ಭ್ರಷ್ಟಾಚಾರಕ್ಕೆ ಬ್ರೇಕ್‌ ಹಾಕಿದ ತಮಿಳುನಾಡಿನ ಸಿಎಂ: ಅಭಿವೃದ್ಧಿಯತ್ತ ಹೆಜ್ಜೆ, ಜನಪರ ಕಾಯಕಕ್ಕೆ ಅಸ್ತು ಎಂದ ವಿಜಯ್‌ – ಇದನ್ನು ಓದಿ

ಕರೂರ್ : ಮಾಜಿ ಪ್ರಸಿದ್ಧ ನಟ ಚಂದ್ರಶೇಖರನ್‌ ಜೋಸೆಫ್‌ ವಿಜಯ್‌ ಅವರು ಸದ್ಯಕ್ಕೆ ತಮಿಳುನಾಡಿನ ಒಂಬತ್ತನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಾ ಇದ್ದಾರೆ. ಇವರು ಸಿಎಂ ಸ್ಥಾನ ಪಡೆದ ನಂತರ ಸಾಕಷ್ಟು ಬದಲಾವಣೆಯತ್ತ ಮಹತ್ತರವಾದ ಹೆಜ್ಜೆಯನ್ನು ಹಾಕುತ್ತಿದ್ದಾರೆ. ಇವರು ಅಧಿಕಾರಕ್ಕೆ ಬರುವ ಮುನ್ನ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಆದರೆ ವಾಸ್ತವದಲ್ಲಿ ತಮಿಳುನಾಡನ್ನು ಆಡಳಿತ ಮಾಡುತ್ತಿರುವ ಇವರು ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ ಎನ್ನುವ ವಿಚಾರಕ್ಕೆ ಸಖತ್‌ ಹೊಂದಿಕೆಯಾಗುತ್ತಿದ್ದಾರೆ. ಹೌದು ಇಂದು ತಮಿಳುನಾಡಿನ ಕರೂರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ […]

ಪ್ರಗತಿ ಪರಿಶೀಲನಾ ನೆಪದಲ್ಲಿ ಮುಖ್ಯಮಂತ್ರಿ ಜಾಲಿ ಟ್ರಿಪ್ ಮಾಡುತ್ತಿದ್ದಾರೆ: HDK

ಬೆಂಗಳೂರು: ಪ್ರಗತಿ ಪರಿಶೀಲನೆ ನೆಪದಲ್ಲಿ ರಾಜ್ಯದ ಉದ್ದಗಲಕ್ಕೂ ಜಾಲಿ ಟ್ರಿಪ್ ಮಾಡುತ್ತಿರುವ ಮುಖ್ಯಮಂತ್ರಿಗಳು, ರಾಜ್ಯದ ನೀರಾವರಿ ಹಿತಾಸಕ್ತಿಯ ಬಗ್ಗೆ ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಟೀಕಾಪ್ರಹಾರ ನಡೆಸಿದರು. ಕಲಬುರ್ಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅವರ ನಡೆಸಿದ ಪ್ರಗತಿ ಪರಿಶೀಲನೆ ಕೇವಲ ಜಾಲಿಟ್ರಿಪ್ ಮಾತ್ರ. ಹಾಗೆಯೇ ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಇದೆ ಎಂದು ಹೇಳಿರುವ ಮುಖ್ಯಮಂತ್ರಿ ವರ್ತನೆ ಅತ್ಯಂತ ಹೊಣೆಗೇಡಿತನದಿಂದ ಕೂಡಿದೆ. ರಾಜ್ಯದ ನೀರಾವರಿಯ ಸಂಕಷ್ಟಗಳ ಬಗ್ಗೆ […]

ಕ್ಯಾನ್ಸರ್ ಕ್ಲೈಮ್ ನಿರಾಕರಿಸಿದ ಇನ್ಶೂರೆನ್ಸ್ ಕಂಪನಿ ಬಿಗ್ ಶಾಕ್: ಗ್ರಾಹಕ ನ್ಯಾಯಾಲಯದಿಂದ ಭಾರಿ ದಂಡ!

ಗುರುಗ್ರಾಮ್: ಆರೋಗ್ಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ರಕ್ಷಣೆ ನೀಡಬೇಕಾದ ವಿಮಾ ಕಂಪನಿಗಳು ಮತ್ತು ಆಸ್ಪತ್ರೆಗಳು ಗ್ರಾಹಕರನ್ನು ಹೇಗೆ ವಂಚಿಸುತ್ತವೆ ಮತ್ತು ಅದಕ್ಕೆ ಕಾನೂನಿನಡಿಯಲ್ಲಿ ಹೇಗೆ ಮುಕ್ತಿ ಸಿಗುತ್ತದೆ ಎಂಬುದಕ್ಕೆ ಇತ್ತೀಚಿನ ಈ ಘಟನೆಯೇ ಸಾಕ್ಷಿ. ಕ್ಯಾನ್ಸರ್ ರೋಗಿಯೊಬ್ಬರ ನ್ಯಾಯಸಮ್ಮತ ಹೆಲ್ತ್ ಇನ್ಶೂರೆನ್ಸ್ ಕ್ಲೈಮ್ ಅನ್ನು ಅನಗತ್ಯ ಕಾರಣ ನೀಡಿ ತಿರಸ್ಕರಿಸಿದ್ದ ವಿಮಾ ಕಂಪನಿ ಮತ್ತು ನಿಯಮ ಬಾಹಿರವಾಗಿ ಭಾರಿ ಬಿಲ್ ವಸೂಲಿ ಮಾಡಿದ್ದ ಆಸ್ಪತ್ರೆಗೆ ಗುರುಗ್ರಾಮ್ ಗ್ರಾಹಕ ನ್ಯಾಯಾಲಯವು ಭಾರಿ ದಂಡ ವಿಧಿಸಿದೆ. ವಿಮಾದಾರನಿಗೆ ಒಟ್ಟು ₹12.35 […]

ಬೆಂಗಳೂರಿನ ಐದೂ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಮುಂದುವರಿಕೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ಜುಲೈ 1 ರಿಂದ ಇಲ್ಲಿಯವರೆಗು ಒಟ್ಟು 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಒಟ್ಟು 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ನಗರದ ವಿವಿಧ ಕಡೆಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹಾಗೂ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಕೃಷ್ಣ ಬೈರೇಗೌಡರಿಂದ ಮಾಹಿತಿ […]

ವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ಫಿಕ್ಸ್: ಅ.11ಕ್ಕೆ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ

ಬೆಂಗಳೂರು: ಪ್ರಪಂಚದಾದ್ಯಂತ ತೀವ್ರ ಕುತೂಹಲ ಮೂಡಿಸುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಈ ಬಾರಿಯ ಅಧಿಕೃತ ದಿನಾಂಕಗಳು ಅಂತಿಮಗೊಂಡಿವೆ. ಅಕ್ಟೋಬರ್ 11 ರಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನವರಾತ್ರಿ ಉತ್ಸವಗಳು ಅಧಿಕೃತವಾಗಿ ಆರಂಭವಾಗಲಿವೆ. ರಾಜಧಾನಿ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ದಸರಾ ಉನ್ನತ ಮಟ್ಟದ ಸಮಿತಿಯ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹಬ್ಬದ ಯಶಸ್ಸಿಗೆ ಅಗತ್ಯವಿರುವ ಪೂರ್ವಸಿದ್ಧತೆಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆ, ಅರಮನೆಯಲ್ಲಿ ಅಂಬಾರಿ […]

ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳು ಜೈಲು ಶಿಕ್ಷೆ!

ನವದೆಹಲಿ: ಪ್ರಖ್ಯಾತ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಅವರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ತೀವ್ರ ಬಿಗಿಕ್ರಮ ಜರುಗಿಸಿದ್ದು, ಅವರ ಮೇಲಿದ್ದ ಅಪರಾಧ ನಿರ್ಣಯದ ತೀರ್ಪನ್ನು ಎತ್ತಿಹಿಡಿಯುವ ಮೂಲಕ ದೊಡ್ಡ ಹಿನ್ನಡೆ ನೀಡಿದೆ. ಈ ಮೂಲಕ ನ್ಯಾಯಾಲಯವು ಸಾಲ ಮರುಪಾವತಿ ಮಾಡದೆ ಬೇಜವಾಬ್ದಾರಿತನ ತೋರಿದ ನಟನಿಗೆ 3 ತಿಂಗಳ ಜೈಲು ಶಿಕ್ಷೆಯನ್ನು ಕಾಯಂಗೊಳಿಸಿದೆ. ನಟ ರಾಜ್‌ಪಾಲ್ ಯಾದವ್ ಮತ್ತು ಅವರ ಪತ್ನಿ ರಾಧಾ ಯಾದವ್ ಅವರು ತಮ್ಮ ಸ್ವಂತ ಚಿತ್ರವೊಂದರ ನಿರ್ಮಾಣಕ್ಕಾಗಿ ‘ಮೆಸರ್ಸ್ ಮುರಳಿ ಪ್ರಾಜೆಕ್ಟ್ಸ್ […]

KPTCL ಮಹತ್ವದ ಹೆಜ್ಜೆ: ದೇಶದಲ್ಲೇ ಮೊದಲ ಬಾರಿಗೆ ‘ಝೀರೋ ಟ್ರಸ್ಟ್’ ಸೈಬರ್ ಭದ್ರತಾ ವ್ಯವಸ್ಥೆ ಅಳವಡಿಕೆ

ಬೆಂಗಳೂರು: ರಾಜ್ಯದ ವಿದ್ಯುತ್ ಪ್ರಸರಣ ಜಾಲದ ಡಿಜಿಟಲ್ ಭದ್ರತೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದಿರುವ ‘ಝೀರೋ ಟ್ರಸ್ಟ್ ಸೈಬರ್ ಸೆಕ್ಯುರಿಟಿ ಆರ್ಕಿಟೆಕ್ಚರ್’ ಅನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿದೆ. ಇದರೊಂದಿಗೆ, ಈ ಅತ್ಯಾಧುನಿಕ ಸೈಬರ್ ಭದ್ರತಾ ವ್ಯವಸ್ಥೆಯನ್ನು ಅಳವಡಿಸಿಕೊಂಡ ದೇಶದ ಮೊದಲ ರಾಜ್ಯ ವಿದ್ಯುತ್ ಪ್ರಸರಣ ನಿಗಮ ಎಂಬ ಹೆಗ್ಗಳಿಕೆಗೆ ಕೆಪಿಟಿಸಿಎಲ್ ಪಾತ್ರವಾಗಿದೆ. ರಾಜ್ಯದ ವಿದ್ಯುತ್ ಪ್ರಸರಣ ವ್ಯವಸ್ಥೆಯನ್ನು ಸೈಬರ್ ದಾಳಿಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಈ ಸೈಬರ್‌ […]

ಸ್ಥಳ ತೋರಿಸದೇ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವಂತಿಲ್ಲ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ರಿಲೀಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿದ್ದ ಗೊಂದಲಗಳಿಗೆ ತೆರೆ ಎಳೆಯುವಂತೆ ಕರ್ನಾಟಕ ಸರ್ಕಾರವು ಹೊಸ ಮಾರ್ಗಸೂಚಿ ಹೊರಡಿಸಿದೆ. ಅಬಕಾರಿ ಉಪ ಆಯುಕ್ತ ಕೆ. ಅರುಣ್ ಕುಮಾರ್ ಅವರ ಪ್ರಕರಣದಲ್ಲಿ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ, ಯಾವುದೇ ನೌಕರರನ್ನು ಸ್ಥಳನಿಯುಕ್ತಿ ನೀಡದೆ ಕಡ್ಡಾಯ ನಿರೀಕ್ಷಣೆಯಲ್ಲಿಡುವುದು ನ್ಯಾಯಾಲಯದ ನಿರ್ದೇಶನಕ್ಕೆ ವಿರುದ್ಧವೆಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ತೀರ್ಪು ಆಡಳಿತಾತ್ಮಕ ವ್ಯವಸ್ಥೆಯಲ್ಲಿನ ಪ್ರಮುಖ ಬದಲಾವಣೆಗೆ ಕಾರಣವಾಗಿದೆ. ಇದುವರೆಗೆ ಕೆಲ ಸಂದರ್ಭಗಳಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ನಂತರ […]

ಹೆಚ್ಎಂಟಿ ಜಾಗದ ಮೇಲೆ ರಾಜ್ಯ ಸರಕಾರಕ್ಕೆ ಹಕ್ಕಿಲ್ಲ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಹೆಚ್ಎಂಟಿ ಜಾಗಕ್ಕೂ ಅರಣ್ಯ ಇಲಾಖೆಗೂ ಯಾವುದೇ ಸಂಬಂಧ ಇಲ್ಲ. ಆ ಜಮೀನನ ಮೇಲೆ ಅರಣ್ಯ ಇಲಾಖೆಗೆ ಯಾವುದೇ ರೀತಿಯ ಹಕ್ಕು ಇರುವುದಿಲ್ಲ. ಬೇಕಿದ್ದರೆ ಈ ಬಗ್ಗೆ ಮಾತನಾಡುತ್ತಿರುವವರು ದಾಖಲೆಗಳನ್ನು ಪರಿಶೀಲನೆ ಮಾಡಲಿ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಹೆಚ್ಎಂಟಿ ಭೂಮಿ ವಶಕ್ಕೆ ಸಂಬಂಧಿಸಿ ಅರಣ್ಯಾಧಿಕಾರಿ ಒಬ್ಬರು ನೀಡಿರುವ ನೋಟಿಸ್ ವಿಚಾರದಲ್ಲಿ ಸಚಿವ ಈಶ್ವರ ಖಂಡ್ರೆ ನೀಡಿರುವ ಹೇಳಿಕೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಸಚಿವರು; ಹೆಚ್ಎಂಟಿ […]

ಹಿರಿಯೂರು ಉಪ ಚುನಾವಣೆಗೆ ಸ್ಪರ್ಧಿಸಲ್ಲ, ನಾನು ರಾಜ್ಯ ರಾಜಕಾರಣದಲ್ಲೇ ಇದ್ದೇನೆ:HDK

ಬೆಂಗಳೂರು: ನಾನು ಹಿರಿಯೂರು ಉಪ ಚುನಾವಣೆಗೆ ಸ್ಪರ್ಧಿಸೋದಿಲ್ಲ. ನಾನು ಕೇಂದ್ರ ರಾಜಕಾರಣದಲ್ಲಿ ಇಲ್ಲ, ರಾಜ್ಯ ರಾಜಕಾರಣದಲ್ಲೇ ಇರುವುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ನಾನು ನಮ್ಮ ಪಕ್ಷದ ರಾಜ್ಯಾಧ್ಯಕ್ಷ. ಹೀಗಾಗಿ ಪಕ್ಷದ ಸಂಘಟನೆಯ ಜವಾಬ್ದಾರಿ ನನಗಿದೆ. ರಾಜ್ಯಕ್ಕೆ ವಾಪಸ್ ಬಂದೇ ಬರುತ್ತೇನೆ. ಆದರೆ ಈಗಲೇ ಅಲ್ಲ ಎಂದ ಅವರು; ನಾನು ರಾಜ್ಯಕ್ಕೆ ವಾಪಸ್ ಬರುತ್ತೇನೆ ಎಂದರೆ ಅದು ಈಗಲೇ ಎಂದಲ್ಲ. ಸದ್ಯಕ್ಕೆ ನಾನು ಕೇಂದ್ರ ಸಚಿವನಾಗಿದ್ದೇನೆ, ಇನ್ನೂ ಮೂರು […]