ಕಾಂಗ್ರೆಸ್ ಹೈಕಮಾಂಡ್ ಅನ್ನು ಒಲಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಪ್ರಯತ್ನ : ಹೆಚ್‌ಡಿಡಿ ಸ್ಫೋಟಕ ಆರೋಪ

ಬೆಂಗಳೂರು: ಸಿದ್ದರಾಮಯ್ಯ ಇಳಿಸಲು ಹೈಕಮಾಂಡ್‌ಗೆ ಕೊಟ್ಟ ಭರವಸೆ ಈಡೇರಿಸಲು ಸಿಎಂ ಡಿಕೆ ಶಿವಕುಮಾರ್‌ ಬಿಡದಿ ಟೌನ್‌ಶಿಪ್‌ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಹೇಳಿದ್ದಾರೆ,

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಂದು ಜೆಪಿ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಡಿಕೆಶಿ ವಿರುದ್ಧ ಅತ್ಯಂತ ಗಂಭೀರ ಹಾಗೂ ಸ್ಫೋಟಕ ರಾಜಕೀಯ ಆರೋಪಗಳನ್ನು ಮಾಡಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ಮೇಲಿನ ದೌರ್ಜನ್ಯ ಹಾಗೂ ಜೆಎಂಸಿ ಸರ್ವೆ ವಿವಾದ ಈಗ ರಾಜಕೀಯವಾಗಿ ಭಾರೀ ಸದ್ದು ಮಾಡುತ್ತಿದೆ.

ಡಿಕೆಶಿಗೆ ನಾನು ಹೇಳ್ತೀನಿ, ಸಿದ್ದರಾಮಯ್ಯನವರನ್ನು ತೆಗೆಯಲು ಹೈಕಮಾಂಡ್‌ಗೆ ಕೊಟ್ಟ ಆಶ್ವಾಸನೆ ಫುಲ್‌ಫಿಲ್ ಮಾಡಿಕೊಳ್ಳಲು ಬೇರೆ ಮಾರ್ಗ ಹುಡುಕಿಕೊಳ್ಳಿ, ಬಡ ರೈತರ ಹೊಟ್ಟೆಯ ಮೇಲೆ ಹೊಡೆಯಬೇಡಿ. ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಒಪ್ಪಿದ್ದಾರೆ ಎಂದು ಡಿಕೆಶಿ ಸುಳ್ಳು ಪ್ರಸ್ತಾಪ ಮಾಡುತ್ತಿದ್ದಾರೆ. ಅವರ ಚಾಕಚಕ್ಯತೆ ನನಗೆ ಗೊತ್ತಿದೆ ಎಂದು ನೇರ ವಾಗ್ದಾಳಿ ನಡೆಸಿದರು.

ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶರೊಬ್ಬರು ಕೂಡ ಈ ಜಾಗಕ್ಕೆ ಭೇಟಿ ನೀಡಿ ಇಲ್ಲಿ ಯೋಜನೆ ಮಾಡಬಾರದು ಎಂದು ಹೇಳಿದ್ದಾರೆ ಇದನ್ನು ಸರ್ಕಾರ ಲಘುವಾಗಿ ತೆಗೆದುಕೊಳ್ಳಬಾರದು ಎಂದರು.ಬಿಡದಿ ಟೌನ್‌ಶಿಪ್ ಯೋಜನೆಯನ್ನು ತಕ್ಷಣವೇ ರದ್ದು ಮಾಡುವಂತೆ ಶಿವಕುಮಾರ್‌ ಅವರಿಗೆ 11 ಪುಟಗಳ ಸುದೀರ್ಘ ಪತ್ರ ಬರೆದಿರುವುದಾಗಿ ತಿಳಿಸಿದ ದೇವೇಗೌಡರು ಈ ಯೋಜನೆಯನ್ನು ಸರ್ಕಾರ ಕೈಬಿಡದಿದ್ದರೆ ನಾನು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಧರಣಿ ಕೂರಬೇಕಾಗುತ್ತದೆ. ಆ ಪರಿಸ್ಥಿತಿಗೆ ನನ್ನನ್ನು ತಳ್ಳಬೇಡಿ ಎಂದು ಎಚ್ಚರಿಸಿದರು.

2,555 ರೈತರರಿಗೆ 1 ರಿಂದ 5 ಗುಂಟೆ ಇದ್ದರೆ 1,653 ರೈತರಿಗೆ 10 ರಿಂದ 20 ಗುಂಟೆ ಜಾಗವಿದೆ. 2,257 ರೈತರಿಗೆ 20 ರಿಂದ 40 ಗುಂಟೆ ಇದ್ದರೆ 1,342 ರೈತರಿಗೆ 1 ರಿಂದ 2 ಎಕರೆ ಜಾಗವಿದೆ. ಯೋಜನಾ ವ್ಯಾಪ್ತಿಯಲ್ಲಿರುವ ಸಣ್ಣ ಹಿಡುವಳಿದಾರರ ಪರ ಬ್ಯಾಟ್ ಬೀಸಿದ ಅವರು, ಭೂಮಿ ಕಳೆದುಕೊಳ್ಳುತ್ತಿರುವ ರೈತರ ವಿವರ ನೀಡಿದರು.

ಇಷ್ಟೊಂದು ಬಡ ರೈತರನ್ನು ನೀವು ಎಲ್ಲಿಗೆ ಕಳುಹಿಸುತ್ತೀರಾ? ಭೂಮಿ ಕೊಡಲು ಒಪ್ಪಿರುವವರು ಹಳ್ಳಿಯಲ್ಲಿಲ್ಲ, ಬೆಂಗಳೂರಿನಲ್ಲಿದ್ದಾರೆ. ಅವರದ್ದು ಕೇವಲ 17 ಎಕರೆ ಜಾಗ ಮಾತ್ರ. ಆದರೆ 500 ಎಕರೆ ಇರೋ ನಿಜವಾದ ರೈತರ ಜಾಗಕ್ಕೆ ಇವರು ಹೋಗೇ ಇಲ್ಲ. ಉಳಿದಿದ್ದು ಸರ್ಕಾರಿ ಗೋಮಾಳ. ಅಲ್ಲಿ ಹೆಣ್ಣುಮಕ್ಕಳು ಹಸು ಸಾಕಿ, ದಿನಕ್ಕೆ 60 ಸಾವಿರ ಲೀಟರ್ ಹಾಲು ಕರೆದು ಜೀವನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಲು ಮತ್ತು ಕಾಂಗ್ರೆಸ್ ಹೈಕಮಾಂಡ್ ಅನ್ನು ಒಲಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಏನು ಆಶ್ವಾಸನೆ ಕೊಟ್ಟಿದ್ದಾರೋ, ಆ ಚುನಾವಣಾ ಫಂಡ್ ಭರವಸೆಯನ್ನು ಈಡೇರಿಸಿಕೊಳ್ಳಲು ಬಿಡದಿಯ 7 ಸಾವಿರ ಎಕರೆ ಜಾಗವನ್ನು ನಿವೇಶನ ಮಾಡಲು ಹೊರಟಿದ್ದಾರೆ ಎಂದು ದೂರಿದರು.

Share it :

Leave a Reply

Your email address will not be published. Required fields are marked *