ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

ಬೆಂಗಳೂರು: ಕರ್ನಾಟಕದಿಂದ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ನಾಮಪತ್ರ ವಾಪಸ್ ಪಡೆಯಲು ನಿಗದಿಪಡಿಸಲಾಗಿದ್ದ ಕಡೆಯ ದಿನವಾದ ಇಂದು, ಕಣದಲ್ಲಿದ್ದ ಅಭ್ಯರ್ಥಿಗಳ ಪಟ್ಟಿಯನ್ನು ಚುನಾವಣಾಧಿಕಾರಿಗಳು ಅಂತಿಮಗೊಳಿಸಿದ್ದು, ಆಡಳಿತಾರೂಢ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಅಧಿಕೃತವಾಗಿ ಸಂಸತ್ ಪ್ರವೇಶಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು ನಾಲ್ಕೂ ಜನ ನಾಯಕರ ಅವಿರೋಧ ಆಯ್ಕೆಯನ್ನು ಪ್ರಕಟಿಸಿ, ಅವರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ್ದಾರೆ. ಮೇಲ್ಮನೆ ಪ್ರವೇಶಿಸಿದ ನೂತನ ಸದಸ್ಯರು: ಟ್ವಿಸ್ಟ್ ಕೊಟ್ಟ […]

ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿಯ ವಿದ್ಯುತ್ ಮಾರಾಟ: ಕರ್ನಾಟಕ ಇಂಧನ ಇಲಾಖೆ ಭರ್ಜರಿ ಲಾಭ- ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಕರ್ನಾಟಕ ರಾಜ್ಯವು ವಿದ್ಯುತ್ ವಲಯದಲ್ಲಿ ಅಭೂತಪೂರ್ವ ಆರ್ಥಿಕ ಯಶಸ್ಸು ಸಾಧಿಸಿದೆ. ಕಳೆದ ಕೇವಲ ಎರಡೂವರೆ ತಿಂಗಳ ಅವಧಿಯಲ್ಲಿ ಹೆಚ್ಚುವರಿ ವಿದ್ಯುತ್ತನ್ನು ರಾಷ್ಟ್ರೀಯ ಗ್ರಿಡ್‌ಗೆ ಮಾರಾಟ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ₹423 ಕೋಟಿ ಆದಾಯ ಹರಿದುಬಂದಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ​ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಎರಡನೇ ಬಾರಿಗೆ ಇಂಧನ ಖಾತೆ ವಹಿಸಿಕೊಂಡ ಸಚಿವರು, ಬೆಸ್ಕಾಂ ಪ್ರಧಾನ ಕಚೇರಿಯಲ್ಲಿ ಉನ್ನತಾಧಿಕಾರಿಗಳ ಪ್ರಥಮ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ […]

ದೇಶದ ಉಕ್ಕು ವಲಯದಲ್ಲಿ ಹೊಸ ಕ್ರಾಂತಿ: ಐಐಟಿ ರೂರ್ಕಿ ಮತ್ತು ಆರ್ಸೆಲರ್‌ ಮಿತ್ತಲ್‌ ನಿಪ್ಪಾನ್‌ ಸ್ಟೀಲ್‌ ನಡುವೆ ಐತಿಹಾಸಿಕ ಒಪ್ಪಂದ!

ಬೆಂಗಳೂರು: ಭಾರತದ ಉತ್ಪಾದನೆ ಮತ್ತು ಉಕ್ಕಿನ ತಂತ್ರಜ್ಞಾನವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ದೇಶದ ಎರಡು ಪ್ರಮುಖ ಸಂಸ್ಥೆಗಳು ಮಹತ್ವದ ಹೆಜ್ಜೆ ಇಟ್ಟಿವೆ. ಉಕ್ಕು ಉತ್ಪಾದನೆಯಲ್ಲಿ ಜಾಗತಿಕ ದೈತ್ಯ ಎನಿಸಿಕೊಂಡಿರುವ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ’ (AM/NS India) ಮತ್ತು ದೇಶದ ಹೆಮ್ಮೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ‘ಐಐಟಿ ರೂರ್ಕಿ’ (IIT Roorkee) ಜಂಟಿ ಒಪ್ಪಂದಕ್ಕೆ (MoU) ಸಹಿ ಹಾಕಿವೆ. ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಯನ್ನು (Innovation) ಅಭಿವೃದ್ಧಿಪಡಿಸುವುದು ಈ ಸಹಭಾಗಿತ್ವದ ಮುಖ್ಯ ಉದ್ದೇಶವಾಗಿದೆ. ಕೈಗಾರಿಕಾ […]

ಪರಿಸರ ಸ್ನೇಹಿ ವಿದ್ಯುತ್ ಪ್ರಸರಣ ವ್ಯವಸ್ಥೆಯತ್ತ ಕೆಪಿಟಿಸಿಎಲ್ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ

ಮಾಧ್ಯಮ ಪ್ರಕಟಣೆಪರಿಸರ ಸ್ನೇಹಿ ವಿದ್ಯುತ್ ಪ್ರಸರಣ ವ್ಯವಸ್ಥೆಯತ್ತ ಕೆಪಿಟಿಸಿಎಲ್ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ ಬೆಂಗಳೂರು, ಜೂನ್ 05, 2026 : ಪರಿಸರ ಸಂರಕ್ಷಣೆ ಮತ್ತು ವಿದ್ಯುತ್ ಜಾಲದ ಆಧುನೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ತನ್ನ ಹೈ-ವೋಲ್ಟೇಜ್ ಟ್ರಾನ್ಸ್‌ಫಾರ್ಮರ್‌ಗಳ ಜಾಲದಲ್ಲಿ ಬಳಕೆಯಲ್ಲಿದ್ದ ಸಾಂಪ್ರದಾಯಿಕ ಮತ್ತು ಹಾನಿಕಾರಕ ಮಿನರಲ್ ಆಯಿಲ್ (ಖನಿಜ ತೈಲ) ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ಹಾಗೂ ಬಯೋಡಿಗ್ರೇಡಬಲ್‌ ನ್ಯಾಚುರಲ್ ಎಸ್ಟರ್ ಆಯಿಲ್ ಗೆ […]

ಕರ್ನಾಟಕದ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಪಟ್ಟಿ

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟದ ನೂತನ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಕುರಿತು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಅಧಿಕೃತ ಜ್ಞಾಪನಾ ಪತ್ರಕ್ಕೆ ಸಹಿ ಹಾಕಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ಅಧಿಕೃತ ಅಧಿಸೂಚನೆಯ ಮೂಲ ಪ್ರತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಮುಂದಿನ ಕ್ರಮಕ್ಕಾಗಿ ರವಾನಿಸಿದ್ದಾರೆ. ಸಂವಿಧಾನದ 166ನೇ ವಿಧಿಯ ಕ್ಲಾಸ್ (3) ಹಾಗೂ ಕರ್ನಾಟಕ ಸರ್ಕಾರದ (ವ್ಯವಹಾರ ನಿರ್ವಹಣೆ) ನಿಯಮಗಳು 1977ರ ನಿಯಮ 5ರ […]

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ನನ್ನ ಪ್ರಥಮ ಆದ್ಯತೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ 25 ವರ್ಷಗಳ ದೀರ್ಘಾವಧಿಗೆ ಭೂಮೇಲ್ಮೈ ನೀರು ಬಳಸಿ ಗ್ರಾಮೀಣ ಭಾಗಕ್ಕೆ ಪೂರೈಕೆ ಮಾಡುವುದು ಸರ್ಕಾರದ ಸಂಕಲ್ಪವಾಗಿದ್ದು, ಇದರ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಮಹಾತ್ಮಾಗಾಂಧೀ ಅವರು ಭಾರತದ ಆತ್ಮ […]

ರಾಜ್ಯಸಭೆ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ವಿಧಾನಸೌಧದಲ್ಲಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಖರ್ಗೆ ಅವರು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರದ ಪ್ರತಿಗಳನ್ನು ಹಸ್ತಾಂತರಿಸಿದರು. ಈ ಹೈಪ್ರೊಫೈಲ್ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಕಾಂಗ್ರೆಸ್‌ನ ಪ್ರಮುಖ ನಾಯಕರ ಸಮ್ಮುಖದಲ್ಲಿ ಅತ್ಯಂತ ಗಂಭೀರವಾಗಿ ಜರುಗಿತು. ಗಣ್ಯರ ಉಪಸ್ಥಿತಿ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಸಾಥ್ ನೀಡಿದರು. […]

ತುಮಕೂರಲ್ಲಿ ಎರಡು ಕಾರುಗಳ ನಡುವೆ ಅಪಘಾತ; ಮೂವರು ದುರ್ಮರಣ

ತುಮಕೂರು): ತಾಲೂಕಿನ ಹುಳಿಯಾರು ಗ್ರಾಮದ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಘೋರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಹಿರಿಯೂರಿನಿಂದ ಹುಳಿಯಾರು ಕಡೆಗೆ ಸಾಗುತ್ತಿದ್ದ ಓಮ್ನಿ ಕಾರಿಗೆ ಎದುರು ದಿಕ್ಕಿನಿಂದ ಬಂದ ಮತ್ತೊಂದು ಕಾರು ಜೋರಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಓಮ್ನಿ ಕಾರು ರಸ್ತೆಯಿಂದ ಪಕ್ಕಕ್ಕೆ ಉರುಳಿ ಬಿದ್ದಿದ್ದು, ಅದರಲ್ಲಿದ್ದ ವೃದ್ಧ ದಂಪತಿ ಸೇರಿ ಮೂವರು ಜಾಗದಲ್ಲೇ ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಮೃತರು ಆಂಧ್ರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಮೂವರಿಗೆ ತೀವ್ರ ಗಾಯ: ಜಿಲ್ಲಾಸ್ಪತ್ರೆಗೆ […]

ಸಿಎಂ ಡಿಕೆಶಿ ನೇತೃತ್ವದಲ್ಲಿ ಜಾಗತಿಕ ‘ಜಲ-ನಾವೀನ್ಯತಾ’ ಕೇಂದ್ರವಾಗಿ ಬೆಳೆಯಲಿದೆ ಬೆಂಗಳೂರು

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ‘ಬ್ರ್ಯಾಂಡ್ ಬೆಂಗಳೂರು’ ದೃಷ್ಟಿಕೋನವನ್ನು ಸಾಕಾರಗೊಳಿಸುವ ಹಾಗೂ ಬೆಂಗಳೂರು ನಗರದ ಭವಿಷ್ಯದ ಸವಾಲುಗಳನ್ನು ಎದುರಿಸಬಲ್ಲ ಮತ್ತು ಸುಸ್ಥಿರ ನಗರಾಭಿವೃದ್ಧಿಗೆ ಪೂರಕವಾದ ವ್ಯವಸ್ಥೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (BWSSB) ಮಹತ್ವಾಕಾಂಕ್ಷಿ ‘ಬೆಂಗಳೂರು ಗ್ಲೋಬಲ್ ವಾಟರ್ ಇನ್ನೋವೇಷನ್‌ ನೆಟ್‌ವರ್ಕ್’ (BGWIN – ಬಿ-ಗ್ವಿನ್) ಜಾಲ ಸ್ಥಾಪನೆಗೆ ಚಿಂತನೆ ನಡೆಸುತ್ತಿದೆ. ಜಾಗತಿಕ ಮಟ್ಟದ ಅತ್ಯಾಧುನಿಕ ವೇದಿಕೆಯಾಗಿ ರೂಪಿತಗೊಳ್ಳಲಿರುವ ಈ ‘ಬಿ-ಗ್ವಿನ್’, ಜಲ ಮತ್ತು ಒಳಚರಂಡಿ ವಲಯದ ಸವಾಲುಗಳನ್ನು […]

ಜನ ಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಖಡಕ್ ಸೂಚನೆ

ಬೆಂಗಳೂರು : ಒಳ್ಳೆಯ ಆಡಳಿತ ನೀಡುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿದ್ದೇವೆ. ಸರ್ಕಾರದ ಯೋಜನೆಗಳು ನಿಗದಿತ ಸಮಯದೊಳಗೆ ಜನರಿಗೆ ತಲುಪಲು ಜವಬ್ದಾರಿ ಮತ್ತು ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಉಪ‌ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಹೇಳಿದರು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ‌ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಮೂರು ವರ್ಷಗಳಲ್ಲಿ ಎಲ್ಲ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿ, ಸರ್ಕಾರಕ್ಕೆ ಒಳ್ಳೆಯ ಹೆಸರು ತಂದಿದ್ದೀರಿ. ಅನೇಕ ಭರವಸೆಗಳನ್ನು ಈಡೇರಿಸಲಾಗಿದೆ. ನೂತನ […]