ರಾಜ್ಯದಲ್ಲೇ ಬಿಜೆಪಿ ಮತ ಕಳ್ಳತನಕ್ಕೆ ಸಾಕ್ಷಿ ಸಿಕ್ಕಿದೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು :  ಮತಕಳವು ಮಾಡಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಷಡ್ಯಂತ್ರ, ಅಕ್ರಮವಾಗಿ ನಮೂನೆ 7 ಸಲ್ಲಿಕೆಯಿಂದ ಬಯಲಾಗಿದೆ. ರಾಹುಲ್ ಗಾಂಧೀ ಅವರು ಮಾಡಿದ್ದ ಆರೋಪಕ್ಕೆ ಪುಷ್ಟಿ ಸಿಕ್ಕಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಸಚಿವ ಸಹೋದ್ಯೋಗಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಕೇಂದ್ರದ ಆಡಳಿತಾರೂಢ ಬಿಜೆಪಿ ಕೇಂದ್ರ ಚುನಾವಣೆ ಆಯೋಗವನ್ನು ದುರ್ಬಳಕೆ ಮಾಡಿಕೊಂಡು, ದೇಶದ ಲಕ್ಷಾಂತರ […]

ಬರಗಾಲದ ಹಿನ್ನಲೆಯಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡಿ: ಬಿವೈ ವಿಜಯೇಂದ್ರ ಆಗ್ರಹ

ಬಂಗಾರಪೇಟೆ: ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮತ್ತು ಸರಕಾರಕ್ಕೆ ರಿಯಲ್ ಎಸ್ಟೇಟ್ ಬಗ್ಗೆ ಇರುವ ಕಾಳಜಿ ರೈತರ ಬಗ್ಗೆ ಬರುತ್ತಿಲ್ಲ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಇತ್ತೀಚೆಗೆ ನಾವು ಬಳ್ಳಾರಿ ಚಲೋ 10 ದಿನಗಳ ಪಾದಯಾತ್ರೆ ಮಾಡಿದ್ದೇವೆ. ಈ ಕಾಂಗ್ರೆಸ್ ಸರ್ಕಾರವನ್ನು ಎಚ್ಚರಿಸುವಂತ ಕೆಲಸವನ್ನು ಕೂಡ ಮಾಡಿದ್ದೇವೆ. ನಮ್ಮ ಹೋರಾಟದ ಪರಿಣಾಮ ವಿಶೇಷ ಅಧಿವೇಶನವನ್ನು ಕೂಡ ಕರೆದಿದ್ದರು. ಇಂತಹ ಭೀಕರ ಬರಗಾಲದ ಸಂದರ್ಭದಲ್ಲಿ […]

ಏಕದಿನದಲ್ಲಿ 2ನೇ ದ್ವಿಶತಕ ಬಾರಿಸಿದ ಶುಭ್‌ಮನ್ ಗಿಲ್

ಗುವಾಹಟಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಬರ್ಸಾಪಾರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಅಕ್ಷರಶಃ ರನ್‌ ಮಳೆ ಸುರಿಸಿದ್ದಾರೆ. ಎದುರಾಳಿ ನೀಡಿದ 406 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟುವ ಕಠಿಣ ಸವಾಲನ್ನು ಲೀಲಾಜಾಲವಾಗಿ ಸ್ವೀಕರಿಸಿದ ಗಿಲ್, ಕೇವಲ 117 ಎಸೆತಗಳಲ್ಲಿ ಸ್ಫೋಟಕ ದ್ವಿಶತಕ ಸಿಡಿಸಿ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ದ್ವಿಶತಕ ದಾಖಲಿಸಿದ ವಿಶ್ವದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ನೀಡಿದ ಬೃಹತ್ ಗುರಿ ಹಿನ್ನೆಲೆಯಲ್ಲಿ ಇನಿಂಗ್ಸ್ ಆರಂಭಿಸಿದ […]

ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಡಿಎಲ್ ಕ್ಯಾನ್ಸಲ್: ಹೊಸ ರೂಲ್ಸ್ ಗೆ ಸರ್ಕಾರದ ಚಿಂತನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಿತಿಮೀರುತ್ತಿರುವ ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು ಹಾಗೂ ಸಾರ್ವಜನಿಕರ ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಅತ್ಯಂತ ಕಠಿಣ ಹೆಜ್ಜೆಗಳನ್ನು ಇಡಲು ಮುಂದಾಗಿದೆ. ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುವ ವಾಹನ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭಾಗವಾಗಿ ‘ಅಂಕ ಆಧಾರಿತ ಚಾಲನಾ ಪರವಾನಗಿ’ (ಪಾಯಿಂಟ್ ಬೇಸ್ಡ್ ಡಿಎಲ್) ವ್ಯವಸ್ಥೆ ಜಾರಿಗೊಳಿಸಲು ಗಂಭೀರ ಚಿಂತನೆ ನಡೆಸಿದೆ. ವಿಕಾಸಸೌಧದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಸಾರಿಗೆ ಸಚಿವ ಬೈರತಿ ಸುರೇಶ್ […]

ಬೆಂಗಳೂರಲ್ಲಿ ಮಳೆ ಅವಾತಂರಗಳಿಗಾಗಿ ಕಂಟ್ರೋಲ್ ರೂಂ 24 ಗಂಟೆಯೂ ಕಾರ್ಯ ನಿರ್ವಹಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ಮುಂದಿನ ಎರಡು ಮೂರು ದಿನ ನಗರದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಅನಾಹುತಗಳು ಜರುಗುವ ಮುನ್ನ ಮುನ್ನೆಚ್ಚರಿಕೆ ವಹಿಸಿ ಎಂದು ಎಲ್ಲಾ ಅಧಿಕಾರಿಗಳಿಗೂ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ಐದೂ ಪಾಲಿಕೆ ಆಯುಕ್ತರು ಮುಖ್ಯ ಆಯುಕ್ತರು ಹಾಗೂ ಸಂಬಂಧಿತ ಅಧಿಕಾರಿಗಳ ಜೊತೆ ಬುಧವಾರ ಸಂಜೆ ವರ್ಚುವಲ್ ಸಭೆ ನಡೆಸಿ ಮಾತನಾಡಿದ ಅವರು,”ಬೆಂಗಳೂರಿನ ಪಶ್ಚಿಮ, ಉತ್ತರ, ಪೂರ್ವ ಹಾಗೂ ಕೇಂದ್ರ ವಲಯದಲ್ಲಿ ಮುಂದಿನ ಎರಡು ಮೂರು ದಿನ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಕರ್ನಾಟಕ ರಾಜ್ಯ […]

ಜಿಯೋ ಹಬ್ಬದ ಕೊಡುಗೆ: 1,499 ರೂ.ಗೆ 4G ಕೀಪ್ಯಾಡ್ ಮೊಬೈಲ್, ಡೇಟಾ ಉಚಿತ

ಮುಂಬೈ : ಜಿಯೋ ತನ್ನ 10ನೇ ವಾರ್ಷಿಕೋತ್ಸವದ ಕೊಡುಗೆಯಾಗಿ ಜಿಯೋಭಾರತ್ 4ಜಿ ಫೋನ್ ಅನ್ನು ₹1,499ಕ್ಕೆ ನೀಡುತ್ತಿದ್ದು, ಇದರೊಂದಿಗೆ 6 ತಿಂಗಳ ರೀಚಾರ್ಜ್ ಸಂಪೂರ್ಣವಾಗಿ ಉಚಿತ ಮಾಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿ ತಿಂಗಳು 14ಜಿಬಿ ಡೇಟಾ ಮತ್ತು ಅನಿಯಮಿತ ಎಚ್‌ಡಿ ವಾಯ್ಸ್ ಕಾಲಿಂಗ್ ಸೌಲಭ್ಯ ಸಿಗಲಿದೆ. ಅಂದರೆ, ಫೋನ್ ಖರೀದಿಸಿದ ತಕ್ಷಣವೇ ಮುಂದಿನ ಆರು ತಿಂಗಳ ರೀಚಾರ್ಜ್ ಚಿಂತೆ ದೂರವಾಗಲಿದ್ದು, ಬೇರೆ ಯಾವುದೇ ರೀಚಾರ್ಜ್‌ಗಾಗಿ ಹಣ ಖರ್ಚು ಮಾಡುವ ಅಗತ್ಯ ಇರುವುದಿಲ್ಲ. ಇಂದಿಗೂ 2ಜಿ ಫೀಚರ್ […]

ಡಿಜಿಟಲ್ ಮಾಹಿತಿಗೆ ಸಿಕ್ತು ರಕ್ಷಾ ಕವಚ: ಬೆಸ್ಕಾಂಗೆ ಪ್ರತಿಷ್ಠಿತ ISO 27001 ಮನ್ನಣೆ

ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ವಿದ್ಯುತ್ ಪೂರೈಸುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು (ಬೆಸ್ಕಾಂ) ಮಾಹಿತಿ ತಂತ್ರಜ್ಞಾನ ಹಾಗೂ ಸೈಬರ್ ಭದ್ರತಾ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದೆ. ಸಂಸ್ಥೆಯ ದತ್ತಾಂಶ ಮತ್ತು ಮಾಹಿತಿ ಸುರಕ್ಷತಾ ನಿರ್ವಹಣಾ ವ್ಯವಸ್ಥೆಗೆ ಜಾಗತಿಕ ಮನ್ನಣೆಯ ‘ISO/IEC 27001:2022’ ಪ್ರಮಾಣಪತ್ರ ದೊರೆತಿದೆ. ನಗರದ ಇಂಧನ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಬೆಸ್ಕಾಂಗೆ ಒಲಿದಿರುವ ಈ ಪ್ರತಿಷ್ಠಿತ ಪ್ರಮಾಣಪತ್ರವನ್ನು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಅಧಿಕೃತವಾಗಿ […]

ಬರ ಪರಿಹಾರ ನೀಡಿಲ್ಲ, ನಾವಿಟ್ಟ ಬೇಡಿಕೆ ಈಡೇರಿಸಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು : ಬರಗಾಲಕ್ಕೆ ಸಂಬಂಧಿಸಿದಂತೆ ರೈತರಿಗಾಗಿ ನಾವು ಇಟ್ಟ ಬೇಡಿಕೆಗಳನ್ನು ಕಾಂಗ್ರೆಸ್‌ ಸರ್ಕಾರ ಈಡೇರಿಸಿಲ್ಲ. ಅದರ ಬದಲು ಕೇವಲ 2,500 ರೂ. ನೀಡಿ ಕೈ ತೊಳೆದುಕೊಳ್ಳಲಾಗಿದೆ. ಆದ್ದರಿಂದ ಕೇಂದ್ರಕ್ಕೆ ನಿಯೋಗ ಹೋಗುವ ಬದಲು ನಾವು ಜನರ ಬಳಿಗೆ, ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ಅವರ ಜೋಡಿಯ ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನು ಮೂರು ಸಂಕಷ್ಟಗಳಿದೆ ದೂಡಿದೆ. ಬರಗಾಲದಿಂದಾಗಿ ರೈತರು ಸಾಯುವ ಪರಿಸ್ಥಿತಿಗೆ ಹೋಗಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ಯುವಕ […]

ಸಿಎಂ ಡಿಕೆ ಶಿವಕುಮಾರ್ ಅನುಮೋದನೆ ಪಡೆದು ಶೀಘ್ರದಲ್ಲೇ KSRTC ಬಸ್ ಟಿಕೆಟ್ ದರ ಹೆಚ್ಚಳ: ಸಚಿವ ಬೈರತಿ ಸುರೇಶ್

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ನೇಮಕಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಒಂದೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಉಪಸ್ಥಿತಿಯಲ್ಲಿ ರಾಜಧಾನಿಯ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ ಸುರಕ್ಷತೆ ಹೆಚ್ಚಿಸುವುದು ಹಾಗೂ ಸಂಚಾರಿ ನಿಯಮಗಳ ಉಲ್ಲಂಘನೆಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕುವ ಸಂಬಂಧ ನಡೆದ […]

ಉದ್ಯೋಗ ಖಾತ್ರಿ ನಕಲಿ ಜಿಪಿಎಸ್ ಫೋಟೋ ಬಗ್ಗೆ ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ನಕಲಿ ಜಿಪಿಎಸ್ ಫೋಟೋ ತೆಗೆದು ವಂಚಿಸಲಾಗುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಇಲಾಖೆಯ ಕಾರ್ಯದರ್ಶಿಗಳಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಕೊಪ್ಪಳ ಜಿಲ್ಲೆಯಲ್ಲಿ ಮೇಟಿಗಳು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಕೆಲಸಗಾರರು ಹೋಗದಿದ್ದರೂ ವಿಡಿಯೋ ಚಿತ್ರೀಕರಣ ಮಾಡಿಸಿ ಆ ವಿಡಿಯೋ ಪ್ಲೇ ಆಗುತ್ತಿರುವಾಗ ಮತ್ತೊಂದು ಮೊಬೈಲ್ ನಲ್ಲಿ ಜಿಪಿಎಸ್ ಫೋಟೋ […]