ಲಾಯರ್‌ ಬದಲಾವಣೆ : ಸುಪ್ರೀಂಗೆ‌ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ ದರ್ಶನ್

Darshan 

ಬೆಂಗಳೂರು: ಬಿಡುಗಡೆ ಭಾಗ್ಯ ಸಿಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಇದೀಗ ವಕೀಲರನ್ನು ಬದಲಾಯಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇದರ ಬೆನ್ನಲ್ಲೇ ನೂತನ ವಕೀಲರ ಮೂಲಕ ಪ್ರಕರಣದ 60 ಸಾಕ್ಷಿಗಳ ವಿಚಾರಣೆಗೆ ನಿಗದಿಪಡಿಸಲಾಗಿರುವ ಒಂದು ವರ್ಷದ ಗಡುವನ್ನು ಕಡಿತಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಇದೀಗ ತಿಳಿದು ಬಂದಿದೆ.

ಇದರಲ್ಲಿ ಒಂದು ವರ್ಷದ ಅವಧಿಯನ್ನು ಮರುಪರಿಶೀಲಿಸಿ, ಕಡಿಮೆ ಅವಧಿ ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದ್ದು, ಕೇಸ್ ವಾದದಿಂದ ವಕೀಲ ಸುನಿಲ್ ಕುಮಾರ್ ಹಿಂದೆ ಸರಿದು 59ನೇ ಸೆಷನ್ಸ್ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿಕೆ ಮಾಡಿದ್ದಾರೆ ಎನ್ನಲಾಗಿದೆ.

ದರ್ಶನ್, ಲಕ್ಷ್ಮಣ್ ಮತ್ತು ನಾಗರಾಜ್ ಸೇರಿದಂತೆ ಮೂವರು ಆರೋಪಿಗಳ ಪರ ವಕಾಲತ್ತಿನಿಂದ ಹಿಂದೆ ಸರಿಯೋದಾಗಿ ಕೋರ್ಟ್‌ಗೆ ಮಾಹಿತಿ ನೀಡಿದ್ದು, ಈ ವೇಳೆ ನ್ಯಾಯಾಲಯವು ದರ್ಶನ್‌ಗೆ, ಹಿರಿಯ ವಕೀಲ ಹಷ್ಮತ್ ಪಾಷಾ ನಿಮ್ಮ ಪರ ವಕಾಲತ್ತು ಹಾಕಿದ್ದಾರೆ ಎಂದು ಹೇಳಿದೆ.

ಪ್ರಕರಣದ ದಾಖಲೆಗಳನ್ನು ನೂತನ ವಕೀಲರಿಗೆ ಹಸ್ತಾಂತರಿಸುವಂತೆ ಕೋರ್ಟ್ ಮಾಹಿತಿ ನೀಡಿದ್ದು, ದಾಖಲೆಗಳನ್ನು ಈಗಾಗಲೇ ಕುಟುಂಬಸ್ಥರಿಗೆ ನೀಡಲಾಗಿದೆ ಎಂದು ಸುನೀಲ್ ಪರ ವಕೀಲರು ಕೋರ್ಟ್‌ಗೆ ಮಾಹಿತಿ ತಿಳಿಸಿರುವುದು ಬೆಳಕಿಗೆ ಬಂದಿದೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others