ರೈತರ ಜಮೀನುಗಳ ಮೇಲೆ ಕಣ್ಣು ಹಾಕಿರುವ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

ಕೋಲಾರ: ರಾಜ್ಯದಾದ್ಯಂತ ಮಳೆಯ ಕೊರತೆಯಿಂದ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಬಿತ್ತನೆ ಮಾಡಿದ್ದರೂ ಕೈಗೆ ಬೆಳೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಟೊಮ್ಯಾಟೊ, ಮಾವು ಸೇರಿದಂತೆ ವಿವಿಧ ಬೆಳೆಗಳ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಬೇಕಾದ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಕೋಲಾರ ಹೊರವಲಯದ ರತ್ನ ಕನ್ವೆನ್ಷನ್ ಹಾಲ್‌ನಲ್ಲಿ ಆಗ್ನೇಯ […]

ಮತಗಳ್ಳತನ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ ಅಗತ್ಯ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ದೇಶದಲ್ಲಿ ಮತಗಳ್ಳತನ ನಡೆಯುತ್ತಿದ್ದು, ಇದರ ವಿರುದ್ಧ ನಾವು ಕ್ವಿಟ್ ವೋಟ್ ಚೋರಿ ಚಳುವಳಿ ಮಾಡಬೇಕಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕ್ವಿಟ್ ಇಂಡಿಯಾ ದಿನ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಮತದಾನದ ಹಕ್ಕು, ಬದುಕಿನ ಹಕ್ಕು, ಹೀಗಾಗಿ ಅದನ್ನು ಉಳಿಸಿಕೊಳ್ಳಿ “ನೀವು ಎಲ್ಲಾ ಕೆಲಸ ಬದಿಗಿಟ್ಟು ಮತಗಳ್ಳತನ ವಿರುದ್ಧ ಹೋರಾಟ ಮಾಡಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು ಎಂದು ರಾಜ್ಯದ ಕಾರ್ಯಕರ್ತರಲ್ಲಿ ಮನವಿ […]

ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕು- ಮಲೆನಾಡು ಜಿಲ್ಲೆಗಳಿಗೆ ಹಳದಿ ಅಲರ್ಟ್

ಬೆಂಗಳೂರು: ರಾಜ್ಯದಾದ್ಯಂತ ಮುಂಗಾರು ಮಳೆ ಕೆಲವು ಭಾಗಗಳಲ್ಲಿ ನಿಲ್ಲದಂತೆ ಆಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ಬೆಳಕಿಗೆ ಬಂದಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಇಲ್ಲಿಯೂ ಸಹ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ, […]

ನಿಮಗೆಲ್ಲಾ ನ್ಯಾಯಾಲಯ ದೊಡ್ಡದೋ, ಹೈಕಮಾಂಡ್ ದೊಡ್ಡದೋ?- ಸಚಿವ ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ

ಬೆಂಗಳೂರು: ಅಧಿಕಾರದಲ್ಲಿರುವವರಿಗೆ ಒಂದು ಕಾನೂನು, ಸಾಮಾನ್ಯ ಜನರಿಗೊಂದು ಕಾನೂನು ಎಂಬ ಕಾಂಗ್ರೆಸ್ಸಿಗರ ಮನಸ್ಥಿತಿ ಈಗ ಬಯಲಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ನಾಗೇಂದ್ರ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ […]

ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣೆ ಕಾಯ್ದೆಗೆ ಬದ್ಧವಾಯ್ತು ವಾಟ್ಸಾಪ್ – ಭಾರತದಲ್ಲಿ ಏಜ್ ವೆರಿಫಿಕೇಶನ್ ಪರೀಕ್ಷಿಸುತ್ತಿದೆ ಮೆಟಾ

ನವದೆಹಲಿ: ಭಾರತದಲ್ಲಿ ವಾಟ್ಸ್​ಆ್ಯಪ್​ ಬಳಸುವ ಜನರು ಶೀಘ್ರದಲ್ಲೇ ತಮ್ಮ Date of Birth ಅನ್ನು ಸೇರಿಸಬೇಕಾಗಬಹುದು ಕಾರಣ ಇದು ಹೊಸ ಹೆಜ್ಜೆ ಅಂತಲೂ ಹೇಳಬವುದು. ಮೆಟಾ ಸ್ವಾಮ್ಯದ ಇನ್‌ಸ್ಟಂಟ್ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್​​ ಒಂದು ಹೊಸ ಫೀಚರ್ ಅನ್ನು ಟೆಸ್ಟ್ ಮಾಡುತ್ತಿದ್ದು, ಇದರ ಅಡಿಯಲ್ಲಿ ಕೆಲವು ಬಳಕೆದಾರರಿಗೆ ಆಪ್ ತೆರೆದಾಗ ತಮ್ಮ ವಯಸ್ಸು ಅಥವಾ ಜನ್ಮದಿನಾಂಕ ನಮೂದಿಸುವ ಆಪ್ಷನ್ ಕಾಣಿಸುತ್ತಿದೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ. ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸಾಪ್ ಭಾರತದಲ್ಲಿ ತನ್ನ ಬಳಕೆದಾರರಿಗೆ […]

H.D.Kumaraswamy: ವಿಪಕ್ಷಗಳು ಮಾತನಾಡಿದ್ರೆ ಗೌರವ ಕೊಡ್ತಿಲ್ಲ, ಅಧಿಕಾರದ ಮದದಿಂದ ವಿಪಕ್ಷಗಳಿಗೆ ಮಾನ್ಯತೆ ನೀಡುತ್ತಿಲ್ಲ – ಹೆಚ್‌ಡಿಕೆ

ಮೈಸೂರು: ವಿಪಕ್ಷಗಳು ಮಾತನಾಡಿದ್ರೆ ಗೌರವ ಕೊಡ್ತಿಲ್ಲ. ಅಧಿಕಾರದ ಮದದಿಂದ ವಿಪಕ್ಷಗಳಿಗೆ ಮಾನ್ಯತೆ ಕೊಡ್ತಿಲ್ಲ. ಬೀದಿ ಬದಿ ವ್ಯಾಪಾರಸ್ಥರನ್ನ ಎತ್ತಿಸಿದ್ರಿ. ಅವರಿಗೆ ಪರ್ಯಾಯ ಮಾರ್ಗ ಕೊಟ್ರಾ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಬಿಡದಿ ಟೌನ್‌ಶಿಪ್ ಯಾವುದೇ ಕಾರಣಕ್ಕೂ ಆಗಲ್ಲ. ವಿಪಕ್ಷಗಳು ಮಾತನಾಡಿದ್ರೆ ಗೌರವ ಕೊಡ್ತಿಲ್ಲ. ಅಧಿಕಾರದ ಮದದಿಂದ ವಿಪಕ್ಷಗಳಿಗೆ ಮಾನ್ಯತೆ ಕೊಡ್ತಿಲ್ಲ. ಬೀದಿ ಬದಿ ವ್ಯಾಪಾರಸ್ಥರನ್ನ ಎತ್ತಿಸಿದ್ರಿ. ಅವರಿಗೆ ಪರ್ಯಾಯ ಮಾರ್ಗ ಕೊಟ್ರಾ? ಕೃಷ್ಣ ಬೈರೇಗೌಡ್ರು […]

DK Shivakumar: ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ – ಡಿಕೆ ಶಿವಕುಮಾರ್‌

ಬೆಂಗಳೂರು: ಬಿಡದಿ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದೆ ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಬಿಡದಿ ಟೌನ್‌ಶಿಪ್‌ ವಿರೋಧಿಸಿ ಜೆಡಿಎಸ್‌ ಪಾದಯಾತ್ರೆಗೆ ಮುಂದಾದ ಬೆನ್ನಲ್ಲೇ ಸಿಎಂ ಡಿಕೆಶಿ […]

‘ಕ್ಲೀನ್ ಅಪ್ ಬೆಂಗಳೂರು’: ಪಾದಚಾರಿ ಮಾರ್ಗಗಳ ಸ್ವಚ್ಛತೆಗೆ ಬೆಸ್ಕಾಂ ಬೃಹತ್ ಕಾರ್ಯಾಚರಣೆ!

ಬೆಂಗಳೂರು : ಸ್ವಚ್ಛ ಮತ್ತು ಸುರಕ್ಷಿತ ಬೆಂಗಳೂರು ನಿರ್ಮಾಣಕ್ಕಾಗಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (GBA) ಜೊತೆ ಕೈಜೋಡಿಸಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ನಗರದ ಜನರಿಗೆ ಸುರಕ್ಷಿತ ಪಾದಚಾರಿ ಮಾರ್ಗಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಸ್ವಚ್ಛತಾ ಆಂದೋಲನವನ್ನು ಕೈಗೊಂಡಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ (MD) ಡಾ. ಎನ್‌. ಶಿವಶಂಕರ ಅವರ ನೇತೃತ್ವದಲ್ಲಿ ಶನಿವಾರ ಸಾವಿರಾರು ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾದಚಾರಿ ಮಾರ್ಗಗಳಲ್ಲಿದ್ದ ಸ್ಥಗಿತಗೊಂಡ, ಬಳಕೆಯಲ್ಲಿಲ್ಲದ ವಿದ್ಯುತ್ ಪರಿವರ್ತಕ (ಟ್ರಾನ್ಸ್‌ಫಾರ್ಮರ್) ಕೇಂದ್ರಗಳು ಸೇರಿದಂತೆ ವಿವಿಧ ಪರಿಕರಗಳನ್ನು ತೆರವುಗೊಳಿಸಿದರು. […]

ಬಿಡದಿ ಟೌನ್ ಶಿಪ್ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ

ಬೆಂಗಳೂರು: ಬಿಡದಿ ಟೌನ್ ಶಿಪ್ (ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ) ಯೋಜನೆ ವಿಚಾರವಾಗಿ ವ್ಯಕ್ತವಾಗುತಿರುವ ವಿಭಿನ್ನ ಅಭಿಪ್ರಾಯಗಳನ್ನು ಪರಿಶೀಲಿಸಿ ವರದಿ ನೀಡಲು ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆದೇಶಿಸಿದ್ದಾರೆ. ಈ ಸಮಿತಿಯಲ್ಲಿ ನಿವೃತ್ತ ಮುಖ್ಯಕಾರ್ಯದರ್ಶಿಗಳಾದ ಎಸ್ ವಿ ರಂಗನಾಥ್, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನಕುಮಾರ್ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಯೋಜನೆಗೆ ಯಾರಿಂದಲೂ […]

ರಾಕಿಂಗ್ ಸ್ಟಾರ್ ನಟ ಯಶ್ ನಟನೆಯ ‘ಟಾಕ್ಸಿಕ್’ ಟ್ರೇಲರ್ ರಿಲೀಸ್

ನವದೆಹಲಿ: ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic: A Fairy Tale for Grown-Ups) ಸಿನಿಮಾದ ಅಧಿಕೃತ ಟ್ರೇಲರ್ ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರದ ಟ್ರೇಲರ್‌ನಲ್ಲಿ ಯಶ್ ಎರಡು ಕಂಪ್ಲೀಟ್ ಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿದ್ದು, ಪ್ರೇಕ್ಷಕರಲ್ಲಿ ಮತ್ತು ಅಭಿಮಾನಿಗಳಲ್ಲಿ ಚಿತ್ರದ ಮೇಲಿನ ನಿರೀಕ್ಷೆ ಮುಗಿಲೆತ್ತರಕ್ಕೇರಿದೆ. ಚಿತ್ರತಂಡ ಪ್ರಕಟಿಸಿರುವಂತೆ ಈ ಆ್ಯಕ್ಷನ್ ಕ್ರೈಮ್ ಥ್ರಿಲ್ಲರ್ ಸಿನಿಮಾವು ಆಗಸ್ಟ್ 26ರಂದು ಪ್ರಪಂಚದಾದ್ಯಂತ […]