ಬೆಂಗಳೂರು: ಈ ನಡುವೆ ಮದ್ಯೆ ದರ ಗಗನ ಏರಿದ್ದು ಕೆಲವು ಕಡೆ ಮದ್ಯ ಪ್ರೀಯರು ಪ್ರತಿಭಟನೆ ಮಾಡಿದ್ದು ಉದಾಹರಣೆ ಸಾಕಷ್ಟಿದೆ. ಆದರೆ ಇವತ್ತು ಸ್ಥಿತಿ ಬದಲಾಗಿದೆ ಏನಪ್ಪಾ ವಿಷಯ ಅಂತೀರಾ ಇಲ್ಲಿದೆ ನೋಡಿ
ಭಾರತ -ಬ್ರಿಟನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಜುಲೈ 15ರಿಂದ ಜಾರಿಗೆ ಬಂದಿದೆ. ಪರಿಣಾಮವಾಗಿ ಕರ್ನಾಟಕದಲ್ಲಿ ಪ್ರೀಮಿಯಂ ಆಮದು ಮದ್ಯದ ದರ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.
ಈಗಾಗಲೇ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಅಬಕಾರಿ ತೆರಿಗೆ ನೀತಿಯಿಂದ ಪ್ರೀಮಿಯಂ ಮದ್ಯದ ಬೆಲೆ ಕಡಿಮೆಯಾಗಿದ್ದು, ಈಗ ಭಾರತ-ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದಿಂದ ಗ್ರಾಹಕರಿಗೆ ಮತ್ತಷ್ಟು ಬೆಲೆ ರಿಯಾಯಿತಿ ದೊರೆಯುವ ನಿರೀಕ್ಷೆ ತಂದಿದೆ.
ಈ ಬೆಳವಣಿಗೆಯ ಬೆನ್ನಲ್ಲೇ ಭಾರತ-ಬ್ರಿಟನ್ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ ಜುಲೈ 15ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಇದರಡಿ ಬ್ರಿಟನ್‌ನಿಂದ ಆಮದು ಮಾಡಿಕೊಳ್ಳುವ ಸ್ಕಾಚ್ ವಿಸ್ಕಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ತಕ್ಷಣದಿಂದಲೇ ಶೇ 150 ರಿಂದ ಶೇ 75ಕ್ಕೆ ಇಳಿಸಲಾಗಿದೆ. ಮುಂದಿನ 10 ವರ್ಷಗಳಲ್ಲಿ ಇದನ್ನು ಹಂತ ಹಂತವಾಗಿ ಶೇ 40ಕ್ಕೆ ಇಳಿಸುವ ಯೋಜನೆ ಇದೆ ಎನ್ನಲಾಗಿದೆ.
ಇಂಟರ್‌ನ್ಯಾಷನಲ್ ಸ್ಪಿರಿಟ್ಸ್ ಅಂಡ್ ವೈನ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಿತ್ ಪಾಧಿ ಅವರ ಪ್ರಕಾರ, ಇದೀಗ ಭಾರತ-ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದ ಪರಿಣಾಮವಾಗಿ ಇನ್ನೂ ಶೇ 5ರಿಂದ 7ರಷ್ಟು ಹೆಚ್ಚುವರಿ ಬೆಲೆ ಇಳಿಕೆಯಾಗುವ ನಿರೀಕ್ಷೆಯಿದೆ.ಕರ್ನಾಟಕದ ಹೊಸ ತೆರಿಗೆ ನೀತಿಯಿಂದಲೇ ಆಮದು ಮದ್ಯದ ಬೆಲೆ ಗಣನೀಯವಾಗಿ ಇಳಿದಿದೆ.
ಕರ್ನಾಟಕ ಸರ್ಕಾರ ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್ ಆಲ್ಕೋಹಾಲ್ ಪ್ರಮಾಣ ಆಧರಿಸಿದ ಹೊಸ ಅಬಕಾರಿ ತೆರಿಗೆ ವ್ಯವಸ್ಥೆ ಜಾರಿಗೆ ತಂದಿದೆ. ಈ ನೀತಿಯ ಪರಿಣಾಮವಾಗಿ ಕಡಿಮೆ ಆಲ್ಕೋಹಾಲ್ ಅಂಶ ಹೊಂದಿರುವ ದುಬಾರಿ, ಪ್ರೀಮಿಯಂ ಆಮದು ಮದ್ಯಗಳ ಬೆಲೆ ಈಗಾಗಲೇ ಶೇ 15ರಿಂದ 23ರಷ್ಟು ಇಳಿಕೆಯಾಗಿದೆ. ಇದಕ್ಕೆ ವಿರುದ್ಧವಾಗಿ, ಹೆಚ್ಚು ಆಲ್ಕೋಹಾಲ್ ಅಂಶ ಹೊಂದಿರುವ ಕೆಲವು ಕಡಿಮೆ ಬೆಲೆಯ ಬ್ರಾಂಡ್‌ಗಳ ದರ ಹೆಚ್ಚಾಗಿದೆ.
ಆದರೆ ಈ ಬೆಲೆ ಇಳಿಕೆ ತಕ್ಷಣ ಜಾರಿಗೆ ಬರುವುದಿಲ್ಲ. ಹೊಸ ಸುಂಕ ವ್ಯವಸ್ಥೆ ಜಾರಿ ನಂತರ ಅಗತ್ಯ ದಾಖಲೆ ಪ್ರಕ್ರಿಯೆ ಹಾಗೂ ವಿತರಣಾ ವ್ಯವಸ್ಥೆಯ ಬದಲಾವಣೆ ಪೂರ್ಣಗೊಂಡ ನಂತರವೇ ಗ್ರಾಹಕರಿಗೆ ಇದರ ಸಂಪೂರ್ಣ ಲಾಭ ಸಿಗಲಿದೆ ಎಂದು ಉದ್ಯಮ ವಲಯ ಮಾಹಿತಿ ನೀಡಿದೆ.





