ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ನಗರ ಪಾಲಿಕೆ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವರಾಹಿ ದೇವಸ್ಥಾನದ ಬಳಿ ಬಿಡಾಡಿ ವಾಹನಗಳ ಟೋಯಿಂಗ್ ಕಾರ್ಯಕ್ಕೆ ಗಾಂಧಿನಗರದ ಎಂ.ಡಿ ಬ್ಲಾಕ್‌ನ ವಿರಾಹಿ ದೇವಸ್ಥಾನದ ಬಳಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಚಾಲನೆ ನೀಡಿದರು.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ 1034 ವಾಹನಗಳಿಗೆ ನೋಟಿಸ್‌ಗಳನ್ನು ಅಂಟಿಸಲಾಗಿದ್ದು, 72 ವಾಹನಗಳ ಮಾಲಿಕರು ದಂಡ ಪಾವತಿಸಿ ವಾಹನಗಳನ್ನು ಬಿಡಿಸಿಕೊಂಡಿದ್ದಾರೆ ಎಂದೂ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಸ್ತ್ರಂ ತಂತ್ರಾಂಶದದಲ್ಲಿ ಈವರೆಗೆ ಗುರುತಿಸಿರುವ ಬಿಡಾಡಿ ವಾಹನಗಳ ಮಾಹಿತಿಯನ್ನು ಸಹ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಸರ್ಕಾರ ಸಹ ಹಂಚಿಕೊಂಡಿದೆ. ಈ ಮೂಲಕ ಸಂಚಾರಿ ಪೊಲೀಸರು ಗುರುತಿಸಿರುವ ಸಂಖ್ಯೆಯು 2751 ಹಾಗೂ ಸಾರ್ವಜನಿಕರು ಗುರುತಿರುವ ಸಂಖ್ಯೆ 1498 ಆಗಿದೆ. ಒಟ್ಟು ಬಿಡಾಡಿ ವಾಹನಗಳ ಸಂಖ್ಯೆಯು 4249 ಆಗಿದೆ.
ಇದೀಗ ಅಧಿಕೃತವಾಗಿ ವಾಹನಗಳ ಒತ್ತುವರಿ ತೆರವು ಕಾರ್ಯಾಚರಣೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ವಾಹನಗಳನ್ನು ನಿಲ್ಲಿಸಿರುವವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ, ಸುದೀರ್ಘ ವರ್ಷದಿಂದ ಬೀದಿಬದಿ ವಾಹನಗಳನ್ನು ನಿಲ್ಲಿಸಿರುವ ವಾಹನಗಳ ಒತ್ತುವರಿ ತೆರವು ಹಾಗೂ ಎಲ್ಲೆಂದರಲ್ಲಿ ಕಸ ಎಸೆಯುವವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
ಈ ವಿಚಾರವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಮಾತನಾಡಿ, ರಸ್ತೆ ಸಾರ್ವಜನಿಕರ ಆಸ್ತಿ. ಆದರೆ, ಕೆಲವರು ರಸ್ತೆಬದಿಯಲ್ಲೇ ತಮ್ಮ ವಾಹನಗಳನ್ನು ನಿಲುಗಡೆಗೊಳಿಸಿ ವರ್ಷಗಳೇ ಕಳೆದರೂ ಅಲ್ಲಿಂದ ತೆಗೆಯದೆ, ರಸ್ತೆಗಳನ್ನು ತಮ್ಮ ಸ್ವಂತ ಆಸ್ತಿ ಎಂಬಂತೆ ವರ್ತಿಸುವುದು ಸರಿಯಲ್ಲ ಎಂದರು.
ಸ್ಟಿಕ್ಕರ್ ಅಂಟಿಸಿಯೂ ಮಾಲೀಕರು ತಮ್ಮ ವಾಹನಗಳನ್ನು ತೆರವುಗೊಳಿಸದ ಕಾರಣ ಜುಲೈ 18ರ ಶನಿವಾರ ವಾಹನಗಳ ಟೋಯಿಂಗ್‌ಗೆ ಅಧಿಕೃತ ಚಾಲನೆ ನೀಡಲಾಗಿದೆ ಎಂದಿದ್ದಾರೆ.
.ಇದರಿಂದ ವಾಹನ ಸವಾರರು ಹಾಗೂ ಪಾದಾಚಾರಿಗಳಿಗೆ ತೊಂದರೆ. ಕೃತಕ ಟ್ರಾಫಿಕ್ ಸಮಸ್ಯೆಯೂ ತಲೆದೋರುತ್ತಿದೆ. ಹೀಗಾಗಿ ಕಳೆದ ಹತ್ತು ದಿನಗಳ ಹಿಂದೆಯೇ ಇಂತಹ ವಾಹನಗಳ ತೆರವಿಗೆ ಸ್ಟಿಕ್ಕರ್ ಅಭಿಯಾನ ಆರಂಭಿಸಲಾಗಿತ್ತು ಎಂದರು.





