ಬರಗಾಲದ ನಡುವೆ ಮಳೆ ಅಬ್ಬರ:‌ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ

ರಾಜ್ಯದಲ್ಲಿ ವಾಡಿಕೆಗಿಂತ ಶೇ 35ರಷ್ಟು ಮಳೆ ಕೊರತೆಯಾಗಿದ್ದು, ಬರಗಾಲದ ಭೀತಿ ಹೆಚ್ಚಾಗಿದೆ. ಆದಾಗ್ಯೂ ಹವಾಮಾನ ಇಲಾಖೆಯು ಅಕ್ಟೋಬರ್ 4 ಮತ್ತು 5ರಂದು ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಭಾರಿ ಮಳೆಯ ಮುನ್ಸೂಚನೆ ನೀಡಿದೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನ ವೈಪರೀತ್ಯ ಕಂಡುಬರುತ್ತಿದೆ. ಕರಾವಳಿ ಕರ್ನಾಟಕದಲ್ಲಿ ನಿರಂತರ ಮಳೆಯ ವಾತಾವರಣ ಮುಂದುವರಿದಿದ್ದರೆ, ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮತ್ತು ಸಾಧಾರಣ ಮಳೆಯ ಮಿಶ್ರ ವಾತಾವರಣ ಕಂಡುಬರುತ್ತಿದೆ.

ಪ್ರಮುಖವಾಗಿ ದಕ್ಷಿಣ ಒಳನಾಡಿನಲ್ಲಿ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಯಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಾಗೂ ಕರಾವಳಿ ಭಾಗದಲ್ಲಿ ಮಳೆ ಮುನ್ಸೂಚನೆ ಇದೆ

ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ತುಮಕೂರು, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ದಾವಣಗೆರೆ, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ನಾಳೆ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ಕರಾವಳಿಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಹಾವೇರಿ, ಕೊಪ್ಪಳ, ಬೆಳಗಾವಿ ಮತ್ತು ಧಾರವಾಡ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದ್ದು, ಬಾಗಲಕೋಟೆ, ಬೀದರ್, ಕಲ್ಬುರ್ಗಿ, ಕೊಪ್ಪಳ, ಗದಗ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣಹವೆ ಮುಂದುವರಿಯಲಿದೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post