ಬಿಜೆಪಿ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳಲು ಪಾದಯಾತ್ರೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ಕೆಪಿಎಸ್ಸಿ ವಿಚಾರವಾಗಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಹೋರಾಟವಲ್ಲ. ಬದಲಿಗೆ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳುವ ಪ್ರಯತ್ನ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಎಫ್ ಕೆಸಿಸಿಐ ಕಚೇರಿಯ ಬಳಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. “ಕೆಪಿಎಸ್ಸಿ ಅಕ್ರಮದಲ್ಲಿ ಬಿಜೆಪಿ ನಾಯಕರ ಸಂಪರ್ಕದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಕುರಿತು ಗೃಹ ಸಚಿವರು ಹಾಗೂ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಲಾಗಿದೆ. ತನಿಖೆಯ ಸಂಪೂರ್ಣ ವರದಿ ಇನ್ನೂ ತಮ್ಮ ಕೈಗೆ ಬಂದಿಲ್ಲ. ಮಾಧ್ಯಮಗಳಲ್ಲಿ ಬಂದಿರುವ […]
ಅಯೋಧ್ಯೆ ಶ್ರೀರಾಮಮಂದಿರ ಟ್ರಸ್ಟ್ ಮೊದಲ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಥಮ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ನೇಮಿಸಲಾಗಿದೆ. ಇತ್ತೀಚೆಗೆ ದೇವಾಲಯದ ಕಾಣಿಕೆ ಹಣ ಕಳವು ಪ್ರಕರಣ ಭಾರಿ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಹಣಕಾಸು ಮತ್ತು ಆಡಳಿತ ವ್ಯವಸ್ಥೆಯನ್ನು ಬಿಗಿಗೊಳಿಸಲು ಟ್ರಸ್ಟ್ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಕಾಣಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ವಿವಾದ ತಾರಕಕ್ಕೇರಿದ ಕಾರಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಸೇರಿದಂತೆ […]
ಬೇರೆಯವರಂತೆ ರಾಹುಲ್ ಗಾಂಧಿ ಮುಚ್ಚಳಿಕೆ ಬರೆದುಕೊಡಲ್ಲ, ಕ್ಷಮೆ ಕೇಳಲ್ಲ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ, ಹೋರಾಟಗಾರನಾಗಿ ಬದುಕುತ್ತಿದ್ದು, ಹೋರಾಟಗಾರನಾಗಿಯೇ ಸಾಯುತ್ತಾರೆ. ಇಂತಹ ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಅವರು ಇಂತಹ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ಬೇರೆಯವರಂತೆ ರಾಹುಲ್ ಗಾಂಧಿ ಅವರು ಮುಚ್ಚಳೊಕೆ ಬರೆದುಕೊಡಲ್ಲ, ಕ್ಷಮೆ ಕೇಳಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕಿಡಿ ಕಾರಿದರು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉತ್ತರಖಂಡದಲ್ಲಿ ದುರುದ್ದೇಶಪೂರಿತ ಎಫ್ ಐಆರ್ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ […]
ಕೆಆರ್‌ಐಡಿಎಲ್ ಲಂಚ ಪ್ರಕರಣ; ಸಚಿವರ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯ

ಬೆಂಗಳೂರು: ಕೆಆರ್‌ಐಡಿಎಲ್‌ನಲ್ಲಿ 7% ಲಂಚ ಪಡೆಯುತ್ತಿರುವ ಇಬ್ಬರು ಸಚಿವರನ್ನು ಕೂಡಲೇ ವಜಾ ಮಾಡಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರಾದರೂ ಲಂಚ ಪಡೆದರೆ ನನಗೆ ಕರೆ ಮಾಡಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಈಗ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅಧಿಕೃತವಾಗಿ ಪತ್ರ ಬರೆದು ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೆಆರ್‌ಐಡಿಎಲ್ ನಲ್ಲಿ ಹೆಚ್ಚುವರಿಯಾಗಿ 7% ಪಡೆಯಲಾಗುತ್ತಿದೆ, ಈ ಬಗ್ಗೆ ಪ್ರಶ್ನಿಸಿದ […]
ಸಚಿವರು ಸೂಚಿಸಿದ್ರೇ ಬೀದಿ ದೀಪ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಜಿಬಿಎ ಕಾರ್ಯಪಾಲಕ ಅಭಿಯಂತರ ಅಮಾನತು

ಬೆಂಗಳೂರು: ಬೀದಿ ದೀಪಗಳ ನಿರ್ವಹಣೆಯಲ್ಲಿ ಗಂಭೀರ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ, ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರಾದ (ವಿದ್ಯುತ್) ಹೆಚ್. ವಿ. ರಮೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸಚಿವರ ದಿಢೀರ್ ಪರಿವೀಕ್ಷಣೆ ಮತ್ತು ಕರಾಳ ಸತ್ಯ ಬಯಲು ದಿನಾಂಕ 28.08.2026ರ ಸಂಜೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು ಹಡ್ಸನ್ ವೃತ್ತದಿಂದ ಚಾಲುಕ್ಯ ವೃತ್ತದವರೆಗಿನ ರಸ್ತೆಯಲ್ಲಿ ಖುದ್ದಾಗಿ ವಿದ್ಯುತ್ ಬೀದಿ ದೀಪಗಳ ಪರಿವೀಕ್ಷಣೆ ನಡೆಸಿದರು. ಈ ವೇಳೆ ಒಟ್ಟು 222 […]
ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

ಗದಗ : “ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬರ ಪರಿಸ್ಥಿತಿ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. “ಜಿಲ್ಲಾ ಸಚಿವರು ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ, ವಾಸ್ತವಾಂಶದ ವರದಿ ನೀಡಿದ್ದಾರೆ. ಅದರ ಜೊತೆಗೆ ಅಧಿಕಾರಿಗಳು ಅಧ್ಯಯನ […]
ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಬಿಜೆಪಿಯ ಐತಿಹಾಸಿಕ ಪಾದಯಾತ್ರೆಗಿದೆ: ಬಿವೈ ವಿಜಯೇಂದ್ರ

ಲಿಂಗಸೂರು: ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಬಿಜೆಪಿಯ ಐತಿಹಾಸಿಕ ಪಾದಯಾತ್ರೆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಲಿಂಗಸೂರಿನಿಂದ ಆರಂಭಗೊಂಡಿರುವ ಬಿಜೆಪಿ ಪಾದಯಾತ್ರೆ ಕೇವಲ ರಾಜಕೀಯ ಕಾರ್ಯಕ್ರಮವಲ್ಲ. ಇದು ದಲಿತ ವಿರೋಧಿ, ರೈತ ವಿರೋಧಿ, ಬಡವರ ವಿರೋಧಿ, ಯುವಜನ ವಿರೋಧಿ, ಮಹಿಳಾ ವಿರೋಧಿ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನ ಎಂದು ಅವರು ಹೇಳಿದರು. “ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಡಿಕೆಶಿ ಕೇಳುತ್ತಾರೆ; ನಿಮ್ಮ ಸರ್ಕಾರದ ವೈಫಲ್ಯಗಳೇ ನಮ್ಮ ಪಾದಯಾತ್ರೆಗೆ […]
JOB ALERT: ಶೀಘ್ರದಲ್ಲೇ ಕೆಇಎಯಿಂದ ಬರೋಬ್ಬರಿ 4,744 ಹುದ್ದೆ ನೇಮಕಕ್ಕೆ ಅಧಿಸೂಚನೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪದವಿ ಹಾಗೂ ಪಿಯುಸಿ- ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ. ಈ ಹುದ್ದೆಗಳಿಗೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ಕೂಡ ನಡೆಸಲು ಸಿದ್ಧತೆ ನಡೆದಿದೆ. ಯಾವ ಇಲಾಖೆಯ ಯಾವ ಹುದ್ದೆಗೆಳಿಗೆ ಅರ್ಜಿ ಸಲ್ಲಿಸಬಹುದು ಎಂಬುದರ ವಿವರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. […]
ಸಚಿವರ ಹೆಸರಲ್ಲಿ ಕಮೀಷನ್ ದಂಧೆಗೆ ಇಳಿದವರಿಗೆ ಈಶ್ವರ್ ಖಂಡ್ರೆ ಶಾಕ್: 7 ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ಆದೇಶ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ (ಕೆಆರ್‌ಐಡಿಎಲ್) ಮಂಗಳೂರು ವಿಭಾಗದಲ್ಲಿ ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು ಗುತ್ತಿಗೆದಾರರಿಂದ ಶೇಕಡಾ 7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ, ಪ್ರಕರಣದ ಕುರಿತು ಕೂಲಂಕಷ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಇಲಾಖಾ ಕಾರ್ಯದರ್ಶಿಗೆ ಖಡಕ್ ನಿರ್ದೇಶನ ನೀಡಿದ್ದಾರೆ. ಶಾಸಕರ ದೂರಿನ ಹಿನ್ನೆಲೆ ಮಂಗಳೂರು ಕೆಆರ್‌ಐಡಿಎಲ್ […]
ಯುಜಿಸಿಇಟಿಯ 3ನೇ ಸುತ್ತಿಗೆ ಆಪ್ಷನ್ಸ್ ದಾಖಲು ಆರಂಭ, ಸೆ.3 ಕೊನೆ ದಿನ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಸಂಜೆ ಲಿಂಕ್ ಬಿಡುಗಡೆ ಮಾಡಿದೆ. ಎರಡನೇ ಸುತ್ತಿನಲ್ಲಿ ಯಾವುದೇ ಸೀಟು ಹಂಚಿಕೆಯಾಗದವರು/ ಹಂಚಿಕೆ ನಂತರ ದಂಡ ಪಾವತಿಸಿ ಸೀಟು ರದ್ದು ಮಾಡಿಕೊಂಡವರು ಹೊಸದಾಗಿ ಆಪ್ಷನ್ಸ್ ದಾಖಲಿಸಲು ಸೆ.3ರ ಸಂಜೆ 6 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಕಾಲೇಜಿನಲ್ಲಿ ಪ್ರವೇಶ ಪಡೆದಿರುವ […]