ಜನವರಿಯೊಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಶಿವಮೊಗ್ಗ : ರಾಜ್ಯದಲ್ಲಿ ಬಹುದಿನಗಳಿಂದ ಬಾಕಿಯಿರುವ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿಗಳಿಗೆ ಮುಂದಿನ ಡಿಸೆಂಬರ್ ಅಂತ್ಯ ಅಥವಾ ಜನವರಿ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

ಮೀಸಲಾತಿ ಪ್ರಕ್ರಿಯೆ ಮತ್ತು ಚುನಾವಣಾ ಹಂತಗಳು

ಚುನಾವಣಾ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಸಚಿವರು, ಸರ್ಕಾರ ಈಗಾಗಲೇ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಅಧಿಸೂಚನೆಯನ್ನು ಹೊರಡಿಸಿದೆ. ಈ ಮೀಸಲಾತಿ ಅಧಿಸೂಚನೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 19 ರವರೆಗೆ ಕಾಲಾವಕಾಶ ನೀಡಲಾಗಿತ್ತು.

ಸಲ್ಲಿಕೆಯಾಗಿರುವ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಶೀಘ್ರದಲ್ಲೇ ಆಕ್ಷೇಪಣೆ ರಹಿತ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಿ ಹೊರಡಿಸಲಾಗುವುದು. ಆ ನಂತರ ರಾಜ್ಯ ಚುನಾವಣಾ ಆಯೋಗವು ದಿನಾಂಕಗಳನ್ನು ಘೋಷಿಸಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಲಿದೆ ಎಂದು ವಿವರಿಸಿದರು.

Share it :

Leave a Reply

Your email address will not be published. Required fields are marked *