ತೆರವುಗೊಳಿಸಿರುವ ಫುಟ್‌ಪಾತ್‌ಗಳನ್ನು ನಿಯಮಿತವಾಗಿ ಹಾಗೂ ಅನಿರೀಕ್ಷಿತವಾಗಿ ಪರಿಶೀಲಿಸಬೇಕು’; ಕೃಷ್ಣ ಬೈರೇಗೌಡ

ಬೆಂಗಳೂರು: ತೆರವುಗೊಳಿಸಿರುವ ಫುಟ್‌ಪಾತ್‌ಗಳನ್ನು ನಿಯಮಿತವಾಗಿ ಹಾಗೂ ಅನಿರೀಕ್ಷಿತವಾಗಿ ಪರಿಶೀಲಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬೆಂಗಳೂರಿನ ವಿವಿಧೆಡೆ ಈಗಾಗಲೇ ತೆರವುಗೊಳಿಸಿರುವ ಫುಟ್‌ಪಾತ್‌ಗಳಲ್ಲಿ ಮತ್ತೆ ಒತ್ತುವರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮರುಒತ್ತುವರಿ ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು Greater Bengaluru Development ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಪ್ರತಿ ನಗರ ಪಾಲಿಕೆ ವ್ಯಾಪ್ತಿಯಲ್ಲೂ ಪೊಲೀಸ್ ಮತ್ತು ಪಾಲಿಕೆ ಅಧಿಕಾರಿಗಳನ್ನೊಳಗೊಂಡ ಜಂಟಿ ಟಾಸ್ಕ್‌ಫೋರ್ಸ್ ಇರಬೇಕು. ತೆರವುಗೊಳಿಸಿರುವ ಫುಟ್‌ಪಾತ್‌ಗಳನ್ನು ನಿಯಮಿತವಾಗಿ ಹಾಗೂ ಅನಿರೀಕ್ಷಿತವಾಗಿ ಪರಿಶೀಲಿಸಬೇಕು. ಮರು ಒತ್ತುವರಿ ಕಂಡುಬಂದರೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಬೈರೇಗೌಡ ನಿರ್ದೇಶಿಸಿದರು.

ಮರುಒತ್ತುವರಿ ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸುವುದು, ಒತ್ತುವರಿಗೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳುವುದು ಹಾಗೂ ನಿಯಮಾನುಸಾರ ಹೆಚ್ಚಿನ ದಂಡ ವಿಧಿಸುವುದು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಮರುಒತ್ತುವರಿ ಪ್ರಕರಣಗಳನ್ನು ತಕ್ಷಣ ಗುರುತಿಸಿ, ಛಾಯಾಚಿತ್ರ ಹಾಗೂ ಜಿಯೋ-ಟ್ಯಾಗ್‌ ಮಾಡಿದ ದಾಖಲೆಗಳೊಂದಿಗೆ ವರದಿ ಮಾಡಬೇಕು. ಮಾರ್ಷಲ್‌ಗಳು ಮತ್ತು ಬೀಟ್‌ ಪೊಲೀಸರು ಜಂಟಿಯಾಗಿ ನಿಯಮಿತ ತಪಾಸಣೆ ನಡೆಸಬೇಕು. ಎಂದು ಸಚಿವರು ಸೂಚಿಸಿದರು.

ನಗರದ ಐದು ನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಪೊಲೀಸ್ ಹಾಗೂ ನಾಗರಿಕ ಸಂಸ್ಥೆಗಳ ಅಧಿಕಾರಿಗಳನ್ನು ಒಳಗೊಂಡ ಜಂಟಿ ಟಾಸ್ಕ್‌ಫೋರ್ಸ್‌ಗಳನ್ನು ರಚಿಸಿ, ಫುಟ್‌ಪಾತ್‌ಗಳ ಮೇಲೆ ನಿರಂತರ ನಿಗಾ ವಹಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.

ಫುಟ್‌ಪಾತ್ ಒತ್ತುವರಿ ಕುರಿತಂತೆ ನಡೆದ ವರ್ಚುವಲ್‌ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆ ಪರಿಶೀಲಿಸಿದ ಸಚಿವರು, ಒತ್ತುವರಿ ತೆರವುಗೊಳಿಸಿದ ಬಳಿಕ ಅದೇ ಸ್ಥಳದಲ್ಲಿ ಮತ್ತೆ ಒತ್ತುವರಿ ಕಾಣಿಸಿಕೊಳ್ಳುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

“ಒತ್ತುವರಿ ತೆರವುಗೊಳಿಸುವುದಷ್ಟೇ ಸಾಕಾಗುವುದಿಲ್ಲ. ತೆರವುಗೊಳಿಸಿದ ಜಾಗ ಮತ್ತೆ ಒತ್ತುವರಿಯಾಗದಂತೆ ಶಾಶ್ವತ ವ್ಯವಸ್ಥೆ ರೂಪಿಸಬೇಕು,” ಎಂದು ಅವರು ಸೂಚಿಸಿದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others