ಕರ್ನಾಟಕ ವಿಧಾನ ಪರಿಷತ್ತಿನ ಹಂಗಾಮಿ ಸಭಾಪತಿಯಾಗಿ MLC ಪುಟ್ಟಣ್ಣ ನೇಮಕ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ನೂತನ ಸಭಾಪತಿಯನ್ನು ನಿಯಮಾನುಸಾರ ಆಯ್ಕೆ ಮಾಡುವವರೆಗೆ, ಸಭಾಪತಿ ಸ್ಥಾನದ ಕರ್ತವ್ಯಗಳನ್ನು ನಿರ್ವಹಿಸಲು ವಿಧಾನ ಪರಿಷತ್ ಸದಸ್ಯರಾದ (MLC) ಪುಟ್ಟಣ್ಣ ಅವರನ್ನು ನೇಮಕ ಮಾಡಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹೋಟ್ ಅವರು ಆದೇಶ ಹೊರಡಿಸಿದ್ದಾರೆ. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯವು ಹೊರಡಿಸಿರುವ ವಿಶೇಷ ರಾಜ್ಯಪತ್ರದ ಅಧಿಕೃತ ಅಧಿಸೂಚನೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಲಾಗಿದೆ. ಭಾರತ ಸಂವಿಧಾನದ 184ನೇ ಅನುಚ್ಛೇದದ (1)ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಪಾಲರು ಈ ನಿರ್ಧಾರ […]

ಕೋಲಾರ ಭಾಗದ ರೈತರು, ರಾಜ್ಯಕ್ಕೆ ಮಾದರಿ: ಸಿಎಂ ಡಿ ಕೆ ಶಿವಕುಮಾರ್

ಕೋಲಾರ : “ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಗ್ಯಾರಂಟಿ ಹಾಗೂ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡುತ್ತಿದೆ. ಇದರ ಮೂಲಕ 2027ರ ಅಂತ್ಯದ ವೇಳೆಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಹರಿಸಲು ಸರ್ಕಾರ ಸಂಕಲ್ಪ ಮಾಡಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಅಭಿವೃದ್ಧಿಯ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು. “ಎತ್ತಿನಹೊಳೆ […]

ರೇಣುಕಾಸ್ವಾಮಿ ಕೊಲೆ ಕೇಸ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌; ನಟ ದರ್ಶನ್‌ಗೆ ಮತ್ತೊಂದು ದೊಡ್ಡ ಹಿನ್ನಡೆ!

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್ ತೂಗುದೀಪ ಭಾಗಿಯಾಗಿರುವ ಬಹುಚರ್ಚಿತ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣದ 14ನೇ ಆರೋಪಿಯಾಗಿರುವ (A-14) ಪ್ರದೋಷ್‌ನನ್ನು ‘ಮಾಫಿ ಸಾಕ್ಷಿ’ಯಾಗಿ ಪರಿಗಣಿಸಲು ಬೆಂಗಳೂರಿನ 59ನೇ ಸಿಸಿಹೆಚ್ (ಸೆಷನ್ಸ್) ನ್ಯಾಯಾಲಯ ಅಧಿಕೃತ ಅನುಮತಿ ನೀಡಿದೆ. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, “ಪ್ರದೋಷ್ ಮಾಫಿ ಸಾಕ್ಷಿಯಾಗುವುದಕ್ಕೆ ಇತರ ಯಾವುದೇ ಆರೋಪಿಗಳು ಆಕ್ಷೇಪ ಎತ್ತುವಂತಿಲ್ಲ” ಎಂದು ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ. ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ಪ್ರಾಸಿಕ್ಯೂಷನ್ […]

Nikhil Kumaraswamy-ನೀವು ಅಧಿಕಾರಕ್ಕೆ ಬಂದಿದ್ದಕ್ಕೆ ಹೊಟ್ಟೆಕಿಚ್ಚಿಲ್ಲ ಆದರೆ, ನಿಮ್ಮ ಅಧಿಕಾರ ಜನಪರವಾಗಿದೆಯೇ? ಸಿಎಂ ವಿರುದ್ಧ ನಿಖಿಲ್ ಗರಂ

ರಾಮನಗರ: ನೀವು ಅಧಿಕಾರಕ್ಕೆ ಬಂದಿದ್ದಕ್ಕೆ ನಮಗೇನೂ ಹೊಟ್ಟೆಕಿಚ್ಚಿಲ್ಲ. ಆದರೆ, ನಿಮ್ಮ ಅಧಿಕಾರ ಜನಪರವಾಗಿದೆಯೇ? ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಪ್ರಶ್ನೆ ಮಾಡಿದ್ದಾರೆ. ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ, ಪಾದಯಾತ್ರೆ ಮಾಡುತ್ತಿದ್ದಾರೆ ಈ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಹಿಂದೆ ರೈತರಿಂದ ಪೆನ್ನು, ಪೇಪರ್ ಕೇಳಿದ್ದ ಡಿ.ಕೆ. ಶಿವಕುಮಾರ್ ಅವರೇ, ಈಗ ನೀವೇ ಸಿಎಂ ಅಧಿಕಾರದಲ್ಲಿದ್ದೀರಿ. ಆ ಪೆನ್ನು ಮತ್ತು ಪೇಪರ್ ಅನ್ನು ಯಾರ ಉದ್ದಾರಕ್ಕಾಗಿ ಬಳಸುತ್ತಿದ್ದೀರಿ? 33 ಸಾವಿರ ಕೋಟಿ […]

Santosh Lad: ನಾಗೇಂದ್ರ ವಿಚಾರ ಸದನದಲ್ಲಿ ಚರ್ಚೆ ಮಾಡಲಿ, ಅದಕ್ಕೆ ನಾವು ಉತ್ತರ ಕೊಡುತ್ತೇವೆ – ಸಂತೋಷ್ ಲಾಡ್

ಬೆಂಗಳೂರು: ರಾಮ ಮಂದಿರದಲ್ಲಿ ಲೂಟಿ ಹೊಡೆದವರು ನಾಗೇಂದ್ರ ಬಗ್ಗೆ ಮಾತನಾಡುತ್ತಾರೆ ಎಂದು ಸಚಿವ ಸಂತೋಷ್ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾಗೇಂದ್ರಗೆ ಸಚಿವ ಸ್ಥಾನ ಕೊಟ್ಟಿರೋದಕ್ಕೆ ಬಿಜೆಪಿ ವಿರೋಧ ಮಾಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು ,ರಾಮ ಮಂದಿರದಲ್ಲಿ ಲೂಟಿ ಹೊಡೆದವರು ಇದರ ಬಗ್ಗೆ ಮಾತನಾಡುತ್ತಾರೆ. ಕೋವಿಡ್ ಸಮಯದಲ್ಲಿ ಪಿಎಂ ಫಂಡ್ ಅಂತ 20 ಸಾವಿರ ಕೋಟಿ ಕಲೆಕ್ಟ್ ಮಾಡಿದ್ದರು. ಅದರ ಬಗ್ಗೆ ಉತ್ತರ ಕೊಡಲ್ಲ. ಅದರ ಬಗ್ಗೆ ಚರ್ಚೆಯೇ ಮಾಡಬೇಡಿ ಎನ್ನುತ್ತಾರೆ. ನಾಗೇಂದ್ರ ವಿಚಾರ […]

ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್‌ನಲ್ಲಿ ದೊರೆಯಿತು ಬಿಗ್ ರಿಲೀಫ್‌

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಅವರ ಜಾಮೀನು ಅರ್ಜಿಯಲ್ಲಿದ್ದ ಪ್ರಮುಖ ಪ್ರಯಾಣ ಷರತ್ತನ್ನು ಸಡಿಲಗೊಳಿಸಿ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2024ರ ಅಕ್ಟೋಬರ್ 14ರಂದು ಬಿ. ನಾಗೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ವೇಳೆ, “ನ್ಯಾಯಾಲಯದ ಪೂರ್ವ […]

ನನ್ನ ಸಾಧನೆಗೆ ಅಪ್ಪನ ಬೆಂಬಲ ಇದೆ ಸಿನಿಮಾಗೆ ಮೊದಲ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ-ಸಿಎಂ ವಿಜಯ್‌ ಪುತ್ರ ಹೇಳಿದ್ದೇನು ಗೊತ್ತಾ? ಇಲ್ಲಿದೆ ಮಾಹಿತಿ

ತಮಿಳುನಾಡು ಸಿಎಂ ವಿಜಯ್‌ ಮಗ ಜೇಸನ್ ಸಂಜಯ್ ಇದೀಗ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಅಪ್ಪನಂತೆ ನಟನಾಗುವ ಬದಲು, ನಿರ್ದೇಶಕನಾಗಿ ತನ್ನ ಅದೃಷ್ಟ ಪರೀಕ್ಷಿಸಲು ಮುಂದಾಗಿದ್ದಾರೆ. ಜೇಸನ್‌ ತನ್ನ ಸಿನಿಮಾ ಕನಸಿಗೆ ತಂದೆ ನೀಡಿದ ಬೆಂಬಲವನ್ನು ನೆನಪಿಸಿಕೊಂಡು ಇದೀಗ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸಿನಿಮಾ ಬಗ್ಗೆ ಕೋರ್ಸ್ ಮಾಡಲು ವಿದೇಶಕ್ಕೆ ಹೋಗಬೇಕು ಎಂದು ತಂದೆಯ ಬಳಿ ಹೇಳಿದಾಗ ವಿಜಯ್ ಯಾವುದೇ ಹಿಂಜರಿಕೆ ತೋರಲಿಲ್ಲವಂತೆ. ಬದಲಿಗೆ, ತಮ್ಮ ನಿರ್ಧಾರಕ್ಕೆ ಮೊದಲು ಗ್ರೀನ್ ಸಿಗ್ನಲ್ ಕೊಟ್ಟವರೇ ತಂದೆ ಎಂದು ತಿಳಿದ್ದಾರೆ. […]

World Lion Day: “ವಿಶ್ವ ಸಿಂಹ ದಿನ” ಭಾರತದ ಸಂಸ್ಕೃತಿಯಲ್ಲಿ ಕಾಡಿನ ರಾಜನ ಇತಿಹಾಸ ಇಲ್ಲಿದೆ ನೋಡಿ

ಪ್ರತಿ ವರ್ಷ ಆಗಸ್ಟ್ 10 ರಂದು ಜಗತ್ತಿನಾದ್ಯಂತ ವಿಶ್ವ ಸಿಂಹ ದಿನ ಆಚರಿಸಲಾಗುತ್ತದೆ. ಕಾಡಿನ ರಾಜನ ಸಂರಕ್ಷಣೆಯ ಮಹತ್ವವನ್ನು ಜಗತ್ತಿಗೆ ತಿಳಿಸುವುದೇ ಇದರ ಉದ್ದೇಶ. ಆದರೆ ಭಾರತಕ್ಕೆ ಈ ದಿನ ಇನ್ನೂ ವಿಶೇಷ. ಏಕೆಂದರೆ ಸಿಂಹವು ನಮ್ಮ ದೇಶದಲ್ಲಿ ಕೇವಲ ಒಂದು ಪ್ರಾಣಿಯಲ್ಲ, ಅದು ನಮ್ಮ ಸಂಸ್ಕೃತಿ, ಧರ್ಮ ಮತ್ತು ರಾಷ್ಟ್ರೀಯತೆಯ ಸಂಕೇತವಾಗಿದೆ. ಅಂತಾರಾಷ್ಟ್ರೀಯ ಪ್ರಕೃತಿ ಸಂರಕ್ಷಣಾ ಒಕ್ಕೂಟದ ವರದಿಯ ಪ್ರಕಾರ ವಿಶ್ವದಲ್ಲಿ ಈಗ ಕೇವಲ 20,000 ರಿಂದ 23,000 ಕಾಡು ಸಿಂಹಗಳು ಮಾತ್ರ ಉಳಿದಿವೆ. ಕಳೆದ […]

MB Patil: ಬಿಡದಿ ಟೌನ್‌ಶಿಪ್‌ಗೆ ಹೆಚ್‌ಡಿಕೆ ಪಿತಾಮಹ – ಎಂ.ಬಿ ಪಾಟೀಲ್ ವಾಗ್ದಾಳಿ

ವಿಜಯಪುರ: ರಾಜ್ಯದಲ್ಲಿ ಬಿಡದಿ ವಿಚಾರ ಸದ್ದು ಮಾಡುತ್ತಿದೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ಕೆಲ ರೈತರು ಭೂಮಿಗಾಗಿ ಧರಣಿ ನಡೆಸಿದ್ದಾರೆ. ಇವರ ಜೊತೆಯಲ್ಲಿ ಹೆಚ್‌ ಡಿ ಕೆ ಅವರು ಭಾಗಿಯಾಗಿದ್ದರು. ಮತ್ತು ಇವತ್ತಿಗೂ ಅವರು ರೈತರ ಪರವಾಗಿ ಮಾತನಾಡುತ್ತಲೇ ಇದ್ದಾರೆ. ಈ ವಿಚಾರವಾಗಿ ಇದೀಗ ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಮಾತಿನ ಛಾಟಿ ಬೀಸಿದ್ದಾರೆ. ತಾವು ಸಿಎಂ ಆಗಿದ್ದಾಗ ತಮ್ಮ ಕನಸಿನ ಕೂಸು ಬಿಡದಿ ಟೌನ್‌ಶಿಪ್‌ಗೆ ಯೋಜನೆಗೆ ಜನ್ಮ ನೀಡಿದರು. ಹೀಗಾಗಿ ಬಿಡದಿ ಟೌನ್‌ಶಿಪ್‌ಗೆ ಕುಮಾರಸ್ವಾಮಿಯವರೇ ಪಿತಾಮಹ ಎಂದು […]

ಭಯ ಹುಟ್ಟಿಸಿ ಸಭಾಪತಿ ಹೊರಟ್ಟಿ ರಾಜೀನಾಮೆ ಪಡೆದಿದ್ದಾರೆ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದ್ದು, ಆಡಳಿತ ಪಕ್ಷದ ನಾಯಕರು ಗೂಂಡಾಗಳಂತೆ ವರ್ತಿಸಿದ್ದಾರೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ರಾಜೀನಾಮೆ ಪಡೆಯಲಾಗಿದ್ದು ಕಾನೂನು ಕ್ರಮ ಜರುಗಿಸಬೇಕು ಎಂದು ಮಾನ್ಯ ರಾಜ್ಯಪಾಲರಿಗೆ ದೂರು ಸಲ್ಲಿಸಿರುವುದಾಗಿ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಲೋಕಭವನದಲ್ಲಿ ನಿಯೋಗದ ಮೂಲಕ ದೂರು ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊರಟ್ಟಿ ಅವರ ರಾಜೀನಾಮೆಯನ್ನು ಒತ್ತಾಯವಾಗಿ ಪಡೆಯಲಾಗಿದೆ. […]