ಮುಂದಿನ ದಿನಗಳಲ್ಲಿ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್ ವಿತರಣೆ: ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ: ಬಜೆಟ್‌ನಲ್ಲಿ ಪ್ರಕಟಿಸಿದಂತೆಯೇ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್ ಬುಕ್‌ಗಳನ್ನು ಕೂಡ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದ ಸೈನ್ಸ್ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ʻಕಲಾಂ ಸೆಂಟರ್ʼಗೆ ಭೇಟಿ ನೀಡಿದ ಸಚಿವರು, ಕಾಲೇಜಿನ […]
ವಂಚನೆ ಆರೋಪದಡಿ ಸ್ಯಾಂಡಲ್ ವುಡ್ ನಿರ್ದೇಶಕ ಓಂ ಪ್ರಕಾಶ್ ರಾವ್ ದಂಪತಿ ವಿರುದ್ಧ ದೂರು ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಓಂ ಪ್ರಕಾಶ್ ರಾವ್ ಹಾಗೂ ಅವರ ಪತ್ನಿ ಡೆನ್ನಿಸಾ ಪ್ರಕಾಶ್ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ ಹಾಗೂ ಬೆದರಿಕೆಯ ಗಂಭೀರ ಆರೋಪ ಕೇಳಿಬಂದಿದೆ. ಚಿತ್ರ ನಿರ್ಮಾಣದ ನೆಪದಲ್ಲಿ ಬರೋಬ್ಬರಿ ₹3.85 ಕೋಟಿ ಸಾಲ ಪಡೆದು ಮರುಪಾವತಿಸದೆ ವಂಚಿಸಿದ್ದಾರೆ ಎಂದು ಆರೋಪಿಸಿ ನಟ ಭಾಸ್ಕರ್ ಶೆಟ್ಟಿ, ವಾಸುದೇವ ರೆಡ್ಡಿ ಹಾಗೂ ಇತರರು ಪೊಲೀಸ್ ಆಯುಕ್ತರ ಮೆಟ್ಟಿಲೇರಿದ್ದಾರೆ. ಏನಿದು ವಂಚನೆ ಪ್ರಕರಣ? ‘ಫೀನಿಕ್ಸ್’ ಎಂಬ ಶೀರ್ಷಿಕೆಯ ಚಲನಚಿತ್ರ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದ […]
ಕಾಂಗ್ರೆಸ್ ಭ್ರಷ್ಟಾಚಾರ ಮಾಡದೆ ಬದುಕುವುದೇ ಇಲ್ಲ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ವಾಗ್ಧಾಳಿ

ಬೆಂಗಳೂರು: ಸಿಕ್ಕ ಸಿಕ್ಕ ಕಡೆಯಲ್ಲಿ ಲೂಟಿ ಮಾಡುವ ಕಾಂಗ್ರೆಸ್ ಭ್ರಷ್ಟಾಚಾರ ಮಾಡದೆ ಬದುಕುವುದೇ ಇಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಾಗೂ ಅಧಿಕಾರಿಗಳು ಲೂಟಿ ಮಾಡುತ್ತಿದ್ದಾರೆ. ಅಧಿಕಾರಿಗಳು ಲೂಟಿ ಮಾಡಲು ಸರ್ಕಾರವೇ ಅವಕಾಶ ನೀಡುತ್ತಿದೆ ಎಂದರು. ರಾಜ್ಯದಲ್ಲಿ ಭ್ರಷ್ಟಾಚಾರ ಸಂಪೂರ್ಣವಾಗಿ ತಾಂಡವವಾಡುತ್ತಿದೆ. ವಾಲ್ಮೀಕಿ ನಿಗಮದಿಂದ ಆರಂಭವಾಗಿ ಬೆಂಗಳೂರು ರಸ್ತೆ ಗುಂಡಿಗಳನ್ನ ತುಂಬಲು ಲಕ್ಷಾಂತರ ಕೋಟಿವರೆಗೆ […]
ಮಕ್ಕಳ ಕನಸು ನನಸಾಗಲು ದೇವಸ್ಥಾನಕ್ಕಿಂತ ಶಾಲೆ ದೊಡ್ಡದಾಗಿರಬೇಕು : ಸಚಿವ ಎಸ್.ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಂದೇ ಪ್ರಾಂಗಣದಲ್ಲಿ ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಎರಡರಲ್ಲೂ ಗುಣಾತ್ಮಕ ಶಿಕ್ಷಣ ನೀಡುವ, ಸ್ಮಾರ್ಟ್ ತರಗತಿ ಹಾಗೂ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ 1000 ಸುಸಜ್ಜಿತ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ (Karnataka Public School) ಮಾದರಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಹಂತಹಂತವಾಗಿ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ […]
ಬೆಳ್ತಂಗಡಿಯಲ್ಲಿ ಜಮೀನು ಕೊಡಿಸುವುದಾಗಿ ₹1 ಕೋಟಿಗೂ ಅಧಿಕ ಹಣ ಪಡೆದು ವಂಚನೆ, ಎಫ್‌ಐಆರ್ ದಾಖಲು

ದಕ್ಷಿಣ ಕನ್ನಡ: ಜಮೀನು ನೋಂದಣಿ ಮಾಡಿಸಿಕೊಡುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ₹1 ಕೋಟಿಗೂ ಅಧಿಕ ಮೊತ್ತ ಪಡೆದು ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ‘ಸಸ್ಯೋದ್ಯಾನ’ ನಿವಾಸಿಗಳಾದ ಕೆ. ಸೋಮನಾಥ ನಾಯಕ್ ಹಾಗೂ ರಂಜನ್ ರಾವ್ ಎರ್ಡೂರು ವಿರುದ್ಧ ಬೆಳ್ತಂಗಡಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 318(4) ಮತ್ತು 3(5)ರ ಅಡಿಯಲ್ಲಿ ಪ್ರಕರಣ (ಕ್ರೈಂ ನಂ: 91/2026) ದಾಖಲಿಸಿಕೊಂಡಿದ್ದಾರೆ. ಮಂಗಳೂರಿನ ಕೊಟ್ಟಾರ ಚೌಕಿ ನಿವಾಸಿ ಶಶಿಧರ ಅಚ್ಯುತ ತೋಟಂತಿಲ (61) ಅವರು ನೀಡಿದ ದೂರಿನನ್ವಯ […]
ಖ್ಯಾತ ಬಹುಭಾಷಾ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಇನ್ನಿಲ್ಲ

ಚೆನ್ನೈ: ಕನ್ನಡ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ದಶಕಗಳ ಕಾಲ ತಮ್ಮ ವಿಶಿಷ್ಟ ಅಭಿನಯದ ಮೂಲಕ ಛಾಪು ಮೂಡಿಸಿದ್ದ ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ (95) ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಗಳು ಮತ್ತು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ದಕ್ಷಿಣ ಭಾರತದ ಚಿತ್ರರಂಗದಲ್ಲಿ ಶೋಕದ ಛಾಯೆ ಆವರಿಸಿದೆ. ಐಸಿಯುನಲ್ಲಿ ಮುಂದುವರಿದಿದ್ದ ತುರ್ತು ಚಿಕಿತ್ಸೆ ಉಸಿರಾಟದ ತೊಂದರೆ ಮತ್ತು ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಕೆಲ ದಿನಗಳ […]
ಒಂದೇ ಅಪಾರ್ಟ್ಮೆಂಟ್ಗೆ ಒಂದೇ ಅಸೋಸಿಯೇಷನ್: ಸಾಮಾನ್ಯ ಪ್ರದೇಶಗಳ ಮೇಲಿನ ಹಕ್ಕು

ಬೆಂಗಳೂರು : ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆಯನ್ನು ಕಾಪಾಡುವ ಹಾಗೂ ಅವರಿಗೆ ಶಾಸನಬದ್ಧ ಹಕ್ಕುಗಳನ್ನು ಒದಗಿಸುವ ಸಲುವಾಗಿ 2026ನೇ ಸಾಲಿನ ‘ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕʼವನ್ನು ಮಂಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಶುಕ್ರವಾರ ವಿಧಾನಸಭೆಯಲ್ಲಿ ‘2026ನೇ ಸಾಲಿನ ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕʼವನ್ನು ಮಂಡಿಸಿ ವಿವರಣೆ ನೀಡಿದ ಅವರು, “ರಾಜ್ಯದಲ್ಲಿ ದಿನೇ ದಿನೇ ಬೆಳೆಯುತ್ತಿರುವ ಅಪಾರ್ಟ್ಮೆಂಟ್ ಸಂಸ್ಕೃತಿ, ನಿವಾಸಿಗಳು ಎದುರಿಸುತ್ತಿರುವ ನಿರಂತರ ಆಡಳಿತಾತ್ಮಕ ಗೊಂದಲಗಳು ಹಾಗೂ ಡೆವಲಪರ್ಗಳ ಮಿತಿಮೀರಿದ ಧೋರಣೆಗೆ […]
ಸೆಪ್ಟೆಂಬರ್.7ರೊಳಗೆ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ ಜಾರ್ಜ್

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್ 7ರೊಳಗೆ ಸಿದ್ಧಪಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ತಿಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಕರಾವಳಿ ಮತ್ತು ಮಲೆನಾಡು ಭಾಗದ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಪ್ರಸ್ತಾವಿತ ನೀತಿಯಲ್ಲಿ ಅಳವಡಿಸಬೇಕಾದ ಪ್ರಮುಖ ಅಂಶಗಳು, ಪ್ರವಾಸೋದ್ಯಮ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ಪ್ರಸ್ತುತ ಎದುರಾಗುತ್ತಿರುವ ನಿಯಂತ್ರಣಾತ್ಮಕ ಸಮಸ್ಯೆಗಳ ಕುರಿತು […]
ರಾಜ್ಯದ 1,250 ಸರ್ಕಾರಿ ಶಾಲೆಗಳಲ್ಲಿ 1,582 ಶೌಚಾಲಯ ನಿರ್ಮಾಣ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: 2025-26ನೇ ಸಾಲಿನಲ್ಲಿ ರಾಜ್ಯ ವಲಯ ಯೋಜನೆಯಡಿ ರಾಜ್ಯದ 1,250 ಸರ್ಕಾರಿ ಶಾಲೆಗಳಲ್ಲಿ 1,582 ಶೌಚಾಲಯಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಹಿರೇಕೆರೂರು ಶಾಸಕರಾದ ಯು ಬಿ ಬಣಕಾರ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವರು, “2025-26ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 136 ಶೌಚಾಲಯಗಳು ಮಂಜೂರಾಗಿವೆ” ಎಂದು ಮಾಹಿತಿ ನೀಡಿದರು. ಅನುದಾನ ಹಂಚಿಕೆ ಬಗ್ಗೆ […]
ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಿಸಲು ಬಂಗಾರಪ್ಪ ಮಗನಾಗಿ ಸಹಾಯ: ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು: ರಾಜ್ಯದ ಬಿಸಿಯೂಟ ನೌಕರರ ಪರವಾಗಿ ಎಂದಿಗೂ ನಾನು ಜೊತೆ ಇರುತ್ತೇನೆ. ಮಾನ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಮಗನಾಗಿ ನಿಮಗೆಲ್ಲ ಸಹಾಯ ಮಾಡಲು ಸಿದ್ಧನಿದ್ದೇನೆ ಎಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಬಿಸಿಯೂಟ ನೌಕರರಿಗೆ ಭರವಸೆ ನೀಡಿದ್ದಾರೆ. ಸ್ವಾತಂತ್ರ್ಯ ಉದ್ಯಾನವನದಲ್ಲಿ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟಿಸುತ್ತಿರುವ ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್ ಸದಸ್ಯರನ್ನು ಇಂದು ವಿಧಾನಸೌಧದದಲ್ಲಿನ ತಮ್ಮ ಕಚೇರಿಗೆ […]