KPSC ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅಮಾನತುಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರ ವಶದಲ್ಲಿರುವ 2016ರ ಬ್ಯಾಚ್‌ನ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ರಾಜ್ಯ ಸರ್ಕಾರ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಪ್ರಸ್ತುತ ಎಂಎಸ್‌ಎಂಇ (MSME) ಇಲಾಖೆಯ ನಿರ್ದೇಶಕರಾಗಿರುವ ಇವರು, ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಪರೀಕ್ಷಾ ನಿಯಂತ್ರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗಂಭೀರ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಇಡಿ ತನಿಖೆಯಲ್ಲಿ ಭ್ರಷ್ಟಾಚಾರ ಬಯಲು ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ (PMLA) […]

KSRTCಯಿಂದ ಗೌರಿ-ಗಣೇಶ ಹಬ್ಬದ್ದೆ ಬರೋಬ್ಬರಿ 2,400 ವಿಶೇಷ ಬಸ್ ಸಂಚಾರದ ವ್ಯವಸ್ಥೆ

ಬೆಂಗಳೂರು: ಗೌರಿ-ಗಣೇಶ ಹಬ್ಬ ಹಾಗೂ ಸಾಲು ಸಾಲು ವಾರಾಂತ್ಯದ ರಜೆಗಳ ಸಂಭ್ರಮದಲ್ಲಿರುವ ರಾಜಧಾನಿಯ ಜನರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆಯನ್ನು ತಪ್ಪಿಸಲು ಬೆಂಗಳೂರಿನಿಂದ ರಾಜ್ಯದ ಮೂಲೆ ಮೂಲೆಗಳಿಗೆ ಹಾಗೂ ನೆರೆ ರಾಜ್ಯಗಳಿಗೆ ಒಟ್ಟು 2,400 ವಿಶೇಷ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಸಾರಿಗೆ ನಿಗಮ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಸೆಪ್ಟೆಂಬರ್ 12 ಮತ್ತು 13ರ ಶನಿವಾರ-ಭಾನುವಾರದ ರಜೆಗಳ ಜತೆಗೆ ಸೆಪ್ಟೆಂಬರ್ 14ರಂದು ಗಣೇಶ ಹಬ್ಬ ಇರುವುದರಿಂದ, ಸೆಪ್ಟೆಂಬರ್ 11ರಿಂದಲೇ ಈ ವಿಶೇಷ ಕಾರ್ಯಾಚರಣೆ […]

ಸೆಪ್ಟೆಂಬರ್ 21ರಿಂದ 3 ದಿನ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ಸೆಪ್ಟೆಂಬರ್ 21ರಿಂದ 23ರವರೆಗೆ ಈ ಅಧಿವೇಶನ ಜರುಗಲಿದ್ದು, ಕಸ್ತೂರಿ ರಂಗನ್ ವರದಿ ಜಾರಿ ಹಾಗೂ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಹಸಿರು ನಿಶಾನೆ ತೋರಲಾಗಿದೆ. ಅಧಿವೇಶನದ ಹಿನ್ನೆಲೆ ಹಾಗೂ ಪ್ರಮುಖಾಂಶಗಳು: ಕಳೆದ […]

ಬೆಂಗಳೂರಲ್ಲಿ ನಂದಿನ ಹಾಲಿನ ಟ್ಯಾಂಕರ್ ಪಲ್ಟಿಯಾಗಿ 14,000 ಹಾಲು ರಸ್ತೆ ಪಾಲು

ಬೆಂಗಳೂರು: ನಿಯಂತ್ರಣ ಕಳೆದುಕೊಂಡ ಕೆಎಂಎಫ್‌ನ ಬೃಹತ್ ನಂದಿನಿ ಹಾಲಿನ ವಾಹನವೊಂದು ರಸ್ತೆಯಲ್ಲೇ ಮಗುಚಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಹಾಲು ವ್ಯರ್ಥವಾಗಿರುವ ಘಟನೆ ಹೆಬ್ಬಾಳದ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದೆ. ವಾಹನದಲ್ಲಿದ್ದ ಸುಮಾರು 14,000 ಲೀಟರ್ ಹಾಲು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಹರಿದಿದೆ. ಡೈರಿಯಿಂದ ಕೆಎಂಎಫ್ ಘಟಕದ ಕಡೆಗೆ ಸಾಗುತ್ತಿದ್ದ ಈ ಟ್ಯಾಂಕರ್, ಹೆಬ್ಬಾಳ ತಲುಪುತ್ತಿದ್ದಂತೆ ಚಾಲಕನ ಹತೋಟಿ ತಪ್ಪಿ ಉರುಳಿಬಿದ್ದಿದೆ. ಅಪಘಾತದ ತೀವ್ರತೆಗೆ ಟ್ಯಾಂಕರ್‌ನ ಕವಾಟ ಒಡೆದು ರಸ್ತೆಯಲ್ಲೆಲ್ಲ ಹಾಲು ನದಿಯಂತೆ ಹರಿಯಿತು. ಅಪಾರ ಪ್ರಮಾಣದ ಹಾಲು […]

ಬಿಜೆಪಿ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳಲು ಪಾದಯಾತ್ರೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ಕೆಪಿಎಸ್ಸಿ ವಿಚಾರವಾಗಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಹೋರಾಟವಲ್ಲ. ಬದಲಿಗೆ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳುವ ಪ್ರಯತ್ನ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಎಫ್ ಕೆಸಿಸಿಐ ಕಚೇರಿಯ ಬಳಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. “ಕೆಪಿಎಸ್ಸಿ ಅಕ್ರಮದಲ್ಲಿ ಬಿಜೆಪಿ ನಾಯಕರ ಸಂಪರ್ಕದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಕುರಿತು ಗೃಹ ಸಚಿವರು ಹಾಗೂ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಲಾಗಿದೆ. ತನಿಖೆಯ ಸಂಪೂರ್ಣ ವರದಿ ಇನ್ನೂ ತಮ್ಮ ಕೈಗೆ ಬಂದಿಲ್ಲ. ಮಾಧ್ಯಮಗಳಲ್ಲಿ ಬಂದಿರುವ […]

ಅಯೋಧ್ಯೆ ಶ್ರೀರಾಮಮಂದಿರ ಟ್ರಸ್ಟ್ ಮೊದಲ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಥಮ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ನೇಮಿಸಲಾಗಿದೆ. ಇತ್ತೀಚೆಗೆ ದೇವಾಲಯದ ಕಾಣಿಕೆ ಹಣ ಕಳವು ಪ್ರಕರಣ ಭಾರಿ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಹಣಕಾಸು ಮತ್ತು ಆಡಳಿತ ವ್ಯವಸ್ಥೆಯನ್ನು ಬಿಗಿಗೊಳಿಸಲು ಟ್ರಸ್ಟ್ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಕಾಣಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ವಿವಾದ ತಾರಕಕ್ಕೇರಿದ ಕಾರಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಸೇರಿದಂತೆ […]

ಬೇರೆಯವರಂತೆ ರಾಹುಲ್ ಗಾಂಧಿ ಮುಚ್ಚಳಿಕೆ ಬರೆದುಕೊಡಲ್ಲ, ಕ್ಷಮೆ ಕೇಳಲ್ಲ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ, ಹೋರಾಟಗಾರನಾಗಿ ಬದುಕುತ್ತಿದ್ದು, ಹೋರಾಟಗಾರನಾಗಿಯೇ ಸಾಯುತ್ತಾರೆ. ಇಂತಹ ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಅವರು ಇಂತಹ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ಬೇರೆಯವರಂತೆ ರಾಹುಲ್ ಗಾಂಧಿ ಅವರು ಮುಚ್ಚಳೊಕೆ ಬರೆದುಕೊಡಲ್ಲ, ಕ್ಷಮೆ ಕೇಳಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕಿಡಿ ಕಾರಿದರು.  ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉತ್ತರಖಂಡದಲ್ಲಿ ದುರುದ್ದೇಶಪೂರಿತ ಎಫ್ ಐಆರ್ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ […]

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಸಚಿವರ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯ

ಬೆಂಗಳೂರು: ಕೆಆರ್‌ಐಡಿಎಲ್‌ನಲ್ಲಿ 7% ಲಂಚ ಪಡೆಯುತ್ತಿರುವ ಇಬ್ಬರು ಸಚಿವರನ್ನು ಕೂಡಲೇ ವಜಾ ಮಾಡಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರಾದರೂ ಲಂಚ ಪಡೆದರೆ ನನಗೆ ಕರೆ ಮಾಡಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಈಗ ಕಾಂಗ್ರೆಸ್‌ ಶಾಸಕ ಅಶೋಕ್‌ ಕುಮಾರ್‌ ರೈ ಅಧಿಕೃತವಾಗಿ ಪತ್ರ ಬರೆದು ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೆಆರ್‌ಐಡಿಎಲ್‌ ನಲ್ಲಿ ಹೆಚ್ಚುವರಿಯಾಗಿ 7% ಪಡೆಯಲಾಗುತ್ತಿದೆ, ಈ ಬಗ್ಗೆ ಪ್ರಶ್ನಿಸಿದ […]

ಸಚಿವರು ಸೂಚಿಸಿದ್ರೇ ಬೀದಿ ದೀಪ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಜಿಬಿಎ ಕಾರ್ಯಪಾಲಕ ಅಭಿಯಂತರ ಅಮಾನತು

ಬೆಂಗಳೂರು: ಬೀದಿ ದೀಪಗಳ ನಿರ್ವಹಣೆಯಲ್ಲಿ ಗಂಭೀರ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ, ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರಾದ (ವಿದ್ಯುತ್) ಹೆಚ್. ವಿ. ರಮೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸಚಿವರ ದಿಢೀರ್ ಪರಿವೀಕ್ಷಣೆ ಮತ್ತು ಕರಾಳ ಸತ್ಯ ಬಯಲು ದಿನಾಂಕ 28.08.2026ರ ಸಂಜೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು ಹಡ್ಸನ್ ವೃತ್ತದಿಂದ ಚಾಲುಕ್ಯ ವೃತ್ತದವರೆಗಿನ ರಸ್ತೆಯಲ್ಲಿ ಖುದ್ದಾಗಿ ವಿದ್ಯುತ್ ಬೀದಿ ದೀಪಗಳ ಪರಿವೀಕ್ಷಣೆ ನಡೆಸಿದರು. ಈ ವೇಳೆ ಒಟ್ಟು 222 […]

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

ಗದಗ : “ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬರ ಪರಿಸ್ಥಿತಿ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. “ಜಿಲ್ಲಾ ಸಚಿವರು ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ, ವಾಸ್ತವಾಂಶದ ವರದಿ ನೀಡಿದ್ದಾರೆ. ಅದರ ಜೊತೆಗೆ ಅಧಿಕಾರಿಗಳು ಅಧ್ಯಯನ […]