ಬರಪೀಡಿತ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ರಾಜೀನಾಮೆ

ಬೆಂಗಳೂರು: ಸ್ವಪಕ್ಷದ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿರುವ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ವಿಜಯಪುರ ಜಿಲ್ಲೆಯ ತಮ್ಮ ವ್ಯಾಪ್ತಿಯ ತಾಲೂಕುಗಳನ್ನು ರಾಜ್ಯ ಸರ್ಕಾರದ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವುದನ್ನು ಖಂಡಿಸಿ ಅವರು ಸ್ಪೀಕರ್ ಜಿ.ಎಸ್. ಪಾಟೀಲ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಈ ಬೆಳವಣಿಗೆ ವಿಧಾನ ಮಂಡಲದ ಅಧಿವೇಶನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ರಾಜೀನಾಮೆ ಪತ್ರದಲ್ಲೇನಿದೆ? ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳಲ್ಲಿ 2026-27ನೇ ಸಾಲಿನ […]
KPSC ಮುಚ್ಚುವೆ ಎಂದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

ನವದೆಹಲಿ: ಕೆಪಿಎಸ್ಸಿಯನ್ನು ಮುಚ್ಚಲು ಕಾನೂನು ತಜ್ಞರ ಜತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಮುಖ್ಯಮಂತ್ರಿಗೆ ಶಾಸನದ ಮಹತ್ವವೇ ಗೊತ್ತಿಲ್ಲದಂತಿದೆ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕರ್ನಾಟಕ ಲೋಕಸೇವಾ ಆಯೋಗ (KPSC) ವನ್ನು ಶಾಸನಬದ್ಧವಾಗಿ ಮುಚ್ಚುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ಕೇವಲ ಹತಾಶೆಯಿಂದಷ್ಟೇ ಕೂಡಿಲ್ಲ, ಅದು ಬುದ್ಧಿಗೇಡಿತನ, ಹೊಣೆಗೇಡಿತನ ಮತ್ತು ಅಜ್ಞಾನದ ಪರಮಾವಧಿ. ಇವರ ವರಸೆ ಹೇಗಿದೆ […]
ಏಷ್ಯನ್ ಗೇಮ್ಸ್ ನಲ್ಲಿ 28 ವರ್ಷಗಳ ಬಳಿಕ ಭಾರತಕ್ಕೆ ಪದಕ: ಬೆಳ್ಳಿ ಗೆದ್ದ ಮೀರಾಬಾಯಿ!

ಜಪಾನ್: ಭಾರತದ ತಾರೆ ವೈಟ್ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಅವರು ಏಷ್ಯನ್ ಗೇಮ್ಸ್ 2026ರ ಮಹಿಳೆಯರ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಜಪಾನ್ನ ನಗೋಯಾ ಸಿಟಿ ಟ್ರೇಡ್ ಮತ್ತು ಇಂಡಸ್ಟ್ರಿ ಸೆಂಟರ್ನಲ್ಲಿ ನಡೆದ ಸ್ಪರ್ಧೆಯಲ್ಲಿ ಚಾನು ಈ ಸ್ಮರಣೀಯ ಗೆಲುವು ಸಾಧಿಸಿದ್ದಾರೆ. 28 ವರ್ಷಗಳ ಕಾಯುವಿಕೆಗೆ ತೆರೆ ಈ ಬೆಳ್ಳಿ ಪದಕದೊಂದಿಗೆ ಏಷ್ಯನ್ ಗೇಮ್ಸ್ನಲ್ಲಿ ಪದಕ ಗೆಲ್ಲಬೇಕೆಂಬ ಮೀರಾಬಾಯಿ ಅವರ ಬಹುದಿನಗಳ ಕನಸು ನನಸಾಗಿದೆ. ಜೊತೆಗೆ ಏಷ್ಯನ್ ಗೇಮ್ಸ್ […]
ಮೈಸೂರು ದಸರಾ ಮಹೋತ್ಸವದ ವೇಳೆ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ ಆಯೋಜನೆ

ಬೆಂಗಳೂರು : ಜಗತ್ಪ್ರಸಿದ್ಧ ಮೈಸೂರು ದಸರಾ ಉತ್ಸವ-2026 ರ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026” ಅನ್ನು ಆಯೋಜಿಸಲಾಗಿದೆ. ಈ ಮೇಳವು ಮೈಸೂರಿನ ಹಳೆಯ ಡಿ.ಸಿ. ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯಲಿದೆ. ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕನ್ನಡ ಪ್ರಕಾಶಕರು ಮತ್ತು ಮಾರಾಟಗಾರರು […]
ಹಿರಿಯ ನಟ ಅನಂತ್ ನಾಗ್ಗೆ 2024ರ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರದಾನ!

ನವದೆಹಲಿ: ಕನ್ನಡ ಚಿತ್ರರಂಗದ ದಿಗ್ಗಜ ನಟ, ಅಭಿನಯ ಶಾರದೆ ಎನಿಸಿಕೊಂಡಿರುವ ಅನಂತ್ ನಾಗ್ ಅವರಿಗೆ ಭಾರತೀಯ ಚಲನಚಿತ್ರ ರಂಗದ ಅತ್ಯುನ್ನತ ‘ದಾದಾಸಾಹೇಬ್ ಫಾಲ್ಕೆ’ (2024) ಪ್ರಶಸ್ತಿ ಲಭಿಸಿದೆ. ಐದು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಗೌರವವನ್ನು ಪ್ರಕಟಿಸಿದೆ. ಗುಜರಾತ್ನ ಕೆವಾಡಿಯಾದಲ್ಲಿ (ಏಕತಾ ನಗರ) ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಂತ್ ನಾಗ್ ಅವರಿಗೆ ಈ ಪ್ರತಿಷ್ಠಿತ […]
ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ : ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ!

ಬೆಂಗಳೂರು: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆಯನ್ನು ಪ್ರಸ್ತುತ ರೂಪದಲ್ಲಿ ಯಥಾವತ್ತಾಗಿ ಒಪ್ಪದಿರಲು ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ. ಮಲೆನಾಡು ಮತ್ತು ಕರಾವಳಿ ಭಾಗದ ಜನರ ಜಮೀನು, ಜೀವನೋಪಾಯ ಹಾಗೂ ಕೃಷಿಕರ ಹಿತರಕ್ಷಣೆಗಾಗಿ ಈ ಅಧಿಸೂಚನೆಯನ್ನು ಮರು ಪರಿಶೀಲಿಸುವಂತೆ ಕೇಂದ್ರಕ್ಕೆ ಒತ್ತಾಯಿಸಲು ನಿರ್ಧರಿಸಲಾಗಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಪ್ರಮುಖ ನಿರ್ಣಯವನ್ನು ಮಂಡಿಸಿದ್ದು, ಇದಕ್ಕೆ ವಿಪಕ್ಷಗಳು ಸೇರಿದಂತೆ ಸದನದ […]
ಮತ್ತೆ 23 ತಾಲ್ಲೂಕು ಬರಪೀಡಿತ ತಾಲೂಕು, ಈಗ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 177ಕ್ಕೆ ಏರಿಕೆ

ಬೆಂಗಳೂರು : ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಸಮಗ್ರ ಚರ್ಚೆ ನಡೆಸಿ, ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ ಕೈಗೊಳ್ಳಬೇಕಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು. ವಿಧಾನಪರಿಷತ್ನಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯ 7ನೇ ಕರಡು ಪ್ರತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಗದಿತ ಅವಧಿಯೊಳಗೆ ತನ್ನ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದೆ. ಸರ್ಕಾರದ ಅಭಿಪ್ರಾಯವನ್ನಷ್ಟೇ ಏಕಪಕ್ಷೀಯವಾಗಿ […]
ಇನ್ಮುಂದೆ ಖಾಸಗಿ ಸಿಮ್ ಬೇರೆಯವರಿಗೆ ನೀಡುವುದು ಅಪರಾಧ: ಉಲ್ಲಂಘಿಸಿದರೆ ಭಾರಿ ದಂಡ ಹಾಗೂ ಜೈಲು ಶಿಕ್ಷೆ

ನವದೆಹಲಿ: ತಮ್ಮ ಹೆಸರಿನಲ್ಲಿ ನೋಂದಾಯಿತವಾಗಿರುವ ಮೊಬೈಲ್ ಸಿಮ್ ಕಾರ್ಡ್ಗಳನ್ನು ಇತರರ ಬಳಕೆಗೆ ಹಸ್ತಾಂತರಿಸುವ ಸಾರ್ವಜನಿಕರಿಗೆ ಕೇಂದ್ರ ದೂರಸಂಪರ್ಕ ಇಲಾಖೆ ಅತ್ಯಂತ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದೆ. ಚಂದಾದಾರರ ಅಧಿಕೃತ ಒಪ್ಪಿಗೆಯಿಲ್ಲದೆ ಅಥವಾ ಅವರ ದಾಖಲೆಗಳನ್ನು ಬಳಸಿ ಅಕ್ರಮವಾಗಿ ಸಂಪರ್ಕ ಪಡೆದುಕೊಳ್ಳುವುದು ಹಾಗೂ ಮೊಬೈಲ್ ಸಾಧನಗಳ ಐಎಂಇಐ ತಾಂತ್ರಿಕ ವಿವರಗಳನ್ನು ಬದಲಾಯಿಸುವುದು ಗಂಭೀರ ಸ್ವರೂಪದ ಕಾನೂನುಬಾಹಿರ ಕೃತ್ಯವಾಗಲಿದೆ. ದೂರಸಂಪರ್ಕ ಕಾಯ್ದೆಯಡಿ ಕಠಿಣ ದಂಡನೆ ಹೊಸ ದೂರಸಂಪರ್ಕ ಕಾಯ್ದೆ 2023ರ ಅಡಿಯಲ್ಲಿ ಈ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಸರ್ಕಾರದ ಕಟ್ಟುಪಾಡುಗಳನ್ನು […]
ಮಹಿಳಾ ಪಿಎಸ್ಐ ಮೇಲಿನ ಹಲ್ಲೆ ಘಟನೆ ಸಂಬಂಧ ಬೇಷರತ್ ಕ್ಷಮೆಯಾಚಿಸಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ

ಬೆಂಗಳೂರು: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಆರತಿ ಉಕ್ಕಡ ಮಾರಮ್ಮ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್ಐ ಸವಿತಾ ಪಾಟೀಲ್ ಅವರ ಮೇಲೆ ನಡೆಸಿದ ದರ್ಪ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯ ಗೌಡ ಅವರು ಸ್ವಯಂಪ್ರೇರಿತ ವೀಡಿಯೋ ಮಾಡಿ ಬಹಿರಂಗವಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ. ಕೋಟ್ ಕೋರ್ಟ್ ಆದೇಶದ ಬೆನ್ನಲ್ಲೇ ಕ್ಷಮೆಯಾಚನೆ ಘಟನೆಗೆ ಸಂಬಂಧಿಸಿದಂತೆ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ಗೌಡ ವಿರುದ್ಧ ಕರ್ತವ್ಯಕ್ಕೆ […]
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ‘ಇ-ಆಸ್ತಿ 2.0’ ಆಸ್ತಿ ದಾಖಲೆ ವ್ಯವಸ್ಥೆ ಸಚಿವ ಕೃಷ್ಣಬೈರೇಗೌಡ ಲೋಕಾರ್ಪಣೆ

ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ನಿರ್ದೇಶನದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಇ ಆಸ್ತಿ 2.0’ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದ್ದು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಇಂದು ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಹಳೆಯ ಕಾಲದಲ್ಲಿ ಆಸ್ತಿ ದಾಖಲೆಗಳು ಕಾಗದದ ರೂಪದಲ್ಲಿದ್ದು, ಅವುಗಳಲ್ಲಿ ತಿದ್ದುಪಡಿ, ಬದಲಾವಣೆ ಮಾಡುವ ಸಾಧ್ಯತೆಗಳಿದ್ದವು. ಕಾನೂನುಗಳು ಸರಿಯಾಗಿದ್ದರೂ ಅವುಗಳ ಪಾಲನೆ ಮತ್ತು ಆಸ್ತಿ ದಾಖಲೆಗಳ ನಿರ್ವಹಣೆಯಲ್ಲಿ ಕೆಲವು ಲೋಪಗಳಿದ್ದವು. ಆದರೆ, 2000ನೇ ಇಸವಿಯಲ್ಲಿ ಭೂಮಿ ದಾಖಲೆಗಳ ಗಣಕೀಕರಣದ […]