HD Kumaraswamy: ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ನೇಮಕಾತಿ ಅಕ್ರಮ- ಅಕ್ರಮ ನಡೆದಿದೆ ಎಂಬ ವರದಿ ಇದ್ದರೂ ಈ ಬಗ್ಗೆ ಸಚಿವರು ಏಕೆ ಮಾತನಾಡುತ್ತಿಲ್ಲ? : ಹೆಚ್‌ಡಿಕೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನಿಯರ್ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಅಕ್ರಮದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು, ದಾಖಲೆ ಬಿಡುಗಡೆ ಮಾಡಿ ಮಾತನಾಡಿದ ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ಅಂದಿನ ಕೆಪಿಎಸ್‌ಸಿ ಕಾರ್ಯದರ್ಶಿ ಸೇರಿದಂತೆ ಹಲವು ಹಂತಗಳಲ್ಲಿ ಅಕ್ರಮ ನಡೆದಿದೆ. ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ನ್ಯಾಯಾಲಯ ಅಭಿಪ್ರಾಯಪಟ್ಟಿದೆ ಎಂದು ಹೇಳಿದ ಅವರು, ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಯಾವುದೇ ನ್ಯಾಯಾಲಯವೂ ನೇಮಕಾತಿ ಮಾಡಿ ಎಂದು ಹೇಳಿಲ್ಲ. ಹಾಗಿದ್ದರೆ ಯಾರಿಗೆ ಕಿಕ್‌ಬ್ಯಾಕ್ ಹೋಗಿದೆ? AEE ನೇಮಕಾತಿ ಪ್ರಕರಣದಲ್ಲಿ 24 ಅಭ್ಯರ್ಥಿಗಳು 1 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಅವರ OMR ತಿದ್ದುಪಡಿ ಸೇರಿದಂತೆ ಅಕ್ರಮ ನಡೆದಿದೆ ಎಂಬ ವರದಿ ಇದ್ದರೂ ಈ ಬಗ್ಗೆ ಸಚಿವರು ಏಕೆ ಮಾತನಾಡುತ್ತಿಲ್ಲ? ಎಂಬುದನ್ನ ಪ್ರಿಯಾಂಕ್ ಖರ್ಗೆ ಅವರೇ ಸ್ಪಷ್ಟಪಡಿಸಲಿ ಎಂದಿದ್ದಾರೆ.

ತನಿಖೆಗಾಗಿ ರಚಿಸಲಾಗಿದ್ದ ಮೂರು ಸದಸ್ಯರ ಸಬ್ ಕಮಿಟಿ ಪ್ರಕರಣವನ್ನು ಪರಿಶೀಲಿಸಿತ್ತು. ಸಬ್ ಕಮಿಟಿಯ ಶಿಫಾರಸು ಇಲ್ಲದೆ ಹಾಗೂ ಆಯೋಗದ ಅನುಮತಿಯೂ ಇಲ್ಲದೆ ಅಂತಿಮ ಪಟ್ಟಿ ಬಿಡುಗಡೆ ಮಾಡಲು ಒತ್ತಡ ಹೇರಲಾಗಿತ್ತು.

ಅಕ್ರಮದ ಆರೋಪ ಎದುರಿಸುತ್ತಿದ್ದ 24 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿದ್ದು ಏಕೆ? ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಇಲಾಖೆ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ಅಭ್ಯರ್ಥಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ಅಂತಿಮ ಆದೇಶ ಬರುವವರೆಗೆ ನೇಮಕಾತಿ ಪತ್ರ ನೀಡಬಾರದು ಎಂದು ನ್ಯಾಯಾಲಯ ಸೂಚಿಸಿತ್ತುಅಭ್ಯರ್ಥಿಯಾಗಿದ್ದ ಆನಂದ್ ಎಸ್. ಸಿದ್ದರೆಡ್ಡಿ ಅವರು 2023ರ ಸೆಪ್ಟೆಂಬರ್ 25ರಂದು ಕೆಪಿಎಸ್‌ಸಿ ಕಾರ್ಯದರ್ಶಿಗೆ ಇ-ಮೇಲ್ ಮೂಲಕ ಅಕ್ರಮದ ಕುರಿತು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕೆಪಿಎಸ್‌ಸಿ ಮೂರು ಸದಸ್ಯರ ಸಬ್ ಕಮಿಟಿಯನ್ನು ರಚಿಸಿ ತನಿಖೆ ನಡೆಸಿತ್ತು. ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಭಾರೀ ಅಕ್ರಮಗಳ ಕುರಿತು ಆರೋಪ ಮಾಡಿದ್ದಾರೆ. ಎಇಇ ಅಕ್ರಮದ ಬಗ್ಗೆ ತನಿಖೆ ನಡೆದಿದೆ. 24 ಅಭ್ಯರ್ಥಿಗಳ ನೇಮಕಾತಿಯಲ್ಲಿ ಅಕ್ರಮ ಸಾಬೀತಾಗಿದ್ದರೂ, ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತರಾತುರಿಯಲ್ಲಿ ನೇಮಕಾತಿ ಪತ್ರಗಳನ್ನ ಹಸ್ತಾಂತರಿಸಿದ್ದಾರೆ ಎಂದು ತಿಳಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others