ಸ್ಯಾನ್ ಫ್ರಾನ್ಸಿಸ್ಕೋ: ವಿಶ್ವದ ಅಗ್ರಗಣ್ಯ ಚಿಪ್ ತಯಾರಿಕಾ ಸಂಸ್ಥೆ ಎನ್‌ವಿಡಿಯಾದ (Nvidia) ಸಹ-ಸಂಸ್ಥಾಪಕ ಹಾಗೂ ಸಿಇಒ ಜೆನ್ಸನ್ ಹುವಾಂಗ್ ಅವರು ತಮ್ಮ ಹುದ್ದೆಯನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
ಎನ್‌ವಿಡಿಯಾ (Nvidia) ಸಿಇಒ ಜೆನ್ಸನ್ ಹುವಾಂಗ್ (Jensen Huang) ಅವರು ಚೀನಾದ ಶಂಕಿತ ಗೂಢಚಾರಿಣಿ ಸೇರಿದಂತೆ ಇಬ್ಬರು ಮಹಿಳೆಯರೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಕಂಪನಿಯ ನಿರ್ದೇಶಕರ ಮಂಡಳಿಯು ಅವರನ್ನು ಸಿಇಒ ಹುದ್ದೆಯಿಂದ ವಜಾಗೊಳಿಸಲು ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ.
ಈ ಬೆಳವಣಿಗೆಯಿಂದಾಗಿ ಜಾಗತಿಕ ಟೆಕ್ ವಲಯದಲ್ಲಿ ತೀವ್ರ ಸಂಚಲನ ಮೂಡಿದ್ದು, ಎನ್‌ವಿಡಿಯಾ ಷೇರು ಮೌಲ್ಯದಲ್ಲಿ ಸುಮಾರು 600 ಬಿಲಿಯನ್ ಡಾಲರ್ ನಷ್ಟವಾಗಿದೆ. ಚೀನಾದ ಗೂಢಚಾರಿಣಿ ಎಂದು ಶಂಕಿಸಲಾದ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದರು ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಹುವಾಂಗ್ ಅವರನ್ನು ವಜಾಗೊಳಿಸಲು ಕಂಪನಿಯ ಆಡಳಿತ ಮಂಡಳಿಯು ಸಿದ್ಧತೆ ನಡೆಸುತ್ತಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳಾದ ‘ದಿ ವಾಲ್ ಸ್ಟ್ರೀಟ್ ಜರ್ನಲ್’ ಮತ್ತು ‘ದಿ ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿವೆ.
ವಾಲ್ ಸ್ಟ್ರೀಟ್ ಜರ್ನಲ್ ವರದಿ ಪ್ರಕಾರ, ಜೆನ್ಸನ್ ಹುವಾಂಗ್ ಅವರ ಭವಿಷ್ಯ ನಿರ್ಧರಿಸುವ ಸಲುವಾಗಿ ಕಂಪನಿಯ ಆಡಳಿತ ಮಂಡಳಿ ಬುಧವಾರವೇ ಸಭೆ ಸೇರಲು ಸಿದ್ಧತೆ ನಡೆಸಿತ್ತು. ಈ ಬೆಳವಣಿಗೆ ಕುರಿತು ಮಾಹಿತಿ ಹೊಂದಿರುವ ವ್ಯಕ್ತಿಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.
ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಎನ್‌ವಿಡಿಯಾದ ಚಿಪ್ ತಂತ್ರಜ್ಞಾನದ ಬಳಕೆಯನ್ನು ವಿಸ್ತರಿಸುವ ಪ್ರಯತ್ನಗಳಲ್ಲಿ ಪೊವೆಲ್ ಪ್ರಮುಖ ಪಾತ್ರ ವಹಿಸಿದ್ದಾರೆ.
ಕ್ಯಾಲಿಫೋರ್ನಿಯಾದ ಸ್ಯಾನ್ ಜೋಸ್‌ನಲ್ಲಿ ನಡೆದ ಸಮಾವೇಶವೊಂದರಲ್ಲಿ ಭಾಗವಹಿಸಿದ್ದ ವೇಳೆ, ಹೋಟೆಲ್‌ನಲ್ಲಿ ಇಬ್ಬರೂ ಆತ್ಮೀಯವಾಗಿರುವುದನ್ನು ಕೆಲವರು ಗಮನಿಸಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಇದಕ್ಕೂ ಮೊದಲು, ಸಿಂಗಾಪುರ ಮೂಲದ ದತ್ತಾಂಶ ಕೇಂದ್ರ ಕಂಪನಿ ಮೆಗಾಸ್ಪೀಡ್‌ನ ಹಿರಿಯ ಕಾರ್ಯನಿರ್ವಾಹಕಿ ಆಲಿಸ್ ಹುವಾಂಗ್ ಅವರೊಂದಿಗೆ ಸಂಬಂಧ ಹೊಂದಿದ್ದ ವಿಚಾರವನ್ನು ಜೆನ್ಸನ್ ಒಪ್ಪಿಕೊಂಡಿದ್ದರು.
2024 ಮತ್ತು 2025ರಲ್ಲಿ ತೈವಾನ್‌ನ ತೈಪೆಯಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದ ಛಾಯಾಚಿತ್ರಗಳು ಲಭ್ಯವಾಗಿದ್ದವು ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.
ಇದೇ ವೇಳೆ, ಹುವಾಂಗ್ ಮತ್ತೊಬ್ಬ ಮಹಿಳೆಯೊಂದಿಗೂ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಈ ಮಹಿಳೆ ಎನ್‌ವಿಡಿಯಾದಲ್ಲೇ ಹುವಾಂಗ್ ಅವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಯಾಗಿದ್ದಾರೆ. 63 ವರ್ಷದ ಹುವಾಂಗ್ ಮತ್ತು ಕಂಪನಿಯ ಆರೋಗ್ಯ ವಿಭಾಗದ ಉಪಾಧ್ಯಕ್ಷೆ ಕಿಂಬರ್ಲಿ ಪೊವೆಲ್ (48) ಆತ್ಮೀಯವಾಗಿ ವರ್ತಿಸುತ್ತಿರುವ ದೃಶ್ಯಗಳ ವಿಡಿಯೋ ಸಾಕ್ಷ್ಯವಿದೆ ಎಂದು ವರದಿ ತಿಳಿಸಿದೆ.








ಇನ್ನೂ ಯಾವುದೇ ಕಾಮೆಂಟ್ ಇಲ್ಲ. ಮೊದಲ ಕಾಮೆಂಟ್ ನೀವೇ ಬರೆಯಿರಿ! (Be the first to comment.)