ಮೈಸೂರು ದಸರಾ ಮಹೋತ್ಸವದ ವೇಳೆ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ ಆಯೋಜನೆ

ಬೆಂಗಳೂರು : ಜಗತ್ಪ್ರಸಿದ್ಧ ಮೈಸೂರು ದಸರಾ ಉತ್ಸವ-2026 ರ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026” ಅನ್ನು ಆಯೋಜಿಸಲಾಗಿದೆ.

ಈ ಮೇಳವು ಮೈಸೂರಿನ ಹಳೆಯ ಡಿ.ಸಿ. ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯಲಿದೆ. ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕನ್ನಡ ಪ್ರಕಾಶಕರು ಮತ್ತು ಮಾರಾಟಗಾರರು ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು ಕಚೇರಿಯಲ್ಲಿ, ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://kpp.karnataka.gov.in ಮೂಲಕ ಉಚಿತವಾಗಿ ಪಡೆದುಕೊಳ್ಳಬಹುದು.

ಅರ್ಜಿಯೊಂದಿಗೆ ಮಳಿಗೆಯೊಂದಕ್ಕೆ 1,000 ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು “ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು” ಇವರ ಹೆಸರಿಗೆ ಪಡೆದು ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 05.10.2026 ರ ಸಂಜೆ 5.00 ಗಂಟೆಯೊಳಗೆ ನೋಂದಾಯಿತ ಅಂಚೆ ಅಥವಾ ಮುದ್ದಾಂ ಮೂಲಕ “ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002” ಇವರಿಗೆ ಸಲ್ಲಿಸಬೇಕಾಗಿದೆ. ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22484516 ಅನ್ನು ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others