ನೀಟ್‌ಗಾಗಿ ಟೆಲಿಗ್ರಾಂ ನಿಷೇಧ – ಕೇಂದ್ರದ ನಿರ್ಧಾರಕ್ಕೆ ಅಸ್ತು ಎಂದ ದೆಹಲಿ ಹೈಕೋರ್ಟ್

ನವದೆಹಲಿ: ಒಂದು ಕಡೆ ನೀಟ್‌ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ,ಅವ್ಯವಾಹರಗಳ ವಿರುದ್ಧ ಯುವಕರು ಶಾಂತಿಯುತ ಹೋರಾಟ ಮಾಡುತ್ತಿದ್ದರೆ, ಮತ್ತೊಂದು ಕಡೆ ಕೇಂದ್ರ ಸರ್ಕಾರ ಶಾಕ್‌ ಮೇಲೆ ಶಾಕ್‌ ನೀಡುತ್ತಿದೆ. ನೀಟ್‌ ಯುಜಿ 2026 ಮರುಪರೀಕ್ಷೆ ಹಿನ್ನೆಲೆ, ಟೆಲಿಗ್ರಾಂ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ ಎನ್ನುವ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಈ ವಿಚಾರಕ್ಕೆ ಸರ್ಕಾರದ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್ […]

ಎನ್ ವೈ ಗೋಪಾಲಕೃಷ್ಣರವರು ಸಚಿವರಾಗಬೇಕು, ಸಿಎಂ ಡಿಕೆಶಿಗೆ ಮನವಿ ಇಟ್ಟ ವಿಜಯನಗರ

ವಿಜಯನಗರ ಜಿಲ್ಲೆ ಕೂಡ್ಲಿಗಿ – ಮಾಜಿ ಉಪ ಸಭಾಪತಿಗಳು , ಹಾಗೂ ಭಾರಿ ಶಾಸಕರಾಗಿದ್ದ ಹಿರಿಯ ರಾಜಕಾರಣಿ. ಮೊಳಕಾಲ್ಮೂರು ಶಾಸಕರಾದ ಎನ್ ವೈ ಗೋಪಾಲಕೃಷ್ಣ ರವರನ್ನು ಸಚಿವ ಸ್ಥಾನಕ್ಕಾಗಿ ಸಿಎಂ ಡಿಕೆಶಿ ಮನವಿ ಮಾಡಿಕೊಳ್ಳಲಾಗಿದೆ. ಕೂಡ್ಲಿಗಿ ಶಾಸಕರಾದ ಎನ್ ಟಿ ಶ್ರೀನಿವಾಸರವರು ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಗುಂಡುಮುಣುಗು ತಿಪ್ಪೇಸ್ವಾಮಿ ರವರ ನೇತೃತ್ವದಲ್ಲಿ ಈ ವಿಚಾರ ವ್ಯಕ್ತಪಡಿಸಿ, ಕೂಡ್ಲಿಗಿ ಹಾಗೂ ಮೊಳಕಾಲ್ಮೂರು ಭಾಗದ ಕಾಂಗ್ರೇಸ್ ಧುರೀಣರು ,ಸೇರಿ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರನ್ನು. ಬೆಂಗಳೂರಿನ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾದರು. […]

ಬೆನ್ನಿಗೆ ಚೂರಿ ಇರಿದವರ ಸಂಪೂರ್ಣ ಮಾಹಿತಿ ನಮ್ಮ ಬಳಿ ಇದೆ : ವಿಜಯೇಂದ್ರ ಆಕ್ರೋಶ

ಬೆಂಗಳೂರು :ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷಕ್ಕೆ, ಮೈತ್ರಿ ದ್ರೋಹ ಬಗೆದವರಿಗೆ ಕಾರಣವಿಲ್ಲ ಎಂದು ಕ್ಷಮಿಸಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರ್ಯಾರು ಬೆನ್ನಿಗೆ ಚೂರಿ ಇರಿದು ಆಟ ಆಡಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಸದ್ಯ ನಮ್ಮ ಬಳಿ ಇದ್ದು, ಇವತ್ತು ಅಥವಾ ನಾಳೆಯೊಳಗೆ ಇದರ ಸಂಪೂರ್ಣ ಚಿತ್ರ ನಮಗೆ ಸಿಗಲಿದೆ. ಈ ಕ್ರಾಸ್ ವೋಟಿಂಗ್ನಿಂದಾಗಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತೀವ್ರ ಬೇಸರ ತಂದಿದೆ. ನಮಗೂ ಕೂಡ ಅಷ್ಟೇ […]

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷದ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಜಯ ಸಾಧಿಸಿದ್ದಾರೆ. ವಿರೋಧ ಪಕ್ಷಗಳ ಪಾಳಯದಲ್ಲಿ ಭಾರಿ ಮಟ್ಟದ ಅಡ್ಡ ಮತದಾನ (Cross Voting) ನಡೆದಿರುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿದೆ. ಬಿಜೆಪಿ-ಜೆಡಿಎಸ್ ಅಡ್ಡ ಮತದಾನದ ಬಲ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಮೂವರು ಮತ್ತು ಜೆಡಿಎಸ್ ಪಕ್ಷದ ಮೂವರು ಶಾಸಕರು ಕ್ರಾಸ್ ವೋಟಿಂಗ್ ಮಾಡಿದ್ದಾರೆ ಎನ್ನಲಾಗಿದ್ದು, ಈ […]

ಮಂಡ್ಯದಲ್ಲಿ ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ; ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧನ!

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಭೀಮನಹಳ್ಳಿಯಲ್ಲಿ ಇತ್ತೀಚೆಗೆ ನಡೆದಿದ್ದ ಮಹೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರು ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿರುವ ರೋಮಾಂಚನಕಾರಿ ಘಟನೆ ನಡೆದಿದೆ. ಸ್ಥಳ ಮಹಜರು ನಡೆಸುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಈ ಕ್ರಮ ಕೈಗೊಂಡಿದ್ದಾರೆ. ಹಲಗೂರು ಸಮೀಪದ ಹುಲ್ಲೇಗಾಲದ ಬಳಿ ಈ ಫೈರಿಂಗ್ ನಡೆದಿದ್ದು, ಆರೋಪಿ ಸಿದ್ದರಾಜು ಅಲಿಯಾಸ್ ‘ಸೀಜರ್ ಸಿದ್ದು’ ಕಾಲಿಗೆ ಗುಂಡೇಟು ಬಿದ್ದಿದೆ. ಮೊಬೈಲ್ ಮೆಸೇಜ್ ಗಲಾಟೆ: ಹತ್ಯೆಗೆ […]

ಶಿವಮೊಗ್ಗದ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಡಿಡಿಯಾಗಿ ಸಿ.ಎಸ್ ಷಡಕ್ಷರಿ ಅಧಿಕಾರ ಸ್ವೀಕಾರ

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿಯವರು ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಉಪನಿರ್ದೇಶಕರಾಗಿ (Deputy Director) ಇಲ್ಲಿ ಇಂದು ಅಧಿಕೃತವಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಇದೇ ವರ್ಷ ಜೂನ್ 18 ರಂದು (ಇಂದು) ಅವರು ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರ ಕಚೇರಿಯ ತಮ್ಮ ಕರ್ತವ್ಯದಿಂದ ಬಿಡುಗಡೆ ಹೊಂದಿದ್ದರು. ಅಲ್ಲಿಂದ ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಿದ ಅವರು, ತಮ್ಮ ನೂತನ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡರು. ಅಧಿಕಾರಿಗಳು ಹಾಗೂ ಗಣ್ಯರಿಂದ […]

ಸರ್ಕಾರಿ ಶಾಲೆಯ ಆವರಣ ನಿರ್ವಹಣೆಗೆ ತೊಡಕು, ಮುಖ್ಯ ಶಿಕ್ಷಕ ಕೃಷ್ಣ ರವರ ಅಳಲು

ಶ್ರೀರಂಗಪಟ್ಟಣ: ಕಡತನಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಪಕ್ಕದಲ್ಲಿ ಬೃಹದಾಕಾರದ ಮರಗಳು ಬೆಳೆದಿದ್ದು ಈ ಮುಂಗರ ಮಳೆಯಲ್ಲಿ ಬೀಸುವ ಗಾಳಿಗೆ ಮರಗಳು ಕಟ್ಟಡದ ಮೇಲೆ ಉರುಳುವ ಅಪಾಯವಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು ನಮ್ಮ ದೂರುಗಳನ್ನು ನಿರ್ಲಕ್ಷಿಸಿದ್ದಾರೆ. ಶಾಲೆಯ ಕಾಂಪೌಂಡ್ ಪಕ್ಕದ ಚರಂಡಿ ಬೊಗ್ಗಡ ತುಂಬಿದ್ದು ವಾಸನೆಯು ನಾರುತ್ತಿದೆ. ಇದರಿಂದ ಸೊಳ್ಳೆಗಳು ಹೆಚ್ಚಾಗಿ ಮಕ್ಕಳಿಗೆ ಅನಾರೋಗ್ಯದ ಆತಂಕ ಹೆಚ್ಚಾಗಿದೆ. ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಸ್ವಚ್ಛತಾ ಕಾರ್ಯಕ್ಕೆ ದೂರು ನೀಡಿದ್ದರು ತಿರುಗಿ ನೋಡದ […]

ವಚನಾನಂದ ಶ್ರೀಗಳ ವಿರುದ್ಧದ ಪೋಕ್ಸೋ ಕೇಸ್: ಜೂನ್.30ಕ್ಕೆ ಜಾಮೀನು ರದ್ದು ಅರ್ಜಿಯ ತೀರ್ಪು ಮುಂದೂಡಿದ ಕೋರ್ಟ್

ದಾವಣಗೆರೆ: ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರದ ಜ್ಞಾನಾನಂದಪೀಠದ ವಚನಾನಂದ ಸ್ವಾಮೀಜಿಯವರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪನ್ನು ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಜೂನ್ 30ಕ್ಕೆ ಕಾಯ್ದಿರಿಸಿದೆ. ಸ್ವಾಮೀಜಿಗೆ ಕಳೆದ ಮೇ 2 ರಂದು ಮಂಜೂರಾಗಿದ್ದ ಜಾಮೀನನ್ನು ರದ್ದುಪಡಿಸಬೇಕೆಂದು ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಸಂತ್ರಸ್ತರ ಪರ ವಕೀಲರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜೂನ್ 11 ರಂದೇ ಇದರ ಸಂಪೂರ್ಣ ವಿಚಾರಣೆ ಮುಗಿದಿದ್ದು, ಇಂದು ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಬೇಕಿತ್ತು. ಆದರೆ, […]

ತಮಿಳುನಾಡು ಜೊತೆ ಯಾವಾಗ ಬೇಕಾದರೂ ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯದಂತ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡು ಸರ್ಕಾರ ನಿಮ್ಮ ಹೃದಯಕ್ಕೆ ಹತ್ತಿರವಾದ ಮೇಕೆದಾಟು ಯೋಜನೆ ತಡೆಯಲು ಕಾನೂನು ಅವಕಾಶ ಹುಡುಕುತ್ತಿದೆ ಎಂದು ಕೇಳಿದಾಗ, “ಮೇಕೆದಾಟು ಕೇವಲ ನನ್ನ ಹೃದಯಕ್ಕೆ ಮಾತ್ರ ಹತ್ತಿರವಾಗಿಲ್ಲ. ಮೇಕೆದಾಟು ಯೋಜನೆ ಕರ್ನಾಟಕ ರಾಜ್ಯಕ್ಕಿಂತ […]

ತಮಿಳುನಾಡಿನ ಕೊಯಮತ್ತೂರಿನಲ್ಲಿ 19 ವರ್ಷದ ನೀಟ್ ಅಭ್ಯರ್ಥಿ ಆತ್ಮಹ*ತ್ಯೆ

ಚೆನ್ನೈ: ನೀಟ್ (NEET) ಪರೀಕ್ಷೆಯ ವಿವಾದ ಹಾಗೂ ಮರುಪರೀಕ್ಷೆಯ ಒತ್ತಡಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ 19 ವರ್ಷದ ನೀಟ್ ಆಕಾಂಕ್ಷಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ರಾಜ್ಯದಲ್ಲಿ ನೀಟ್ ಪರೀಕ್ಷೆ ವಿರುದ್ಧದ ಹೋರಾಟವನ್ನು ಮತ್ತೆ ಕಿಡಿಕಾರಿಸಿದೆ. ಮೃತ ವಿದ್ಯಾರ್ಥಿನಿಯನ್ನು ಅನುಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಈಗಾಗಲೇ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದು, ಈ ವರ್ಷ ಮೂರನೇ ಬಾರಿಗೆ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣವೇನು? ಇತ್ತೀಚೆಗೆ ನಡೆದ […]