H.D Kumaraswamy: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿ ಇಲ್ಲ – ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿ ಇಲ್ಲ ಎಂಬುದಕ್ಕೆ ಅನೇಕ ನಿದರ್ಶನಗಳು ಇವೆ. ಸಂಪುಟ ವಿಸ್ತರಣೆಗೆ ತಿಂಗಳಗಟ್ಟಲೆ ಸಮಯ ತೆಗೆದುಕೊಂಡರು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ ಎಂದುಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆಯ ನೇತೃತ್ವ ವಹಿಸಿದ್ದಾರೆ. ಬಿಜೆಪಿ ನಾಯಕರು ಕೂಡ ಪಾದಯಾತ್ರೆಯ ಬಗ್ಗೆ ಅತ್ಯಂತ ಸಕಾರಾತ್ಮಕ ಮನಸ್ಸು ಹೊಂದಿದ್ದು, ಅವರು ಕೂಡ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳಿಸಿದ್ದಾರೆಬಿಡದಿ ಪಾದಯಾತ್ರೆಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೂ ಹಮ್ಮಿಕೊಳ್ಳಲಾಗಿದೆ. ಎಂದು ತಿಳಿಸಿದರು.

ಮುಂಬರುವ ವಿಧಾನಮಂಡಲ ಕಲಾಪದಲ್ಲಿ ಬಿಡದಿ ಟೌನ್ಶಿಪ್ ವಿಷಯ ಹಾಗೂ ನೈಸ್ ಯೋಜನೆಯ ಅಕ್ರಮಗಳ ಬಗ್ಗೆ ಧ್ವನಿ ಎತ್ತಲು ನಿರ್ಧರಿಸಲಾಗಿದೆ. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಒಮ್ಮತದಿಂದ ಹೋರಾಟ ನಡೆಸಲಿದೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿ ಇಲ್ಲ ಎಂಬುದಕ್ಕೆ ಅನೇಕ ನಿದರ್ಶನಗಳು ಇವೆ. ಸಂಪುಟ ವಿಸ್ತರಣೆಗೆ ತಿಂಗಳಗಟ್ಟಲೆ ಸಮಯ ತೆಗೆದುಕೊಂಡರು. ಈಗ ಖಾತೆ ಹಂಚಿಕೆ ಕೂಡ ನಡೆದಿಲ್ಲ. ಸರ್ಕಾರದ ಕಾರ್ಯವೈಖರಿ ನೋಡಿದರೆ ತುಂಬಾ ನಿರಾಶೆಯಾಗುತ್ತದೆ, ಖಾತೆ ಹಂಚಿಕೆ ವಿಷಯ ಕಾಂಗ್ರೆಸ್ ದಿವಾಳಿತನ ತೋರುತ್ತದೆ ಎಂದು ಕಟುವಾಗಿ ಟೀಕಿಸಿದರು.

ಎರಡೂ ಪಕ್ಷಗಳ ನಡುವೆ ಸಮನ್ವಯ ಕೊರತೆ ಆಗಬಾರದು ಎಂಬ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಡದಿ ಪಾದಯಾತ್ರೆ ನಡೆಯುತ್ತಿದೆ. ನಾನೇ ಪಾದಯಾತ್ರೆಗೆ ಚಾಲನೆ ನೀಡುತ್ತೇನೆ ಎಂದರು.
ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಬಿಜೆಪಿಯ ಅನೇಕ ಹಿರಿಯ ನಾಯಕರು ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ

ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ನಾವು ಅತ್ಯಂತ ವಿವರವಾಗಿ ಚರ್ಚೆ ನಡೆಸಿದ್ದೇವೆ ಹಾಗೂ ಮುಂಬರುವ ವಿಧಾನಕಲಾಪದಲ್ಲಿ ಪ್ರಸ್ತಾಪಿಸಲು ಉದ್ದೇಶಿಸಿರುವ ವಿವಿಧ ವಿಷಯಗಳ ಬಗ್ಗೆ ಸಮಾಲೋಚಿಸಿದ್ದೇವೆ ಎಂದು ಅವರು ಹೇಳಿದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others