ಹಾವೇರಿ ಪ್ರತ್ಯೇಕ ಡಿಸಿಸಿ ಬ್ಯಾಂಕ್‌ ಶೀಘ್ರವೇ ಸಾಕಾರ: ಸಂಸದ ಬಸವರಾಜ ಬೊಮ್ಮಾಯಿ

​ಹಾವೇರಿ: ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್‌ ಸ್ಥಾಪನೆಯಾಗುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಅನುಮೋದನೆ ದೊರೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಕೋಟಿಹಾಳ ಗ್ರಾಮದಲ್ಲಿ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ವತಿಯಿಂದ ನಬಾರ್ಡ್ AIF ಸಾಲದ ಯೋಜನೆ ಹಾಗೂ ಸಂಘದ ಸ್ವಂತ ಭಂಡವಾಳದಲ್ಲಿಕೋಟಿಹಾಳ, ನಿಟಪಳ್ಳಿ ಹಾಗೂ ನಂದೀಹಳ್ಳಿ ಗ್ರಾಮಗಳ ಸಂಯುಕ್ತ ಆಶ್ರಯದಲ್ಲಿ ನಿರ್ಮಾಣ ಗೊಂಡಿರುವ ವಿವಿಧ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ […]

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣವೇ ಪರಿಹಾರ: ಕೊಪ್ಪಳದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ ಅಭಿಮತ

ಕೊಪ್ಪಳ: ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಇನ್ನು ಎರಡೇ ವರ್ಷಗಳಲ್ಲಿ ವೈದ್ಯರಾಗಿ ಹೊರಹೊಮ್ಮಲಿದ್ದಾರೆ. ಅವರ ಮೂಲಕ ಕೊಪ್ಪಳ ಹಾಗೂ ಇಡೀ ಉತ್ತರ ಕರ್ನಾಟಕದ ಜನತೆಗೆ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವ ಬೃಹತ್ ಯೋಜನೆ ರೂಪಿಸಲಾಗಿದೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ. ಗ್ರಾಮೀಣ ಸಬಲೀಕರಣಕ್ಕೆ ತ್ರಿವಿಧ ದಾಸೋಹ ಸಂಕಲ್ಪ ಕೊಪ್ಪಳದಲ್ಲಿ ಭಾನುವಾರ (ಆಗಸ್ಟ್ 23) ನಡೆದ ‘ದಿವ್ಯ ಸಂಜೆ’ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ಗಂಗಾವತಿ ಪ್ರಾಣೇಶ್ […]

ಕೆಇಎಯಿಂದ ವೈದ್ಯಕೀಯ, ಎಂಜಿನಿಯರಿಂಗ್ ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್ ಗಳ ಎರಡನೇ ಸುತ್ತು ಹಾಗೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ರಾತ್ರಿ ಪ್ರಕಟಿಸಿದೆ. ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಆಧಾರ ಸಮೇತ ಆ.24ರಂದು ಸಂಜೆ 4ಗಂಟೆಯೊಳಗೆ ಇ-ಮೇಲ್ ಮೂಲಕ (keauthority_ka@nic.in) ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಇದು ತಾತ್ಕಾಲಿಕ ಫಲಿತಾಂಶವಾಗಿರುವ ಕಾರಣ ಸೀಟು ಹಂಚಿಕೆಯಾಗಿರುವ ಕಾಲೇಜಿನಲ್ಲಿ ಪ್ರವೇಶ […]

ಬೆಂಗಳೂರಲ್ಲಿ ರಜಾ ದಿನವೂ ಪಾದಚಾರಿ ಮಾರ್ಗದಲ್ಲಿದ್ದ ವಿದ್ಯುತ್ ಪರಿವರ್ತಕ ತೆರವು, ಕ್ಲೀನ್ ಆಪ್ ಬೆಂಗಳೂರು ಅಭಿಯಾನ

ಬೆಂಗಳೂರು: ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿಯೊಂದಿಗೆ ಕ್ಲೀನ್ ಅಪ್ ಬೆಂಗಳೂರು ಅಭಿಯಾನಕ್ಕೆ ಕೈಜೋಡಿಸಿರುವ ಬೆಸ್ಕಾಂ, ಭಾನುವಾರ ಇಡೀ ದಿನ ನಗರದ ವಿವಿಧೆಡೆ ಪಾದಚಾರಿ ಮಾರ್ಗಗಳಲ್ಲಿ ಸ್ಥಗಿತಗೊಂಡ ಅಥವಾ ಬಳಕೆಯಲ್ಲಿಲ್ಲದ ವಿದ್ಯುತ್ ಪರಿವರ್ತಕ ಕೇಂದ್ರಗಳು ಸೇರಿದಂತೆ ಇತರೆ ಅನುಪಯುಕ್ತ ಪರಿಕರಗಳನ್ನು ತೆರವುಗೊಳಿಸುವುದರ ಜತೆಗೆ ಸ್ವಚ್ಛತೆಯ ಕಾರ್ಯವನ್ನೂ ನಡೆಸಿದೆ. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್‌. ಶಿವಶಂಕರ ಅವರ ಮುಂದಾಳತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಶನಿವಾರ ತಡರಾತ್ರಿಯೇ ಬೆಸ್ಕಾಂ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು. ಭಾನುವಾರ ಬೆಳಗ್ಗೆ 6 ಗಂಟೆಯಿಂದ […]

ನಾಳೆ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ: ವಿಪಕ್ಷ ನಾಯಕ ಆರ್.ಅಶೋಕ್‌

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಲಪಟಾಯಿಸಿದ ಆರೋಪಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ಭಾರತೀಯ ಜನತಾ ಪಕ್ಷದ ವತಿಯಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 9.30 ಕ್ಕೆ ಸ್ವಾತಂತ್ರ್ಯ ಉದ್ಯಾನದಿಂದ ಪ್ರತಿಭಟನೆ ಆರಂಭಿಸಿ ವಿಧಾನಸೌಧಕ್ಕೆ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವು […]

ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯೇ ಇಲ್ಲ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದರು. ಅವರು ಇಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಒತ್ತಾಯಿಸಿ ಪ್ರತಿಪಕ್ಷಗಳು ನಾಳೆ ವಿಧಾನಸೌಧದಲ್ಲಿ ಧರಣಿ ನಡೆಸಲು ಸಿದ್ಧತೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಇಲ್ಲಿ ನೆಲದ ಕಾನೂನಿದೆ. ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸಲು ಅವಕಾಶವಿದೆ. ಇಂದು ಅವರು ಗೂಂಡಾಗಿರಿ ಮಾಡುತ್ತಿದ್ದಾರೆ. ಒಂದು ನೋಟೀಸ್ ಕೂಡ […]

ಸೊರಬದಲ್ಲಿ 67ಕ್ಕೂ ಹೆಚ್ಚು ಗ್ರಾಮಗಳ ಸಮಸ್ಯೆ ಆಲಿಸಿದ ಸಚಿವ ಮಧು ಬಂಗಾರಪ್ಪ

ಸೊರಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ, ಸೊರಬ ವಿಧಾನಸಭಾ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರು ಆನವಟ್ಟಿಯಲ್ಲಿ 13 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 67ಕ್ಕೂ ಹೆಚ್ಚು ಗ್ರಾಮಗಳ ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ, ಗ್ರಾಮಗಳ ವಿವಿಧ ಸಮಸ್ಯೆಗಳನ್ನು ಆಲಿಸಿದರು. ಆನವಟ್ಟಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಕಾರ್ಯಕರ್ತರು, ಯುವ ಘಟಕದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಘಟಕದ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು ಹಾಗೂ […]

ಸಹಪಾಠಿಯ ಬ್ಲಾಕ್‌ಮೇಲ್ ಕಿರುಕುಳಕ್ಕೆ ಬೇಸತ್ತು ಕೆರೆಗೆ ಹಾರಿ ಯುವತಿ ಆತ್ಮಹ*ತ್ಯೆ: ಡೆತ್‌ನೋಟ್‌ನಲ್ಲಿ ಕರಾಳ ಸತ್ಯ ಬಹಿರಂಗ

ಬೆಂಗಳೂರು: ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಕಾಲೇಜು ಸಹಪಾಠಿ ನೀಡುತ್ತಿದ್ದ ನಿರಂತರ ಮಾನಸಿಕ ಹಿಂಸೆ ತಾಳಲಾರದೆ 22 ವರ್ಷದ ಯುವತಿಯೊಬ್ಬಳು ಕೆರೆಗೆ ಧುಮುಕಿ ಪ್ರಾಣ ಬಿಟ್ಟಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವತಿ ಮೃತ ದುರ್ದೈವಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಲಮಕ್ಕಿ ಮೂಲದ ವಾಣಿ (22) ಎಂದು ಗುರುತಿಸಲಾಗಿದೆ. ಉತ್ತಮ ಭವಿಷ್ಯದ ಕನಸಿನೊಂದಿಗೆ ಸುಮಾರು ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದ ಈಕೆ, ನಗರದ ಪ್ರಸಿದ್ಧ ಚಿನ್ನದ ಆಭರಣ ಮಳಿಗೆಯೊಂದರಲ್ಲಿ […]

ಹೈದರಾಬಾದ್‌ನಲ್ಲಿ ಯಶ್ ‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್ ವೇಳೆ ಅವಘಡ: ಫ್ಲಡ್‌ಲೈಟ್ ಕಂಬ ಬಿದ್ದು ವಿದ್ಯಾರ್ಥಿಗಳಿಗೆ ಗಾಯ

ಹೈದರಾಬಾದ್: ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಪ್ರೀ-ರಿಲೀಸ್ ಸಮಾರಂಭದಲ್ಲಿ ಆಕಸ್ಮಿಕ ದುರ್ಘಟನೆಯೊಂದು ಸಂಭವಿಸಿದ್ದು, ಹಲವು ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಗಾಯಗೊಂಡಿದ್ದಾರೆ. ನಗರದ ಮಲ್ಲಾರೆಡ್ಡಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಈ ಬೃಹತ್ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ವೇದಿಕೆ ಬಳಿ ಧರೆಗುರುಳಿದ ಕಂಬ ಆಗಸ್ಟ್ 26ರಂದು ಚಿತ್ರ ಜಗತ್ತಿನಾದ್ಯಂತ ತೆರೆಕಾಣಲಿರುವ ಹಿನ್ನೆಲೆಯಲ್ಲಿ ಈ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಯಶ್ ಅವರು ವೇದಿಕೆ ಮೇಲೆ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ, ಸಮೀಪದಲ್ಲೇ ಅಳವಡಿಸಲಾಗಿದ್ದ ದೈತ್ಯ ಸೌಂಡ್‌ಬಾಕ್ಸ್ […]

ಸರ್ಕಾರಿ ಶಾಲಾ-ಕಾಲೇಜುಗಳ ಎಲ್ಲ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿವೇತನ: ಸಚಿವ ಬಸವರಾಜ ರಾಯರಡ್ಡಿ

ಬೆಂಗಳೂರು : ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 12ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ‘ದೀಪಿಕಾ’ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು. ಶನಿವಾರ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ದೀಪಿಕಾ ಉನ್ನತ ಶಿಕ್ಷಣ […]