ನಾನು ಕತ್ತಲಲ್ಲಿ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಬರುವ ರಾಜಕಾರಣಿಯಲ್ಲ; ನೇರವಾಗಿ ರಾಜಕಾರಣ ಮಾಡುವವನು – ಜನಾರ್ದನ ರೆಡ್ಡಿ

ಜನಾರ್ದನ ರೆಡ್ಡಿ — ನಾನು ಕತ್ತಲಲ್ಲಿ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಬರುವ ರಾಜಕಾರಣಿಯಲ್ಲ; ನೇರವಾಗಿ ರಾಜಕಾರಣ ಮಾಡುವವನು - ಜನಾರ್ದನ ರೆಡ್ಡಿ

ಕೊಪ್ಪಳ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ನಿವಾಸದ ಗೃಹಪ್ರವೇಶ ಹಾಗೂ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗವಹಿಸಿದ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಕ್ತಪಡಿಸಿದ ಅಸಮಾಧಾನಕ್ಕೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಖಡಕ್ ತಿರುಗೇಟು ನೀಡಿದ್ದಾರೆ.

ವಿಜಯೇಂದ್ರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ, “ಔತಣಕೂಟಕ್ಕೆ ಬಿಜೆಪಿ ಶಾಸಕರು ಹೋಗಬಾರದು ಎಂದು ರಾಜ್ಯಾಧ್ಯಕ್ಷರು ಮೊದಲೇ ಸೂಚನೆ ನೀಡಬೇಕಿತ್ತು. ಹಾಗೆ ಹೇಳಿದ್ದರೆ ನಾವ್ಯಾರೂ ಹೋಗುತ್ತಿರಲಿಲ್ಲ” ಎಂದಿದ್ದಾರೆ.

ಇದೆ ವೇಳೆ, ತಮ್ಮ ಭೇಟಿಯನ್ನು ಸಮರ್ಥಿಸಿಕೊಂಡ ರೆಡ್ಡಿ, “ನಾನೊಬ್ಬ ಶಾಸಕನಾಗಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಭಾಗವಹಿಸಿದ್ದೇನೆ ಹೊರತು, ಯಾವುದೇ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಕ್ಕೆ ಹೋಗಿಲ್ಲ ಎಂದು ಜನಾರ್ದನ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ, ನಾನು ಬೇರೆಯವರ ರೀತಿ ಹಿಂದಿನ ಬಾಗಿಲಿನಿಂದ ಅಥವಾ ಕತ್ತಲಲ್ಲಿ ಹೋಗಿ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಬರುವ ರಾಜಕಾರಣಿಯಲ್ಲ; ನೇರವಾಗಿ ರಾಜಕಾರಣ ಮಾಡುವವನು” ಎಂದು ವಿಜಯೇಂದ್ರ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ವಿವಾದಕ್ಕೆ ಮಾಹಿತಿ ಇಲ್ಲಿದೆ ನೋಡಿ
ನವೆಂಬರ್ 19 ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ನೂತನ ಅಧಿಕೃತ ನಿವಾಸ ‘ಗಂಗಾ’ (ಹಳೆಯ ಕುಮಾರಕೃಪಾ ಅತಿಥಿಗೃಹ) ದಲ್ಲಿ ಗೃಹಪ್ರವೇಶದ ಪ್ರಯುಕ್ತ ಪಕ್ಷಾತೀತವಾಗಿ ಔತಣಕೂಟ ಆಯೋಜಿಸಿದ್ದರು. ಇದರಲ್ಲಿ ಜನಾರ್ದನ ರೆಡ್ಡಿ, ಎಸ್.ಆರ್. ವಿಶ್ವನಾಥ್, ಕೆ. ಗೋಪಾಲಯ್ಯ, ಎಂ. ಕೃಷ್ಣಪ್ಪ, ಎಲ್.ಎ. ರವಿ ಸುಬ್ರಹ್ಮಣ್ಯ ಸೇರಿದಂತೆ ಹಲವು ಬಿಜೆಪಿ ಶಾಸಕರು ಪಾಲ್ಗೊಂಡಿದ್ದರು. ಆದರೆ, ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿಎಂ ಆಯೋಜಿಸಿದ್ದ ಔತಣಕೂಟದಲ್ಲಿ ತಮ್ಮ ಪಕ್ಷದ ಶಾಸಕರು ಭಾಗಿಯಾಗಿರುವುದನ್ನು ವೈಯಕ್ತಿಕವಾಗಿ ಒಪ್ಪುವುದಿಲ್ಲ ಎಂದಿದ್ದರು ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ.

💬 ಕಾಮೆಂಟ್ • Comments (0)

💬 ಓದುಗರ ಕಾಮೆಂಟ್‌ಗಳು • Reader Comments (0)

ಇನ್ನೂ ಯಾವುದೇ ಕಾಮೆಂಟ್ ಇಲ್ಲ. ಮೊದಲ ಕಾಮೆಂಟ್ ನೀವೇ ಬರೆಯಿರಿ! (Be the first to comment.)

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post