬೋಲ್ಡ್ ಅಂಡ್ ರೊಮ್ಯಾಂಟಿಕ್ ‘ತಬಾಹಿ’ ಹಾಡಿನ ಬೆನ್ನಲ್ಲೇ, ಚಿತ್ರತಂಡ ಎರಡನೇ ಹಾಡನ್ನು ರಿಲೀಸ್ ಮಾಡಿದೆ. ಇಂದು ಬೆಳಿಗ್ಗೆ 11.33ಕ್ಕೆ […]
ಯಾರು 10 ವರ್ಷದಿಂದ ಇಲ್ಲಿ ಇಲ್ಲವೋ ಅವರನ್ನ ಹೊರಗೆ ಹಾಕ್ತೀವಿ: ಪರಮೇಶ್ವರ್

ಬೆಂಗಳೂರು: ಶಿವಾಜಿ ನಗರದಲ್ಲಿ ಮಾಡ್ತಿರೋ ಫುಟ್‌ಪಾತ್ ತೆರವಿಗೆ ಜನರು ಸಹಕಾರ ಕೊಡಬೇಕು ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ. ಶಿವಾಜಿ ನಗರದಲ್ಲಿ ಫುಟ್‌ಪಾತ್ ತೆರವು ಮಾಡಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣ ವಿಚಾರಕ್ಕೆ ಮಾತನಾಡಿದ ಅವರು, ಹಲ್ಲೆ ಮಾಡಿದ್ರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ದೇಶದಲ್ಲಿ ಕಾನೂನು ಇಲ್ಲವಾ?ಶಿವಾಜಿ ನಗರದಲ್ಲಿ ತೆರವು ಮಾಡಲು ಹೋದಾಗ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಯಾರೇ ಆದ್ರು ಹಲ್ಲೆ ಮಾಡೋಕೆ ಅಧಿಕಾರ ಇಲ್ಲ. ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ತಾರೆ […]
ಮೈಸೂರಲ್ಲಿ ಮನಕಲಕುವ ಘಟನೆ: ಪತ್ನಿ, ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ಬಳಿಕ ವ್ಯಕ್ತಿ ಆತ್ಮಹ*ತ್ಯೆ

ಮೈಸೂರು: ಕುಟುಂಬದ ಇಬ್ಬರು ಪುಟ್ಟ ಮಕ್ಕಳು ಹಾಗೂ ಪತ್ನಿಯನ್ನು ಕ್ರೂರವಾಗಿ ಹತ್ಯೆಗೈದು, ಬಳಿಕ ತಂದೆಯೂ ಜೀವ ತೊರೆದಿರುವ ಭೀಕರ ಘಟನೆಯೊಂದು ಮೈಸೂರು ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ವರದಿಯಾಗಿದೆ. ದುರಂತದಲ್ಲಿ ಹರೀಶ್ (49), ಅವರ ಪತ್ನಿ ನಿಶ್ಚಿತ (36) ಹಾಗೂ ಅವರ 13 ಮತ್ತು 6 ವರ್ಷದ ಇಬ್ಬರು ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಭೀಕರ ಹತ್ಯೆ ಮನೆಯಲ್ಲಿದ್ದ ಪತ್ನಿ ಮತ್ತು ಇಬ್ಬರು ಮಕ್ಕಳ ಬಾಯಿಗೆ ಪ್ಲಾಸ್ಟರ್‌ಗಳನ್ನು ಅಂಟಿಸಿ, ಅವರು ಉಸಿರಾಡದಂತೆ ಮಾಡಿ […]
ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವುದು ಸರ್ಕಾರದ ಕರ್ತವ್ಯವಲ್ಲ, ಅದೊಂದು ‘ರಾಷ್ಟ್ರೀಯ ಜವಾಬ್ದಾರಿ’ : ಮೋದಿ

ನವದೆಹಲಿ: ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವುದು ಸರ್ಕಾರದ ಕರ್ತವ್ಯವಲ್ಲ, ಅದೊಂದು ‘ರಾಷ್ಟ್ರೀಯ ಜವಾಬ್ದಾರಿ’ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಆಡಳಿತಾರೂಢ ಎನ್‌ಡಿಎ ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ನೀಟ್ ಮತ್ತು ಇತರ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕುರಿತು ಅತ್ಯಂತ ಗಂಭೀರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗೆಯೇ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಸಹ ಗದ್ದಲ ಎಬ್ಬಿಸದೆ ರಚನಾತ್ಮಕವಾಗಿ ದೇಶದ ಹಿತದೃಷ್ಟಿಯಿಂದ ಭಾಗವಹಿಸಬೇಕು” ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ದೇಶದ ಭವಿಷ್ಯ ಮತ್ತು ಯುವಜನತೆಯ ಕಲ್ಯಾಣಕ್ಕಾಗಿ ಕೆಲಸ ಮಾಡುವ […]
ಕೊರೋನಾ ರಾಜ್ಯದಲ್ಲಿ ಏರಿಕೆ ಇಲ್ಲ, ಆ ರೀತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತಿಲ್ಲ : ಸಚಿವ ಯು.ಟಿ ಖಾದರ್

ಬೆಂಗಳೂರು: ಆಂಧ್ರದಲ್ಲಿ ಕೋವಿಡ್‌ಗೆ ನಾಲ್ಕು ಮಂದಿ ಬಲಿಯಾಗಿದ್ದಾರೆ. ಆದರೇ ರಾಜ್ಯದಲ್ಲಿ ಕೋವಿಡ್ ಡೇಂಜರ್ ಇಲ್ಲ, ಆದರೆ ಎಚ್ಚರಿಕೆ ವಹಿಸಿ ಎಂದು ಸಚಿವ ಯು.ಟಿ ಖಾದರ್ ಸಲಹೆ ನೀಡಿದ್ದಾರೆ. ಆಂಧ್ರದಲ್ಲಿ ಕೋವಿಡ್ ಕೇಸ್ ಇರುವುದರಿಂದ ಕರ್ನಾಟಕದ ಜನರಿಗೆ ಆರೋಗ್ಯ ಸಚಿವರು ಮಹತ್ವದ ಸಂದೇಶ ನೀಡಿದ್ದಾರೆ. ಈ ಹಿಂದೆ ಕೊರೋನಾ ಸಂದರ್ಭದಲ್ಲಿ ಯಾವ ರೀತಿ ಮುಂಜಾಗ್ರತೆ ವಹಿಸಿದ್ದರೋ? ಅದೇ ರೀತಿಯಲ್ಲಿ ಎಚ್ಚರಿಕೆ ವಹಿಸಿದ್ರೆ ಸಾಕು, ಆತಂಕ ಬೇಡ ಇನ್ನೂ ರಾಜ್ಯದಿಂದ ಆಂಧ್ರಕ್ಕೆ ತೆರಳುವ ಜನರಿಗೆ ಅಥವಾ ತಿರುಪತಿಗೆ ತೆರಳುವ ಜನರಿಗೆ […]
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಮುಂದುವರಿಯುತ್ತದೆ: ಅಭಿಜಿತ್ ದೀಪ್ಕೆ

ನವದೆಹಲಿ: ಇವತ್ತು ಜಗತ್ತೇ ಭಾರತದತ್ತ ತಿರುಗಿ ನೋಡುವಂತಹ ಸನ್ನಿವೇಶ ಎದುರಾಗಿದೆ. ಯುವಕರ ನಡೆ ಕೆಲವೊಬ್ಬರಿಗೆ ಸಂಸತ ತಂದರೆ, ಇನ್ನು ಕೆಲ ಅಧಿಕಾರಿಗಳಿಗೆ ಭಯ ಹುಟ್ಟಿಸುತ್ತಿದೆ. ನೀಟ್ ಪರೀಕ್ಷೆಯಲ್ಲಿ ಆದಂತಹ ಮೋಸಕ್ಕೆ ಪರಿಹಾರ ಬೇಕು ಎಂದು ದೇಹಲಿಯಲ್ಲಿ ಯುವಕರು ಧರಣಿ ನಡೆಸಿದ್ದಾರೆ. ಜಂತರ್ ಮಂತರ್ ಎನ್ನುವ ಸಂಘವನ್ನು ಕಟ್ಟಿಕೊಂಡು ಸರ್ಕಾರಕ್ಕೆ ಸವಾಲ್ ಹಾಕುವುದಕ್ಕೆ ಮುಂದಾಗಿದ್ದಾರೆ. ಹೌದು ಈ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದು, ಇಂದು ತಮ್ಮ ಪ್ರತಿಭಟನೆ ಹಾಗೂ ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ […]
ಹೊಸ ಮನೆಗೆ ಕರೆಂಟ್ ಕನೆಕ್ಷನ್ ನೀಡಲು ಲಂಚ ಕೇಳಿದ್ದ ಸೆಸ್ಕಾಂ ಅಧಿಕಾರಿ ಲೋಕಾಯುಕ್ತ ಲಾಕ್!

ಮಂಡ್ಯ: ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕಾಂ) ಮಂಡ್ಯ ನಗರ ಉಪ ವಿಭಾಗದ ಸಹಾಯಕ ಎಂಜಿನಿಯರ್ (AE) ಶ್ರೀನಿವಾಸ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊಸ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸಕ್ಕಾಗಿ ಇವರು ಭ್ರಷ್ಟಾಚಾರದ ಹಾದಿ ಹಿಡಿದಿದ್ದರು. ನಿಯಮ ಮೀರಿ ಸೌಲಭ್ಯ ಕೊಡುವ ಆಮಿಷ ಮನೆಗೆ ಅಧಿಕೃತವಾಗಿ ವಿದ್ಯುತ್ ಸಂಪರ್ಕ ನೀಡಲು ಹಾಗೂ ಇಲಾಖೆಗೆ ಪಾವತಿಸಬೇಕಾದ ನಿಯಮಾನುಸಾರ ಅಭಿವೃದ್ಧಿ ಶುಲ್ಕವನ್ನು ವಿನಾಯಿತಿ ಕೊಡಿಸುವುದಾಗಿ ನಂಬಿಸಿ ಎಇ ಶ್ರೀನಿವಾಸ್ ಅವರು ಅರ್ಜಿದಾರರಿಂದ 75 […]
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ, ಮಾತೃಶ್ರೀ ಚೆನ್ನಮ್ಮ ಅಂತ್ಯಕ್ರಿಯೆ: ಸಕಲ ಸರ್ಕಾರಿ ಗೌರವಗಳೊಂದಿಗೆ ವಿದಾಯ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ (89) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಸೋಮವಾರ (ಜುಲೈ 20) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾವಪೂರ್ಣವಾಗಿ ನೆರವೇರಿತು. ಜೆಡಿಎಸ್ ಕುಟುಂಬದ ಹಿರಿಯ ಜೀವಕ್ಕೆ ಸಚಿವರು, ಮಠಾಧೀಶರು ಹಾಗೂ ಸಹಸ್ರಾರು ಅಭಿಮಾನಿಗಳು ಕಣ್ಣೀರಿನ ವಿದಾಯ ಹೇಳಿದರು. ಕಂಬನಿ ಮಿಡಿದ ದೇವೇಗೌಡರ ಕುಟುಂಬ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿರುವ ಕೌಟುಂಬಿಕ ಜಮೀನಿನಲ್ಲಿ ಒಕ್ಕಲಿಗ ಸಂಪ್ರದಾಯದ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ಜರುಗಿಸಲಾಯಿತು. […]