ನನ್ನ ವಿರುದ್ಧವೇ ನಾನು ತನಿಖೆ ಮಾಡಿಸಿಕೊಳ್ಳಲು ಸಿದ್ಧನಿದ್ದೇನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ

 Priyank Kharge

ಬೆಂಗಳೂರು: ಸಿ.ಟಿ. ರವಿ, ಪ್ರಹ್ಲಾದ್ ಜೋಶಿ ಅವರಂತಹ ನಾಯಕರು ಕೇವಲ ಮಾಧ್ಯಮಗಳ ಮುಂದೆ ಬಂದು ಆರೋಪ ಮಾಡುವುದನ್ನು ಬಿಟ್ಟು, ಅಧಿಕೃತವಾಗಿ ದೂರು ದಾಖಲಿಸಲಿ. ಯಾವ ಅಧಿಕಾರಿ ಹೋಗಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದರೆ, ನಾನು ಖಂಡಿತವಾಗಿಯೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಸಿ.ಟಿ. ರವಿ ಅವರು ಮೊದಲು ತಮ್ಮ ವಾಯ್ಸ್ ಸ್ಯಾಂಪಲ್ ನೀಡಿ, ಆ ಬಳಿಕ ಬೇರೆಯವರ ಬಗ್ಗೆ ಮಾತನಾಡಲಿ ಎಂದರು. ತೇಜಸ್ ಗೌಡ ಅವರ ಮನೆಗೆ ಗೃಹ ಸಚಿವರೇ ಪೊಲೀಸರನ್ನು ಕಳುಹಿಸಿ ಬೆದರಿಕೆ ಹಾಕಿಸಿದ್ದಾರೆ ಎಂಬ ಸಿ.ಟಿ. ರವಿ ಅವರ ಆರೋಪಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಬಿಜೆಪಿಯ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬೆದರಿಕೆ ಹಾಕಲು ನಾನೇ ಪೊಲೀಸರನ್ನು ಕಳುಹಿಸಿದ್ದೇನೆ ಎಂದು ಅವರ ಬಳಿ ಆಧಾರವಿದ್ದರೆ, ಮೊದಲು ನನ್ನ ಮೇಲೆಯೇ ದೂರು ಕೊಡಲಿ. ಅತ್ಯಂತ ಪಾರದರ್ಶಕವಾಗಿ ನನ್ನ ವಿರುದ್ಧವೇ ನಾನು ತನಿಖೆ ಮಾಡಿಸಿಕೊಳ್ಳಲು ಸಿದ್ಧನಿದ್ದೇನೆ. ಬೇಕಿದ್ದರೆ ಇದಕ್ಕಾಗಿ ಒಂದು ವಿಶೇಷ ಸಮಿತಿ ರಚಿಸಿ, ಅದಕ್ಕೆ ಸಿ.ಟಿ. ರವಿ ಅವರನ್ನೇ ಅಧ್ಯಕ್ಷರನ್ನಾಗಿ ಮಾಡುತ್ತೇನೆ ಎಂದು ಹೇಳಿದರು.

ಇನನು್ ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ರಾಜ್ಯದಲ್ಲಿ ಚರ್ಚೆಯಾಗಿರುವ ಬೆನ್ನಲ್ಲೇ, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇತ್ತೀಚೆಗೆ ನಟಿಯ AI ವಿಡಿಯೋ ಪ್ರಕರಣವೂ ದಾಖಲಾಗಿತ್ತು. ಇಂತಹ ಪ್ರಕರಣಗಳ ತನಿಖೆಗೆ ಸ್ವಲ್ಪ ಸಮಯ ಬೇಕಾಗುತ್ತದೆ. ಯಾರೇ ಆಗಿರಲಿ, ಎಲ್ಲರಿಗೂ ಒಂದೇ ರೀತಿಯ ನ್ಯಾಯ ಸಿಗಲಿದೆ ಎಂದು ತಿಳಿಸಿದರು.

ಹುಣಸೂರು ಶಾಸಕ ಹರೀಶ್ ಗೌಡ ಅವರ ಪತ್ನಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ದೂರು ಈಗಾಗಲೇ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಈಗ ನನ್ನ ಗಮನಕ್ಕೆ ಬಂದಿದೆ. ಮೊದಲು ಸಂಪೂರ್ಣ ಮಾಹಿತಿ ತರಿಸಿಕೊಳ್ಳುತ್ತೇನೆ. ಪರಿಶೀಲನೆ ನಡೆಸಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

Share it :

Leave a Reply

Your email address will not be published. Required fields are marked *