ಗೃಹ ಜ್ಯೋತಿ ಮನೆ ಮನೆ ತಪಾಸಣೆ: ಸಾರ್ವಜನಿಕರ ದೂರು, ಗೊಂದಲಗಳ ಪರಿಹಾರಕ್ಕೆ ಬೆಸ್ಕಾಂ ಹೆಲ್ಪ್‌ಡೆಸ್ಕ್ ಸ್ಥಾಪನೆ

ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ವಿವರ ಸಂಗ್ರಹ ಮತ್ತು ಪರಿಶೀಲನಾ ಪ್ರಕ್ರಿಯೆಯು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯಲ್ಲಿ ಬಿರುಸಿನಿಂದ ಸಾಗುತ್ತಿದೆ. ಈ ಕಾರ್ಯಚರಣೆಯ ಹಿನ್ನೆಲೆಯಲ್ಲಿ ಗ್ರಾಹಕರಲ್ಲಿ ಉಂಟಾಗಬಹುದಾದ ತಾಂತ್ರಿಕ ಸಮಸ್ಯೆಗಳು, ಗೊಂದಲಗಳು ಹಾಗೂ ಪ್ರಶ್ನೆಗಳಿಗೆ ತಕ್ಷಣದ ಪರಿಹಾರ ಒದಗಿಸಲು ಬೆಸ್ಕಾಂ ತನ್ನ ಮುಖ್ಯ ಕಚೇರಿಯಲ್ಲಿ ವಿಶೇಷ ಸಹಾಯವಾಣಿ ಘಟಕವನ್ನು ಮುಕ್ತಗೊಳಿಸಿದೆ. ಸಹಾಯವಾಣಿ ಸಂಪರ್ಕ ಸಂಖ್ಯೆಗಳು ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ನೆರವು ಅಥವಾ ದೂರುಗಳಿದ್ದಲ್ಲಿ ಕೆಳಗಿನ ಅಧಿಕೃತ ಮೊಬೈಲ್ ಸಂಖ್ಯೆಗಳಿಗೆ […]
ಬೆಂಗಳೂರಿನ ಇಸ್ರೋ ಕಚೇರಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಇಸ್ರೋ ಮುಖ್ಯ ಕಚೇರಿಗೆ ಸ್ಫೋಟಕ ಇಟ್ಟಿರುವುದಾಗಿ ಇ-ಮೇಲ್ ಮುಖಾಂತರ ಸೃಷ್ಟಿಸಲಾಗಿದ್ದ ಬಾಂಬ್ ಆತಂಕದ ಪ್ರಕರಣವನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆದರಿಕೆ ಸಂದೇಶ ಬಂದ ಕೇವಲ ಒಂದು ದಿನದ ಒಳಗಾಗಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂಜಯ್ ನಗರ ಪೊಲೀಸರ ಮಿಂಚಿನ ಕಾರ್ಯಾಚರಣೆ ಬಾಹ್ಯಾಕಾಶ ಸಂಸ್ಥೆಗೆ ಬಂದಿದ್ದ ಇ-ಮೇಲ್ ಜಾಡು ಹಿಡಿದು ತನಿಖೆ ಆರಂಭಿಸಿದ್ದ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಸಿಬ್ಬಂದಿ ಉತ್ತರ ಪ್ರದೇಶದಲ್ಲಿ ತಪಾಸಣೆ ನಡೆಸಿದ್ದರು. ಈ ಹುಸಿ ಬಾಂಬ್ […]
ಬೆಂಗಳೂರಿನ ಯಶವಂತಪುರ ವಿಧಾನಸಭೆ ಕ್ಷೇತ್ರದಲ್ಲಿ SIR ಅಕ್ರಮ; HDK ಗಂಭೀರ ಆರೋಪ, ವೀಡಿಯೋ ರಿಲೀಸ್

ಬೆಂಗಳೂರು: ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆ ರಾಜ್ಯ ಸರಕಾರ ಕೇಂದ್ರೀಯ ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಆಡಳಿತ ಯಂತ್ರವನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಅಲ್ಲದೆ, ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ದೂರಿದ ಸಚಿವರು; ಈ ಬಗ್ಗೆ ಕೇಂದ್ರ ಚುನಾವಣಾ ಆಯುಕ್ತರಿಗೆ ಖುದ್ದು ನಾನೇ ಹೋಗಿ ದೂರು […]
ಬಿಎಲ್‌ಒಗಳು ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Shobha Karandlaje ಬೆಂಗಳೂರು: ಬೆಂಗಳೂರಿನ ಬಹಳಷ್ಟು ಮೂಲ ಮತದಾರರು ಬೇರೆ ಕಡೆಗೆ ಶಿಫ್ಟ್ ಆಗಿದ್ದಾರೆ. ಆದರೆ ಅವರ ಜಾಗಕ್ಕೆ ಅಕ್ರಮ ಮತದಾರರನ್ನು ತರಲು ಬಿಎಲ್‌ಒಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಸರ್ಕಾರ ನಮ್ಮ ಬೂತ್ ಮಟ್ಟದ ಏಜೆಂಟರನ್ನು ಹೆದರಿಸುತ್ತಿದ್ದು, ಕೇವಲ ಕಾಂಗ್ರೆಸ್‌ನ ಬಿಎಲ್‌ಎಗಳನ್ನು ಮಾತ್ರ ಕರೆದುಕೊಂಡು ಹೋಗುವಂತೆ ಅಧಿಕಾರಿಗಳಿಗೆ ಸೂಚಿಸಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಸೀದಿ ಹಾಗೂ ಸಮುದಾಯ ಭವನಗಳಲ್ಲಿ ನಿಯಮ ಬಾಹಿರವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದೆ 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ […]
ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು: ತನಿಖೆ ಚುರುಕುಗೊಳಿಸಲು ಟ್ರಸ್ಟ್‌ಗೆ ಆರ್‌ಎಸ್‌ಎಸ್ ಕಟ್ಟುನಿಟ್ಟಿನ ಸೂಚನೆ

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹಣದಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್) ಕೊನೆಗೂ ತನ್ನ ಮೌನ ಮುರಿದಿದೆ. ಈ ದುರದೃಷ್ಟಕರ ಘಟನೆಯ ಸುತ್ತ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲ ಮತ್ತು ಅನಿಶ್ಚಿತತೆಯ ವಾತಾವರಣಕ್ಕೆ ತಕ್ಷಣವೇ ತೆರೆ ಎಳೆಯಬೇಕು ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಮಂದಿರದ ಆಡಳಿತ ಮಂಡಳಿಯನ್ನು ಕಟ್ಟುನಿಟ್ಟಾಗಿ ಒತ್ತಾಯಿಸಿದ್ದಾರೆ. ಭಕ್ತರ ಭಾವನೆಗೆ ಧಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ರಾಮಭಕ್ತರು ಶ್ರದ್ಧೆಯಿಂದ ನೀಡಿದ ದೇಣಿಗೆಯನ್ನು […]
ಅಂತಾರಾಷ್ಟ್ರೀಯ ಸಂಸ್ಥೆಗಳ ಜೊತೆಗೂ ನಮ್ಮ ಒಪ್ಪಂದ ಇದೆ – ಪ್ರಿಯಾಂಕ್ ಖರ್ಗೆ

Priyank Kharge ಬೆಂಗಳೂರು : ನಿರಂತರವಾಗಿ ಸೈಬರ್ ದಾಳಿ, ಹುಸಿ ಕರೆಗಳು ಇದಕ್ಕೆ ಅಗತ್ಯ ಸಿಬ್ಬಂದಿ ಮತ್ತು ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಂಡಿದ್ದೇವೆ. ಮತ್ತಷ್ಟು ನಿಗಾ ಇಡುವ ಕೆಲಸ ಮುಂದುವರೆಸುತ್ತೇವೆ. ಹುಸಿ ಕರೆ, ಇಮೇಲ್ ಗಳನ್ನ ಪತ್ತೆ ಹಚ್ಚೋದು ಕಷ್ಟ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಬಂದ ವಿಚಾರಕ್ಕೆ ಪ್ರತಿಕ್ರಿಸಿದ ಅವರು, ಹುಸಿ ಬಾಂಬ್ ಕರೆಗಳು , ಇಮೇಲ್‌ಗಳನ್ನು ಪತ್ತೆ ಹಚ್ಚುವುದು ಕಷ್ಟದ ಕೆಲಸ. ಆದರೂ ಹುಸಿ ಬಾಂಬ್ ಕರೆಗಳ […]
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ವಿಚಾರಣೆಗೆ ಅರ್ಹವಲ್ಲ ಎಂದು ನಟ ದರ್ಶನ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್

ನವದೆಹಲಿ: ರೇಣುಕಾಸ್ವಾಮಿ ಅವರ ನೃಶಂಸ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಒಂದು ವರ್ಷದ ಅವಧಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ತಮಗೆ ವಿಧಿಸಲಾಗಿದ್ದ ಸುಪ್ರೀಂ ಕೋರ್ಟ್‌ನ ಹಳೆಯ ಆದೇಶದಲ್ಲಿ ಬದಲಾವಣೆ ತರಬೇಕೆಂದು ದರ್ಶನ್ ಕೋರಿದ್ದರು. ಆದರೆ, ಈ ಮನವಿಯನ್ನು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ಅವರು ತಳ್ಳಿಹಾಕಿದ್ದಾರೆ. ಅರ್ಜಿ ಲಿಸ್ಟ್ ಮಾಡಲು ರಿಜಿಸ್ಟ್ರಾರ್ ನಿರಾಕರಣೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಿಲುಕಿರುವ ದರ್ಶನ್ ಮತ್ತು ಅವರ ಗ್ಯಾಂಗ್‌ಗೆ, ಒಂದು […]
ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ ರೂಪಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಸಚಿವ ಕೆ.ಜೆ ಜಾರ್ಜ್

ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ ಯನ್ನು ರೂಪಿಸಲಾಗುತ್ತಿದ್ದು, ಈ ನೀತಿಯಲ್ಲಿ ಕ್ರೂಸ್ ಪ್ರವಾಸೋದ್ಯಮ, ಬೀಚ್ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು . ಇಂದು ಇಂಧನ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ […]
ಗೃಹ ಜ್ಯೋತಿ ಪರಿಶೀಲನೆ ವೇಳೆ ಪ್ರವರ್ಗ ಮಾಹಿತಿ ಕಡ್ಡಾಯವಲ್ಲ: ಬೆಸ್ಕಾಂ ಸ್ಪಷ್ಟನೆ

ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಫಲಾನುಭವಿಯ ಪ್ರವರ್ಗ ಕುರಿತು ಕೇಳಿರುವ ಮಾಹಿತಿ ಕಡ್ಡಾಯವಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಬೆಸ್ಕಾಂನ ಸಿಬ್ಬಂದಿ ಹಾಗೂ ಮೀಟರ್ ರೀಡರ್ ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್ ಹಾಗೂ ಮುದ್ರಿತ ಘೋಷನಾ ಪತ್ರದ ಮೂಲಕ ಮಾಹಿತಿಯನ್ನು ಗೃಹ ಫಲಾನುಭವಿಗಳ ಮನೆಗೆ ತೆರಳಿ ಕಲೆ ಹಾಕುತ್ತಿದ್ದು, ಫಲಾನುಭವಿಯ ಪ್ರವರ್ಗದ (ಜಾತಿ ಪ್ರಮಾಣಪತ್ರ) ಸಂಬಂಧಿಸಿದ ಮಾಹಿತಿ ಕೇವಲ ಐಚ್ಛಿಕವಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ಫಲಾನುಭವಿಗಳ […]
ವೈರಲ್ ಆಯ್ತು ಕ್ರಿಮಿನಲ್ ಜೋಡಿ: ಎತ್ತರಕ್ಕೆ ಹೋಗಿ ಕಿಸ್ ಮಾಡಿ, ಮೋಡಿ ಮಾಡಿದ ಕಪಲ್ ಇದೀಗ ಅಂದರ್ ! ಯಾಕೆ ಗೊತ್ತೇ? ಇಲ್ಲಿದೆ ನೋಡಿ..

ನ್ಯೂಯಾರ್ಕ್ : ಪ್ರೀತಿಗಾಗಿ ಕೆಲವರು ಏನೆಲ್ಲಾ ಸರ್ಕಸ್ ಮಾಡುತ್ತಾರೆ ಎನ್ನುವುದಕ್ಕೆ ಸದ್ಯಕ್ಕೆ ವೈರಲ್ ವಿಡಿಯೋಂದು ಸಾಕ್ಷಿಯಾಗಿದೆ. ಹೌದು ನ್ಯೂಯಾರ್ಕ್ ನಗರದಲ್ಲಿ ಬರುವ ಎಂಪೈರ್ ಸ್ಟೇಟ್ ಕಟ್ಟಡದ ಮೇಲ್ಭಾಗವನ್ನು ಇಬ್ಬರು ಕಪಲ್ ಹತ್ತಿದ್ದಾರೆ. ಅಲ್ಲದೇ ಅವರ ಹತ್ತಿರ ಯಾವುದೇ ರೀತಿಯ ಸುರಕ್ಷತಾ ಸಾಧನಗಳಿಲ್ಲದೆ ಹತ್ತಿ, ಬ್ಯಾನರ್ ಬಿಚ್ಚಿ ಸಾಹಸ ಮಾಡಿದ್ದರು. ಇದರ ನಂತರ ಇವರಿಬ್ಬರು ವಿಡಿಯೋ ಮಾಡಿ ಸಮಾಜೀಕ ಜಾಲತಾಣದಲ್ಲಿ ಅಂಚಿಕೊಂಡಿದ್ದಾರೆ. ವಿಡಿಯೋ ಫುಲ್ ವೈರಲ್ ಆಗಿದ್ದು, ಇದನ್ನು ಕಂಡ ಕೆಲ ಯುವತಿಯರು ನನಗೆ ಕ್ರಿಮಿನಲ್ ಹುಡುಗ ಬೇಕು, […]