ಮನೆ ಮಾಲೀಕರು, ಬಾಡಿಗೆದಾರರಿಗೆ ಸಿಹಿ ಸುದ್ದಿ: ಗೃಹ ಜ್ಯೋತಿ ಬಗ್ಗೆ ಬೆಸ್ಕಾಂ ನೀಡಿದ ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು : ಮನೆ ಮಾಲೀಕರು, ಬಾಡಿಗೆದಾರರು ಗೃಹ ಜ್ಯೋತಿ ವಿಚಾರಕ್ಕೆ ಸುಸ್ತಾಗಿದ್ದರು. ಎಲ್ಲಿ ಕರೆಂಟ್‌ ಬಿಲ್‌ ಹೆಚ್ಚಿನ ಮಟ್ಟದಲ್ಲಿ ಬರುತ್ತದೆ ಎಂದು ಆದರೆ ಇದೇ ವಿಚಾರಕ್ಕೆ ಬೆಸ್ಕಾಂ ಮಾಹಿತಿ ನೀಡಿದೆ.

ಹೌದು 023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯುತ್ತಿದೆ. ಇದೇ ವಿಚಾರಕ್ಕೆ ಸಾರ್ವಜನಿಕರಿಗೆ ಬೆಸ್ಕಾಂ ಮಾಹಿತಿ ನೀಡಿರುವುದು ಬೆಳಕಿಗೆ ಬಂದಿದೆ. ಇಲ್ಲಿ ಮುಖ್ಯವಾಗಿ ಬಾಡಿಗೆದಾರರ ಗೊಂದಲಗಳಿಗೆ ಸ್ಪಷ್ಟ ಮಾಹಿತಿ ಕೊಟ್ಟಿದೆ.

ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಘೋಷಣಾ ಪತ್ರ ಮೂಲಕ ಸಿಬ್ಬಂದಿಯೇ ಅರ್ಜಿ ಭರ್ತಿ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ.

ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ , ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ , ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು ರೇಷನ್ ಕಾರ್ಡ್ ತೋರಿಸಲು ಕೋರಲಾಗಿದೆ. ಮತ್ತು ಈ ದಾಖಲೆಗಳನ್ನು ಸಿದ್ದವಿಟ್ಟುಕೊಂಡು ಸಿಬ್ಬಂದಿಗೆ ತೋರಿಸಲು ಬೆಸ್ಕಾಂ ಇಲಾಖೆ ತಿಳಿಸಿದೆ.

ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ. ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಂಧನ ಇಲಾಖೆ ಮನವಿ ಮಾಡಿದೆ

ಫಲಾನುಭವಿಗಳ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಪ್ರಶ್ನೆಗೆ ಸಂಬಂಧಿಸಿದಂತೆ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ. ಗೃಹಜ್ಯೋತಿ ಫಲಾನುಭವಿಗಳ ಮಾಹಿತಿ ಪರಿಶೀಲನೆ ವೇಳೆ ಫಲಾನುಭವಿಯ ಪ್ರವರ್ಗದಸಂಬಂಧಿಸಿದ ಮಾಹಿತಿ ಕೇವಲ ಐಚ್ಛಿಕವಾಗಿದೆ.

ಫಲಾನುಭವಿಗಳಿಗೆ ಜಾತಿ ಮಾಹಿತಿ ನೀಡಲು ಇಷ್ಟವಿಲ್ಲದಿದ್ದರೆ ಮೊಬೈಲ್ ಅಪ್ಲಿಕೇಷನ್ ನಲ್ಲಿರುವ ʼಮಾಹಿತಿ ನೀಡಲು ನಿರಾಕರಣೆʼ ಎಂಬ ಆಯ್ಕೆಯನ್ನು ನಮೂದಿಸಲು ಸಿಬ್ಬಂದಿಗೆ ಈಗಾಗಲೇ ಮಾಹಿತಿ ಕೊಟ್ಟಿದೆ. ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಗ್ರಾಹಕರು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು.

ಸಹಾಯವಾಣಿ ಸಂಖ್ಯೆ: 9480816111, 9480816112, 9480816113, 9480816114 ಸಹಾಯವಾಣಿಯು ಪ್ರತಿದಿನ ಬೆಳಗ್ಗೆ 6:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಲಭ್ಯವಿರುತ್ತದೆ.

ಈ ಹಿಂದೆ ಇದ್ದ ಬಾಡಿಗೆದಾರರ ಆಧಾರ್ ಮಾಹಿತಿಯಿಂದಾಗಿ ತಮಗೆ ಯೋಜನೆ ಸ್ಥಗಿತಗೊಳ್ಳಲಿದೆಯೇ ಎಂಬ ಆತಂಕ ಈಗಿರುವ ಬಾಡಿಗೆದಾರರಿಗೆ ಬಂದಿರಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ. ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ ಫಲಾನುಭವಿಗಳ ಮನೆ ಮನೆ ಸಮೀಕ್ಷೆ ಕಾರ್ಯ ನಡೆಸುವ ವೇಳೆ ಹಳೆ ಬಾಡಿಗೆದರರ ಆಧಾರ್ ವಿವರ ತೆಗೆದು ಹಾಕಿ ಈಗಿರುವ ಬಾಡಿಗೆದಾರರ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳಲಾಗುವುದು, ಹಾಗಾಗಿ ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಆತಂಕ ಬೇಡ ಎಂದು ಬೆಸ್ಕಾಂ ಇಲಾಖೆ ಮಾಹಿತಿ ತಿಳಿಸಿದೆ.

Share it :

Leave a Reply

Your email address will not be published. Required fields are marked *