ಬೆಂಗಳೂರು: ಇಂದು ಬಿಕೆ ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇದರ ಬೆನ್ನಲ್ಲೇ ಮಾಜಿ ಸಿಎಂ ಸಿದ್ದು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸಿದರು.
ಬಳಿಕ ಎಲ್ಲಾ ನಾಯಕರು ಪಕ್ಷ ಸಂಘಟನೆ ಬಗ್ಗೆ ವಿವರವಾಗಿ ಮಾತನಾಡಿದರು. ಇನ್ನು ಕಾರ್ಯಕ್ರಮದಲ್ಲಿ ಕೊನೆಯದಾಗಿ ಭಾಷಣ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಅವಕಾಶ ನೀಡಲಾಗಿತ್ತು. ಇದಕ್ಕೆ ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ ಪ್ರಸಂಗ ನಡೆಯಿತು.
ಎಂದಿನಂತೆ ನಾನು ಕೊನೆಯ ಭಾಷಣಕಾರ. ಹೀಗಾಗಿ ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಹರಿಪ್ರಸಾದ್ ಗೆ ಮನವಿ ಮಾಡಿ ಕಾಮಿಡಿ ಮಾಡಿರುವುದು ಬೆಳಿಕಿಗೆ ಬಂದಿದೆ.





