ಜ್ಞಾನೇಶ್ ಕುಮಾರ್ ಹೋಗುತ್ತಾರೆ, ಈ ಸರ್ಕಾರ ಹೋಗುತ್ತದೆ, ಪ್ರಜಾಪ್ರಭುತ್ವದ ದುರಸ್ತಿ ಪ್ರಾರಂಭವಾಗುತ್ತದೆ : ರಾಹುಲ್ ಗಾಂಧಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೋಗುತ್ತಾರೆ ಮತ್ತು ಮೋದಿ ಸರ್ಕಾರವೂ ಹೋಗುತ್ತದೆ. ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲು ಯತ್ನಿಸಿದ ಸಿಜೆಪಿ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ X ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ, ನಂತರ ಪ್ರಜಾಪ್ರಭುತ್ವದ ದುರಸ್ತಿ ಕಾರ್ಯ ಪ್ರಾರಂಭವಾಗುತ್ತದೆ ಎಂದಿದ್ದಾರೆ.

ವಿರೋಧ ಪಕ್ಷಗಳ ಪ್ರತಿಭಟನೆ ಈ ಸರ್ಕಾರದ ಅಡಿಪಾಯವನ್ನು ಅಲುಗಾಡಿಸಿವೆ, ಅದು ಈಗ ಭಯಭೀತವಾಗಿದೆ ಎಂದು ರಾಹುಲ್ ಗಾಂಧಿ ಅವರು ಸಂವಿಧಾನ್ ಸದನದ ಸೆಂಟ್ರಲ್ ಹಾಲ್‌ನಲ್ಲಿ ಇಂಡಿಯಾ ಬ್ಲಾಕ್ ಸಂಸದರಿಗೆ ಹೇಳಿದ್ದರು.

ಜ್ಞಾನೇಶ್ ಕುಮಾರ್ ಹೋಗುತ್ತಾರೆ. ಈ ಸರ್ಕಾರ ಹೋಗುತ್ತದೆ. ನಂತರ ಪ್ರಜಾಪ್ರಭುತ್ವದ ದುರಸ್ತಿ ಪ್ರಾರಂಭವಾಗುತ್ತದೆ’ ಎಂದು ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಗಿಂತ ‘ಹೆಚ್ಚು ಆಳವಾದ ಸಮಸ್ಯೆ’ ಇದೆ. ಅದು ಪ್ರಸ್ತುತ ಸರ್ಕಾರವನ್ನು ಮುಕ್ತಾಯಗೊಳಿಸಬೇಕಾಗಿದೆ ಎಂದು ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದರು.

ಇನ್ನು ಮತಗಳ್ಳತನದ ವಿಚಾರವಾಗಿ ಮಾತನಾಡಿ, ರಾಷ್ಟ್ರಪತಿಗಳೊಂದಿಗಿನ ಭೇಟಿಯ ಸಂದರ್ಭದಲ್ಲಿ ‘ಚುನಾವಣಾ ಕಳ್ಳತನ’ದ ವಿಷಯವನ್ನು ಪ್ರಸ್ತಾಪಿಸಲಾಯಿತು. ಮತಗಳ್ಳತನ ನಡೆದಿರುವುದನ್ನು ರಾಷ್ಟ್ರಪತಿಗಳು ನಿರಾಕರಿಸಲಿಲ್ಲ. ರಾಷ್ಟ್ರಪತಿಗಳು ಮತ ಕಳ್ಳತನದ ಆರೋಪಗಳನ್ನು ತಿರಸ್ಕರಿಸುತ್ತಾರೆ. ಅಲ್ಲದೆ ಭಾರತದಲ್ಲಿ ಚುನಾವಣಾ ವ್ಯವಸ್ಥೆ ಮುಕ್ತ ಮತ್ತು ನ್ಯಾಯಯುತವಾಗಿದೆ ಅಂತ ಹೇಳುತ್ತಾರೆ ಎಂದು ಭಾವಿಸಿದ್ದೆ. ಆದರೆ ಅದು ಆಗಲಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಸಭೆ ತಮಗೆ ಅದ್ಭುತ ಅನುಭವ ಎಂದು ಹೇಳಿದರು. ರಾಷ್ಟ್ರಪತಿಗಳಿಗೆ ಸಲ್ಲಿಸಲಾದ ಜ್ಞಾಪಕ ಪತ್ರದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಶಾ ಮತ್ತು ಸಿಇಸಿ ಜ್ಞಾನೇಶ್ ಕುಮಾರ್ ಅವರು ಭಾರತೀಯ ಪ್ರಜಾಪ್ರಭುತ್ವವನ್ನು ನಾಶಮಾಡಲು ಸಂಚು ರೂಪಿಸಿದ್ದಾರೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ ಎಂದು ಅವರು ವಿವರಿಸಿದರು. ರಾಹುಲ್ ಗಾಂಧಿ ಅವರ ಪ್ರಕಾರ, ರಾಷ್ಟ್ರಪತಿಗಳು ಅವರ ಹೇಳಿಕೆಗಳನ್ನು ತಿರಸ್ಕರಿಸಲಿಲ್ಲ, ಪ್ರಶ್ನಿಸಲಿಲ್ಲ ಅಥವಾ ಯಾವುದೇ ಭಿನ್ನಾಭಿಪ್ರಾಯ ವ್ಯಕ್ತಪಡಿಸಲಿಲ್ಲ. ನಂತರ ಚುನಾವಣೆಯಲ್ಲಿ ಮತ ಕಳ್ಳತನದ ಪುರಾವೆಗಳನ್ನು ಒದಗಿಸುವಂತೆ ರಾಷ್ಟ್ರಪತಿಗಳು ತಮ್ಮನ್ನು ಕೇಳಿದರು ಎಂದರು.

ರಾಷ್ಟ್ರಪತಿಗಳು ನನ್ನ ಮಾತನ್ನು ಒಪ್ಪಿಕೊಂಡಿದ್ದು ನೋಡಿ ನನಗೆ ಆಶ್ಚರ್ಯವಾಯಿತು. ಮತ ಕಳ್ಳತನ ನಡೆಯುತ್ತಿದೆ ಎಂದು ಇಡೀ ದೇಶಕ್ಕೆ ತಿಳಿದಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಕಳ್ಳತನದ ಸೂತ್ರಧಾರಿ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಇದನ್ನು ಆಯೋಜಿಸುತ್ತಿದ್ದಾರೆ ಎಂದು ಹೇಳಿದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post