ರಷ್ಯಾ-ಉಕ್ರೇನ್ ಯುದ್ಧ ಅಂತ್ಯಗೊಳಿಸಲು ರಾಜತಾಂತ್ರಿಕ ಕಸರತ್ತು ನಡೆಸಿದೆ : ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ರಷ್ಯಾ-ಉಕ್ರೇನ್ ನಡುವಿನ ದೀರ್ಘಾವಧಿ ಯುದ್ಧಕ್ಕೆ ಪೂರ್ಣವಿರಾಮ ಇಡಲು ರಾಜತಾಂತ್ರಿಕ ಪ್ರಯತ್ನಗಳು ತೀವ್ರಗೊಂಡಿದ್ದು, ಇದರ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ “ಅತಿ ಶೀಘ್ರದಲ್ಲೇ” ನೇರ ಮುಖಾಮುಖಿ ಸಭೆಯನ್ನು ಏರ್ಪಡಿಸಲಾಗುವುದು ಎಂದು ಟ್ರಂಪ್ ಘೋಷಿಸಿದ್ದಾರೆ.

2022ರ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ಆಕ್ರಮಣಕ್ಕೆ ಆದೇಶಿಸಿದ್ದ ಪುಟಿನ್, ಝೆಲೆನ್‌ಸ್ಕಿ ಜೊತೆ ಮುಖಾಮುಖಿ ಮಾತುಕತೆ ನಡೆಸುವ ಪ್ರಸ್ತಾಪವನ್ನು ನಿರಂತರವಾಗಿ ತಿರಸ್ಕರಿಸುತ್ತಾ ಬಂದಿದ್ದಾರೆ.

ಪೂರ್ವ ಉಕ್ರೇನ್‌ನ ಉಳಿದ ಭಾಗಗಳನ್ನೂ ವಶಪಡಿಸಿಕೊಳ್ಳುವ ಉದ್ದೇಶವನ್ನು ಮಾಸ್ಕೋ ಹೊಂದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

2025ರ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡ ಟ್ರಂಪ್, 24 ಗಂಟೆಗಳಲ್ಲೇ ಯುದ್ಧವನ್ನು ಅಂತ್ಯಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಅಮೆರಿಕದ ನೇತೃತ್ವದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ನಡೆದ ಮಾತುಕತೆಗಳ ಹೊರತಾಗಿಯೂ ಯಾವುದೇ ಮಹತ್ವದ ಪ್ರಗತಿ ಕಂಡುಬಂದಿಲ್ಲ. ಈ ಸಂಘರ್ಷದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟ್ರಂಪ್ ಮತ್ತೊಮ್ಮೆ ಉಕ್ರೇನ್‌ನಿಂದ ಗಮನವನ್ನು ಬೇರೆಡೆಗೆ ಸರಿಸಿ ಪುಟಿನ್ ಕಡೆಗೆ ಒಲವು ತೋರಿದ್ದಾರೆ. ಇರಾನ್ ವಿರುದ್ಧದ ಯುದ್ಧದಿಂದ ಏರಿಕೆಯಾಗಿರುವ ಬೆಲೆಗಳನ್ನು ತಗ್ಗಿಸಲು ರಷ್ಯಾ ಡೀಸೆಲ್ ಮಾರಾಟ ಮಾಡುವ ಒಪ್ಪಂದವೊಂದನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಉಭಯ ರಾಷ್ಟ್ರಗಳನಡುವಿನ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಸಭೆ ಏರ್ಪಡಿಸಲಾಗುವುದು. ಇದರಿಂದ ಸಾಕಷ್ಟು ಪ್ರಗತಿ ಸಾಧಿಸಬಹುದು ಎಂದು ನಾನು ಭಾವಿಸುತ್ತೇನೆಂದು ಹೇಳಿದ್ದಾರೆ.

ಕೀವ್, ವಾಷಿಂಗ್ಟನ್ ಮತ್ತು ಮಾಸ್ಕೋ ನಡುವಿನ ತ್ರಿಪಕ್ಷೀಯ ಸಭೆ ನವೆಂಬರ್‌ನಲ್ಲಿ ನಡೆಯಲಿದೆ ಎಂದು ಝೆಲೆನ್‌ಸ್ಕಿ ಭಾನುವಾರ ಹೇಳಿದ್ದರು.

ಮೂರು ದೇಶಗಳ ನಡುವಿನ ಸಭೆಯನ್ನು ನವೆಂಬರ್‌ನಲ್ಲಿ ಸಂಯುಕ್ತ ಅರಬ್ ಎಮಿರೇಟ್ಸ್‌ನಲ್ಲಿ ನಡೆಸಲು ಯೋಜಿಸಲಾಗಿದೆ ಎಂದು ಕ್ರೆಮ್ಲಿನ್ ಈ ಹಿಂದೆ ತಿಳಿಸಿತ್ತು.

Share it :

Leave a Reply

Your email address will not be published. Required fields are marked *