ವಿದ್ಯುತ್ ನಿಗಮಗಳ ಖಾಸಗೀಕರಣ ಬೇಡ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ

ಬೆಂಗಳೂರು : “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ನಿಮ್ಮ ಅಭಿಪ್ರಾಯದ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಅಸೋಸಿಯೇಷನ್ ಒಕ್ಕೂಟದವರು ಬೆಂಗಳೂರು ಅರಮನೆ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡಬಾರದು ಎಂದು […]

ಬೆಂಗಳೂರು ನಗರ, ಗ್ರಾಮಾತಂರದಲ್ಲಿ ಅಬಕಾರಿ ಇಲಾಖೆಯ ಡಿಸಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಹಾಗೂ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಲೋಕಾಯುಕ್ತ ಪೊಲೀಸರು ಇಂದು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಒಟ್ಟು ಒಂಬತ್ತು ಅಬಕಾರಿ ಉಪ ಆಯುಕ್ತರ (ಡಿಸಿ) ಕಚೇರಿಗಳ ಮೇಲೆ ಏಕಕಾಲದಲ್ಲಿ ಹಠಾತ್ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜ್ ಅವರ ನೇರ ಉಸ್ತುವಾರಿಯಲ್ಲಿ ಈ ಹಠಾತ್ ದಾಳಿ ನಡೆದಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ 8 ಪ್ರಮುಖ ಡಿಸಿ ಕಚೇರಿಗಳು ಹಾಗೂ […]

ಭೂಮಿ ಕೊಡಿ ಅಂತ ರೈತರಿಗೆ ಬಲವಂತ ಮಾಡುವಂತಿಲ್ಲ : ಪ್ರಿಯಾಂಕ್ ಖರ್ಗೆ

Priyank Kharge ಬೆಂಗಳೂರು: ಭೂಮಿ ಕೊಡಿ ಅಂತ ರೈತರಿಗೆ ಯಾವತ್ತೂ ಬಲವಂತ ಮಾಡುವಂತಿಲ್ಲ. ನಾವು ಆ ರೀತಿ ಬಲವಂತವಾಗಿ ಭೂಮಿಯನ್ನು ಪಡೆದಿಲ್ಲ, ಪಡೆಯುವುದು ಇಲ್ಲ ಎಂದು ಗೃಹಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಬಿಡದಿ ಟೌನ್‌ಶಿಪ್ ಜಟಾಪಟಿ ವಿಚಾರವಾಗಿ ಮಾತನಾಡಿದ ಅವರು, ರೈತರು ಸ್ವ ಇಚ್ಛೆಯಿಂದ ಎಲ್ಲಿ ಕೊಡುತ್ತಾರೆ ಅದನ್ನು ಪರಿಗಣನೆ ಮಾಡ್ತೀವಿ. ಯಾರು ಸ್ವ ಇಚ್ಛೆಯಿಂದ ಭೂಮಿ ಕೊಡುವುದಿಲ್ಲವೋ ಅಲ್ಲಿ ಯೋಜನೆ ಆಗಲ್ಲ. ಭೂಸ್ವಾಧೀನ ನಿಯಮಗಳು ಬಹಳ ಸ್ಪಷ್ಟವಾಗಿವೆ. ಯಾರು ಕೂಡ ಒತ್ತಾಯಪೂರ್ವಕವಾಗಿ ಭೂಮಿ ತೆಗೆದುಕೊಳ್ಳಲು ಆಗಲ್ಲ. […]

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 1000ಕ್ಕೂ ಅಧಿಕ ಹುದ್ದೆ ನೇಮಕಾತಿಗೆ KPSC ಅಧಿಸೂಚನೆ- ಯಾವಾಗ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗ ಜುಲೈ ತಿಂಗಳಲ್ಲಿ 400 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆ, 115 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಹುದ್ದೆ ಸೇರಿ ಒಂದು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಕ್ಕೆ ಸರಣಿ ಅಧಿಸೂಚನೆ ಹೊರಡಿಸಲು ಸಿದ್ಧತೆ ಕೈಗೊಂಡಿದೆ. ನಾಗರಿಕ ಸೇವಾ ಆಕಾಂಕ್ಷಿಗಳು, ಸರ್ಕಾರಿ ಸೇವೆಯ ಮಾಡುವ ಆಸಕ್ತಿ ಹೊಂದಿರುವ ಯುವ ಜನತೆ ಆಯೋಗದ ಪರೀಕ್ಷೆ ಎದುರಿಸಿ, ಉದ್ಯೋಗ ಗಿಟ್ಟಿಸಿಕೊಳ್ಳಲು ಅಗತ್ಯ ತಯಾರಿ ಮಾಡಿಕೊಳ್ಳಬಹುದಾಗಿದೆ. ನಿಗದಿತ ವೇಳಾಪಟ್ಟಿಯಂತೆ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವ ಮೂಲಕ ಕೆಪಿಎಸ್‌ಸಿ ತನಗೆ ಅಂಟಿರುವ ‘ವಿಳಂಬ ನೇಮಕಾತಿ’ಯ […]

ಕೆಲ ಪಕ್ಷಗಳ ತಂತ್ರದ ಹೊಂದಾಣಿಕೆಯಿಂದ ಟಿವಿಕೆ ಸರ್ಕಾರ ಜೀವಂತವಾಗಿದೆ – ಎಂ.ಕೆ ಸ್ಟಾಲಿನ್

M.K. Stalin ಚೆನ್ನೈ: ಆಡಳಿತಾರೂಢ ಟಿವಿಕೆ ಸ್ವತಂತ್ರವಾಗಿ ಆಡಳಿತ ನಡೆಸಲು ಪೂರ್ಣ ಜನಾದೇಶ ಹೊಂದಿಲ್ಲ. ಅಗತ್ಯ 118 ಬಹುಮತದ ಪೈಕಿ 108 ಸ್ಥಾನಗಳನ್ನ ಮಾತ್ರ ಗಳಿಸಿದೆ ಎಂದು ಮಾಜಿ ಸಿಎಂ ಹಾಗೂ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ ಸ್ಟಾಲಿನ್‌ ಹೇಳಿದರು. ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್‌ ಅವರು, ವಿಜಯ್‌ ಸರ್ಕಾರದ ಪತನದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಈ ಚುನಾವಣೆಯಲ್ಲಿ ಜನ ಡಿಎಂಕೆ ಸರ್ಕಾರ ರಚಿಸಬೇಕೆಂದೇ ಮತ ಚಲಾಯಿಸಿದ್ದರು. ಆದ್ರೆ […]

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ – ಬಸ್‌ಪಾಸ್ ಶುಲ್ಕ ಮರುಪಾವತಿ ಆರಂಭ: ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮಾತ್ರ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಿತ್ತು ಆದರೇ ಇದೀಗ ರಾಜ್ಯ ಸರ್ಕಾರ ಮಹತ್ತರ ಹೆಜ್ಜೆಯೊಂದು ಇಟ್ಟಿದೆ. ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ವಿದ್ಯಾರ್ಥಿಗಳಿಗೆ ಮತ್ತೊಂದು ಸಂತಸದ ಮಾಹಿತಿ ನೀಡಿದೆ. ಈಗಾಗಲೇ ಪಾವತಿಸಿಕೊಂಡಿರುವ ಬಸ್ ಪಾಸ್ ಶುಲ್ಕವನ್ನ ಮರುಪಾವತಿ ನೀಡಲು 4 ಸಾರಿಗೆ ನಿಗಮಗಳಿಗೆ ಅಧಿಕೃತ ಆದೇಶ ಹೊರಡಿಸಿರುವುದು ಬೆಳಕಿಗೆ ಬಂದಿದೆ. ಕೆಎಸ್ಆರ್‌ಸಿಟಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳು […]

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸಾರಿಗೆ ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಬಗ್ಗೆ ಬೀದಿಯಲ್ಲಿ ಚರ್ಚೆ ಮಾಡಲು ಆಗುತ್ತಾ? ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ಕೊಟ್ಟರು. ಬೆಂಗಳೂರಿನಲ್ಲಿ ಹೆಬ್ಬಾಳ ಜಂಕ್ಷನ್‌ನಿಂದ ಪಶು ವೈದ್ಯಕೀಯ ಸಿಬ್ಬಂದಿ ವಸತಿ ಸಮುಚ್ಚಯದವರೆಗೆ ನಿರ್ಮಿಸಲು ಉದ್ದೇಶಿಸಿರುವ 3 ಪಥದ ಸುರಂಗ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮೀಡಿಯಾದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿದ ನಂತರ ಅವರ ಯುಗಾಂತ್ಯವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬೈರತಿ […]

ವೈದ್ಯಕೀಯದ ಜೊತೆ ಸಾಹಿತ್ಯ ಸೇವೆ: ದಂತ ವೈದ್ಯೆ ಡಾ. ಅನುಷಾಗೆ ಒಲಿದ ‘ಜನಸಿರಿ ಪ್ರಶಸ್ತಿ’!

ಬೆಂಗಳೂರು: ವೈದ್ಯಕೀಯ ವೃತ್ತಿಯ ಜೊತೆಗೆ ಸಾಹಿತ್ಯ ಮತ್ತು ಸಮಾಜಸೇವಾ ರಂಗದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಬೆಂಗಳೂರಿನ ಪರಿ ಡೆಂಟಲ್ ಕೇರ್‌ನ ದಂತ ವೈದ್ಯೆ ಡಾ. ಅನುಷಾ ಆರ್. ಗುಪ್ತ ಅವರಿಗೆ 2026ನೇ ಸಾಲಿನ ‘ಜನಸಿರಿ ಬೆಸ್ಟ್ ವೈದ್ಯ ಸಾಹಿತಿ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಜೂನ್ 28ರ ಭಾನುವಾರದಂದು ನಗರದ ದಿ ಅಮರ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಜನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಭಜನಾ ಸಮ್ಮೇಳನದಲ್ಲಿ ಈ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಸೇವಾ ಮನೋಭಾವಕ್ಕೆ ಸಂದ ಗೌರವ ಡಾ. […]

2028ಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದು ಖಚಿತ: ಸಿಎಂ ಡಿ ಕೆ ಶಿವಕುಮಾರ್ ಭವಿಷ್ಯ

ಬೆಂಗಳೂರು : “2028ಕ್ಕೆ ಕರ್ನಾಟಕದಲ್ಲಿ ಹಾಗೂ 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದಕ್ಕೆ ದೇಶದ ಕಾರ್ಮಿಕರ, ಜನಸಾಮಾನ್ಯರ ಬೆಂಬಲ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ಭಾನುವಾರ ನಡೆದ ಎಐಟಿಯುಸಿ (ಇಂಟೆಕ್) 316 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಇಂಟೆಕ್ ಮೂಲಕ ದೇಶದ ಶ್ರಮಿಕರ, ಕಾರ್ಮಿಕರ ಬಲ ಹೆಚ್ಚಾಗಿದೆ. ಯಾವುದೇ ರಾಜಕೀಯ ತೀರ್ಮಾನ ತೆಗೆದುಕೊಂಡರು ಕಾಂಗ್ರೆಸ್ […]

ಶೂದ್ರರು ಬಿಜೆಪಿ ಜತೆ ಹೋಗಬಾರದು, ಬಿಜೆಪಿ ಶೂದ್ರರ ವಿರೋಧಿ : ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ವಾಧಿಕಾರದಲ್ಲಿ ನಂಬಿಕೆ ಹೊಂದಿರುವ ಬಿಜೆಪಿ, ದೇಶದಲ್ಲಿ ಸರ್ವಾಧಿಕಾರ ಸ್ಥಾಪಿಸಲು ಹೊರಟಿದೆ. ಶೂದ್ರರು ಬಿಜೆಪಿ ಜೊತೆ ಹೋಗಬಾರದು. ಬಿಜೆಪಿ ಶೂದ್ರರ ವಿರೋಧಿ. ಸುಳ್ಳನ್ನು ಮಾರಾಟ ಮಾಡುವ ಸುಳ್ಳಿನ ಕಾರ್ಖಾನೆ ಬಿಜೆಪಿ. ಅಧಿಕಾರಕ್ಕಾಗಿ ಬಿಜೆಪಿ ಯಾವುದೇ ಮಟ್ಟಕ್ಕೂ ಇಳಿಯಲು ಸಿದ್ಧವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಎಚ್ಚರ ತಪ್ಪಿದರೆ ಬಿಜೆಪಿ ನಿಮ್ಮನ್ನು ರಾಜಕೀಯವಾಗಿ ಮುಗಿಸುತ್ತದೆ. ಒಂದು ತಿಂಗಳು ಮೈಮರೆತರೂ ನಿಮ್ಮ ರಾಜಕೀಯ ಭವಿಷ್ಯಕ್ಕೆ ದೊಡ್ಡ ಹೊಡೆತ ಬೀಳುತ್ತದೆ ಎಂದು ಮತದಾರರ ಪಟ್ಟಿ ಪರಿಷ್ಕರಣೆ […]