JOB ALERT: ಉದ್ಯೋಗ ವಾರ್ತೆ: 814 ಪಿಯು ಕಾಲೇಜು ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ. ಈ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿದೆ. ಉದ್ದೇಶಿತ ನೇಮಕಾತಿಯಲ್ಲಿ ಉಳಿಕೆ ಮೂಲ ವೃಂದದ (NKK) 778 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ (KK – 371J) 36 ಹುದ್ದೆಗಳು […]

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಹೈಕೋರ್ಟ್ ನಿಂದ SIT ತನಿಖೆಗೆ ವಹಿಸಿ ಆದೇಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ನಿರ್ದೇಶನ ನೀಡಿದೆ. ಇಡೀ ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ನೂತನ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಅನುಭವಿ ಐಪಿಎಸ್ ಅಧಿಕಾರಿಗಳ ವಿಶೇಷ ತಂಡ ಪ್ರಕರಣದ ತನಿಖೆಯ […]

ರಾಜ್ಯದ ರೈತರ ಸಮಸ್ಯೆಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವ ಉದ್ದೇಶ ನನಗಿಲ್ಲ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ‘ರಾಜ್ಯದ ರೈತರು, ಜನರ ರಕ್ಷಣೆ ನನಗೆ ಮುಖ್ಯ. ಅದಕ್ಕೆ ಬದ್ಧನಾಗಿದ್ದೇನೆ. ದೊರೆತಿರುವ ಈ ಅವಕಾಶವನ್ನು ಬಳಸಿಕೊಂಡು ಎಲ್ಲರನ್ನೂ ರಕ್ಷಣೆ ಮಾಡಬೇಕು. ಸಮಸ್ಯೆಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವ ಉದ್ದೇಶ ನನಗಿಲ್ಲ’ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.  ಸೋಮವಾರದಿಂದ ಆರಂಭಗೊಂಡಿರುವ 3 ದಿನಗಳ ವಿಶೇಷ ಅಧಿವೇಶನದ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಇದು ಮುಂದುವರಿದ ಅಧಿವೇಶನವೋ, ವಿಶೇಷ ಅಧಿವೇಶನವೋ ಸ್ಪಷ್ಟನೆ ನೀಡಿ ಎಂದು ಪಟ್ಟುಹಿಡಿದರು. ಈ ಸಂದರ್ಭದಲ್ಲಿ ಸಿಎಂ ಮಾತನಾಡಿದರು. […]

ಮೈಸೂರು ದಸರಾ 2026: ಜಂಬೂ ಸವಾರಿ, ಡ್ರೋನ್ ಶೋ ವೀಕ್ಷಣೆಗೆ ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಶರು

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಪ್ರವಾಸಿಗರಿಗೆ ಮೈಸೂರು ಜಿಲ್ಲಾಡಳಿತ ಮಹತ್ವದ ಮಾಹಿತಿ ನೀಡಿದೆ. ಅರಮನೆ ಆವರಣದಲ್ಲಿ ನಡೆಯುವ ವಿಶ್ವಪ್ರಸಿದ್ದ ಜಂಬೂ ಸವಾರಿ, ಸಾಹಸಮಯ ಪಂಜಿನ ಕವಾಯತು ಹಾಗೂ ಆಕರ್ಷಕ ಡ್ರೋನ್ ಶೋ ವೀಕ್ಷಣೆಗೆ ಅಗತ್ಯವಿರುವ ಟಿಕೆಟ್‌ಗಳು ಮತ್ತು ಗೋಲ್ಡ್ ಕಾರ್ಡ್‌ಗಳ ಆನ್‌ಲೈನ್ ಮಾರಾಟ ಪ್ರಕ್ರಿಯೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ವೇದಿಕೆ ಸಜ್ಜು, ವೆಬ್‌ಸೈಟ್ ಲಭ್ಯ: ಈ ಬಾರಿಯ ದಸರಾ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲು ಸರ್ಕಾರ ನಿರ್ಧರಿಸಿದ್ದು, ಸಾಂಸ್ಕೃತಿಕ ನಗರಿಯಾದ್ಯಂತ ಸಂಭ್ರಮದ ವಾತಾವರಣ […]

ಕಸ್ತೂರಿ ರಂಗನ್ ವರದಿ ಬಗ್ಗೆ ವಿಶೇಷ ಅಧಿವೇಶನ: ರೈತರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧ – ಸಿಎಂ ಡಿ.ಕೆ ಶಿವಕುಮಾರ್

ಸಕಲೇಶಪುರ : “ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತ ಕೆ. ಕಸ್ತೂರಿರಂಗನ್ ಸಮಿತಿ ವರದಿ ಬಗ್ಗೆ ಚರ್ಚಿಸಲು ಕರೆದಿರುವ ವಿಶೇಷ ಅಧಿವೇಶನದಲ್ಲಿ ರೈತರಿಗೆ ಧಕ್ಕೆಯಾಗದಂತೆ ಸೂಕ್ತ ನಿರ್ಣಯ ಅಂಗೀಕರಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಭರವಸೆ ನೀಡಿದರು. ಸಕಲೇಶಪುರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮುರುಳಿ ಮೋಹನ್ ಅವರ ನಿವಾಸದ ಬಳಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. “ಕಳೆದ ಎರಡು ದಿನಗಳಿಂದ ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ […]

ಮಾಜಿ ಸಚಿವ ರಮಾನಾಥ ರೈಗೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ದಕ್ಷಿಣ ಕನ್ನಡ: ಕರಾವಳಿಯ ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ. ರಮಾನಾಥ ರೈ ಅವರಿದ್ದ ಕಾರು ಕಾರ್ಕಳ ಹಾಗೂ ಮೂಡುಬಿದಿರೆ ಸಂಪರ್ಕಿಸುವ ಹೆದ್ದಾರಿಯಲ್ಲಿ ರಸ್ತೆ ಅಪಘಾತಕ್ಕೀಡಾಗಿದೆ. ಅಪಘಾತದ ರಭಸಕ್ಕೆ ವಾಹನವು ತೀವ್ರವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ರಮಾನಾಥ ರೈ ಹಾಗೂ ಅವರ ಜತೆಗಿದ್ದ ಇತರ ಸಹಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ತಕ್ಷಣವೇ ನೆರೆದ ಸ್ಥಳೀಯ ಸಾರ್ವಜನಿಕರು, ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ತಕ್ಷಣವೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ. ಅಪಘಾತ ಸಂಭವಿಸಲು ಅತಿಯಾದ ವೇಗ ಕಾರಣವೇ ಅಥವಾ ಇತರ […]

ಒಂದು ವರ್ಷ ಜಿಯೋಹೋಮ್‌ ಬಳಕೆದಾರರಿಗೆ ಅಮೆಜಾನ್ ಪ್ರೈಮ್ ಲೈಟ್ ಉಚಿತ

ಮುಂಬೈ : ಜಿಯೋಹೋಮ್‌ನ 30 ಎಂಬಿಪಿಎಸ್ ಮತ್ತು 100 ಎಂಬಿಪಿಎಸ್ ಯೋಜನೆಗಳನ್ನು ಹೊಂದಿರುವ ಗ್ರಾಹಕರು ಈಗ ಅಮೆಜಾನ್ ಪ್ರೈಮ್ ಲೈಟ್ ಅನ್ನು ಒಂದು ವರ್ಷದವರೆಗೆ ಉಚಿತವಾಗಿ ಪಡೆಯಲಿದ್ದಾರೆ. ಈ ಪ್ರಯೋಜನವನ್ನು ಜಿಯೋಹೋಮ್‌ನ 3-ಇನ್-1( ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ನೀಡಲಾಗುವುದು. ಜಿಯೋ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಈ ಹೊಸ ಕೊಡುಗೆಯನ್ನು ನೀಡಲಾಗುತ್ತಿದೆ. ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಸದಸ್ಯತ್ವದಲ್ಲಿ, ಗ್ರಾಹಕರು ಪ್ರೈಮ್ […]

ಅಕ್ಟೋಬರ್.1ರಿಂದ ಸಬ್ಸಿಡಿ ಎಲ್‌ಪಿಜಿ ಸಿಲಿಂಡರ್ ಪಡೆಯಲು ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಕೇಂದ್ರ ಸರ್ಕಾರ ಮಹತ್ವದ ಆದೇಶ

ನವದೆಹಲಿ: ದೇಶದಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಬ್ಸಿಡಿ ವಿತರಣೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಹೊರಗಿಡಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ನಿಯಂತ್ರಿತ ಚಿಲ್ಲರೆ ಮಾರಾಟ ದರದಲ್ಲಿ (RSP) ಸಬ್ಸಿಡಿ ಸಹಿತ ಸಿಲಿಂಡರ್ ಪಡೆಯುವ ಪ್ರತಿಯೊಬ್ಬ ಗ್ರಾಹಕರಿಗೂ 2026ರ ಅಕ್ಟೋಬರ್ 1 ರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣವನ್ನು (BAA) ಕಡ್ಡಾಯಗೊಳಿಸಲಾಗಿದೆ. ವಾಣಿಜ್ಯ ಉದ್ದೇಶಗಳಿಗೆ ಸಿಲಿಂಡರ್‌ಗಳ ಅಕ್ರಮ ವರ್ಗಾವಣೆ, ನಕಲಿ ಗ್ಯಾಸ್ ಸಂಪರ್ಕಗಳ ಹಾವಳಿ ತಪ್ಪಿಸಿ, ಸರ್ಕಾರದ ಸಬ್ಸಿಡಿ ಹಣವು ನೇರವಾಗಿ ಅರ್ಹ ಕುಟುಂಬಗಳಿಗೆ ಮಾತ್ರ ತಲುಪುವಂತೆ ಮಾಡುವುದು […]

ಕಸ್ತೂರಿ ರಂಗನ್ ವರದಿ ಸೇರಿದಂತೆ ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ.ಕೆ ಶಿವಕುಮಾರ್

ಬಾಳೆಹೊನ್ನೂರು : “ಕಸ್ತೂರಿ ರಂಗನ್ ವರದಿ ಸೇರಿದಂತೆ ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಪರಿಸರ ಸೂಕ್ಷ್ಮ ವಲಯ ಸೇರಿದಂತೆ ಈ ಭಾಗದ ರೈತರ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದೀರಿ, ನನ್ನ ಕೈಲಾದ ಮಟ್ಟಿಗೆ ನಾನು ನಿಮಗೆ ಸಹಾಯ ಮಾಡುವೆ. ರಾಜ್ಯದ ಹಿತಕ್ಕಾಗಿ ಅಗತ್ಯವಿರುವ ಕಾನೂನು ತಿದ್ದುಪಡಿ ಮಾಡುವ ಪ್ರಯತ್ನ ಮಾಡುವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಶನಿವಾರ ನಡೆದ ಕಸ್ತೂರಿ ರಂಗನ್ ವರದಿ ಕುರಿತ […]

ವಾಟ್ಸಾಪ್‌ನಲ್ಲೇ KSRTC ಟಿಕೆಟ್ ಬುಕ್ಕಿಂಗ್ ಮತ್ತು ಕ್ಯಾನ್ಸಲೇಶನ್: ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು: ಸರ್ಕಾರಿ ಬಸ್ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಅತ್ಯಾಧುನಿಕ ಡಿಜಿಟಲ್ ವ್ಯವಸ್ಥೆಯನ್ನು ಪರಿಚಯಿಸಿದ್ದು, ಇನ್ನು ಮುಂದೆ ಕೇವಲ ಒಂದು ವಾಟ್ಸಾಪ್ (WhatsApp) ಸಂದೇಶದ ಮೂಲಕವೇ ಕ್ಷಣಾರ್ಧದಲ್ಲಿ ಬಸ್ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನು ಆರಂಭಿಸಿವೆ. ಕೆಎಸ್‌ಆರ್‌ಟಿಸಿ (KSRTC), ವಾಯವ್ಯ ಸಾರಿಗೆ (NWKRTC) ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ (KKRTC) ಸಂಸ್ಥೆಗಳ ಬಸ್‌ಗಳಿಗೆ ಈ ಸೇವೆ ಲಭ್ಯವಿದ್ದು, ಪ್ರಯಾಣಿಕರಿಗೆ ಸರಳ, ತ್ವರಿತ ಹಾಗೂ ನಂಬಿಕಾರ್ಹ ಪ್ರಯಾಣದ ಅನುಭವವನ್ನು ಒದಗಿಸಲಿದೆ. ಟಿಕೆಟ್ ಪಡೆಯುವ ಹಂತಗಳು ಪ್ರಯಾಣಿಕರು […]