ಬೆಂಗಳೂರು, : ಬಿಜೆಪಿಯ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ರಾಮಚಂದ್ರ ಗೌಡ ಅವರ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ತಮ್ಮ ಒಡನಾಟವನ್ನು ನೆನೆದು ಕಂಬನಿ ಮಿಡಿದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ದಶಕಗಳ ಕಾಲದ ಆತ್ಮೀಯ ಒಡನಾಡಿ, ಹಿರಿಯ ನಾಯಕ ರಾಮಚಂದ್ರ ಗೌಡರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ ಎಂದು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ರಾಮಚಂದ್ರ ಗೌಡರ ನಿಧನವು ರಾಜ್ಯ ರಾಜಕಾರಣಕ್ಕೆ ಹಾಗೂ ವಿಶೇಷವಾಗಿ ಬಿಜೆಪಿ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರು ಸೇರಿದಂತೆ ವಿವಿಧ ಪಕ್ಷಗಳ ಪ್ರಮುಖ ನಾಯಕರು ಮೃತರ ಆತ್ಮಕ್ಕೆ ಶಾಂತಿ ಕೋರಿ, ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದಾರೆ.
ನಾನು ನನ್ನ ಮತ್ತೊಬ್ಬ ಸಹೋದರನನ್ನು ಕಳೆದುಕೊಂಡಂತಾಗಿದೆ. ಜನಸಂಘದ ದಿನಗಳಿಂದ ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ ದಿನಗಳು, ಹಗಲಿರುಳು ಶ್ರಮಿಸಿ ರಾಜ್ಯಾದ್ಯಂತ ಪಕ್ಷ ಕಟ್ಟಿದ ನೆನಪುಗಳು ಕಣ್ಣಮುಂದೆ ಸುಳಿಯುತ್ತಿವೆ. ನನ್ನ ಸಂಪುಟದ ಸಹೋದ್ಯೋಗಿಯಾಗಿ ಅವರ ಆಡಳಿತ ಚಾತುರ್ಯ ಹಾಗೂ ಬದ್ಧತೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ ಎಂದರು.ರಾಮಚಂದ್ರ ಗೌಡರ ನಿಧನವು ರಾಜ್ಯ ರಾಜಕಾರಣಕ್ಕೆ ನೋವನ್ನುಂಟು ಮಾಡಿದೆ ಎಂದು ಪೋಸ್ಟ್‌ನ್ನು ಅಂಚಿಕೊಂಡಿದ್ದಾರೆ.
ರಾಮಚಂದ್ರ ಗೌಡರು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದರು. ಜನಸಂಘದ ಕಾಲದಿಂದಲೂ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟುವಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು. ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದರು.
ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದ ಗೌಡರು, ತಮ್ಮ ಆಡಳಿತ ಚಾತುರ್ಯ ಮತ್ತು ದಕ್ಷತೆಯಿಂದ ಗುರುತಿಸಿಕೊಂಡಿದ್ದರು. ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯವಾದುದು. ರಾಮಚಂದ್ರ ಗೌಡ ಅವರು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವು ಇಂದಿನ ಬಲಿಷ್ಠ ಸ್ಥಿತಿಗೆ ತಲುಪುವಲ್ಲಿ ಇವರ ಕೊಡುಗೆ ಅಪಾರ. ಮುಂಚಿನ ಜನಸಂಘದ ಅವಧಿಯಿಂದಲೇ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿದ್ದ ಅವರು, ತಳಮಟ್ಟದಿಂದ ಸಂಘಟನೆಯನ್ನು ಬಲಪಡಿಸಿದ್ದರು.
ಇದೆಲ್ಲವನ್ನು ನೆನಪಿಸಿಕೊಂಡು ಎಕ್ಸ್ ಖಾತೆಯ ಮೂಲ ನೋವಿನ ಪೋಸ್ಟ್‌ನ್ನು ಬಿ.ಎಸ್. ಯಡಿಯೂರಪ್ಪ ಶೇರ್ ಮಾಡಿದ್ದಾರೆ. ರಾಮಚಂದ್ರ ಗೌಡರ ಆತ್ಮಕ್ಕೆ ಶಾಮತಿ ಸಿಗಲಿ ಎಂದು ಬೇಡಿಕೊಂಡಿದ್ದಾರೆ.





