Toxic Review: ದ್ವಿಪಾತ್ರದಲ್ಲಿ ಯಶ್ ಕಮಾಲ್: ಹೇಗಿದೆ ‘ಟಾಕ್ಸಿಕ್’ ಗೊತ್ತಾ? ಇಲ್ಲಿದೆ ಫಸ್ಟ್ ರಿವ್ಯೂವ್ ಓದಿ!

ರಾಕಿಂಗ್ ಸ್ಟಾರ್ ಯಶ್ ಹಾಗೂ ನಿರ್ದೇಶಕಿ ಗೀತು ಮೋಹನ್‌ದಾಸ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾ ಅದ್ದೂರಿಯಾಗಿ ಬಿಡುಗಡೆಯಾಗಿದೆ. ತೀವ್ರ ಹಿಂಸೆ, ರಕ್ತಪಾತ ಮತ್ತು ವಯಸ್ಕರಿಗಷ್ಟೇ ಸೀಮಿತವಾದ ಅಂಶಗಳನ್ನು ಒಳಗೊಂಡಿರುವ ಈ ಚಿತ್ರವು, ಆಕ್ಷನ್ ಪ್ರಿಯರಿಗೆ ಭರ್ಜರಿ ಮನರಂಜನೆ ನೀಡುವಲ್ಲಿ ಯಶಸ್ವಿಯಾಗಿದೆ. ಕಥಾಹಂದರ 1947ರ ಕಾಲಘಟ್ಟದ ಹಿನ್ನೆಲೆಯಲ್ಲಿ ಸಾಗುವ ಕಥೆ ಇದು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೂ, ಪೋರ್ಚುಗೀಸರ ಹಿಡಿತದಲ್ಲಿದ್ದ ಗೋವಾದಲ್ಲಿ ಅಫೀಮು ಹಾಗೂ ಅಕ್ರಮ ಮದ್ಯದ ದಂಧೆಯ ಮೇಲೆ ಹಿಡಿತ […]

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. ಭಾರತದ ಸಂವಿಧಾನದ 317 (2) ನೇ ವಿಧಿಯ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಗೌರವಾನ್ವಿತ ರಾಷ್ಟ್ರಪತಿಗಳು ಮುಂದಿನ ಆದೇಶ ನೀಡುವವರೆಗೆ ಈ ಅಮಾನತು ಜಾರಿಯಲ್ಲಿರಲಿದೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಸಂಪುಟದ ಸಲಹೆಯಂತೆ ಕ್ರಮ ಕರ್ನಾಟಕ ಉಚ್ಚ ನ್ಯಾಯಾಲಯವು […]

ಸೆ.1ರಿಂದ ರಾಯಚೂರಿನಿಂದ ಬಿಜೆಪಿ-ಜೆಡಿಎಸ್ ಬೃಹತ್ ಪಾದಯಾತ್ರೆ ಆರಂಭ, ಬಳ್ಳಾರಿಯಲ್ಲಿ ಸಮಾರೋಪ

ಬೆಂಗಳೂರು: ರಾಜ್ಯ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸಲು ಬಿಜೆಪಿ ವತಿಯಿಂದ ಸೆಪ್ಟೆಂಬರ್ 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಯ ನಿರ್ಲಕ್ಷ್ಯ, ರೈತರ ಸಂಕಷ್ಟ, ಬಡವರಿಗೆ ಯೋಜನೆ ನೀಡದೇ ಇರುವುದು, ಉದ್ಯೋಗಾವಕಾಶ ಸೃಷ್ಟಿಯಲ್ಲಿ ವೈಫಲ್ಯ, ಮೀಸಲಾತಿ ಜಾರಿ, ಉತ್ತರ ಕರ್ನಾಟಕದ ಸಮಸ್ಯೆ, ಹೊಸ ನೇಮಕಾತಿ ಬಗ್ಗೆ ಸಿಎಂ ಆಸಕ್ತಿ ವಹಿಸುತ್ತಿಲ್ಲ. […]

ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ರಾಕಿಂಗ್ ಸ್ಟಾರ್ ಯಶ್ ಭೇಟಿ: ‘ಟಾಕ್ಸಿಕ್’ ರಿಲೀಸ್ ಮುನ್ನ ವಿಶೇಷ ಪೂಜೆ ಸಲ್ಲಿಕೆ!

ಧರ್ಮಸ್ಥಳ: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ (Toxic) ಬಿಡುಗಡೆಗೂ ಮುನ್ನ ಸ್ಯಾಂಡಲ್‌ವುಡ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಮಂಜುನಾಥ ಸ್ವಾಮಿಗೆ ವಿಶೇಷ ಪ್ರಾರ್ಥನೆ ಗೀತೂ ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣ ಮತ್ತು ಬಿಡುಗಡೆಯ ಸಿದ್ಧತೆಗಳ ನಡುವೆ ಕ್ಷೇತ್ರಕ್ಕೆ ಆಗಮಿಸಿದ ಯಶ್, ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದರು. ಬಳಿಕ ಧರ್ಮಾಧಿಕಾರಿ […]

ಯುಜಿ ಸಿಇಟಿ: ಅಂತಿಮ ಫಲಿತಾಂಶ ಪ್ರಕಟ, ಕಾಲೇಜು ಪ್ರವೇಶಕ್ಕೆ ಆ.28 ಕೊನೆ ದಿನ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿ ಸಿಇಟಿ ಕೋರ್ಸ್ ಗಳ ಪ್ರವೇಶ ಕುರಿತ ಸೀಟು ಹಂಚಿಕೆಯ ಎರಡನೇ ಸುತ್ತಿನ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ. ಸಿಇಟಿ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆಗೆ ಆ.25ರಿಂದ 28ರವರೆಗೆ ಸಮಯ ನಿಗದಿ ಮಾಡಿದ್ದು ಈ ಅವಧಿಯಲ್ಲಿ ಶುಲ್ಕ ಪಾವತಿಸಿ ಕಾಲೇಜಿನಲ್ಲಿ ಸೇರಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ. ಎಸ್ ಸಿ. (ನರ್ಸಿಂಗ್), […]

ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ASDD ವರ್ಗದಲ್ಲಿ; ಅ.27ರಂದು ಅಂತಿಮ ಪಟ್ಟಿ

ಬೆಂಗಳೂರು: ರಾಜ್ಯದಲ್ಲಿ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಚುನಾವಣಾ ಆಯೋಗ ಸೋಮವಾರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ಪಟ್ಟಿಯಲ್ಲಿ ಒಟ್ಟು 4,46,80,151 ಮತದಾರರು ದಾಖಲಾಗಿದ್ದು, 1,07,96,339 ಮಂದಿಯನ್ನು ಗೈರುಹಾಜರಿ, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತಪಟ್ಟವರು, ನಕಲಿ/ಪುನರಾವರ್ತಿತ ನೋಂದಣಿ ಸೇರಿದಂತೆ ASDD ವರ್ಗಕ್ಕೆ ಸೇರಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕ್‌ಕುಮಾರ್ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಕರಡು ಪಟ್ಟಿಯ ವಿವರಗಳನ್ನು ಪ್ರಕಟಿಸಿದರು. ಕರಡು ಪಟ್ಟಿಯಲ್ಲಿರುವ ಸಾಮಾನ್ಯ ಮತದಾರರ ಸಂಖ್ಯೆ 4,46,35,975 ಆಗಿದ್ದು, […]

ಸ್ವಚ್ಛಗೊಳಿಸಬೇಕಾದ ಖಾಲಿ ನಿವೇಶನಗಳಿಗೆ ನೋಟೀಸ್ ಅಂಟಿಸಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ನಗರದ ಐದೂ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಚ್ಛಗೊಳಿಸಬೇಕಾದ ಖಾಲಿ ನಿವೇಶನಗಳನ್ನು ಗುರುತಿಸಿ, ಅವುಗಳಿಗೆ ನೋಟೀಸ್ ಅಂಟಿಸಿ, ತ್ವರಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಕುರಿತು ಸೋಮವಾರ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾಲಿ ನಿವೇಶನಗಳ ಮಾಲೀಕರು ಸ್ವತಃ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಆಗಸ್ಟ್ 22ರವರೆಗೆ ಗಡುವು ನೀಡಲಾಗಿತ್ತು. ಆದರೆ, ಈ ಪೈಕಿ […]

1,252 ಕೋಟಿ ರೂ. ಖರ್ಚು ಮಾಡಿ, 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ ಮಾಡಿದ್ದೇವೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು 321.44 ಕೋಟಿ ರೂ. ವೆಚ್ಚದಲ್ಲಿ ದುರಸ್ತಿಪಡಿಸಲಾಗಿದೆ. ಅಲ್ಲದೆ, 1,252 ಕೋಟಿ ರೂ. ಖರ್ಚು ಮಾಡಿ, 8,355 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ರಾಜ್ಯದ ಯಾವುದೇ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ ಎಂದಾದರೆ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇಲಾಖೆಯ ಬಿಇಒ, ಡಿಡಿಪಿಐ ಮತ್ತಿತರ ಅಧಿಕಾರಿಗಳಿಗೆ ಈಗಾಗಲೇ ಸೂಚನೆ […]

ಕರ್ನಾಟಕದ ಅಪಾರ್ಟ್ಮೆಂಟ್ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು; ಬಲಿಷ್ಠ ಆಡಳಿತಕ್ಕೆ ಹೊಸ ಆರಂಭ- BAF

ಬೆಂಗಳೂರು : ಕರ್ನಾಟಕದ ಅಪಾರ್ಟ್ಮೆಂಟ್ ಸಮುದಾಯಗಳ ಆಡಳಿತ ಮತ್ತು ಮಾಲೀಕರ ಹಕ್ಕುಗಳ ರಕ್ಷಣೆಗೆ ಸಮಗ್ರ ಕಾನೂನು ಚೌಕಟ್ಟನ್ನು ಒದಗಿಸುವ ಕರ್ನಾಟಕ ಅಪಾರ್ಟ್ಮೆಂಟ್ ಓನರ್ಶಿಪ್ ಅಂಡ್ ಮ್ಯಾನೇಜ್ಮೆಂಟ್ ಆಕ್ಟ್ (KAOMA) 2026 ಜಾರಿಗೆ ಬಂದಿರುವುದನ್ನು ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೇಷನ್ (BAF) ಸ್ವಾಗತಿಸಿದೆ. ಐದು ದಶಕಗಳಿಗೂ ಹೆಚ್ಚು ಕಾಲದ ನಂತರ, ಅಪಾರ್ಟ್ಮೆಂಟ್ ಮಾಲೀಕತ್ವಕ್ಕೆ ಮಾತ್ರ ಸೀಮಿತವಾಗಿದ್ದ ಹಿಂದಿನ ಕಾನೂನು ಚೌಕಟ್ಟಿನಿಂದ ಹೊರಬಂದು, ಅಸೋಸಿಯೇಷನ್ ಆಡಳಿತ, ಪ್ರೊಮೋಟರ್ಗಳ ಹೊಣೆಗಾರಿಕೆ, ಕಾಮನ್ ಏರಿಯಾಗಳ ರಕ್ಷಣೆ, ಕಟ್ಟಡ ಸುರಕ್ಷತೆ, ನಿರ್ವಹಣೆ, ಪುನರ್ಅಭಿವೃದ್ಧಿ ಹಾಗೂ ವಿವಾದ […]

ಮಿಸ್ ಯೂನಿವರ್ಸ್ ಇಂಡಿಯಾ 2026 ಕಿರೀಟ ಮುಡಿಗೇರಿಸಿಕೊಂಡ ಕೇರಳದ ಕಾಜಿಯಾ ಲಿಜ್ ಮೆಜೊ

ಜೈಪುರ: ಕೇವಲ 19ನೇ ವಯಸ್ಸಿಗೆ ಕೇರಳದ ಕಾನೂನು ವಿದ್ಯಾರ್ಥಿನಿ ಹಾಗೂ ರೂಪದರ್ಶಿ ಕಾಜಿಯಾ ಲಿಜ್ ಮೆಜೊ ಅವರು ಪ್ರತಿಷ್ಠಿತ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಭಾನುವಾರ (ಆಗಸ್ಟ್ 23) ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ 52 ಅಂತಿಮ ಸ್ಪರ್ಧಿಗಳನ್ನು ಹಿಂದಿಕ್ಕಿ ಇವರು ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಜೈಪುರದಲ್ಲಿ ನಡೆದ ಫಿನಾಲೆ ಕದನ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ 52 ಸ್ಪರ್ಧಿಗಳ ಕಠಿಣ ಪೈಪೋಟಿಯ ನಡುವೆ ಕಾಜಿಯಾ ವಿಜೇತೆಯಾಗಿ ಹೊರಹೊಮ್ಮಿದರು. ತಮಿಳುನಾಡಿನ ವೈಷ್ಣವಿ ಗಣೇಶ್ […]