GOOD NEWS: ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮರು ಪರಿಶೀಲನಾ ಅವಧಿ ಒಂದು ತಿಂಗಳು ವಿಸ್ತರಣೆ

ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವದಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ.2023ರ ಜುಲೈ ತಿಂಗಳಲ್ಲಿ ಜಾರಿಗೊಂಡಿದ್ದ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಜುಲೈ 1, 2026 ರಿಂದ ಗೃಹ ಜ್ಯೋತಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆಗಸ್ಟ್ 31ರವರೆಗೆ ಸರ್ಕಾರ ಅವದಿ ನಿಗದಿ ಮಾಡಿತ್ತು. ಇದೀಗ ಒಂದು ತಿಂಗಳ ಕಾಲ ಅವದಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಮೇ […]
ಕೆಪಿಎಸ್‌ಸಿ ನೇಮಕಾತಿ ಹಗರಣ: ಹಿರಿಯ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಹಿರಿಯ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಬಂಧಿಸಿದೆ. ಆಯೋಗದಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಲಘಟ್ಟದಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ, ಅಭ್ಯರ್ಥಿಗಳ ಅಂಕ ತಿದ್ದುಪಡಿ ಸೇರಿದಂತೆ ನೇಮಕಾತಿಯಲ್ಲಿ ವ್ಯಾಪಕ ಅವ್ಯವಹಾರ ಎಸಗಿರುವ ಗಂಭೀರ ಆರೋಪಗಳು ಇವರ ಮೇಲಿವೆ. ಈ ಕುರಿತು ಸಿಐಡಿಯ ವಿಶೇಷ ತನಿಖಾ ದಳವು ಹಲವು ದಿನಗಳಿಂದ ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿತ್ತು. […]
ನೀವು ಪರೀಕ್ಷೆಯಿಲ್ಲದೇ ಸರ್ಕಾರಿ ಹುದ್ದೆ ಪಡೆಯಲು, ಈ ನೇಮಕಾತಿಗೆ ಅರ್ಜಿ ಸಲ್ಲಿಸಿ

ಶಿವಮೊಗ್ಗ: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ ಒಟ್ಟು 55 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು18 ರಿಂದ 40 ವರ್ಷ (ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ)ದೊಳಗಿನವರಾಗಿದ್ದು, 10 ನೇ ತರಗತಿ ಉತ್ತೀರ್ಣರಾಗಿರಬೇಕು. ಗಣಿತ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು ಹಾಗೂ 10ನೇ […]
ಬೆಂಗಳೂರು ಮೇಲಿನ ಒತ್ತಡ ಕಡಿಮೆ ಮಾಡಲು ಐದು ನಗರಗಳ ಅಭಿವೃದ್ಧಿ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರು : “ಬಹುದಿನಗಳಿಂದ ಚರ್ಚೆಯಲ್ಲಿರುವ ಗ್ರೇಟರ್ ಮೈಸೂರು ಯೋಜನೆಗೆ ಹೊಸ ರೂಪ ನೀಡುವ ಜತೆಗೆ, ವಿಶ್ವವಿಖ್ಯಾತ ಮೈಸೂರು ದಸರಾಕ್ಕೂ ಹೊಸ ಆಲೋಚನೆ, ಶಿಸ್ತು ಮತ್ತು ಅಂತರರಾಷ್ಟ್ರೀಯ ಆಕರ್ಷಣೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮೈಸೂರಿನ ಓವೆಲ್ ಮೈದಾನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. “ಗ್ರೇಟರ್ ಮೈಸೂರು ಕುರಿತು ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಶೀಘ್ರವೇ ಪ್ರತ್ಯೇಕ ಸಭೆ ನಡೆಸಲಾಗುವುದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ […]
‘ಪಿಎಂ ಇ-ಡ್ರೈವ್’ಯೋಜನೆ ಅನುಷ್ಠಾನ ಕುರಿತು ಪ್ರಮುಖ ಇಲಾಖೆಗಳೊಂದಿಗೆ ಎಸಿಎಸ್ ಗೌರವ್ ಗುಪ್ತ ಸಭೆ

ಬೆಂಗಳೂರು : ಪಿಎಂ ಇ-ಡ್ರೈವ್ ಯೋಜನೆಯಡಿ ರಾಜ್ಯದ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಆವರಣಗಳಲ್ಲಿ ಲಭ್ಯವಿರುವ ಸೂಕ್ತ ಸ್ಥಳಗಳನ್ನು ಬಳಸಿಕೊಂಡು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ (ಇವಿ) ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು ಶನಿವಾರ ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಪ್ರಮುಖ ಸರ್ಕಾರಿ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪಿಎಂ ಇ-ಡ್ರೈವ್ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಸ್ಥಳಗಳಲ್ಲಿ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಕುರಿತು […]
ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ₹15 ಲಕ್ಷ: ಡಿಸಿಎಂ ಡಾ.ಜಿ ಪರಮೇಶ್ವರ್ ಘೋಷಣೆ

ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ₹15 ಲಕ್ಷ ನೀಡಲಾಗುತ್ತದೆ. ₹36 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ 32 ಕ್ರೀಡಾಂಗಣಗಳ ಅಭಿವೃದ್ಧಿ ಮಾಡಲಾಗುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಜರಾತಿಯಲ್ಲಿ ವಿನಾಯಿತಿ ನೀಡಲಾಗುತ್ತದೆ. ಕ್ರೀಡಾ ಸಚಿವನಾಗಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಟೊಂಕ ಕಟ್ಟಿ ನಿಂತಿದ್ದೇನೆ ಎಂಬುದಾಗಿ ಡಿಸಿಎಂ ಡಾ.ಜಿ ಪರಮೇಶ್ವರ್ ಘೋಷಿಸಿದ್ದಾರೆ. ಇಂದು ಅವರು, ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಉಪ ಮುಖ್ಯಮಂತ್ರಿಗಳು, ಕಂದಾಯ ಮತ್ತು ಕ್ರೀಡಾ ಸಚಿವರಾದ ಡಾ.ಜಿ.ಪರಮೇಶ್ವರ ಅವರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಿಶ್ವದ ಅತಿದೊಡ್ಡ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಕರ್ನಾಟಕದ ಹೆಮ್ಮೆಯ ಕ್ರೀಡಾಪಟುಗಳ ಬೆಂಬಲಕ್ಕೆ […]
ಸೆ.1ರಿಂದ ಬಿಜೆಪಿಯಿಂದ ಪಾದಯಾತ್ರೆ: ಮಾಜಿ ಸಚಿವ ಬಿ.ಶ್ರೀರಾಮುಲು ಬಳ್ಳಾರಿ ಚಲೋ ಪೋಸ್ಟರ್ ಬಿಡುಗಡೆ

ಬೆಂಗಳೂರು: ಸೆಪ್ಟೆಂಬರ್ 1 ರಂದು ಲಿಂಗಸಗೂರಿನಿಂದ ಆರಂಭವಾಗಲಿರುವ ಬಿಜೆಪಿ ಪಾದಯಾತ್ರೆ ಸೆಪ್ಟೆಂಬರ್ 10 ರಂದು ಬಳ್ಳಾರಿಯಲ್ಲಿ ಮುಕ್ತಾಯವಾಗಲಿದೆ. ಒಂಬತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಹಾದು ಬರಲಿದೆ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಾದಯಾತ್ರೆಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಲಿಂಗಸಗೂರಿನಲ್ಲಿ ಬೃಹತ್ ಸಮಾವೇಶ ನಡೆಸಿ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಎಚ್.ಡಿ ಕುಮಾರಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧಪಕ್ಷದ ನಾಯಕರಾದ […]
ದಲಿತ, ಆದಿವಾಸಿ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್: ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಘೋಷಣೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷ ಬಿಜೆಪಿಯ ನಿರಂತರ ಆರೋಪಗಳಿಂದ ನೊಂದ ಸಚಿವ ಬಿ. ನಾಗೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದಾರೆ. ಕೇವಲ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ತಪ್ಪಿಸುವ ನಿಟ್ಟಿನಲ್ಲಿ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಘೋಷಿಸಿದ ಅವರು, ವಿಪಕ್ಷಗಳ ಕುತಂತ್ರ ರಾಜಕಾರಣದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿಯದ್ದು ಮನುಸ್ಮೃತಿ ಮನಸ್ಥಿತಿ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗೇಂದ್ರ, “ವಿರೋಧ ಪಕ್ಷದವರು ಸದನವನ್ನು ಸುಗಮವಾಗಿ ನಡೆಯಲು ಬಿಡದೆ, […]
ಪೊಲೀಸರ ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕನ್ನು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆಯ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ.50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ ಇದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ ರಾಜ್ಯ ಪೊಲೀಸರಿಗಾಗಿ ಸಮಗ್ರ ಸಾಮರ್ಥ್ಯ ವೃದ್ದಿ ತರಬೇತಿಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. “ಪೊಲೀಸರ ಆರ್ಥಿಕ ಅಗತ್ಯಗಳಿಗೆ […]
KPSCಯಲ್ಲಿ ಅಕ್ರಮ ಆಗಿದೆ ಎಂದು FSIL ವರದಿ ಬಂದರೂ FIR ಹಾಕಲಿಲ್ಲ ಏಕೆ?: HDK ಪ್ರಶ್ನೆ

ಮೈಸೂರು: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದಾಗ ನಡೆಸಿದ್ದ ಕೆಪಿಎಸ್ಸಿ ಅಕ್ರಮವನ್ನು ಗೃಹ ಸಚಿವರಾಗಿ ಬಂದು ಮುಖ್ಯ ಹಾಕಲು ಪ್ರಿಯಾಂಕ ಖರ್ಗೆ ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು; ಪ್ರಿಯಾಂಕರ್ ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾಗಿದ್ದಾಗ ನಡೆದಿದ್ದ ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್ ಗ್ರೇಡ್ 1 ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ವ್ಯಾಪಕ ಅಕ್ರಮ ಎಸೆಗಿದ್ದಾರೆ ಎಂದು ದೂರಿದರು. […]