2020ರ ದೆಹಲಿ ಗಲಭೆ ಕೇಸ್: ತಾಹೀರ್ ಹುಸೇನ್ ಸೇರಿದಂತೆ ಐವರು ದೋಷಿಯೆಂದು ಕೋರ್ಟ್ ತೀರ್ಪು

ನವದೆಹಲಿ: 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಕೋಮು ಗಲಭೆಯ ವೇಳೆ ಗುಪ್ತಚರ ಇಲಾಖೆಯ (IB) ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಕಾರ್ಕರ್ಡೂಮಾ ನ್ಯಾಯಾಲಯವು ಸೋಮವಾರ (ಜುಲೈ 13, 2026) ಮಹತ್ವದ ತೀರ್ಪು ನೀಡಿದೆ. ಆಮ್ ಆದ್ಮಿ ಪಕ್ಷದ (AAP) ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಸೇರಿದಂತೆ ಐವರು ಆರೋಪಿಗಳನ್ನು ನ್ಯಾಯಾಲಯವು ದೋಷಿ ಎಂದು ಘೋಷಿಸಿದೆ. ಕಾರ್ಕರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಪ್ರವೀಣ್ ಸಿಂಗ್ ಅವರು ಈ ತೀರ್ಪನ್ನು […]
ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ: ರಾಜ್ಯ ಸರ್ಕಾರದ ಸ್ಪಷ್ಟನೆ

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸುಳ್ಳಾಗಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಲಾಭವನ್ನು ಮುಂದುವರೆಸಲು ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ […]
ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುವ ಬಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?

ಬೆಂಗಳೂರು : “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ನಮ್ಮ ರಾಜ್ಯದ ವಾದ ಮಂಡಿಸುತ್ತೇವೆ. ನಂತರ ತೀರ್ಮಾನವನ್ನು ತಿಳಿಸುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಮಂಡ್ಯ ಶಾಸಕರು ಕಾವೇರಿ ನೀರು ಬಿಡುವಂತೆ […]
ರಾಜ್ಯದ 13 ರೋಪ್‌ವೇ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಿ: ಸಚಿವ ಕೆ.ಜೆ. ಜಾರ್ಜ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತಾಪಿಸಲಾಗಿರುವ 13 ರೋಪ್‌ವೇ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅವರು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಂದು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಆಯುಕ್ತರಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ವಿವಿಧ ರೋಪ್‌ವೇ ಯೋಜನೆಗಳ […]
ಪೋಕ್ಸೋ ಪ್ರಕರಣ: ವಚನಾನಂದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ಮಂಜೂರು

ದಾವಣಗೆರೆ: ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪದ ಸುಳಿಗೆ ಸಿಲುಕಿದ್ದ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿಯವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಯಶಸ್ಸು ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೋ (POCSO) ಮೊಕದ್ದಮೆಗೆ ಸಂಬಂಧಿಸಿದಂತೆ ದಾವಣಗೆರೆಯ ಪೋಕ್ಸೋ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ತೀರ್ಪಿನಿಂದಾಗಿ ಬಂಧನದ ಭೀತಿಯಲ್ಲಿದ್ದ ಸ್ವಾಮೀಜಿಯವರಿಗೆ ಸದ್ಯಕ್ಕೆ ಭಾರಿ ನೆಮ್ಮದಿ ಸಿಕ್ಕಂತಾಗಿದೆ. ಮಠದಲ್ಲಿ ಅಸಭ್ಯ ವರ್ತನೆ ಆರೋಪ: ಗದಗದಲ್ಲಿ ದಾಖಲಾಗಿತ್ತು ಎಫ್‌ಐಆರ್ ಮಠದ […]
ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಗರಂ : ಬೇರೆ ಬೇರೆ ಆರೋಪಗಳಿಗೆ ಒಂದೇ ಕೇಸ್ ಹಾಕುವುದಕ್ಕೆ ಬರಲ್ಲ

ನವದೆಹಲಿ: ರೇವಣ್ಣರ ಕುಟುಂಬ ಸಮಸ್ಯೆಗಳ ಮೇಲೆ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪವಿದ್ದು, ತಂದೆ ರೇವಣ್ಣ ವಿರುದ್ಧ ಬೇರೆ ಆರೋಪಗಳಿವೆ. ಈ ಕಾರಣಕ್ಕೆ ಈಗ ಒಂದೇ ಕೇಸ್ ಎಂದು ತಂದೆ ಮೇಲೂ ರೇಪ್ ಆರೋಪ ಹೊರಿಸಲು ಆಗುವುದಿಲ್ಲ ಎಂದು ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಶಾಸಕ ಹೆಚ್‌ಡಿ ರೇವಣ್ಣ ವಿರುದ್ಧ ಲೈಗಿಂಕ ದೌರ್ಜನ್ಯ, ಬೆದರಿಕೆ, ಹಲ್ಲೆ ಪ್ರಕರಣದಲ್ಲಿ ಹೈಕೋರ್ಟ್ ಹಲ್ಲೆ ಪ್ರಕರಣ ರದ್ದು […]
ದೇವಸ್ಥಾನಗಳ ಹಣ ದುರುಪಯೋಗ ತಡೆಯಲು ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಆಸ್ತಿಪಾಸ್ತಿ, ನಗದು ಹಣ ಮತ್ತು ಚಿನ್ನಾಭರಣಗಳ ರಕ್ಷಣೆಗಾಗಿ ಅತ್ಯಂತ ಕಟ್ಟುನಿಟ್ಟಿನ ಹೊಸ ‘ಪ್ರಮಾಣಿತ ಕಾರ್ಯಾಚರಣೆ ವಿಧಾನ’ವನ್ನು (SOP) ಜಾರಿಗೆ ತಂದಿದೆ. ದೇಶದ ನಾನಾ ಭಾಗಗಳಲ್ಲಿ ಧಾರ್ಮಿಕ ಕೇಂದ್ರಗಳ ಹುಂಡಿ ಕಳ್ಳತನ ಮತ್ತು ಕಾಣಿಕೆ ಹಣ ದುರುಪಯೋಗವಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಭದ್ರತೆ ಮತ್ತು ತಂತ್ರಜ್ಞಾನ ಆಧಾರಿತ ಮುಂಜಾಗ್ರತಾ ಕ್ರಮಗಳು […]
ಪ್ರಧಾನ ಮಂತ್ರಿ ವಿದೇಶಕ್ಕೆ ಹೋಗುವುದು ರೀಲ್ಸ್ ಮಾಡೋಕಾ? : ಪ್ರಿಯಾಂಕ್ ಖರ್ಗೆ

ಬೆಂಗಳೂರು: ನಮ್ಮ ದೇಶದ ವಿದೇಶಾಂಗ ನೀತಿಯನ್ನು ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಡವಿಟ್ಟು ಬಂದಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 100 ಡಾಲರ್ ಇದ್ದಾಗ ಇಲ್ಲಿ ಇಂಧನ ಬೆಲೆ ಏರಿಸಿದವರು, ಅದು 40 ಡಾಲರ್‌ಗೆ ಕುಸಿದಾಗ ಬೆಲೆ ಇಳಿಸಲಿಲ್ಲ ಎಂದು ಆಕ್ರೋಶ ಹೊರಹಾಕಿದರು. ನಮ್ಮ ದೇಶದಲ್ಲಿ ವಿದೇಶಾಂಗ ಸಚಿವರು ಇದ್ದಾರೋ ಇಲ್ಲವೋ? ಅಸಲು ನಮಗೊಂದು ವಿದೇಶಾಂಗ ನೀತಿ ಇದೆಯೋ ಇಲ್ಲವೋ ಎಂಬ […]
ಧರ್ಮ ರಾಜಕಾರಣಕ್ಕೆ ಅವಕಾಶ ಇಲ್ಲ: ಬಿಜೆಪಿ ನಾಯಕ ಕೆ ಅಣ್ಣಾಮಲೈ

ಚೆನ್ನೈ,: ತಮ್ಮ ಹೊಸ ಜನಾಂದೋಲನವು ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷವಾಗಿ ರೂಪುಗೊಳ್ಳಲಿದೆ ಎಂದು ಮಾಜಿ ಬಿಜೆಪಿ ನಾಯಕ ಕೆ ಅಣ್ಣಾಮಲೈ ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಮಾತನಾಡಿದ ಅವರು, ‘ವೀ ದಿ ಲೀಡರ್ಸ್’ ಸಂಘಟನೆಯ ತತ್ವದ ಬಗ್ಗೆಯೂ ಬೆಳಕು ಚೆಲ್ಲಿದ್ದಾರೆ. “ಧರ್ಮ ನಮ್ಮ ವ್ಯಾಪ್ತಿಯಿಂದ ಹೊರಗಿದೆ, ‘ವೀ ದಿ ಲೀಡರ್ಸ್’ ರಾಜಕೀಯ ಪಕ್ಷವಾಗಲಿದೆ” ಎಂದಿದ್ದಾರೆ. ಅಣ್ಣಾಮಲೈ ಅವರು ಧಾರ್ಮಿಕ ಮತ್ತು ಆಧ್ಯಾತ್ಮಿಕ ವಿಷಯಗಳು ವೈಯಕ್ತಿಕ ಹಾಗೂ ಸಾಮಾಜಿಕ ಧಾರ್ಮಿಕ ಸಂಸ್ಥೆಗಳಿಗೆ ಬಿಟ್ಟದ್ದು ಎಂದು ಪ್ರತಿಪಾದಿಸಿದ್ದಾರೆ. ರಾಜಕೀಯ ನಾಯಕರು ಧರ್ಮವನ್ನು ತಮ್ಮ […]
ಇವತ್ತಿನ ರಾಜ್ಯದ ಹವಾಮಾನ ವರದಿ ಇಲ್ಲಿದೆ ನೋಡಿ

ಕರಾವಳಿ ಕರ್ನಾಟಕದ ಮೂರೂ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ. ಜು.15ರವರೆಗೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಹೆಚ್ಚಾಗಿದೆ.ಇದರೊಂದಿಗೆ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿಯೂ ಜುಲೈ 13 ರಿಂದ 15ರ ಅವಧಿಯಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ […]