ಕೆಆರ್‌ಎಸ್ ಬೃಂದಾವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ದಿನಾಂಕ ಬದಲಾವಣೆ: ಅ.16ರಿಂದ 21ರವರೆಗೆ ಆಯೋಜನೆ

ಮಂಡ್ಯ: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಕೆಆರ್‌ಎಸ್ ಬೃಂದಾವನ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಕಾವೇರಿ ಆರತಿ’ ಕಾರ್ಯಕ್ರಮದ ದಿನಾಂಕವನ್ನು ಅನಿವಾರ್ಯ ಕಾರಣಗಳಿಂದ ಬದಲಾವಣೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೊದಲು ಅಕ್ಟೋಬರ್ 11ರಿಂದ 16ರವರೆಗೆ ನಿಗದಿಯಾಗಿದ್ದ ಕಾವೇರಿ ಆರತಿ ಕಾರ್ಯಕ್ರಮವನ್ನು ಇದೀಗ ಅಕ್ಟೋಬರ್ 16ರಿಂದ 21ರವರೆಗೆ ಕೆಆರ್‌ಎಸ್ ಬೃಂದಾವನ ಆವರಣದಲ್ಲಿ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ

ಕಾರ್ಯಕ್ರಮ ನಡೆಯುವ ಸ್ಥಳವಾದ ಕೆಆರ್‌ಎಸ್ ಬೃಂದಾವನದಲ್ಲಿ ನಡೆಯಲಿರುವ ಧಾರ್ಮಿಕ ಪೂಜಾ ಕೈಂಕರ್ಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರು, ಪ್ರವಾಸಿಗರು ಹಾಗೂ ಭಕ್ತಾದಿಗಳು ಬದಲಾದ ದಿನಾಂಕವನ್ನು ಗಮನಿಸಿ, ಅಕ್ಟೋಬರ್ 16ರಿಂದ 21ರವರೆಗೆ ನಡೆಯಲಿರುವ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಕೋರಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others