ಏಷ್ಯನ್ ಗೇಮ್ಸ್ ಬಾಕ್ಸಿಂಗ್: ಚೈನೀಸ್ ತೈಪೆ ಎದುರಾಳಿ ಮಣಿಸಿ ಭಾರತಕ್ಕೆ ಚಿನ್ನ ತಂದ ಪರ್ವೀನ್

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಸುವರ್ಣ ಓಟ ಮುಂದುವರಿದಿದೆ. ಮಹಿಳೆಯರ 65 ಕೆಜಿ ತೂಕದ ಬಾಕ್ಸಿಂಗ್ ವಿಭಾಗದ ರೋಚಕ ಫೈನಲ್ ಹಣಾಹಣಿಯಲ್ಲಿ ಭಾರತದ ತಾರಾ ಬಾಕ್ಸರ್ ಪರ್ವೀನ್ ಹೂಡಾ ಅಮೋಘ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನ ಕಂಚಿನ ಪದಕ ವಿಜೇತೆ, ಚೈನೀಸ್ ತೈಪೆಯ ಅನುಭವಿ ಆಟಗಾರ್ತಿ ಚೆನ್ ನಿಯೆನ್-ಚಿನ್ ವಿರುದ್ಧ ನಡೆದ ತುರುಸಿನ ಪಂದ್ಯದಲ್ಲಿ 3-2 ಅಂತರದ ರೋಚಕ ಜಯ ಸಾಧಿಸಿದ ಪರ್ವೀನ್, ಪ್ರಸಕ್ತ ಕ್ರೀಡಾಕೂಟದಲ್ಲಿ ಭಾರತದ ಖಾತೆಗೆ 13ನೇ ಬಂಗಾರದ […]
170 ಜನರ ಜೀವ ಉಳಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಮೋದಿ ಮೆಚ್ಚುಗೆ

ನವದೆಹಲಿ: ನಡುಆಕಾಶದಲ್ಲಿ ಸಂಭವಿಸಬಹುದಾಗಿದ್ದ ಭೀಕರ ವಿಮಾನ ದುರಂತ ಹಾಗೂ ಸಂಭಾವ್ಯ ಉಗ್ರ ಕೃತ್ಯವನ್ನು ಅತ್ಯಂತ ಸಾಹಸದಿಂದ ಹಿಮ್ಮೆಟ್ಟಿಸಿ ನೂರಾರು ಪ್ರಯಾಣಿಕರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೊ ಸಂವಾದ ನಡೆಸಿದ್ದಾರೆ. ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಕ್ಯಾಪ್ಟನ್ ಸ್ಮಿತ್ ಅವರ ಸಮಯಪ್ರಜ್ಞೆ ಮತ್ತು ಅದಮ್ಯ ಧೈರ್ಯವನ್ನು ಪ್ರಧಾನಿ ಕೊಂಡಾಡಿದ್ದು, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಇಡೀ ದೇಶಕ್ಕೆ ನಿಮ್ಮ ಬಗ್ಗೆ ಹೆಮ್ಮೆಯಿದೆ: ಪ್ರಧಾನಿ ಮೋದಿ ಸಂವಾದದ ವೇಳೆ ಮಾತನಾಡಿದ ಪ್ರಧಾನಿ […]
ಮತ್ತೆ 40 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ: ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ಉದ್ಭವಿಸಿರುವ ಬರ ಪರಿಸ್ಥಿತಿಯನ್ನು ಸರ್ಕಾರ ನಿರಂತರವಾಗಿ ಪರಿಶೀಲಿಸುತ್ತಿದ್ದು, ಇದೀಗ ಹೆಚ್ಚುವರಿಯಾಗಿ ಮತ್ತೆ 40 ತಾಲೂಕುಗಳನ್ನು ‘ಬರಪೀಡಿತ’ ಎಂದು ಘೋಷಿಸಿ ಅಧಿಕೃತ ಆದೇಶ ಹೊರಡಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಒಟ್ಟು ಸಂಖ್ಯೆ 217ಕ್ಕೆ ತಲುಪಿದೆ. ಈ ಮಹತ್ವದ ಬೆಳವಣಿಗೆಯ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಮಾಹಿತಿ ಹಂಚಿಕೊಂಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಹಂತ ಹಂತವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ […]
ಎಲ್ಪಿಜಿ ಗ್ರಾಹಕರಿಗೆ ಬಿಗ್ ಶಾಕ್: ಆಧಾರ್ ಇ-ಕೆವೈಸಿ ಮಾಡದಿದ್ದರೆ ಸಬ್ಸಿಡಿ ಕಟ್!

ನವದೆಹಲಿ: ಗೃಹಬಳಕೆಯ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಪಡೆಯುವ ನಿಯಮಗಳಲ್ಲಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಬದಲಾವಣೆ ತಂದಿದೆ. ಇಂದಿನಿಂದ (ಅಕ್ಟೋಬರ್ 1) ಅನ್ವಯವಾಗುವಂತೆ, ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ (ಇ-ಕೆವೈಸಿ) ಪೂರ್ಣಗೊಳಿಸದ ಬಳಕೆದಾರರಿಗೆ 14.2 ಕೆಜಿಯ ನಿಯಂತ್ರಿತ ಸಬ್ಸಿಡಿ ದರದ ಸಿಲಿಂಡರ್ ಸಿಗುವುದಿಲ್ಲ. ನಿಯಮ ಪಾಲಿಸದ ಗ್ರಾಹಕರು ಸಾಮಾನ್ಯ ಮಾರುಕಟ್ಟೆ ದರದಲ್ಲಿ ಸಿಗುವ ಸಣ್ಣ ಸಿಲಿಂಡರ್ಗಳನ್ನು ಮಾತ್ರ ಖರೀದಿಸಲು ಸಾಧ್ಯವಾಗಲಿದೆ. ಈಗಾಗಲೇ ಇ-ಕೆವೈಸಿ ಮಾಡಿಸಿದ ಗ್ರಾಹಕರಿಗೆ ನಿರಾಳ ಯಾವ ಗ್ರಾಹಕರು ಈಗಾಗಲೇ ತಮ್ಮ ಆಧಾರ್ ಪರಿಶೀಲನೆಯನ್ನು ಪೂರ್ಣಗೊಳಿಸಿದ್ದಾರೋ, […]
15 ದಿನದೊಳಗೆ ಸಮಿತಿ ರಚನೆಯಾಗದಿದ್ದರೆ, ಗ್ಯಾರಂಟಿ ಯೋಜನೆಗಳ ರಾಜ್ಯ ಅಧ್ಯಕ್ಷರಿಂದ ಸದಸ್ಯರ ನೇಮಕ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಹಾಗೂ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸುವ ಪ್ರಕ್ರಿಯೆಯನ್ನು 15 ದಿನಗಳೊಳಗೆ ಪೂರ್ಣಗೊಳಿಸಬೇಕು ಎಂದು ಸರ್ಕಾರ ಗಡುವು ನೀಡಿದೆ. ಈ ಸಂಬಂಧ ಪ್ರಜಾಸೇವಾ ಇಲಾಖೆ ಆದೇಶ ಹೊರಡಿಸಿದೆ ನಗರದಲ್ಲಿ ವಾರ್ಡ್ಗಳ ಮಟ್ಟದ ಸಮಿತಿಗಳನ್ನು ರಚಿಸುವ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಸಮಿತಿಗಳನ್ನು ರಚಿಸುವ ಜವಾಬ್ದಾರಿಯನ್ನು ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಹಿಸಲಾಗಿದೆ. ಸಮಿತಿಗಳಿಗೆ […]
ತಿರುಪತಿಯಲ್ಲಿ 364 ಕೊಠಡಿ, 12 ಡಾರ್ಮಿಟರಿಗಳ ನಿರ್ವಹಣೆ; ಕನಿಷ್ಠ 3-ಸ್ಟಾರ್ ಮಟ್ಟದ ಗುಣಮಟ್ಟಕ್ಕೆ ಆದ್ಯತೆ: ಸಚಿವ ಕೆ.ಜೆ ಜಾರ್ಜ್

ಬೆಂಗಳೂರು : ರಾಜ್ಯದಲ್ಲಿ ಯಾತ್ರಾ ಪ್ರವಾಸೋದ್ಯಮವನ್ನು ಹೆಚ್ಚು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಆಂಧ್ರಪ್ರದೇಶದ ತಿರುಮಲದಲ್ಲಿರುವ ಕರ್ನಾಟಕ ಪ್ರವಾಸಿ ಸೌಧದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ (KSTDC) ವಹಿಸುವ ಒಪ್ಪಂದಕ್ಕೆ ಮುಜರಾಯಿ ಇಲಾಖೆ ಮತ್ತು KSTDC ಸಹಿ ಹಾಕಿವೆ. ತಿರುಪತಿಗೆ ತೆರಳುವ ಕರ್ನಾಟಕದ ಯಾತ್ರಿಕರಿಗೆ ಸ್ವಚ್ಛ, ಸುರಕ್ಷಿತ, ಗುಣಮಟ್ಟದ ಮತ್ತು ಕೈಗೆಟುಕುವ ವಸತಿ ಒದಗಿಸುವುದರ ಜೊತೆಗೆ, ಸರ್ಕಾರಿ ಪ್ರವಾಸಿ ಆಸ್ತಿಗಳನ್ನು ವೃತ್ತಿಪರವಾಗಿ ನಿರ್ವಹಿಸಿ ಯಾತ್ರಾ ಪ್ರವಾಸೋದ್ಯಮಕ್ಕೆ ಸಮಗ್ರ ಮಾದರಿಯನ್ನು ರೂಪಿಸುವುದು […]
ಫಾರಂ 7 ಮೂಲಕ ಅರ್ಹ ಮತದಾರ ಹೆಸರು ಅಳಿಸಿ ಹಾಕಿದ ಪ್ರಕರಣ; ತನಿಖೆಗೆ ಆಗ್ರಹಿಸಿ ಸಿಎಂ ಡಿ.ಕೆ ಶಿವಕುಮಾರ್ ಧರಣಿ

ಬೆಂಗಳೂರು : ರಾಜ್ಯದಲ್ಲಿ ಫಾರಂ 7 ಮೂಲಕ ಅರ್ಹ ಮತದಾರರ ಹೆಸರು ಅಳಿಸಿ ಹಾಕುವ ಷಡ್ಯಂತ್ರ ಪ್ರಕರಣದಲ್ಲಿ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ತನಿಖೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಸಿಎಂ ಡಿ ಕೆ ಶಿವಕುಮಾರ್ ಅವರು ಮುಖ್ಯ ಚುನಾವಣಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಆರಂಭಿಸಿದರು. ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಶಿವಕುಮಾರ್ ಅವರು ಸಂಪುಟ ಸಹೋದ್ಯೋಗಿಗಳೊಂದಿಗೆ ಗುರುವಾರ ಭೇಟಿ ನೀಡಿ ಮನವಿ ನೀಡಿದರು. ನಂತರ ಕಚೇರಿ ಆವರಣದ ಮೆಟ್ಟಿಲುಗಳ ಮೇಲೆ ಧರಣಿ ನಡೆಸಿದರು. ಸಚಿವ […]
ಚುನಾವಣಾ ವೆಚ್ಚವನ್ನು ಸರ್ಕಾರವೇ ಭರಿಸುವ ವ್ಯವಸ್ಥೆ ಜಾರಿಗೆ ಬರಲಿ: ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ಆಗದಿದ್ದರೆ ಸಮಾಜದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯವಿಲ್ಲ. ಇಂದಿನ ಚುನಾವಣೆಯಲ್ಲಿ ಹಣ, ಜಾತಿ ಮತ್ತು ಮದ್ಯದ ಪ್ರಭಾವ ಹೆಚ್ಚಾಗಿದ್ದು, ಪ್ರಾಮಾಣಿಕರು, ಬಡವರು, ಬುದ್ಧಿವಂತರು ಹಾಗೂ ಸಮಾಜ ಸೇವೆಯ ಆಶಯ ಹೊಂದಿರುವವರು ರಾಜಕೀಯ ಪ್ರವೇಶಿಸುವುದೇ ಕಷ್ಟವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜೆ.ಎಚ್. ಪಟೇಲ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣಾ ಸುಧಾರಣೆ ಯಾವುದೇ ಒಂದು ಪಕ್ಷ ಅಥವಾ ವ್ಯಕ್ತಿಗೆ ಸಂಬಂಧಿಸಿದ […]
ಕ್ರಿಕೆಟ್ನ ರಾಷ್ಟ್ರೀಯ ವ್ಯಾಪ್ತಿಯನ್ನು ಕರ್ನಾಟಕ ಪ್ರವಾಸೋದ್ಯಮ ಪ್ರಚಾರಕ್ಕೆ ಬಳಸಿಕೊಳ್ಳಲು ಒತ್ತು: ಸಚಿವ ಕೆ.ಜೆ ಜಾರ್ಜ್

ಬೆಂಗಳೂರು : ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಮತ್ತು ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ (JLR), ಕರ್ನಾಟಕದ ಪುರುಷ, ಮಹಿಳಾ ಹಾಗೂ ವಿವಿಧ ವಯೋಮಾನದ ರಾಜ್ಯ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲಿವೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಸಹಯೋಗದಲ್ಲಿ ನಡೆದ ಪ್ರಾಯೋಜಕತ್ವ ಹಾಗೂ ಜೆರ್ಸಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಹಭಾಗಿತ್ವವನ್ನು ‘ಆಕ್ಟಿವ್ ಕರ್ನಾಟಕ’ ಪರಿಕಲ್ಪನೆಯಡಿ […]
ಉತ್ತರ ಕನ್ನಡದಲ್ಲಿ ಸಾರಿಗೆ ಬಸ್-ಲಾರಿ ಭೀಕರ ಅಪಘಾತ: 2 ವರ್ಷದ ಕಂದಮ್ಮ ದುರ್ಮರಣ, 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಉತ್ತರ ಕನ್ನಡ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರ್ಕಾರಿ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎರಡು ವರ್ಷದ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ತಾಲೂಕಿನ ಬೆಳಸೆ ಸಮೀಪ ಗುರುವಾರ ನಡೆದಿದೆ. ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಅಂಕೋಲಾ ಘಟಕಕ್ಕೆ ಸೇರಿದ ಸಾರಿಗೆ ಸಂಸ್ಥೆಯ ಬಸ್, ಬೆಳಸೆ ಹಂದಿಗದ್ದೆ ಕ್ರಾಸ್ ಬಳಿ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. […]