ಗಣೇಶ ಚತುರ್ಥಿ ಪ್ರಯುಕ್ತ ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲಗಳ ಸಂಚಾರ

ಬೆಂಗಳೂರು: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ನೈರುತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ. 1. ರೈಲು ಸಂಖ್ಯೆ 06563/06564 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ (1 ಟ್ರಿಪ್). ರೈಲು ಸಂಖ್ಯೆ 06563 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ಎಕ್ಸ್ಪ್ರೆಸ್ ವಿಶೇಷ ರೈಲು 11.09.2026 ರಂದು 19:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ 08:25 ಗಂಟೆಗೆ ಬೆಳಗಾವಿ ತಲುಪಲಿದೆ. ಈ ರೈಲು ಚಿಕ್ಕಬಾಣಾವರ […]

ನಗರ ಮಕ್ಕಳನ್ನು ಹಳ್ಳಿಯ ಬೇರುಗಳಿಗೆ ಜೋಡಿಸಲು ‘ಗ್ರಾಮಾನುಭವ’ ಯೋಜನೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಗರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಭಾರತದ ನೈಜ ಬದುಕು ಹಾಗೂ ಕೃಷಿ ಸಂಸ್ಕೃತಿಯ ಪ್ರಾಯೋಗಿಕ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ‘ಗ್ರಾಮಾನುಭವ’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರಲು ಅಧಿಕೃತ ಆದೇಶ ಹೊರಡಿಸಿದೆ. ಯೋಜನೆಯ ರೂಪುರೇಷೆ ಮತ್ತು ಉದ್ದೇಶ ಈ ಯೋಜನೆಯಡಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯ ನಗರ ಪ್ರದೇಶಗಳಲ್ಲಿರುವ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 8, 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಹಳ್ಳಿಗಳಿಗೆ ಕರೆದೊಯ್ಯಲಾಗುತ್ತದೆ. ವಿದ್ಯಾರ್ಥಿಗಳು ಒಂದು ರಾತ್ರಿ ಹಾಗೂ ಎರಡು […]

ಸುಪ್ರೀಂ ಕೋರ್ಟ್‌ನಲ್ಲಿ ಧರ್ಮಸ್ಥಳ ಸಂಘಕ್ಕೆ ಗೆಲುವು: ಸಾಕ್ಷಿ ಇಲ್ಲದ್ದಕ್ಕೆ ರಂಜನ್ ರಾವ್ ಯೆರ್ದೂರ್ ಅರ್ಜಿ ವಜಾ

ನವದೆಹಲಿ / ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಸಂಸ್ಥೆಯು ಚಾಲ್ತಿಯಲ್ಲಿರುವ ನಿಯಮಗಳನ್ನು ಮೀರಿ ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದೆ ಹಾಗೂ ಕಾನೂನುಬಾಹಿರವಾಗಿ ಮನಿ ಲೆಂಡಿಂಗ್ ದಂಧೆಯಲ್ಲಿ ತೊಡಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅರ್ಜಿದಾರರು ಹೊರಿಸಿರುವ ಆರೋಪಗಳಲ್ಲಿ ಯಾವುದೇ ವಾಸ್ತವಾಂಶವಾಗಲಿ, ಬಲವಾದ ಆಧಾರಗಳಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದ ಅತ್ಯುನ್ನತ ನ್ಯಾಯಾಲಯವು ವಿಚಾರಣೆಯನ್ನು ವಜಾಗೊಳಿಸಿ ಆದೇಶಿಸಿದೆ. ವಿವಾದದ ಹಿನ್ನೆಲೆ ನಾಗರಿಕ ಸೇವಾ ಟ್ರಸ್ಟ್‌ನ ರಂಜನ್ ರಾವ್ ಯೆರ್ದೂರ್ ಅವರು […]

ಬೆಂಗಳೂರು ನಗರ ಪೊಲೀಸರಿಗೆ ಗುಡ್ ನ್ಯೂಸ್: ಸಿಬ್ಬಂದಿ ಆರೋಗ್ಯ, ಯೋಗಕ್ಷೇಮ ಸುಧಾರಣೆಗೆ ಪ್ರಾಜೆಕ್ಟ್ ಖುಷಿ ಆರಂಭ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಯ ಆರೋಗ್ಯ ಮತ್ತು ಯೋಗಕ್ಷೇಮ ಸುಧಾರಿಸುವ ಉದ್ದೇಶದಿಂದ ರೂಪಿಸಿರುವ ವೈಜ್ಞಾನಿಕ ಹಾಗೂ ರಚನಾತ್ಮಕ ‘ಪ್ರಾಜೆಕ್ಟ್ ಖುಷಿ’ ಆರೋಗ್ಯ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ನೂರಾರು ಪೊಲೀಸ್ ಸಿಬ್ಬಂದಿಗೆ ಅನುಕೂಲವಾಗಲಿರುವ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹ್ಯಾಪಿಯೆಸ್ಟ್ ಹೆಲ್ತ್, ಟೈಟಾನ್ ಕಂಪನಿ ಲಿಮಿಟೆಡ್ ಮತ್ತು ಬೆಂಗಳೂರು ಇಂದಿರಾನಗರ ರೋಟರಿ ಟ್ರಸ್ಟ್ ಸಹಯೋಗದಲ್ಲಿ ಈ ಯೋಜನೆ ಜಾರಿಯಾಗುತ್ತಿದೆ. ರೋಗಗಳು ಬರುವ […]

ಶೀಘ್ರದಲ್ಲೇ 25 ತಾಲ್ಲೂಕುಗಳು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಬರ ಪರಿಶೀಲನೆ ಮುಕ್ತಾಯವಾಗಿಲ್ಲ. ಹಂತ ಹಂತವಾಗಿ ನಡೆಯುತ್ತಿದೆ. ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಈಗಾಗಲೇ ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದ್ದು, ಎರಡನೇ ಹಂತದ ಪರಿಶೀಲನೆ ನಡೆಯುತ್ತಿದೆ. 25 ತಾಲ್ಲೂಕುಗಳು ಬರ ಪೀಡಿತ ಪ್ರದೇಶಗಳೆಂದು ಘೋಷಣೆಗೆ ಅರ್ಹತೆ ಪಡೆದಿದ್ದು, ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬರ ಪೀಡಿತ ಪ್ರದೇಶಗಳ ಘೋಷಣೆ ಪ್ರಕ್ರಿಯೆ […]

ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಉದ್ಘಾಟಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜಧಾನಿಯ ಬಿ.ಟಿ.ಎಂ. ಲೇಔಟ್ ವಿಧಾನಸಭಾ ಕ್ಷೇತ್ರದ ಕೋರಮಂಗಲದಲ್ಲಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರದಲ್ಲಿ (ಕಸ ರಸ ಕೇಂದ್ರ) ನೂತನವಾಗಿ ನಿರ್ಮಿಸಲಾಗಿರುವ ‘ಘನತ್ಯಾಜ್ಯ ಕಲಿಕಾ ಕೇಂದ್ರ’ ಹಾಗೂ ನಗರದ ಪ್ರಪ್ರಥಮ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಅನ್ನು ಶಾಸಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರ ಸಮ್ಮುಖದಲ್ಲಿ ಇಂದು ಲೋಕಾರ್ಪಣೆಗೊಳಿಸಲಾಯಿತು. ಲ್ಯಾಂಡ್‌ಫಿಲ್ ಮುಕ್ತ ನಗರಕ್ಕೆ ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್ ಗಾರ್ಮೆಂಟ್ಸ್ ಹಾಗೂ ಟೈಲರಿಂಗ್ ಅಂಗಡಿಗಳಿಂದ ಹೊರಬರುವ ವಸ್ತ್ರ ತ್ಯಾಜ್ಯವನ್ನು ಮರುಬಳಕೆ ಮಾಡುವ ಮೂಲಕ ‘ಲ್ಯಾಂಡ್‌ಫಿಲ್ ಮುಕ್ತ ನಗರ’ ನಿರ್ಮಿಸುವ ಪ್ರಮುಖ […]

ಕಾನ್ಸ್‌ಟೇಬಲ್ ಪರೀಕ್ಷೆ: ಒಂದೇ ದಿನದಲ್ಲಿ ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು: ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (CAR/DAR) ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸೆ.6ರಂದು ಲಿಖಿತ ಪರೀಕ್ಷೆ ನಡೆಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಒಂದೇ ದಿನದಲ್ಲಿ ಅದರ ಕೀ ಉತ್ತರಗಳನ್ನೂ ಪ್ರಕಟಿಸಿದೆ. ಈ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಕೆಇಎ ಪೋರ್ಟಲ್ ನಲ್ಲಿನ ಲಿಂಕ್ ಮೂಲಕ ಸಲ್ಲಿಸಬಹುದು. ಇದಕ್ಕೆ ಸೆ.9ರಂದು ಬೆಳಿಗ್ಗೆ 10.30ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು. ಪೂರ್ಣ ಮಾಹಿತಿಯೊಂದಿಗೆ ಆಕ್ಷೇಪಣೆ ಸಲ್ಲಿಸಬೇಕು. ಪ್ರತಿ ಆಕ್ಷೇಪಣೆಗೂ […]

ಇನ್ಮುಂದೆ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಲ್ಲಿ ಶೇ.7.5ರಷ್ಟು ಮೀಸಲಾತಿ: ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಭರ್ತಿಗೆ ಸಂಬಂಧಿಸಿದಂತೆ ಗ್ರಾಮೀಣ ಅಭ್ಯರ್ಥಿಗಳ ಮೀಸಲಾತಿ ನಿಯಮಾವಳಿಗೆ ಮಹತ್ವದ ತಿದ್ದುಪಡಿ ತರಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. 2006ರ ‘ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳಿಗೆ ಅಭ್ಯರ್ಥಿಗಳ ಆಯ್ಕೆ ನಿಯಮಾವಳಿ’ಗೆ ತಿದ್ದುಪಡಿ ತರಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ನೀಡಲಾಗುವ ಒಟ್ಟು ಶೇಕಡಾ 15ರಷ್ಟು ಗ್ರಾಮೀಣ ಮೀಸಲಾತಿಯಲ್ಲಿ ಆಂತರಿಕ ವರ್ಗೀಕರಣ (ಹಾರಿಜಾಂಟಲ್ ಮೀಸಲಾತಿ) ಮಾಡಲು ಪ್ರಸ್ತಾಪಿಸಲಾಗಿದೆ. ಮೀಸಲಾತಿಯ […]

ಶೀಘ್ರದಲ್ಲೇ ಮತ್ತಷ್ಟು ತಾಲ್ಲೂಕು ಬರಪೀಡಿತವೆಂದು ಘೋಷಣೆ : ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ನೈಸ್ ಯೋಜನೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನೈಸ್ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರ ಕಾನೂನು ಉಲ್ಲಂಘಿಸಿ ಸಂಪುಟ ತೀರ್ಮಾನ ಕೈಗೊಂಡಿದೆ ಎಂದು ಬಹಿರಂಗ ಪತ್ರ ಬರೆದಿರುವ ಬಗ್ಗೆ ಗಮನ ಸೆಳೆದಾಗ, “ನಾವು ಏನು ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡುತ್ತೇವೆ. ಕಾನೂನು ಅಭಿಪ್ರಾಯ ಪಡೆದುಕೊಳ್ಳುತ್ತೇವೆ. ಎಲ್ಲವನ್ನೂ […]

ಗ್ಲೋಬಲ್ ಚೆಸ್ ಲೀಗ್‌ನಲ್ಲಿ ಜಾವಾ ಆಲ್ ಸ್ಟಾರ್ಸ್ 42 ಬಾಬರ್ ಅನಾವರಣ

ಬೆಂಗಳೂರು: ದ್ವಿಚಕ್ರ ವಾಹನ ಪ್ರಿಯರಿಗೊಂದು ಸಿಹಿ ಸುದ್ದಿ. ‘ಜಾವಾ ಆಲ್ ಸ್ಟಾರ್ಸ್’ ಸರಣಿಯ ಎರಡನೇ ಅಧ್ಯಾಯವಾಗಿ ಬಹುನಿರೀಕ್ಷಿತ ‘ಜಾವಾ ಆಲ್ ಸ್ಟಾರ್ಸ್ 42 ಬಾಬರ್’ ಮೋಟಾರ್‌ಸೈಕಲ್ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಗ್ಲೋಬಲ್ ಚೆಸ್ ಲೀಗ್ 2026ರ ಸಾಂಸ್ಕೃತಿಕ ವೇದಿಕೆಯಲ್ಲಿ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಈ ನೂತನ ಮಾದರಿಯನ್ನು ವೈಭವಪೂರ್ವಕವಾಗಿ ಅನಾವರಣಗೊಳಿಸಿದರು. ಸಾಹಸ, ಧೈರ್ಯ ಹಾಗೂ ಆಕರ್ಷಕ ವಿನ್ಯಾಸದ ನೈಜ ಸಂಕೇತವಾಗಿ ಈ ಬೈಕ್ ರೂಪುಗೊಂಡಿದೆ. ಖ್ಯಾತ ಬ್ರ್ಯಾಂಡ್‌ನ ವಿಶಿಷ್ಟ ವಿನ್ಯಾಸ ಹಾಗೂ ವೈಶಿಷ್ಟ್ಯಗಳು ಭಾರತದ ಪ್ರಥಮ […]