ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ: ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಜನವಿರೋಧಿ ಅಧಿಸೂಚನೆಯನ್ನು ನಮ್ಮ ಸರ್ಕಾರವು ಬಲವಾಗಿ ಖಂಡಿಸುತ್ತದೆ. ಯಾವುದೇ ಕಾರಣಕ್ಕೂ ವರದಿ ಜಾರಿಗೆ ಅವಕಾಶ ನೀಡಬಾರದು ಎಂಬ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎನ್ನುವುದನ್ನು ಈ ಮೂಲಕ ರಾಜ್ಯದ ಜನರ ಗಮನಕ್ಕೆ ತರಲು ಬಯಸುತ್ತೇನೆ ಎಂಬುದಾಗಿ ಡಿಸಿಎಂ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಪಶ್ಚಿಮ ಘಟ್ಟ ಪ್ರದೇಶದ 10 ಜಿಲ್ಲೆಗಳ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಈ ಅಧಿಸೂಚನೆಯು ರಾಜ್ಯದ […]
KPSC ಮತ್ತೊಂದು ಕರಾಮತ್ತು ದಾಖಲೆ ಸಹಿತ ಬಿಚ್ಚಿಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಮಂತ್ರಿಯಾಗಿದ್ದಾಗ 2022ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ನಡೆದಿರುವ ಸಹಾಯಕ ಎಕ್ಸಿಕ್ಯೂಟೀವ್ ಎಂಜಿನಿಯರ್ ಗ್ರೇಡ್ 1 ಹುದ್ದೆಗಳ ಆಯ್ಕೆ ಮತ್ತು ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅವರು ಗಂಭೀರ ಆರೋಪ ಮಾಡಿದರು. ಈ ಅಕ್ರಮ ನೇಮಕಾತಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಜವಾಬ್ದಾರಿ ಹೊರಬೇಕು ಹಾಗೂ ಸಚಿವ ಸ್ಥಾನಕ್ಕೆ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು […]
ಬಡವರಿಗೆ ನಿವೇಶನದ ಹಕ್ಕು ನೀಡುವುದು ನಮ್ಮ ಸರ್ಕಾರದ ಪ್ರಧಾನ ಆದ್ಯತೆ: ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು : ಇಂದು ವಿಕಾಸಸೌಧದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತಂತೆ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು. ಬಡವರಿಗೆ ನಿವೇಶನದ ಹಕ್ಕು ನೀಡುವುದು ನಮ್ಮ ಸರ್ಕಾರದ ಪ್ರಧಾನ ಆದ್ಯತೆ. ತಮಗೆ ತಿಳಿದಂತೆ ರಾಜ್ಯದ ಅಸಂಖ್ಯಾತ ಜನರಿಗೆ ವಿಳಾಸ ಹೇಳಲು ಕೂಡ ಒಂದು ಜಾಗವಿಲ್ಲ. ಈ ಕೂಡಲೇ ನಾವು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50,000 ನಿವೇಶನಗಳಿಗೆ […]
ಮಳೆಯಿಲ್ಲದೆ ಕಂಗೆಟ್ಟ ಕರುನಾಡು: 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದ 101 ತಾಲೂಕುಗಳನ್ನು ಕರ್ನಾಟಕ ಸರ್ಕಾರ ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಿದೆ. ಕೇಂದ್ರ ಸರ್ಕಾರದ ‘ಬರ ನಿರ್ವಹಣಾ ಕೈಪಿಡಿ-2020’ರ ಮಾನದಂಡಗಳ ಆಧಾರದ ಮೇಲೆ ವೈಜ್ಞಾನಿಕ ಸಮೀಕ್ಷೆ ಹಾಗೂ ಸ್ಥಳ ಪರಿಶೀಲನೆ (ಗ್ರೌಂಡ್ ಟ್ರೂಥಿಂಗ್) ಮುಗಿಸಿದ ನಂತರ ಕಂದಾಯ ಇಲಾಖೆ ಈ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದ ಪ್ರಕಾರ, ಒಟ್ಟು 101 ತಾಲೂಕುಗಳ ಪೈಕಿ 89 ತಾಲೂಕುಗಳು ‘ತೀವ್ರ ಬರ’ಕ್ಕೆ (Severe) ತುತ್ತಾಗಿದ್ದರೆ, ಉಳಿದ 12 ತಾಲೂಕುಗಳನ್ನು […]
ನಕಲಿ ಬಿಲ್ ತಡೆಗೆ, ಗ್ರಾಮೀಣ ಜಲ ಆಸ್ತಿ ನಿರ್ವಹಣೆಗೆ ಮೊಬೈಲ್, ವೆಬ್ ಆಪ್ ಲೋಕಾರ್ಪಣೆಗೊಳಿಸಿದ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಆಧಾರಿತ ಮೊಬೈಲ್ ಮತ್ತು ವೆಬ್ ಅಪ್ಲಿಕೇಷನ್ ಅನುಷ್ಠಾನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಗ್ರಾಮೀಣ ನೀರು ಸರಬರಾಜು ಮತ್ತು ಮೂಲಸೌಕರ್ಯದ ಸುಸ್ಥಿರ ಮತ್ತು ವೈಜ್ಞಾನಿಕ ನಿರ್ವಹಣೆಗಾಗಿ ಸಿದ್ಧಪಡಿಸಲಾಗಿರುವ ಮೊಬೈಲ್ ಮತ್ತು ವೆಬ್ ಅಪ್ಲಿಕೆಷನ್ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಎಲ್ಲ ಗ್ರಾಮೀಣ ಆಸ್ತಿಗಳನ್ನೂ ಜಿಯೋ […]
ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಜೊತೆ ಸಿಎಂ ಡಿಕೆಶಿ ವೀಡಿಯೋಕಾಲ್ ಸಂಭಾಷಣೆ: ರಕ್ಷಣೆಯ ಅಭಯ

ದೆಹಲಿ : “ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ ಹೊರ ಬರುವ ಪ್ರಯತ್ನ ಮಾಡುವುದು ಬೇಡ. ನಿಮ್ಮ ಜೊತೆ ನಮ್ಮ ಸರ್ಕಾರವಿದೆ. ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ’ ಎಂದು ಸಿಎಂ ಡಿ ಕೆ ಶಿವಕುಮಾರ್ ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರಿಗೆ ಧೈರ್ಯ ತುಂಬಿದರು. ನವದೆಹಲಿಯ ಪ್ರವಾಸದಲ್ಲಿರುವ ಸಿಎಂ ಅವರು, ಗುರುವಾರ ಅಲ್ಲಿಂದಲೇ ವೀಡಿಯೋ ಕರೆ ಮಾಡಿ ಮಾತನಾಡಿ, ಸಂಕಷ್ಟದಲ್ಲಿರುವ ಕನ್ನಡಿಗರ ಆತ್ಮಸ್ಥೈರ್ಯ ಹೆಚ್ಚಿಸಿದರು. “ಕರ್ನಾಟಕದಿಂದ ನೇಪಾಳ ಪ್ರವಾಸಕ್ಕೆ ಹೊರಟವರ ಸಂಪರ್ಕ ಕಡಿತವಾಗಿದೆ. ಹುಡುಕಾಟದ ಪ್ರಕ್ರಿಯೆ ನಡೆಯುತ್ತಿದೆ. ಆದರೆ, […]
ಪರೀಕ್ಷೆಯಿಲ್ಲದೆ ಪೋಸ್ಟ್ ಆಫೀಸ್ ಕೆಲಸ: 10ನೇ ತರಗತಿ ಪಾಸ್ ಆಗಿದ್ರೆ ಸಾಕು!

ನವದೆಹಲಿ: ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಗ್ರಾಮೀಣ ಡಾಕ್ ಸೇವಕ್ (GDS) ಜುಲೈ 2026ರ ಎರಡನೇ ಹಂತದ ನೇಮಕಾತಿಗೆ ಅಧಿಕೃತ ಚಾಲನೆ ನೀಡಲಾಗಿದೆ. ಬ್ರಾಂಚ್ ಪೋಸ್ಟ್‌ಮಾಸ್ಟರ್ (BPM), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್‌ಮಾಸ್ಟರ್ (ABPM) ಹಾಗೂ ಡಾಕ್ ಸೇವಕ್ ವಿಭಾಗಗಳಲ್ಲಿ 25,000ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಅಂಕವೇ ಆಯ್ಕೆಗೆ ಮಾನದಂಡ ಈ ನೇಮಕಾತಿಗೆ ಯಾವುದೇ ಪ್ರವೇಶ ಪರೀಕ್ಷೆ ಅಥವಾ ಮುಖಾಮುಖಿ ಸಂದರ್ಶನ ಇರುವುದಿಲ್ಲ. ಬದಲಾಗಿ ಅಭ್ಯರ್ಥಿಗಳು 10ನೇ ತರಗತಿಯಲ್ಲಿ […]
ಮುಂದಿನ ಸಂಪುಟ ಸಭೆಯಲ್ಲಿ ಬರ ಘೋಷಣೆ: ಡಿಸಿಎಂ ಡಾ.ಪರಮೇಶ್ವರ್

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಅವರು ಇಂದು ಸದಾಶಿವನಗರದ ಗೃಹಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಬರ ಘೋಷಿಸುತ್ತೇವೆ. ಪ್ರತಿ ವಾರವೂ ಬರ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು. ಬರ ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿಯವರು […]
ನೇಪಾಳದ ಭೋಟೆಕೋಶಿ ನದಿಯಲ್ಲಿ ದಿಢೀರ್ ಜಲಪ್ರಳಯ: 400 ಮಂದಿ ನಾಪತ್ತೆ, 8 ಜನರು ಸಾವು

ಕಠ್ಮಂಡು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದ ರಸುವಾ ಜಿಲ್ಲೆಯಲ್ಲಿ ಭೋಟೆಕೋಶಿ ನದಿಯ ಉಗ್ರರೂಪಕ್ಕೆ ಕನಿಷ್ಠ ಎಂಟು ಮಂದಿ ಬಲಿಯಾಗಿದ್ದು, 105 ಭಾರತೀಯರು ಸೇರಿದಂತೆ 384ಕ್ಕೂ ಹೆಚ್ಚು ಪ್ರವಾಸಿಗರು ಪ್ರವಾಹದಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದಾರೆ. ನೇಪಾಳ ಪ್ರವಾಸೋದ್ಯಮ ಮಂಡಳಿ (ಎನ್‌ಟಿಬಿ) ಮಾಹಿತಿ ಪ್ರಕಾರ, ನಾಪತ್ತೆಯಾದವರ ಪಟ್ಟಿಯಲ್ಲಿ ಒಟ್ಟು 291 ವಿದೇಶಿ ಪ್ರಜೆಗಳು ಹಾಗೂ 93 ಸ್ಥಳೀಯ ನೇಪಾಳಿಗಳಿದ್ದಾರೆ. ಭಾರತೀಯರಲ್ಲದೆ ಅಮೆರಿಕ, ಬ್ರಿಟನ್, ಆಸ್ಟ್ರೇಲಿಯಾ, ನೆದರ್‌ಲ್ಯಾಂಡ್ಸ್ ಮತ್ತು ಮಲೇಷ್ಯಾದಿಂದ ಆಗಮಿಸಿದ್ದ ಪ್ರವಾಸಿಗರೂ ನಾಪತ್ತೆಯಾಗಿದ್ದು, ಇವರ ಪತ್ತೆಗಾಗಿ ಪ್ರವಾಸಿ ಪೊಲೀಸ್ ಹಾಗೂ […]
ಬಾಯಲ್ಲೇ ಚಿನ್ನ ಅಡಗಿಸಿಟ್ಟುಕೊಂಡು ಬೆಂಗಳೂರಿಗೆ ಬಂದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ತರಲು ಹೊಸ ದಾರಿ ಹುಡುಕಿದ್ದ ಖದೀಮನೊಬ್ಬ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯ ಹದ್ದಿನ ಕಣ್ಣಿಗೆ ಬಿದ್ದಿದ್ದಾನೆ. ದುಬೈನಿಂದ ಬಾಯಿಯೊಳಗೆ ಚಿನ್ನದ ಕ್ಯಾಪ್ಸುಲ್ ಬಚ್ಚಿಟ್ಟುಕೊಂಡು ಬಂದಿದ್ದ ಮೊಹಮ್ಮದ್ ಸಿರಾಜ್ ಎಂಬಾತನನ್ನು ಸಿಐಎಸ್‌ಎಫ್ (CISF) ಯೋಧರು ವಶಕ್ಕೆ ಪಡೆದಿದ್ದಾರೆ. ಮಾತನಾಡಲು ತಡವರಿಸಿದ್ದೇ ಮುಳುವಾಯ್ತು: ದುಬೈನಿಂದ ನಗರಕ್ಕೆ ಬಂದಿಳಿದಿದ್ದ ಈತ, ಬಳಿಕ ಗಾಜಿಯಾಬಾದ್‌ಗೆ ತೆರಳಲು ಡೊಮೆಸ್ಟಿಕ್ ಟರ್ಮಿನಲ್ ಕಡೆಗೆ ಹೆಜ್ಜೆ ಹಾಕುತ್ತಿದ್ದನು. ಭದ್ರತಾ ತಪಾಸಣಾ ಕೌಂಟರ್ ಬಳಿ ಬಂದಾಗ ಈತನ ಹಾವಭಾವ ಹಾಗೂ […]