ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮಾತ್ರ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಿತ್ತು ಆದರೇ ಇದೀಗ ರಾಜ್ಯ ಸರ್ಕಾರ ಮಹತ್ತರ ಹೆಜ್ಜೆಯೊಂದು ಇಟ್ಟಿದೆ. ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ವಿದ್ಯಾರ್ಥಿಗಳಿಗೆ ಮತ್ತೊಂದು ಸಂತಸದ ಮಾಹಿತಿ ನೀಡಿದೆ.
ಈಗಾಗಲೇ ಪಾವತಿಸಿಕೊಂಡಿರುವ ಬಸ್ ಪಾಸ್ ಶುಲ್ಕವನ್ನ ಮರುಪಾವತಿ ನೀಡಲು 4 ಸಾರಿಗೆ ನಿಗಮಗಳಿಗೆ ಅಧಿಕೃತ ಆದೇಶ ಹೊರಡಿಸಿರುವುದು ಬೆಳಕಿಗೆ ಬಂದಿದೆ.
ಕೆಎಸ್ಆರ್‌ಸಿಟಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳು ಜಂಟಿಯಾಗಿ ಹಣ ಮರುಪಾವತಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಜೂನ್ 29ರಿಂದ ಅವಕಾಶ ಕಲ್ಪಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ‘ಸೇವಾಸಿಂಧು’ ಪೋರ್ಟಲ್ ಮೂಲಕವೇ ತಮ್ಮ ಅರ್ಜಿ ಸಲ್ಲಿಸಬಹುದು.
ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿತ್ತು. ಆದರೇ ಅದಕ್ಕೆ ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಸಾರಿಗೆ ನಿಗಮಗಳು ನಿಯಮಾನುಸಾರ ವಿದ್ಯಾರ್ಥಿಗಳಿಂದ ಪಡೆದುಕೊಂಡಿದ್ದ ಶುಲ್ಕವನ್ನ ವಿದ್ಯಾರ್ಥಿಗಳಿಗೆ ಹಿಂದಿರುಗಿಸಲು ಆದೇಶ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಒಟಿಪಿ ಮೂಲಕ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದರೊಂದಿಗೆ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯ ನಿಖರವಾದ ವಿವರಗಳನ್ನು ಸಲ್ಲಿಕೆ ಮಾಡಬೇಕು ಎನ್ನಲಾಗಿದೆ.
ಸಲ್ಲಿಕೆಯಾದ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ, NEFT ಅಥವಾ RTGS ವಿಧಾನದ ಮುಖಾಂತರ ಕೇವಲ 7 ದಿನದ ಒಳಗೆ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ.
ರಾಜ್ಯ ಸರ್ಕಾರದ ನಿರ್ಧಾರವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಬೇಕು ‘ಸೇವಾಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಬಸ್ ಪಾಸ್ ತೆಗೆದುಕೊಳ್ಳಬಹುದು ಎನ್ನುವ ಮಾಹಿತಿ ತಿಳಿದು ಬಂದಿದೆ.





