ಸೊರಬದಲ್ಲಿ 67ಕ್ಕೂ ಹೆಚ್ಚು ಗ್ರಾಮಗಳ ಸಮಸ್ಯೆ ಆಲಿಸಿದ ಸಚಿವ ಮಧು ಬಂಗಾರಪ್ಪ

ಸೊರಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ, ಸೊರಬ ವಿಧಾನಸಭಾ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರು ಆನವಟ್ಟಿಯಲ್ಲಿ 13 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 67ಕ್ಕೂ ಹೆಚ್ಚು ಗ್ರಾಮಗಳ ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ, ಗ್ರಾಮಗಳ ವಿವಿಧ ಸಮಸ್ಯೆಗಳನ್ನು ಆಲಿಸಿದರು. ಆನವಟ್ಟಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಕಾರ್ಯಕರ್ತರು, ಯುವ ಘಟಕದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಘಟಕದ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು ಹಾಗೂ […]

ಸಹಪಾಠಿಯ ಬ್ಲಾಕ್‌ಮೇಲ್ ಕಿರುಕುಳಕ್ಕೆ ಬೇಸತ್ತು ಕೆರೆಗೆ ಹಾರಿ ಯುವತಿ ಆತ್ಮಹ*ತ್ಯೆ: ಡೆತ್‌ನೋಟ್‌ನಲ್ಲಿ ಕರಾಳ ಸತ್ಯ ಬಹಿರಂಗ

ಬೆಂಗಳೂರು: ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಕಾಲೇಜು ಸಹಪಾಠಿ ನೀಡುತ್ತಿದ್ದ ನಿರಂತರ ಮಾನಸಿಕ ಹಿಂಸೆ ತಾಳಲಾರದೆ 22 ವರ್ಷದ ಯುವತಿಯೊಬ್ಬಳು ಕೆರೆಗೆ ಧುಮುಕಿ ಪ್ರಾಣ ಬಿಟ್ಟಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವತಿ ಮೃತ ದುರ್ದೈವಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಲಮಕ್ಕಿ ಮೂಲದ ವಾಣಿ (22) ಎಂದು ಗುರುತಿಸಲಾಗಿದೆ. ಉತ್ತಮ ಭವಿಷ್ಯದ ಕನಸಿನೊಂದಿಗೆ ಸುಮಾರು ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದ ಈಕೆ, ನಗರದ ಪ್ರಸಿದ್ಧ ಚಿನ್ನದ ಆಭರಣ ಮಳಿಗೆಯೊಂದರಲ್ಲಿ […]

ಹೈದರಾಬಾದ್‌ನಲ್ಲಿ ಯಶ್ ‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್ ವೇಳೆ ಅವಘಡ: ಫ್ಲಡ್‌ಲೈಟ್ ಕಂಬ ಬಿದ್ದು ವಿದ್ಯಾರ್ಥಿಗಳಿಗೆ ಗಾಯ

ಹೈದರಾಬಾದ್: ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಪ್ರೀ-ರಿಲೀಸ್ ಸಮಾರಂಭದಲ್ಲಿ ಆಕಸ್ಮಿಕ ದುರ್ಘಟನೆಯೊಂದು ಸಂಭವಿಸಿದ್ದು, ಹಲವು ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಗಾಯಗೊಂಡಿದ್ದಾರೆ. ನಗರದ ಮಲ್ಲಾರೆಡ್ಡಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಈ ಬೃಹತ್ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ವೇದಿಕೆ ಬಳಿ ಧರೆಗುರುಳಿದ ಕಂಬ ಆಗಸ್ಟ್ 26ರಂದು ಚಿತ್ರ ಜಗತ್ತಿನಾದ್ಯಂತ ತೆರೆಕಾಣಲಿರುವ ಹಿನ್ನೆಲೆಯಲ್ಲಿ ಈ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಯಶ್ ಅವರು ವೇದಿಕೆ ಮೇಲೆ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ, ಸಮೀಪದಲ್ಲೇ ಅಳವಡಿಸಲಾಗಿದ್ದ ದೈತ್ಯ ಸೌಂಡ್‌ಬಾಕ್ಸ್ […]

ಸರ್ಕಾರಿ ಶಾಲಾ-ಕಾಲೇಜುಗಳ ಎಲ್ಲ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿವೇತನ: ಸಚಿವ ಬಸವರಾಜ ರಾಯರಡ್ಡಿ

ಬೆಂಗಳೂರು : ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 12ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ‘ದೀಪಿಕಾ’ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು. ಶನಿವಾರ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ದೀಪಿಕಾ ಉನ್ನತ ಶಿಕ್ಷಣ […]

ಮುಂದಿನ ದಿನಗಳಲ್ಲಿ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್‌ ವಿತರಣೆ: ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ: ಬಜೆಟ್‌ನಲ್ಲಿ ಪ್ರಕಟಿಸಿದಂತೆಯೇ  ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಿಸಲಾಗಿದೆ. ಮುಂದಿನ  ದಿನಗಳಲ್ಲಿ ನೋಟ್‌ ಬುಕ್‌ಗಳನ್ನು ಕೂಡ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದ ಸೈನ್ಸ್‌ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ʻಕಲಾಂ ಸೆಂಟರ್‌ʼಗೆ ಭೇಟಿ  ನೀಡಿದ ಸಚಿವರು, ಕಾಲೇಜಿನ […]

ವಂಚನೆ ಆರೋಪದಡಿ ಸ್ಯಾಂಡಲ್ ವುಡ್ ನಿರ್ದೇಶಕ ಓಂ ಪ್ರಕಾಶ್ ರಾವ್ ದಂಪತಿ ವಿರುದ್ಧ ದೂರು ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಓಂ ಪ್ರಕಾಶ್ ರಾವ್ ಹಾಗೂ ಅವರ ಪತ್ನಿ ಡೆನ್ನಿಸಾ ಪ್ರಕಾಶ್ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ ಹಾಗೂ ಬೆದರಿಕೆಯ ಗಂಭೀರ ಆರೋಪ ಕೇಳಿಬಂದಿದೆ. ಚಿತ್ರ ನಿರ್ಮಾಣದ ನೆಪದಲ್ಲಿ ಬರೋಬ್ಬರಿ ₹3.85 ಕೋಟಿ ಸಾಲ ಪಡೆದು ಮರುಪಾವತಿಸದೆ ವಂಚಿಸಿದ್ದಾರೆ ಎಂದು ಆರೋಪಿಸಿ ನಟ ಭಾಸ್ಕರ್ ಶೆಟ್ಟಿ, ವಾಸುದೇವ ರೆಡ್ಡಿ ಹಾಗೂ ಇತರರು ಪೊಲೀಸ್ ಆಯುಕ್ತರ ಮೆಟ್ಟಿಲೇರಿದ್ದಾರೆ. ಏನಿದು ವಂಚನೆ ಪ್ರಕರಣ? ‘ಫೀನಿಕ್ಸ್’ ಎಂಬ ಶೀರ್ಷಿಕೆಯ ಚಲನಚಿತ್ರ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದ […]

ಕಾಂಗ್ರೆಸ್ ಭ್ರಷ್ಟಾಚಾರ ಮಾಡದೆ ಬದುಕುವುದೇ ಇಲ್ಲ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ವಾಗ್ಧಾಳಿ

ಬೆಂಗಳೂರು: ಸಿಕ್ಕ ಸಿಕ್ಕ ಕಡೆಯಲ್ಲಿ ಲೂಟಿ ಮಾಡುವ ಕಾಂಗ್ರೆಸ್ ಭ್ರಷ್ಟಾಚಾರ ಮಾಡದೆ ಬದುಕುವುದೇ ಇಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಾಗೂ ಅಧಿಕಾರಿಗಳು ಲೂಟಿ ಮಾಡುತ್ತಿದ್ದಾರೆ. ಅಧಿಕಾರಿಗಳು ಲೂಟಿ ಮಾಡಲು ಸರ್ಕಾರವೇ ಅವಕಾಶ ನೀಡುತ್ತಿದೆ ಎಂದರು.  ರಾಜ್ಯದಲ್ಲಿ ಭ್ರಷ್ಟಾಚಾರ ಸಂಪೂರ್ಣವಾಗಿ ತಾಂಡವವಾಡುತ್ತಿದೆ. ವಾಲ್ಮೀಕಿ  ನಿಗಮದಿಂದ ಆರಂಭವಾಗಿ ಬೆಂಗಳೂರು ರಸ್ತೆ ಗುಂಡಿಗಳನ್ನ ತುಂಬಲು ಲಕ್ಷಾಂತರ ಕೋಟಿವರೆಗೆ […]

ಮಕ್ಕಳ ಕನಸು ನನಸಾಗಲು ದೇವಸ್ಥಾನಕ್ಕಿಂತ ಶಾಲೆ ದೊಡ್ಡದಾಗಿರಬೇಕು : ಸಚಿವ ಎಸ್.ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಂದೇ ಪ್ರಾಂಗಣದಲ್ಲಿ ಎಲ್‌.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಎರಡರಲ್ಲೂ ಗುಣಾತ್ಮಕ ಶಿಕ್ಷಣ ನೀಡುವ, ಸ್ಮಾರ್ಟ್ ತರಗತಿ ಹಾಗೂ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ 1000 ಸುಸಜ್ಜಿತ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ (Karnataka Public School) ಮಾದರಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಹಂತಹಂತವಾಗಿ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ […]

ಬೆಳ್ತಂಗಡಿಯಲ್ಲಿ ಜಮೀನು ಕೊಡಿಸುವುದಾಗಿ ₹1 ಕೋಟಿಗೂ ಅಧಿಕ ಹಣ ಪಡೆದು ವಂಚನೆ, ಎಫ್‌ಐಆರ್ ದಾಖಲು

ದಕ್ಷಿಣ ಕನ್ನಡ: ಜಮೀನು ನೋಂದಣಿ ಮಾಡಿಸಿಕೊಡುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ₹1 ಕೋಟಿಗೂ ಅಧಿಕ ಮೊತ್ತ ಪಡೆದು ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ‘ಸಸ್ಯೋದ್ಯಾನ’ ನಿವಾಸಿಗಳಾದ ಕೆ. ಸೋಮನಾಥ ನಾಯಕ್ ಹಾಗೂ ರಂಜನ್ ರಾವ್ ಎರ್ಡೂರು ವಿರುದ್ಧ ಬೆಳ್ತಂಗಡಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 318(4) ಮತ್ತು 3(5)ರ ಅಡಿಯಲ್ಲಿ ಪ್ರಕರಣ (ಕ್ರೈಂ ನಂ: 91/2026) ದಾಖಲಿಸಿಕೊಂಡಿದ್ದಾರೆ. ಮಂಗಳೂರಿನ ಕೊಟ್ಟಾರ ಚೌಕಿ ನಿವಾಸಿ ಶಶಿಧರ ಅಚ್ಯುತ ತೋಟಂತಿಲ (61) ಅವರು ನೀಡಿದ ದೂರಿನನ್ವಯ […]

ಖ್ಯಾತ ಬಹುಭಾಷಾ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಇನ್ನಿಲ್ಲ

ಚೆನ್ನೈ: ಕನ್ನಡ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ದಶಕಗಳ ಕಾಲ ತಮ್ಮ ವಿಶಿಷ್ಟ ಅಭಿನಯದ ಮೂಲಕ ಛಾಪು ಮೂಡಿಸಿದ್ದ ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ (95) ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಗಳು ಮತ್ತು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ದಕ್ಷಿಣ ಭಾರತದ ಚಿತ್ರರಂಗದಲ್ಲಿ ಶೋಕದ ಛಾಯೆ ಆವರಿಸಿದೆ. ಐಸಿಯುನಲ್ಲಿ ಮುಂದುವರಿದಿದ್ದ ತುರ್ತು ಚಿಕಿತ್ಸೆ ಉಸಿರಾಟದ ತೊಂದರೆ ಮತ್ತು ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಕೆಲ ದಿನಗಳ […]