ಕೆಸೆಟ್-2026: ಅರ್ಜಿ ಸಲ್ಲಿಕೆ ಆರಂಭ, ಅಕ್ಟೋಬರ್ 11ಕ್ಕೆ ಲಿಖಿತ ಪರೀಕ್ಷೆ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ ‌ 11ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಕೆಸೆಟ್ ಪರೀಕ್ಷೆಯನ್ನು ಒಟ್ಟು 37‌ ವಿಷಯಗಳಿಗೆ ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 5ರೊಳಗೆ ಅರ್ಜಿ ಸಲ್ಲಿಸಬೇಕು. ಸೆ.6ರೊಳಗೆ ಶುಲ್ಕ ಪಾವತಿಸಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಂದಕ್ಕಿಂತ ಹೆಚ್ಚು ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು, […]

ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸಮಾಜ ಅಭಿವೃದ್ಧಿ ಮಾಡುವುದೇ ನಮ್ಮ ಗುರಿ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾನು ಹೆಚ್ಚು ಓದಿಲ್ಲ, ಆದರೆ ಜಿಲ್ಲಾ ಪಂಚಾಯ್ತಿ ಸದಸ್ಯನಾಗಿ, ಶಾಸಕ, ಮಂತ್ರಿ, ಉಪಮುಖ್ಯಮಂತ್ರಿಯಾಗಿ ಅನುಭವ ಇದೆ. ನೀವು ಶ್ರಮಜೀವಿ, ಸರ್ಕಾರದ ನಾಡಿ ಮಿಡಿತ ಇಟ್ಟುಕೊಂಡು, ಜನ ಮತ್ತು ಸರ್ಕಾರದ ಸೇತುವೆಯಾಗಿದ್ದೀರಿ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಾತನಾಡಿದ ಅವರು, ನಾವು ಅಧಿಕಾರದಲ್ಲಿ ಇದ್ದಾಗ ಯಾವ ಸಾಕ್ಷಿಗುಡ್ಡೆ ಬಿಟ್ಟು ಹೋಗುತ್ತೇವೆ ಎಂಬುದು ಮುಖ್ಯ ಎಂದು ಕರೆ ಕೊಟ್ಟರು. ಅಂಬೇಡ್ಕರ್ ಅವರು ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ ಎಂದು ಹೇಳಿದ್ದಾರೆ. ನೀವು ಸಾಕಷ್ಟು […]

ಬೈರಮಂಗಲ, ಕಂಚುಗಾರನಹಳ್ಳಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ಬೆಂಗಳೂರು : “ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು” ಎಂದು ಬಿಡದಿಯ ಸುತ್ತಮುತ್ತಲ ರೈತರ ನಿಯೋಗ ಇಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು ರೆಡ್ ಜೋನ್ ನಿಂದ ತಮಗಾಗಿರುವ ಕಷ್ಟ ವಿವರಿಸಿದರು. ತಕ್ಷಣವೇ ಅದನ್ನು ತೆಗೆದು […]

ತಮಿಳುನಾಡಿಗೆ ನಿತ್ಯ 12,000 ಕ್ಯೂಸೆಕ್ ಕಾವೇರಿ ನೀರು ಹರಿಸಲು CWRC ಶಿಫಾರಸು, ಕನ್ನಡಿಗರ ಆಕ್ರೋಶ

ನವದೆಹಲಿ: ಕಾವೇರಿ ನೀರು ಹಂಚಿಕೆ ಜಟಾಪಟಿಯಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ದಿನಂಪ್ರತಿ 12,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿದ್ದು, ಈ ತೀರ್ಮಾನವು ರಾಜ್ಯದ ಜನತೆ ಹಾಗೂ ರೈತ ಸಮುದಾಯದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್, ಕಬಿನಿ, ಹಾರಂಗಿ ಮತ್ತು ಹೇಮಾವತಿಗಳಿಗೆ ಸದ್ಯ ಒಳಹರಿವು ಕೊಂಚ ಹೆಚ್ಚಿದೆಯಾದರೂ, ಅದು ಕುಡಿಯುವ ನೀರಿನ ಅಭಾವ ತೀರಿಸಲು ಮಾತ್ರ […]

ನಮಗಿಂತಲೂ ದೊಡ್ಡ ಉದ್ದೇಶಕ್ಕಾಗಿ ಸೇವೆ ಸಲ್ಲಿಸುತ್ತೇವೆ ಇದೇ ನಮ್ಮ ಬದ್ಧತೆ : ಗೌತಮ್‌ ಅದಾನಿ

ನವದೆಹಲಿ: ಗೌತಮ್‌ ಅದಾನಿ ವಿರುದ್ಧದ ಕ್ರಿಮಿನಲ್‌ ಆರೋಪ ಶಾಶ್ವತವಾಗಿ ವಜಾಗೊಳಿಸಿರುವ ಅಮೆರಿಕ ನ್ಯಾಯಾಲಯದ ತೀರ್ಪನ್ನು ಅದಾನಿ ಸಮೂಹದ ಅಧ್ಯಕ್ಷ ಗೌತಮ್‌ ಅದಾನಿ ಅವರು ಸ್ವಾಗತಿಸಿದ್ದಾರೆ, ‘ಸತ್ಯ, ನ್ಯಾಯದ ಮೇಲಿನ ನಂಬಿಕೆ ಅಚಲವಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ವೊಂದನ್ನು ಅಂಚಿಕೊಂಡಿರುವ ಅವರು, ಮುಂದೆಯೂ ಮಹತ್ವದ ಕೆಲಸವನ್ನೇ ಮುಂದುವರಿಸುತ್ತೇವೆ. ನಮ್ಮ ದೇಶಕ್ಕಾಗಿ ನಿರ್ಮಿಸುತ್ತೇವೆ, ಸತ್ಯ, ನ್ಯಾಯಸಮ್ಮತತೆ ಮತ್ತು ಕಾನೂನಿನ ಆಳ್ವಿಕೆಯ ಮೇಲಿನ ತಮ್ಮ ನಂಬಿಕೆ ಸವಾಲಿನ ಅವಧಿಯಲ್ಲೂ ಅಚಲವಾಗಿತ್ತು ಎಂದು ಹೇಳಿದ್ದಾರೆ. […]

Rahul Gandhi: ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ-ರಾಹುಲ್ ಗಾಂಧಿ ಟೀಕೆ

ನವದೆಹಲಿ: ಜಾರ್ಖಂಡ್‌ನಲ್ಲಿ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿತ್ತು ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದರು. ಈ ವಿಷಯಕ್ಕೆ ಕಾಂಗ್ರೆಸ್‌ Congress ನಾಯಕ ರಾಹುಲ್‌ ಗಾಂಧಿಯವರು , ತಮ್ಮದೇ ಮೈತ್ರಿಕೂಟ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ. ಎಕ್ಸ್‌ನಲ್ಲಿ ಅವರು ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಸರ್ಕಾರ ತಕ್ಷಣ ಮಾತುಕತೆ ನಡೆಸಬೇಕು. ಅವರ ಕಳವಳಗಳನ್ನು ಆಲಿಸಬೇಕು. ಈ ಮೂಲಕ ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. […]

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ- ಇತ್ತ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿ

ರಾಜ್ಯದ ಕೆಲವು ಭಾಗಗಳಲ್ಲಿ ವರುಣಾಬ್ಬರ ಮುಂದುವರೆದಿದ್ದು, ಮಳೆಯ ಪರಿಣಾಮಕ್ಕೆ ಕೆರೆ ನದಿಗಳು ತುಂಬಿವೆ. ಇನ್ನು ಹಲವು ಕಡೆ ಮರಗಳು ಧರೆ ಉರುಳಿದ್ದು,ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಉತ್ತಮ ಮಳೆಯ ಮುನ್ಸೂಚನೆ ಇದ್ದು 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮುಂದಿನ ಮೂರು ಗಂಟೆಯಲ್ಲಿ ಅಂದರೆ ಭಾನುವಾರ ಸಂಜೆ ವೇಳೆಗೆ ಕರಾವಳಿಯ ಎರಡು ಜಿಲ್ಲೆಗೆ ಮಳೆಯ ಅಲರ್ಟ್ ನೀಡಲಾಗಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಉತ್ತರ ಕರ್ನಾಟಕದ […]

Renukaswamy Murder Case: ದರ್ಶನ್‌ಗೆ ಮಾಫಿ ಸಾಕ್ಷಿ ಕಂಟಕ – ರೇಣುಕಾಸ್ವಾಮಿ ಕೇಸಲ್ಲಿ ದಚ್ಚುಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಒಂದಲ್ಲಾ ಒಂದು ರೀತಿಯಲ್ಲಿ ಕಂಟಕ ಕಾಡುತ್ತಲೇ ಇದ್ದು ಈ ವಿಚಾರ ತಿಳಿದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಇವರು ಕೊಲೆ ಮಾಡಿರುವುದನ್ನು ಸತ್ಯ ಎಂದು ಸಾಬೀತು ಪಡಿಸುವುದಕ್ಕೆ ಸ್ನೇಹಿತರೇ ಸಜ್ಜಾಗಿದ್ದಾರೆ. ಮತ್ತೊಂದು ಕಡೆ ದರ್ಶನ್‌ ಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ತನ್ನನ್ನು ‘ಮಾಫಿ ಸಾಕ್ಷಿ’ಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈತನು ದರ್ಶನ್‌ ಆಪ್ತ ಸ್ನೇಹಿತ ಎನ್ನಲಾಗಿದೆ. ನಟ ದರ್ಶನ್ […]

ಮೃತಪಟ್ಟ ಕೋಳಿಗಳಿಗೂ ಪರಿಹಾರ ನೀಡಬೇಕು – ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ರಸ್ತೆ ಅಪಘಾತಗಳಲ್ಲಿ ಕೋಳಿಗಳು ಮೃತಪಟ್ಟರೆ ಅವುಗಳನ್ನು ‘ಸರಕು’ ಹಾಗೂ ‘ಜೀವಸಂಪತ್ತು’ ಎಂದೇ ಪರಿಗಣಿಸಬೇಕು. ಆದ್ದರಿಂದ ಅವುಗಳ ಸಾವಿನಿಂದ ಉಂಟಾಗುವ ನಷ್ಟಕ್ಕೆ ವಿಮಾ ಕಂಪನಿಯು ಸೂಕ್ತ ಪರಿಹಾರವನ್ನು ಪಾವತಿಸುವುದು ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಪ್ರಕರಣದ ಹಿನ್ನೆಲೆ: ಬಳ್ಳಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಸರಕು ವಾಹನದಲ್ಲಿ ಸಾಗಿಸಲಾಗುತ್ತಿದ್ದ ಸಾವಿರಾರು ಕೋಳಿಗಳು ಮೃತಪಟ್ಟಿದ್ದವು. ಪ್ರಕರಣದ ವಿಚಾರಣೆ ನಡೆಸಿದ್ದ ಬಳ್ಳಾರಿಯ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣವು, ನಷ್ಟ ಅನುಭವಿಸಿದ ಕೋಳಿಗಳ ಮಾಲೀಕ ಕೆ. ವೀರನಾರಾಯಣಸ್ವಾಮಿ ಅವರಿಗೆ 4,51,000 […]

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಗುಂಡಿನ ದಾಳಿ ಕುರಿತು ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ದೆಹಲಿಯಲ್ಲಿ ಜೂನ್ 20ರಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಮತ್ತು ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಗೃಹ ಸಚಿವರು ಸಂಸತ್ತಿನಲ್ಲಿ ಉತ್ತರಿಸಲಿದ್ದಾರೆ ಎಂಬ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿರುವ ಅವರು, “ನಮಗೆ ಅಮಿತ್ ಶಾ ಅವರ ಕಾಲ್ಪನಿಕ ಮಾತುಗಳಲ್ಲಿ ಆಸಕ್ತಿಯಿಲ್ಲ” ಎಂದು ಕಡಾಖಂಡಿತವಾಗಿ […]