ಅತ್ತCJP ಮುಖ್ಯಸ್ಥ ಅಭೀಜಿತ್ ದೀಪ್ಕೆ ಎಚ್ಚರಿಕೆ- ಇತ್ತ ಪ್ರಧಾನ್‌ ರಾಜೀನಾಮೆ: ಕಾರಣ ಇಲ್ಲಿದೆ ನೋಡಿ

ದೆಹಲಿ,: ನೀಟ್ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿದೆ. ಇದರ ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರಿಗೆ ಟೈಫಾಯ್ಡ್ ದೃಢಪಟ್ಟಿದ್ದು, ಆದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಎಕ್ಸ್​​​​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದರು.

. ಪರೀಕ್ಷಾ ಅಕ್ರಮಗಳ ವಿರುದ್ಧ ಹೊಣೆಗಾರಿಕೆ ನಿಗದಿಪಡಿಸುವ ನಮ್ಮ ಬೇಡಿಕೆ ಜೀವಂತವಾಗಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಸಿಜೆಪಿ ಹೋರಾಟ ನಿಲ್ಲುವುದಿಲ್ಲ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ 26 ದಿನಗಳ ಸುದೀರ್ಘ ಉಪವಾಸ ಮುಷ್ಕರವನ್ನು ಹಿಂಪಡೆದಿರುವುದಕ್ಕೆ ಅಭೀಜಿತ್ ದೀಪ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ಸೋನಮ್ ವಾಂಗ್‌ಚುಕ್ ಸರ್ ತಮ್ಮ ಉಪವಾಸ ಹಿಂಪಡೆದಿರುವುದು ನಮಗೆ ತೀವ್ರ ಸಮಾಧಾನ ತಂದಿದೆ

ಸಾಮಾಜಿಕ ಜಾಲತಾಣ ‘ಎಕ್ಸ್’ (X)ನಲ್ಲಿ ವೀಡಿಯೊ ಸಂದೇಶ ಹಂಚಿಕೊಂಡಿರುವ ಅಭೀಜಿತ್ ದೀಪ್ಕೆ, ತಮ್ಮ ಅನಾರೋಗ್ಯದ ಸ್ಥಿತಿ ಪ್ರಸ್ತುತ ನಡೆಯುತ್ತಿರುವ ಹೋರಾಟದ ಮೇಲೆ ಯಾವುದೇ ಪರಿಣಾಮ ಬೀರಲಾರದು ಎಂದು ತಿಳಿಸಿದ್ದಾರೆ. ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಯಶಸ್ವಿಯಾಗಿರುವುದಕ್ಕೆ ಬೆಂಬಲಿಗರು ಮತ್ತು ಪ್ರತಿಭಟನಾಕಾರರಿಗೆ ದೀಪ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಇದರ ಬೆನ್ನಲ್ಲೇ ಇದೀಗ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್‌ ಜನತಾ ಪಾರ್ಟಿ ವಿಜಯೋತ್ಸವ ಆಚರಿಸಿದೆ. ʼವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿʼ ಎಂದು ಸಿಜೆಪಿ ಪೋಸ್ಟ್‌ ಹಂಚಿಕೊಂಡಿದೆ.

ಹೊಸದಾಗಿ ರೂಪುಗೊಂಡ ವಿಡಂಬನಾತ್ಮಕ ರಾಜಕೀಯ ಗುಂಪಾದ ಸಿಜೆಪಿಯ ಸದಸ್ಯರು, ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದಂತೆ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಬೃಹತ್‌ ಪ್ರತಿಭಟನೆ ನಡೆಸಿತು. ಸಿಜೆಪಿ ಮತ್ತು ಕೇಂದ್ರದ ನಡುವಿನ ಮೂರನೇ ಸುತ್ತಿನ ಮಾತುಕತೆ ಹೊತ್ತಿನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಪ್ರಧಾನ್‌ ರಾಜೀನಾಮೆ ಘೋಷಿಸಿದ್ದಾರೆ.ವಿದ್ಯಾರ್ಥಿಗಳ ಮುಂದಿನ ನಡೆ ಏನು ಕಾದು ನೋಡಬೇಕಿದೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others