ಮುಂದಿನ 4 ದಿನ ರಾಜ್ಯದಲ್ಲಿ ವರುಣನ ಅಬ್ಬರ: ಕರಾವಳಿಗೆ ಬಿತ್ತು ರೆಡ್ ಅಲರ್ಟ್​

Heavy rains ಬೆಂಗಳೂರು: ರಾಜ್ಯದಲ್ಲಿ ಮಳೆಯಾಬ್ಬರ ಜೋರಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.ಮುಂಗಾರು ಮಾರುತಗಳು ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಹವಾಮಾನದ ತೀವ್ರತೆಯನ್ನು ಆಧರಿಸಿ ಭಾರತೀಯ ಹವಾಮಾನ ಇಲಾಖೆ ಜಿಲ್ಲಾವಾರು ಯೆಲ್ಲೋ ಮತ್ತು ರೆಡ್ ಅಲರ್ಟ್​ಗಳನ್ನು ಘೋಷಿಸಿದ್ದು, ಪ್ರವಾಹ ಮತ್ತು ಭೂಕುಸಿತದ ಭೀತಿ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಈ ಅಲರ್ಟ್‌ಗಳನ್ನು ನೀಡಲಾಗಿದೆ. ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಸುರಕ್ಷಿತ ಸ್ಥಳಗಳಲ್ಲಿರಬೇಕು.ನದಿಗಳ ನೀರಿನ ಮಟ್ಟ ಹೆಚ್ಚಾಗಿ […]

ರೋಗ ಬರದಂತೆ ನೋಡಿಕೊಳ್ಳುವುದು ಸಮಾಜದ ಕರ್ತವ್ಯ : ಡಾ. ಬಿ ಸುಜಯ್ ಕುಮಾರ್

ಗಾಂಧೀಜಿ ಹೇಳಿದ ಮಾತೊಂದು ದೇಹ ಮನಸ್ಸು ಸಮಾಜ ಎಲ್ಲದಕ್ಕೂ ಚಿಕಿತ್ಸೆ ಸತ್ಯವಂತ ವೈದ್ಯನಾಗುತ್ತಾನೆ ಎಂದು ಪ್ರಸಿದ್ಧ ವೈದ್ಯರಾದ ಡಾಕ್ಟರ್ ಬಿ ಸುಜಯ್ ಕುಮಾರ್ ಹೇಳಿದರು. ವೈದ್ಯರು ಏರ್ಪಡಿಸಿದ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಹಿರಿಯ ಗಾಂಧಿ ವಾದಿಯಾಗಿದ್ದ ಅವರು, ಮಾತನಾಡಿ ರೋಗಿಯನ್ನು ಗುಣಪಡಿಸುವುದು ವೈದ್ಯನ ಕರ್ತವ್ಯ. ರೋಗ ಬರದಂತೆ ನೋಡಿಕೊಳ್ಳುವುದು ಸಮಾಜದ ಕರ್ತವ್ಯ ಎಂದು ತಿಳಿಸಿದ್ದಾರೆ. ಇಂದು ನಾವು ಇಲ್ಲಿ ಸೇರಿರುವುದು ಕೇವಲ ಒಬ್ಬ ವೈದ್ಯರನ್ನು ಸ್ಮರಿಸಲಿಕ್ಕಲ್ಲ. ಒಂದು ತತ್ವವನ್ನು ಜೀವಿಸಲಿಕ್ಕೆ.ಆ ತತ್ವದ ಹೆಸರು ವೈದ್ಯ ಕೆ.ವೈ. ಶ್ರೀನಿವಾಸ್. […]

ದೇಶದಲ್ಲಿ ಭೀಕರ ಬರ ಪರಿಸ್ಥಿತಿ; ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ: ಸಿಎಂ ಡಿ ಕೆ ಶಿವಕುಮಾರ್ ಕರೆ

ಬೆಂಗಳೂರು : “ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. “ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಂಗಭದ್ರಾ, ಘಟ್ಟಪ್ರಭಾ, ಮಲಪ್ರಭಾ, ನಾರಾಯಣಪುರ, […]

ಜೂನ್‌ನಲ್ಲಿ ಸಂಕಷ್ಟದ ಅವಧಿಯಲ್ಲೂ ದೇಶದ ಯಾವುದೇ ಭಾಗದಲ್ಲಿ ತೈಲ ಸರಬರಾಜಿನಲ್ಲಿ ವ್ಯತ್ಯಯವಾಗಿಲ್ಲ – ಹರ್ದೀಪ್ ಸಿಂಗ್ ಪುರಿ

Hardeep Singh Puri ನವದೆಹಲಿ: ಮಾರ್ಚ್, ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ಸಂಕಷ್ಟದ ಅವಧಿಯಲ್ಲೂ ದೇಶದ ಯಾವುದೇ ಭಾಗದಲ್ಲಿ ತೈಲ ಸರಬರಾಜಿನಲ್ಲಿ ವ್ಯತ್ಯಯವಾಗಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲೂ ಪೆಟ್ರೋಲ್ ಬಂಕ್‌ಗಳು ಮುಚ್ಚಿಲ್ಲ ಅಥವಾ ಜನರು ಕ್ಯೂ ನಿಲ್ಲುವ ಪರಿಸ್ಥಿತಿ ಬರಲಿಲ್ಲ. ಬಿಕ್ಕಟ್ಟನ್ನು ಭಾರತ ಯಶಸ್ವಿಯಾಗಿ ನಿಭಾಯಿಸಿದೆ ಎಂದರು. ಮಧ್ಯಪ್ರಾಚ್ಯ ಯುದ್ಧದ ವೇಳೆ ತೈಲ ಕಂಪನಿಗಳು ಅಸಲು ವೆಚ್ಚಕ್ಕಿಂತ ಕಡಿಮೆ ಬೆಲೆಗೆ ಪೆಟ್ರೋಲ್, […]

ಹೆಚ್‌ಡಿಕೆ ವಿಡಿಯೋ ರಿಲೀಸ್‌ ಬೆನ್ನಲ್ಲೇ ಡಿಕೆಶಿ ವಾರ್ನಿಂಗ್‌ : ಚೌಟ್ರಿಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ

ಬೆಂಗಳೂರು:ಕಲ್ಯಾಣ ಮಂಟಪ ಅಥವಾ ಬೇರೆಡೆ ಕುಳಿತು ಅರ್ಜಿ ತುಂಬಲು ಯಾರಿಗೂ ಅವಕಾಶ ಇರಲ್ಲ. ರಾಮನಗರ, ಜಯನಗರ, ಕುಣಿಗಲ್, ಚಾಮರಾಜಪೇಟೆ ಎಲ್ಲಾದರೂ ಸರಿ ಮನೆಗಳಿಗೆ ಹೋಗಿ ಅರ್ಜಿ ತುಂಬಬೇಕು ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಕಲ್ಯಾಣ ಮಂಟಪಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ ಎಂದು ಅವರು ಬಿಎಲ್‌ಓಗಳಿಗೆ BLO) ಎಂದರು. ವಿರೋಧ ಪಕ್ಷದವರು ಆರೋಪ ಮಾಡೋಕೆ ಇರೋದು. ನಾವು ಅಧಿಕಾರದಲ್ಲಿ ಇರೋರು, ನಮ್ಮ ಕರ್ತವ್ಯ ನಾವು ಮಾಡ್ತೀವಿ. ಪ್ರತಿಯೊಬ್ಬ ನಾಗರೀಕನಿಗೂ ಮತದಾನದ ಹಕ್ಕು ಕೊಡಬೇಕಾಗಿರೋದು ಸರ್ಕಾರದ […]

ರಾಮನಗರದಲ್ಲಿ SIR ವೇಳೆ ಬೃಹತ್ ಸ್ಕ್ಯಾಮ್ ವೀಡಿಯೋ ಸಹಿತ ಮಾಹಿತಿ ಬಿಚ್ಚಿಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಚುರುಕುಗೊಂಡಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ರಾಮನಗರದಲ್ಲಿ ಬೃಹತ್ ‘ಸ್ಕ್ಯಾಮ್’ ಅಂಟಿಕೊಂಡಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಿಡಿಯೋ ಸಮೇತವಾಗಿ ರಾಮನಗರದಲ್ಲಿ ನಡೆಯುತ್ತಿರುವ ಈ ಅಕ್ರಮವನ್ನು ಬಯಲು ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ತುರ್ತು ಮಾಧ್ಯಮಗೋಷ್ಠಿ ನಡೆಸಿದ ಕೇಂದ್ರ ಸಚಿವರು; ರಾಮನಗರ ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಕಾಂಗ್ರೆಸ್ ಸರ್ಕಾರ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಹಾಳುಮಾಡಲು ಹೊರಟಿದೆ. ಅದಕ್ಕೆ ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮವೇ ಸಾಕ್ಷಿ. ಕೂಡಲೇ ರಾಮನಗರ […]

₹1.20 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಭೂಮಾಪಕ ಲೋಕಾಯುಕ್ತ ಬಲೆಗೆ!

ಮೈಸೂರು: ಜಮೀನಿನ ದುರಸ್ತಿ ಪೋಡ್ ಮಾಡಿಕೊಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ನಂಜನಗೂಡು ತಾಲ್ಲೂಕಿನ ಭೂಮಾಪಕ (ಸರ್ವೇಯರ್) ಜಯಪ್ರಕಾಶ್ ಎಂಬುವವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮೈಸೂರಿನ ದಟ್ಟಗಳ್ಳಿಯ ಹೋಟೆಲ್ ಒಂದರ ಬಳಿ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಆತನನ್ನು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಲಂಚಕ್ಕಾಗಿ ಬೇಡಿಕೆ ಮತ್ತು ಸಂಧಾನ ಜಮೀನಿನ ದುರಸ್ತಿ ಪೋಡ್ ಕೆಲಸವನ್ನು ಸುಲಭವಾಗಿ ಮಾಡಿಕೊಡಲು ಭೂಮಾಪಕ ಜಯಪ್ರಕಾಶ್ ಮೊದಲು ಬರೋಬ್ಬರಿ ₹1.50 […]

ಮಂಡ್ಯದಲ್ಲಿ ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಕೊ*ಲೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಕೌಟುಂಬಿಕ ಕಲಹವೊಂದು ದುರಂತದಲ್ಲಿ ಅಂತ್ಯವಾಗಿದ್ದು, ಹೆಂಡತಿಯ ನಡತೆಯನ್ನು ಸಂಶಯಿಸಿದ ವ್ಯಕ್ತಿಯೊಬ್ಬ ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಆಲಗೂಡು ಗ್ರಾಮದ ನಿವಾಸಿ ರಶ್ಮಿ ಕೊಲೆಯಾದ ದುರ್ದೈವಿ ಮಹಿಳೆ. ಈಕೆಯ ಪತಿ ರಮೇಶ್ ಎಂಬಾತನೇ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ತೆಗೆದ ಘಾತಕ. ಶೀಲಶಂಕೆ ತಂದಿಟ್ಟ ಮಹಾವಿಪತ್ತು ಆಲಗೂಡು ನಿವಾಸಿಗಳಾದ ರಮೇಶ್ ಹಾಗೂ ರಶ್ಮಿ ದಂಪತಿಗಳ ನಡುವೆ ಕೌಟುಂಬಿಕ ವಿಷಯಕ್ಕೆ ಸಂಬಂಧಿಸಿದಂತೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಪತ್ನಿಯ […]

ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿಲ್ಲ, ಸ್ಥಳಾಂತರಿಸುತ್ತಿದ್ದೇವೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವುದಿಲ್ಲ, ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿಂದ ವಾರ್ಡ್ ರಸ್ತೆಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು. ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಸಂಬಂಧಿತ ಅಧಿಕಾರಿಗಳ ಜೊತೆ ನಡೆದ ವರ್ಚುವಲ್ ಸಭೆ(VC)ಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾದಚಾರಿ ಮಾರ್ಗಗಳಿಂದ ಬೀದಿ ಬದಿ ವ್ಯಾಪಾರಿಗಳಷ್ಟೇ ಅಲ್ಲದೆ, ವಿವಿಧ ಅಡೆತಡೆಗಳು, ಅನಾಥ ವಾಹನಗಳು ಹಾಗೂ ಅಕ್ರಮವಾಗಿ ನಿಲ್ಲಿಸಿರುವ ಪಾರ್ಕಿಂಗ್ […]

ಜುಲೈ 20ರೊಳಗೆ ‘ಮರು-ನೀಟ್ ಯುಜಿ’ ಫಲಿತಾಂಶ ಪ್ರಕಟ: ಶೈಕ್ಷಣಿಕ ವೇಳಾಪಟ್ಟಿಗೆ ಧಕ್ಕೆಯಿಲ್ಲ ಎಂದು ಸ್ಪಷ್ಟಪಡಿಸಿದ NTA

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಜುಲೈ 20ರ ಒಳಗಾಗಿ ಮರು-ನೀಟ್ ಯುಜಿ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸುವುದಾಗಿ ಪ್ರಕಟಿಸಿದೆ. ಈ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು, ಫಲಿತಾಂಶ ವಿಳಂಬದಿಂದ ವೈದ್ಯಕೀಯ ಶೈಕ್ಷಣಿಕ ವರ್ಷದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮೇ 3 ರಂದು ನಡೆದಿದ್ದ ಮೂಲ ಪರೀಕ್ಷೆಯು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದಾಗಿದ್ದರಿಂದ, ಸುಮಾರು 20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಹಿತದೃಷ್ಟಿಯಿಂದ ಜೂನ್ 21 ರಂದು ಈ […]